ಮಾರುಕಟ್ಟೆಗೆ ಹೊಸ ಸ್ಮಾರ್ಟ್‌ವಾಚ್ ಎಂಟ್ರಿ; ಇದರ ಫೀಚರ್ಸ್‌ಗೆ ಫಿದಾ ಆಗೋದು ಗ್ಯಾರಂಟಿ!
ಸ್ಮಾರ್ಟ್‌ವಾಚ್ ವಲಯದಲ್ಲಿ ಫೈರ್-ಬೋಲ್ಟ್ ಕಂಪೆನಿಯ ಡಿವೈಸ್‌ಗಳಿಗೆ ಭಾರಿ ಕ್ರೇಜ್ ಇದೆ. ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ವಾಚ್‌ಗಳ ಮೂಲಕ ಯುವಜನತೆಯ ನೆಚ್ಚಿನ ಬ್ರ್ಯಾಂಡ್ ಎನಿಸಿಕೊಂಡಿದೆ. ಅದರ ಮುಂದುವರೆದ ಭಾಗವಾಗಿ ಇದೀಗ ಹೊಸ ಫೈರ್-ಬೋಲ್ಟ್ ಸ್ಟಾರ್‌ಲೈಟ್ ವಾಚ್ ಅನ್ನು ಪರಿಚಯಿಸಿದೆ. ಇದು ಮೆಟಲ್ ಯುನಿಬಾಡಿಯೊಂದಿಗೆ ಪ್ರೀಮಿಯಂ ಲುಕ್ ಹೊಂದಿದೆ.
ಹೌದು, ಫೈರ್-ಬೋಲ್ಟ್ ಸ್ಟಾರ್‌ಲೈಟ್ ಸ್ಮಾರ್ಟ್‌ವಾಚ್ ಭಾರತದಲ್ಲಿ ಬಿಡುಗಡೆ ಆಗಿದೆ. ಈ ಸ್ಮಾರ್ಟ್‌ವಾಚ್ ಸ್ಮಾರ್ಟ್ ಫೀಚರ್ಸ್‌ಗಳೊಂದಿಗೆ ಫ್ಯಾಶನ್ ಗಡಿಯಾರವನ್ನು ಬಯಸುವವರಿಗೆ ಸೂಕ್ತವಾಗಿದೆ. ಇದಲ್ಲದೆ ಸ್ಮಾರ್ಟ್‌ವಾಚ್ ಹಾರ್ಟ್‌ಬೀಟ್ ಮಾನಿಟರ್, SpO2 ಸೆನ್ಸಾರ್ ಅನ್ನು ಕೂಡ ಒಳಗೊಂಡಿದೆ. ಇನ್ನುಳಿದಂತೆ ಸ್ಮಾರ್ಟ್‌ವಾಚ್ ಯಾವೆಲ್ಲಾ ಫೀಚರ್ಸ್‌ಗಳೊಂದಿಗೆ ಬರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಫೈರ್-ಬೋಲ್ಟ್ ಸ್ಟಾರ್‌ಲೈಟ್ ಸ್ಮಾರ್ಟ್‌ವಾಚ್ ಫೀಚರ್ಸ್ ಹೇಗಿದೆ?
ಫೈರ್-ಬೋಲ್ಟ್ ಸ್ಟಾರ್‌ಲೈಟ್ ಸ್ಮಾರ್ಟ್‌ವಾಚ್ 2.1-ಇಂಚಿನ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ IP68 ರೇಟಿಂಗ್ ಅನ್ನು ಹೊಂದಿದ್ದು, ಧೂಳು ಮತ್ತು ನೀರಿನಿಂದ ರಕ್ಷಣೆ ನೀಡಲಿದೆ. ಜೊತೆಗೆ ಸ್ಮಾರ್ಟ್‌ವಾಚ್ ಸ್ಟೇನ್‌ಲೆಸ್ ಸ್ಟೀಲ್ ಚಾಸಿಸ್ ಮತ್ತು ಸ್ಟ್ರಾಪ್ ವಸ್ತುಗಳೊಂದಿಗೆ ಸ್ಕ್ವೇರ್ ಡಯಲ್ ಅನ್ನು ಹೊಂದಿದೆ. ಇದಲ್ಲದೆ ಸ್ಮಾರ್ಟ್‌ವಾಚ್‌ನಲ್ಲಿ UI ಅನ್ನು ನ್ಯಾವಿಗೇಟ್ ಮಾಡಲು ಬಲಭಾಗದಲ್ಲಿ ಭೌತಿಕ ಬಟನ್ ಅನ್ನು ಸಹ ನೀಡಲಾಗಿದೆ.
ಇನ್ನು ಬಳಕೆದಾರರು ವಿವಿಧ ವಾಚ್ ಫೇಸ್‌ಗಳೊಂದಿಗೆ ಡಿವೈಸ್‌ನ ಲುಕ್ ಅನ್ನು ಕಸ್ಟಮೈಸ್ ಮಾಡಬಹುದಾಗಿದೆ. ಇದಲ್ಲದೆ ಈ ಸ್ಮಾರ್ಟ್‌ವಾಚ್‌ನಲ್ಲಿ ಫಿಟ್‌ನೆಸ್‌ಗೆ ಸಂಬಂಧಿಸಿದಂತೆ ಹಲವು ಆಕರ್ಷಕ ಫೀಚರ್ಸ್‌ಗಳನ್ನು ನೀಡಲಾಗಿದೆ. ಇದರಲ್ಲಿ ಹೃದಯ ಬಡಿತ ಮಾನಿಟರ್, SpO2 ಸೆನ್ಸಾರ್ ಮತ್ತು ಸ್ಲೀಪ್ ಟ್ರ್ಯಾಕರ್ ಅನ್ನು ಹೊಂದಿದೆ. ಜೊತೆಗೆ ಉಸಿರಾಟದ ತರಬೇತಿಯನ್ನು ನೀಡಲಿದ್ದು, ಬಳಕೆದಾರರು ಒತ್ತಡಕ್ಕೊಳಗಾದಾಗ ವಿಶ್ರಾಂತಿ ಪಡೆಯಲು ಮಾರ್ಗದರ್ಶನ ನೀಡುತ್ತದೆ. ಅಲ್ಲದೆ 123 ಸ್ಪೋರ್ಟ್ಸ್ ಮೋಡ್‌ಗಳಿಗೆ ಬೆಂಬಲವನ್ನು ಸಹ ನೀಡಲಿದೆ.
ಇತ್ತೀಚಿನ ಸ್ಮಾರ್ಟ್‌ವಾಚ್‌ಗಳಲ್ಲಿರುವಂತೆ ಈ ವಾಚ್ ಕೂಡ ಬ್ಲೂಟೂತ್ ಕಾಲಿಂಗ್ ಫೀಚರ್ಸ್ ಅನ್ನು ಒಳಗೊಂಡಿದೆ. ಇದರಿಂದ ಸ್ಮಾರ್ಟ್‌ವಾಚ್ ಮೂಲಕವೇ ನಿಮ್ಮ ಫೋನ್ ಕರೆಗಳನ್ನು ಸ್ವೀಕರಿಸುವುದಕ್ಕೆ ಸಾಧ್ಯವಾಗಲಿದೆ. ಇದಕ್ಕಾಗಿ ಇನ್‌ಬಿಲ್ಟ್ ಮೈಕ್ ಮತ್ತು ಸ್ಪೀಕರ್ ಅನ್ನು ಸಹ ಅಳವಡಿಸಲಾಗಿದೆ. ಇನ್ನು ಸ್ಮಾರ್ಟ್‌ವಾಚ್‌ನಲ್ಲಿ ಡಯಲ್ ಪ್ಯಾಡ್, ಕಾಲಿಂಗ್ ಹಿಸ್ಟರಿ ಮತ್ತು ಕಂಟ್ಯಾಕ್ಟ್‌ಗಳನ್ನು ಸಿಂಕ್ ಮಾಡುವ ಅನುಕೂಲವನ್ನು ಸಹ ನೀಡಲಾಗಿದೆ. ಇದರಲ್ಲಿ ವಾಯ್ಸ್ ಅಸಿಸ್ಟೆಂಟ್‌ಗೆ ಬೆಂಬಲವನ್ನು ಸಹ ಕಲ್ಪಿಸಲಾಗಿದೆ.
ಸ್ಮಾರ್ಟ್ ವಾಚ್‌ನಲ್ಲಿ ನೋಟೀಪಿಕೇಶನ್ ಪ್ಲೇ, ವೆದರ್ ಅಪ್ಡೇಟ್, ಕ್ಯಾಮರಾ ಮತ್ತು ಮ್ಯೂಸಿಕ್ ಕಂಟ್ರೋಲ್‌ನಂತಹ ಅನುಕೂಲಕರ ಫೀಚರ್ಸ್‌ಗಳನ್ನು ನೀಡಲಾಗಿದೆ. ಇನ್ನು ಈ ಸ್ಮಾರ್ಟ್‌ವಾಚ್ 1,999ರೂ. ಬೆಲೆ ಹೊಂದಿದೆ. ಇದನ್ನು ಆಗಸ್ಟ್ 23 ರಿಂದ ಫೈರ್‌ಬೋಲ್ಟ್‌ನ ಅಧಿಕೃತ ವೆಬ್‌ಸೈಟ್‌ನಿಂದ ಖರೀದಿಸಬಹುದಾಗಿದೆ. ಈ ಸ್ಮಾರ್ಟ್‌ವಾಚ್ ಗ್ಲೀಮಿಂಗ್ ಕಾಪರ್, ಸ್ಟರ್ಲಿಂಗ್ ಸಿಲ್ವರ್ ಮತ್ತು ಪಿಚ್ ಬ್ಲ್ಯಾಕ್ ಬಣ್ಣದ ಆಯ್ಕೆಯಲ್ಲಿ ಲಭ್ಯವಾಗಲಿದೆ.
ಇದಲ್ಲದೆ ಫೈರ್-ಬೋಲ್ಟ್ ಕಂಪೆನಿ ಇತ್ತೀಚಿಗೆ ಹೊಸ ಫೈರ್-ಬೋಲ್ಟ್ ಫೀನಿಕ್ಸ್ ಅಮೋಲೆಡ್ ಸ್ಮಾರ್ಟ್‌ವಾಚ್ ಅನ್ನು ಪರಿಚಯಿಸಿದೆ. ಈ ಸ್ಮಾರ್ಟ್‌ವಾಚ್ 1.43 ಇಂಚಿನ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 466x466 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಈ ಸ್ಮಾರ್ಟ್‌ವಾಚ್ ಬ್ಲೂಟೂತ್ ಕಾಲಿಂಗ್ ಅನ್ನು ಬೆಂಬಲಿಸಲಿದೆ. ಇದರಿಂದ ಸ್ಮಾರ್ಟ್‌ವಾಚ್ ಮೂಲಕವೇ ಫೋನ್ ಕರೆಗಳನ್ನು ಸ್ವೀಕರಿಸಬಹುದಾಗಿದೆ.
ಇನ್ನು ಈ ಸ್ಮಾರ್ಟ್‌ವಾಚ್ 110 ಸ್ಪೋರ್ಟ್ಸ್ ಮೋಡ್‌ಗಳನ್ನು ಒಳಗೊಂಡಿದೆ. ಇದಲ್ಲದೆ ಸ್ಮಾರ್ಟ್ ವಾಚ್ ನಿಮಗೆ ಹಲವು ಆಯ್ಕೆಯ ಕಸ್ಟಮೈಸ್ ಮಾಡಬಹುದಾದ ವಾಚ್‌ಫೇಸ್‌ಗಳನ್ನು ಹೊಂದಿದೆ. ಜೊತೆಗೆ ಸ್ಮಾರ್ಟ್‌ವಾಚ್ ಸಿರಿ ಮತ್ತು ಗೂಗಲ್ ವಾಯ್ಸ್ ಅಸಿಸ್ಟೆಂಟ್ ಅನ್ನು ಬೆಂಬಲಿಸಲಿದೆ.


Click it and Unblock the Notifications








