ಈ ಬಾರಿಯ ಫ್ಲಿಪ್‌ಕಾರ್ಟ್ ಸೇಲ್‌ನಲ್ಲಿ ಏನೆಲ್ಲಾ ಡಿಸ್ಕೌಂಟ್‌ ಸಿಗಲಿದೆ ಗೊತ್ತಾ?

|

ಫ್ಲಿಪ್‌ಕಾರ್ಟ್‌ ಆನ್‌ಲೈನ್‌ ಶಾಪಿಂಗ್‌ ಪ್ರಿಯರ ನೆಚ್ಚಿನ ಪ್ಲಾಟ್‌ಫಾರ್ಮ್‌ ಎನಿಸಿಕೊಂಡಿದೆ. ತನ್ನ ಆನ್‌ಲೈನ್‌ ಗ್ರಾಹಕರಿಗಾಗಿ ವಿಶೇಷ ಸೇಲ್‌ಗಳನ್ನು ಆಯೋಜಿಸುತ್ತಲೇ ಬಂದಿದೆ. ಇದೀಗ ತನ್ನ ಗ್ರಾಹಕರಿಗಾಗಿ ಮತ್ತೊಮ್ಮೆ ಬಿಗ್ ಬಿಲಿಯನ್ ಡೇಸ್ ಸೇಲ್ 2021 ಅನ್ನು ಹೊತ್ತು ತಂದಿದೆ. ಇನ್ನು ಫ್ಲಿಪ್‌ಕಾರ್ಟ್ ಪ್ರತಿ ಭಾರಿಯೂ ತಾನು ಆಯೋಜಿಸುವ ವಿಶೇಷ ಸೇಲ್‌ಗಳಲ್ಲಿ ಸ್ಮಾರ್ಟ್‌ಫೋನ್‌ಗಳು, ಎಲೆಕ್ಟ್ರಾನಿಕ್ಸ್ ಡಿವೈಸ್‌ಗಳು ಮತ್ತು ಇತರ ಗ್ಯಾಜೆಟ್ಸ್‌ಗಳ ಮೇಲೆ ಡಿಸ್ಕೌಂಟ್‌ ನೀಡುತ್ತಾ ಬಂದಿದೆ. ಅದರಂತೆ ಈ ಭಾರಿಯ ಬಿಗ್ ಬಿಲಿಯನ್ ಡೇಸ್ ಸೇಲ್ 2021ನಲ್ಲೂ ಬಿಗ್‌ ಡಿಸ್ಕೌಂಟ್‌ ಘೋಷಣೆ ಮಾಡಿದೆ.

ಫ್ಲಿಪ್‌ಕಾರ್ಟ್‌

ಹೌದು, ಫ್ಲಿಪ್‌ಕಾರ್ಟ್‌ ಬಿಗ್‌ಬಿಲಿಯನ್‌ ಡೇಸ್‌ ಸೇಲ್‌ 2021 ಅನ್ನು ಘೋಷಣೆ ಮಾಡಿದೆ. ಇನ್ನು ಈ ಸೇಲ್‌ನಲ್ಲಿ ಫ್ಲಿಪ್‌ಕಾರ್ಟ್ ಸ್ಮಾರ್ಟ್‌ಫೋನ್‌ಗಳು, ಲ್ಯಾಪ್‌ಟಾಪ್‌ಗಳ ಮೇಳೆ ಬಿಗ್‌ ಡಿಸ್ಕೌಂಟ್‌ ನೀಡುವುದಾಗಿ ಹೇಳಿದೆ. ಇನ್ನು ಫ್ಲಿಪ್‌ಕಾರ್ಟ್‌ ಸೇಲ್‌ ಇದೇ ಅಕ್ಟೋಬರ್ 2 ರಿಂದ ಪ್ರಾರಂಭವಾಗಿ, ಅಕ್ಟೋಬರ್ 12ರ ವರೆಗೂ ಮುಂದುವರಿಯಲಿದೆ. ಹಾಗಾದ್ರೆ ಮುಂಬರುವ ಫ್ಲಿಪ್‌ಕಾರ್ಟ್ ಬಿಗ್‌ ಬಿಲಿಯನ್‌ ಡೇಸ್‌ ಸೇಲ್‌ನಲ್ಲಿ ಯಾವೆಲ್ಲಾ ಡೀಲ್‌ಗಳು ಮತ್ತು ರಿಯಾಯಿತಿಗಳು ಲಭ್ಯವಾಗಲಿವೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಯಾವೆಲ್ಲಾ ಸ್ಮಾರ್ಟ್‌ಫೋನ್‌ಗಳಿಗೆ ರಿಯಾಯಿತಿ?

ಯಾವೆಲ್ಲಾ ಸ್ಮಾರ್ಟ್‌ಫೋನ್‌ಗಳಿಗೆ ರಿಯಾಯಿತಿ?

ಆಸುಸ್ ROG ಫೋನ್ 3 ಗೇಮಿಂಗ್ ಫೋನ್ 49,999ರೂ.ಗಳಿಗೆ ಬಿಡುಗಡೆ ಆಗಿತ್ತು. ಆದರೆ ಫ್ಲಿಪ್‌ಕಾರ್ಟ್‌ ಸೇಲ್‌ನಲ್ಲಿ 34,999 ರೂ ಗಳಿಗೆ ಲಭ್ಯವಾಗಲಿದೆ. ಅಂದರೆ ನೀವು 15 ಸಾವಿರ ರೂ,ಗಳವರೆಗೆ ರಿಯಾಯಿತಿ ಪಡೆದುಕೊಳ್ಳಬಹುದಾಗಿದೆ.

ಪೊಕೊ X3 ಪ್ರೊ

ಪೊಕೊ X3 ಪ್ರೊ

ಪೊಕೊ X3 ಪ್ರೊ ಸ್ಮಾರ್ಟ್‌ಫೋನ್‌ 18,999ರೂ.ಗಳಿಗೆ ಲಾಂಚ್‌ ಮಾಡಲಾಗಿತ್ತು. ಆದರೆ ಈಗ ಫ್ಲಿಪ್‌ಕಾರ್ಟ್‌ ಸೇಲ್‌ನಲ್ಲಿ ಈ ಫೋನ್ ಅನ್ನು 6GB RAM ಮತ್ತು 128GB ಸ್ಟೋರೇಜ್ ರೂಪಾಂತರಕ್ಕೆ 16,999ರೂ ಬೆಲೆಯನ್ನು ನಿಗದಿಪಡಿಸಲಾಗಿದೆ. ಎರಡು ಸಾವಿರ ರೂ.ಗಳ ವರೆಗೆ ರಿಯಾಯಿತಿ ದೊರೆಯಲಿದೆ. ಡೆಬಿಟ್‌ ಮತ್ತು ಕ್ರೆಡಿಟ್‌ ಕಾರ್ಡ್‌ಗಳಲ್ಲಿ ಖರೀದಿಸವವರಿಗೆ ಹೆಚ್ಚುವರಿ ರಿಯಾಯಿತಿ ಕೂಡ ಲಭ್ಯವಾಗಲಿದೆ.

ಗೂಗಲ್ ಪಿಕ್ಸೆಲ್ 4ಎ

ಗೂಗಲ್ ಪಿಕ್ಸೆಲ್ 4ಎ

ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್‌ನಲ್ಲಿ ಗೂಗಲ್ ಪಿಕ್ಸೆಲ್ 4ಎ ರಿಯಾಯಿತಿಯಲ್ಲಿ ಲಭ್ಯವಿರುವುದಾಗಿ ಘೋಷಿಸಲಾಗಿದೆ. ಆದರೆ ಇನ್ನೂ ಕೂಡ ನಿಖರವಾದ ರಿಯಾಯಿತಿ ಬೆಲೆಯನ್ನು ಬಹಿರಂಗಪಡಿಸಲಾಗಿಲ್ಲ. ಆದರೆ ಫ್ಲಿಪ್ ಕಾರ್ಟ್ ಟೀಸರ್ ಪ್ರಕಾರ ಈ ಸ್ಮಾರ್ಟ್ ಫೋನ್ 20,000 ಬೆಲೆ ವಿಭಾಗದಲ್ಲಿ ಲಭ್ಯವಾಗುವ ಸಾದ್ಯತೆ ಇದೆ.

ಇತರೆ ಡಿವೈಸ್‌ಗಳ ಮೇಲಿನ ರಿಯಾಯಿತಿಗಳು!

ಇತರೆ ಡಿವೈಸ್‌ಗಳ ಮೇಲಿನ ರಿಯಾಯಿತಿಗಳು!

ಫ್ಲಿಪ್‌ಕಾರ್ಟ್‌ ಬಿಗ್ ಬಿಲಿಯನ್ ಡೇಸ್ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್‌ಗಳಿಗೆ ಮಾತ್ರವಲ್ಲ ಇಯರ್‌ಫೋನ್‌ಗಳ ಮೇಲೂ ಕೂಡ ಡಿಸ್ಕೌಂಟ್‌ ನೀಡಲಿದೆ. ಇನ್ನು ಈ ಸೇಲ್‌ನಲ್ಲಿ ಲೈಫ್ ನೋಟ್ ಇ ಸೈನಾ ನೆಹ್ವಾಲ್ ಎಡಿಷನ್ ಇಯರ್‌ಫೋನ್‌ಗಳು, ಗೇಮಿಂಗ್ ಲ್ಯಾಪ್‌ಟಾಪ್, ಬೌಲ್ಟ್ ಆಡಿಯೋ ಸೋಲ್ ಪಾಡ್ಸ್ ಇಯರ್‌ಫೋನ್‌ ಮತ್ತು ಫೈರ್-ಬೋಲ್ಟ್ ಮ್ಯಾಕ್ಸ್ ಸ್ಮಾರ್ಟ್‌ವಾಚ್‌ ಡಿವೈಸ್‌ಗಳ ಮೇಲೆ ಬಿಗ್‌ ಡಿಸ್ಕೌಂಟ್‌ ಪಡೆದುಕೊಳ್ಳಬಹುದಾಗಿದೆ.

ಕ್ಯಾಶ್‌ಬ್ಯಾಕ್ ಆಫರ್‌ಗಳು

ಕ್ಯಾಶ್‌ಬ್ಯಾಕ್ ಆಫರ್‌ಗಳು

ಫ್ಲಿಪ್‌ಕಾರ್ಟ್‌ ಬಿಗ್ ಬಿಲಿಯನ್ ಡೇಸ್ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್‌ಗಳು, ಎಲೆಕ್ಟ್ರಾನಿಕ್ಸ್, ಟಿವಿಗಳು, ಫ್ಯಾಷನ್ ಮತ್ತು ಇತರೆ ಡಿವೈಸ್‌ಗಳ ಮೇಲೆ ರಿಯಾಯಿತಿ ದೊರೆಯಲಿದೆ. ಇದಕ್ಕೆಂದೆ ಮೀಸಲಾದ ಮೈಕ್ರೊಸೈಟ್ ಅನ್ನು ರಚಿಸಲಾಗಿದೆ. ಈ ಸೇಲ್‌ನಲ್ಲಿ ಹೆಚ್ಚಿನ ಪ್ರಾಡಕ್ಟ್‌ಗಳ ಮೇಲೆ 80% ರಷ್ಟು ರಿಯಾಯಿತಿ ಲಭ್ಯವಿರುವುದನ್ನು ಫ್ಲಿಪ್‌ಕಾರ್ಟ್ ಖಚಿತಪಡಿಸಿದೆ. ಹೆಚ್ಚುವರಿಯಾಗಿ, ಆಕ್ಸಿಸ್ ಬ್ಯಾಂಕ್ ಮತ್ತು ಐಸಿಐಸಿಐ ಬ್ಯಾಂಕ್ ಜೊತೆ ಫ್ಲಿಪ್‌ಕಾರ್ಟ್‌ ಪಾಲುದಾರಿಕೆ ಹೊಂದಿದೆ. ಅಲ್ಲದೆ ಕ್ಯಾಶ್‌ಬ್ಯಾಕ್ ಆಫರ್‌ಗಾಗಿ ಫ್ಲಿಪ್‌ಕಾರ್ಟ್ ಪೇಟಿಎಂ ಜೊತೆ ಪಾಲುದಾರಿಕೆ ಹೊಂದಿರುವುದು ಬಹಿರಂಗವಾಗಿದೆ.

ಯಾವೆಲ್ಲಾ ಪ್ರಾಡಕ್ಟ್‌ಗಳು ಲಾಂಚ್‌ ಆಗಲಿವೆ!

ಯಾವೆಲ್ಲಾ ಪ್ರಾಡಕ್ಟ್‌ಗಳು ಲಾಂಚ್‌ ಆಗಲಿವೆ!

ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ 2021 ರಲ್ಲಿ, ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಲಾಂಚ್‌ ಮಾಡುವ ನಿರೀಕ್ಷೆ ಇದೆ. ಇದರಲ್ಲಿ ಮೊಟೊರೊಲಾ, ಒಪ್ಪೋ, ಪೊಕೊ, ರಿಯಲ್‌ಮಿ, ಸ್ಯಾಮ್‌ಸಂಗ್ ಮತ್ತು ವಿವೋ ಸೇರಿದಂತೆ ಅನೇಕ ಬ್ರ್ಯಾಂಡ್‌ಗಳು ಸೇರಿವೆ. ಇದರಲ್ಲಿ ಸ್ಯಾಮ್‌ಸಂಗ್ ತನ್ನ ಹೊಸ ಸ್ಮಾರ್ಟ್‌ಫೋನ್ ಅನ್ನು ಸೆಪ್ಟೆಂಬರ್ 28 ರಂದು ಬಿಡುಗಡೆ ಮಾಡಲಾಗುವುದು ಎಂದು ಹೇಳಿದೆ. ಹಾಗೆಯೇ ಒಪ್ಪೋ ಕಂಪೆನಿ ಕೂಡ ತನ್ನ ಹೊಸ ಸ್ಮಾರ್ಟ್‌ಫೋನ್ ಅನ್ನು ಸೆಪ್ಟೆಂಬರ್ 27 ರಂದು ಬಿಡುಗಡೆ ಮಾಡುವುದಾಗಿ ಹೇಳಿದೆ. ಹೀಗಾಗಿ ಹಲವು ಸ್ಮಾರ್ಟ್‌ಫೋನ್‌ಗಳು ಈ ಸೇಲ್‌ನ ಸಮಯದಲ್ಲಿ ಲಾಂಚ್‌ ಆಗುವ ಸಾಧ್ಯತೆ ಇದೆ.

Most Read Articles
Best Mobiles in India

English summary
Flipkart Big Billion Days sale deals have been revealed.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X