ಅಮೆಜಾನ್‌ ಮತ್ತು ಫ್ಲಿಪ್‌ಕಾರ್ಟ್‌ ಸೇಲ್‌ನಲ್ಲಿ ಈ ಫೋನ್‌ಗಳು ಡಿಸ್ಕೌಂಟ್‌ ಪಡೆಯಲಿವೆ!

|

ಫ್ಲಿಪ್‌ಕಾರ್ಟ್‌ ಮತ್ತು ಅಮೆಜಾನ್‌ ಆನ್‌ಲೈನ್‌ ಶಾಪಿಂಗ್‌ ಪ್ರಿಯರ ನೆಚ್ಚಿನ ಪ್ಲಾಟ್‌ಫಾರ್ಮ್‌ ಎನಿಸಿಕೊಂಡಿವೆ. ಫ್ಲಿಪ್‌ಕಾರ್ಟ್‌, ಅಮೆಜಾನ್‌ ಪ್ಲಾಟ್‌ಫಾರ್ಮ್‌ಗಳು ಆನ್‌ಲೈನ್‌ ಗ್ರಾಹಕರನ್ನು ಆಕರ್ಷಿಸುವ ಸಲುವಾಗಿ ಆಕರ್ಷಕ ಸೇಲ್‌ಗಳನ್ನು ಆಯೋಜಿಸುತ್ತಲೇ ಬಂದಿವೆ. ಸದ್ಯ ಇದೀಗ ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ 2021 ಮತ್ತು ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ 2021 ಅನ್ನು ಘೋಷಣೆ ಮಾಡಿವೆ. ದಿನಾಂಕ ಇನ್ನು ನಿಗದಿಯಾಗಿಲ್ಲವಾದರೂ ಈ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್‌ ಸೇರಿದಂತೆ ಅನಕ ಡಿವೈಸ್‌ಗಳ ಮೇಲೆ ಬಿಗ್‌ ಆಫರ್‌ ಅನ್ನು ಘೋಷಿಸಿಲಾಗಿದೆ.

ಪ್ಲಾಟ್‌ಫಾರ್ಮ್‌ಗಳು

ಹೌದು, ಎರಡೂ ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳು ಆನ್‌ಲೈನ್‌ ಶಾಪಿಂಗ್‌ ಪ್ರಿಯರಿಗಾಗಿ ಸ್ಮಾರ್ಟ್‌ಫೋನ್‌ಗಳು ಮತ್ತು ಇತರ ಗ್ಯಾಜೆಟ್‌ಗಳ ಮೇಲೆ ಬಿಗ್‌ ಡಿಸ್ಕೌಂಟ್‌ ಅನ್ನು ನೀಡುತ್ತಿವೆ. ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ 2021 ಮತ್ತು ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ 2021 ಸೇಲ್‌ನಲ್ಲಿ ಕ್ಯಾಮೆರಾ ಫೋನ್‌ಗಳನ್ನು ಒಳಗೊಂಡಂತೆ ಸ್ಮಾರ್ಟ್‌ಫೋನ್‌ಗಳಲ್ಲಿ ಬಾರಿ ಬೆಲೆ ಕಡಿತವನ್ನು ಕಾಣಬಹುದಾಗಿದೆ. ಹಾಗಾದ್ರೆ ಈ ಎರಡೂ ಪ್ಲಾಟ್‌ಫಾರ್ಮ್‌ಗಳ ಸೇಲ್‌ನಲ್ಲಿ ರಿಯಾಯಿತಿ ದರದಲ್ಲಿ ಲಭ್ಯವಿರುವ ಟಾಪ್ 10 ಕ್ಯಾಮರಾ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಗೂಗಲ್ ಪಿಕ್ಸೆಲ್ 4a

ಗೂಗಲ್ ಪಿಕ್ಸೆಲ್ 4a

ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ 2021 ನಲ್ಲಿ ಗೂಗಲ್ ಪಿಕ್ಸೆಲ್ 4a ಸ್ಮಾರ್ಟ್‌ಫೋನ್‌ ಬಿಗ್‌ ಡಿಸ್ಕೌಂಟ್‌ ಪಡೆದುಕೊಂಡಿದೆ. ಪ್ರಸ್ತುತ, ಗೂಗಲ್ ಪಿಕ್ಸೆಲ್ 4a ಸ್ಮಾರ್ಟ್‌ಫೋನ್‌ ಬೆಲೆ 31,999ರೂ ಆಗಿದೆ. ಇದು ಫ್ಲಿಪ್‌ಕಾರ್ಟ್‌ ಸೇಲ್‌ನಲ್ಲಿ 20,000ರೂ ಗಳ ಆಸುಪಾಸಿನಲ್ಲಿ ಲಭ್ಯವಾಗಲಿದೆ ಎನ್ನಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 5.8 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನ್ಯಾಪ್‌ಡ್ರಾಗನ್‌ 730G ಪ್ರೊಸೆಸರ್‌ ಬಲವನ್ನು ಪಡೆದಿದೆ. ಈ ಫೋನ್‌ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 12ಎಂಪಿ ಸೆನ್ಸಾರ್‌ನಲ್ಲಿದೆ.

ಆಪಲ್ ಐಫೋನ್ 12

ಆಪಲ್ ಐಫೋನ್ 12

ಅಮೆಜಾನ್‌ ಮತ್ತು ಫ್ಲಿಪ್‌ಕಾರ್ಟ್‌ ಎರಡು ಪ್ಲಾಟ್‌ಫಾರ್ಮ್‌ಗಳು ಎರಡು ಕೂಡ ತಮ್ಮ ಸೇಲ್‌ನಲ್ಲಿ ಐಫೋನ್ 12 ಸರಣಿಯ ಮೇಲೆ ಭರ್ಜರಿ ರಿಯಾಯಿತಿ ನೀಡುವುದಾಗಿ ಘೋಷಿಸಿವೆ. ಐಫೋನ್ 12 ಪ್ರೊ ಮತ್ತು ಐಫೋನ್ 12 ಪ್ರೊ ಮ್ಯಾಕ್ಸ್ ಮೇಲೆ 6 ಸಾವಿರಗಳಷ್ಟು ರಿಯಾಯಿತಿ ದೊರೆಯಲಿದೆ ಎನ್ನಲಾಗಿದೆ. ಇನ್ನು ಐಫೋನ್ 12 OLED ಡಿಸ್‌ಪ್ಲೇ ಹೊಂದಿದ್ದು, A14 ಬಯೋನಿಕ್ ಸೋಕ್ ಕ್ವಾಡ್‌ ಕೋರ್ ಪ್ರೊಸೆಸರ್‌ ಅನ್ನು ಹೊಂದಿದೆ. 5G ಅನ್ನು ಬೆಂಬಲಿಸುತ್ತದೆ. ಐಫೋನ್ 12 ಫೋನ್ ಎರಡು ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾಪಿಕ್ಸೆಲ್ ವೈಡ್-ಆಂಗಲ್ ಸಂವೇದಕಗಳನ್ನು ಹೊಂದಿವೆ. ನೈಟ್‌ ಮೋಡ್‌ ಆಯ್ಕೆ ಇದ್ದು ಕಡಿಮೆ ಬೆಳಕಿನಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ.

ಸ್ಯಾಮ್ಸಂಗ್ ಗ್ಯಾಲಕ್ಸಿ Z ಫ್ಲಿಪ್ 3

ಸ್ಯಾಮ್ಸಂಗ್ ಗ್ಯಾಲಕ್ಸಿ Z ಫ್ಲಿಪ್ 3

ಇನ್ನು ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ 2021 ರಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ Z ಫ್ಲಿಪ್ 3 ಡಿಸ್ಕೌಂಟ್‌ನಲ್ಲಿ ದೊರೆಯಲಿದೆ ಎನ್ನಲಾಗಿದೆ. ಇದರ ಮೇಲೆ ಎಷ್ಟು ರಿಯಾಯಿತಿ ಸಿಗಲಿದೆ ಅನ್ನೊದು ಬಹಿರಂಗವಾಗಿಲ್ಲವಾದರೂ ಹೆಚ್ಚಿನ ರಿಯಾಯಿತಿ ಲಭ್ಯವಾಗಲಿದೆ. ಇದರೊಂದಿಗೆ ಸ್ಯಾಮ್ಸಂಗ್ ಗ್ಯಾಲಕ್ಸಿ Z ಫೋಲ್ಡ್ 3 ಮಾರುಕಟ್ಟೆಯಲ್ಲಿರುವ ಅತ್ಯಾಧುನಿಕ ಕ್ಯಾಮೆರಾ ಫೋನ್ ಗಳಲ್ಲಿ ಒಂದಾಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್ 21 ಅಲ್ಟ್ರಾ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್ 21 ಅಲ್ಟ್ರಾ

ಇನ್ನು ಈ ಸೇಲ್‌ ಸಮಯದಲ್ಲಿ ಕೆಲವು ಹೊಸ ಸ್ಯಾಮ್‌ಸಂಗ್ ಫೋನ್‌ಗಳನ್ನು ಬಿಡುಗಡೆ ಮಾಡಲು ಸೂಚಿಸಲಾಗಿದೆ. ಇದೇ ಸಮಯದಲ್ಲಿ, ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್ 21 ಅಲ್ಟ್ರಾ ಕೂಡ ಈ ಮಾರಾಟದ ಸಮಯದಲ್ಲಿ ಭಾರೀ ರಿಯಾಯಿತಿ ಪಡೆಯಬಹುದು. ಟಾಪ್ 10 ಕ್ಯಾಮೆರಾ ಸ್ಮಾರ್ಟ್‌ಫೋನ್‌ಗಳ ಭಾಗವಾಗಿ, ಸ್ಯಾಮ್‌ಸಂಗ್ ಗ್ಯಾಲಕ್ಸಿ S21 ಅಲ್ಟ್ರಾವನ್ನು ಇಲ್ಲಿ ರಿಯಾಯಿತಿಯಲ್ಲಿ ಪರಿಶೀಲಿಸಬಹುದು.

ಒನ್‌ಪ್ಲಸ್ 9 ಪ್ರೊ 5 ಜಿ

ಒನ್‌ಪ್ಲಸ್ 9 ಪ್ರೊ 5 ಜಿ

ಇದಲ್ಲದೆ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ 2021 ನಲ್ಲಿ ಒನ್‌ಪ್ಲಸ್ 9 ಪ್ರೊ 5 ಜಿ ರಿಯಾಯಿತಿ ದರದಲ್ಲಿ ಲಭ್ಯವಾಗಲಿದೆ. ಒನ್‌ಪ್ಲಸ್ 9 ಪ್ರೊ 5 ಜಿ ಸ್ಮಾರ್ಟ್‌ಫೋನ್‌ ಅತ್ಯುತ್ತಮ ಕ್ಯಾಮೆರಾ ಕೇಂದ್ರಿತ ಫೋನ್‌ಗಳಲ್ಲಿ ಒಂದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.7 ಇಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇದು 8GB RAM ಮತ್ತು 128GB ಹಾಗೂ 12GB RAM ಮತ್ತು 256GB ಸ್ಟೋರೇಜ್‌ ವೇರಿಯೆಂಟ್‌ ಅನ್ನು ಹೊಂದಿದೆ. ಇದು 4500 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಒನ್‌ಪ್ಲಸ್ 9R

ಒನ್‌ಪ್ಲಸ್ 9R

ಅಲ್ಲದೆ, ಒನ್‌ಪ್ಲಸ್ 9ಆರ್ ಸ್ಮಾರ್ಟ್‌ಫೋನ್‌ ಕೂಡ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ 2021 ನಲ್ಲಿ ಬಿಗ್‌ ಡಿಸ್ಕೌಂಟ್‌ನಲ್ಲಿ ಸಿಗಲಿದೆ. ಒನ್‌ಪ್ಲಸ್ 9R ಸ್ಮಾರ್ಟ್‌ಫೋನ್‌ 6.55 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಪ್ಲಾಟ್‌ ಪ್ಲೂಯಿಡ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 870SoC ಪ್ರೊಸೆಸರ್‌ ಅನ್ನು ಹೊಂದಿದೆ.

ಶಿಯೋಮಿ ಮಿ 11 ಅಲ್ಟ್ರಾ

ಶಿಯೋಮಿ ಮಿ 11 ಅಲ್ಟ್ರಾ

ಶಿಯೋಮಿ ಮಿ 11 ಅಲ್ಟ್ರಾ ಸ್ಮಾರ್ಟ್‌ಫೋನ್‌ ಭಾರತೀಯ ಮಾರುಕಟ್ಟೆಯಲ್ಲಿ ಲಭ್ಯವಿರುವ ಟಾಪ್ ರೇಟಿಂಗ್ ಕ್ಯಾಮೆರಾ ಫೋನ್‌ಗಳಲ್ಲಿ ಒಂದಾಗಿದೆ. ಇದು ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ 2021 ಮತ್ತು ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ 2021 ಸೇಲ್‌ನಲ್ಲಿ ಹೆಚ್ಚಿನ ಬೆಲೆಯನ್ನು ಕಡಿತವನ್ನು ಹೊಂದಿರಲಿದೆ. ಇನ್ನು ಮಿ 11 ಅಲ್ಟ್ರಾ ಸ್ಮಾರ್ಟ್‌ಫೋನ್‌ 1,440x3,200 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.81-ಇಂಚಿನ WQHD + E4 ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ MIUI 12 ನಲ್ಲಿ ಕಾರ್ಯನಿರ್ವಹಿಸಲಿದೆ.

ಮೊಟೊರೊಲಾ ಎಡ್ಜ್ 20 ಫ್ಯೂಷನ್

ಮೊಟೊರೊಲಾ ಎಡ್ಜ್ 20 ಫ್ಯೂಷನ್

ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ 2021ನಲ್ಲಿ ಮೊಟೊರೊಲಾ ಎಡ್ಜ್ 20 ಫ್ಯೂಷನ್ ಮೇಲೆ ಬೆಲೆ ಕಡಿತವನ್ನು ಘೋಷಿಸಲಾಗಿದೆ.

ವಿವೋ X60 ಪ್ರೊ

ವಿವೋ X60 ಪ್ರೊ

ವಿವೋ X60 ಪ್ರೊ ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ ಮತ್ತು ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ 2021 ನಲ್ಲಿ ರಿಯಾಯಿತಿ ದರದಲ್ಲಿ ದೊರೆಯಲಿದೆ.

ರಿಯಲ್‌ಮಿ GT ಮಾಸ್ಟರ್ ಆವೃತ್ತಿ

ರಿಯಲ್‌ಮಿ GT ಮಾಸ್ಟರ್ ಆವೃತ್ತಿ

ರಿಯಲ್‌ಮಿ GT ಮಾಸ್ಟರ್ ಎಡಿಶನ್ ಎರಡು ಇ-ಕಾಮರ್ಸ್‌ ಪ್ಲಾಟ್‌ಫಾರ್ಮ್‌ಗಳ ರಿಯಾಯಿತಿ ಸೇಲ್‌ನಲ್ಲಿ ಬೆಲೆ ಕಡಿತವನ್ನು ಪಡೆಯಲಿದೆ.

Most Read Articles
Best Mobiles in India

English summary
Flipkart Big Billion Days 2021 & Amazon Great Indian Festival Sale 2021 discount offers on Top 10 smartphones.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X