ಫ್ಲಿಪ್‌ಕಾರ್ಟ್‌ ಸೇಲ್‌ ಸಮಯದಲ್ಲಿ ಪೊಕೊ F4 5G ಫೋನ್‌ಗೆ ಸಿಗಲಿದೆ ಬಿಗ್‌ ಆಫರ್‌!

|

ಇತ್ತೀಚಿನ ದಿನಗಳಲ್ಲಿ ಪೊಕೊ ಬ್ರ್ಯಾಂಡ್‌ನ ಪೋನ್‌ಗಳು ಕೂಡ ಸಾಕಷ್ಟು ಸದ್ದು ಮಾಡುತ್ತಿವೆ. ಬಜೆಟ್‌ ಬೆಲೆಯ ಜೊತೆಗೆ ಮಿಡ್‌ ರೇಂಜ್‌ ಪ್ರೈಸ್‌ಟ್ಯಾಗ್‌ನಲ್ಲಿಯೂ ಸಹ ಪೊಕೊ ಸ್ಮಾರ್ಟ್‌ಫೋನ್‌ಗಳು ಎಂಟ್ರಿ ನೀಡಿವೆ. ಇದರಲ್ಲಿ ಪೊಕೊ F4 5G ಸ್ಮಾರ್ಟ್‌ಫೋನ್‌ ಕೂಡ ಒಂದಾಗಿದೆ. ಇದೇ ವರ್ಷ ಜೂನ್‌ ತಿಂಗಳಿನಲ್ಲಿ ಭಾರತಕ್ಕೆ ಎಂಟ್ರಿ ಕೊಟ್ಟ ಈ ಫೋನ್‌ ವಿಶೇಷ ಫೀಚರ್ಸ್‌ಗಳಿಂದ ಗಮನ ಸೆಳೆದಿದೆ. 27,999 ರೂ. ಆರಂಭಿಕ ಬೆಲೆಯಲ್ಲಿ ಬಂದಿದ್ದ ಈ ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ ಬಿಗ್‌ ಬಿಲಿಯನ್‌ ಡೇಸ್‌ ಸೇಲ್‌ನಲ್ಲಿ ಬಿಗ್‌ ಅಫರ್‌ನಲ್ಲಿ ದೊರೆಯಲಿದೆ.

ಫ್ಲಿಪ್‌ಕಾರ್ಟ್‌

ಹೌದು, ಫ್ಲಿಪ್‌ಕಾರ್ಟ್‌ ಬಿಗ್‌ ಬಿಲಿಯನ್‌ ಡೇಸ್‌ ಸೇಲ್‌ 2022 ಇದೇ ಸೆಪ್ಟೆಂಬರ್‌ 23 ರಂದು ಪ್ರಾರಂಭವಾಗಲಿದೆ. ಈ ಸೇಲ್‌ನಲ್ಲಿ ಹಲವು ಪ್ರಾಡಕ್ಟ್‌ಗಳ ಮೇಲೆ ಬಿಗ್‌ ಆಫರ್‌ ನೀಡಲಾಗ್ತಿದ್ದು ಸಾಕಷ್ಟು ಕುತೂಹಲ ಮೂಡಿಸಿದೆ. ಅದರಲ್ಲೂ ಪೊಕೊ ಸ್ಮಾರ್ಟ್‌ಫೋನ್‌ಗಳನ್ನ ಫ್ಲಿಪ್‌ಕಾರ್ಟ್‌ನಲ್ಲಿ ಊಹಿಸಲಾರದ ಬೆಲೆಯಲ್ಲಿ ಖರೀದಿಸುವುದಕ್ಕೆ ಸಾದ್ಯವಾಗಲಿದೆ. ಅದರಂತೆ ಪೊಕೊ F4 5G ಫೋನ್‌ ಬಿಗ್‌ ಆಫರ್‌ನಲ್ಲಿ ದೊರೆಯಲಿದೆ ಎನ್ನಲಾಗಿದೆ. ಹಾಗಾದ್ರೆ ಫ್ಲಿಪ್‌ಕಾರ್ಟ್‌ ಸೇಲ್‌ನಲ್ಲಿ ಪೊಕೊ F4 5G ಫೋನ್‌ ಮೇಲೆ ಡಿಸ್ಕೌಂಟ್‌ ಎಷ್ಟಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಫ್ಲಿಪ್‌ಕಾರ್ಟ್‌ ಸೇಲ್‌ನಲ್ಲಿ ಪೊಕೊ F4 5G ಫೋನ್‌ ಮೇಲೆ ಬಿಗ್‌ ಆಫರ್‌!

ಫ್ಲಿಪ್‌ಕಾರ್ಟ್‌ ಸೇಲ್‌ನಲ್ಲಿ ಪೊಕೊ F4 5G ಫೋನ್‌ ಮೇಲೆ ಬಿಗ್‌ ಆಫರ್‌!

ಫ್ಲಿಪ್‌ಕಾರ್ಟ್ ತನ್ನ ಬಿಗ್ ಬಿಲಿಯನ್ ಡೇಸ್ 2022 ಸೇಲ್‌ ಅನ್ನು ಇದೇ ಸೆಪ್ಟೆಂಬರ್ 23 ರಂದು ಪ್ರಾರಂಭಿಸಲಿದೆ. ಈ ಸಮಯದಲ್ಲಿ ಪೊಕೊ F4 5G ಸ್ಮಾರ್ಟ್‌ಫೋನ್‌ ಆಫರ್‌ನಲ್ಲಿ ಕೇವಲ 21,999ರೂ. ಬೆಲೆಗೆ ಖರೀದಿಸಬಹುದಾಗಿದೆ. ಫ್ಲಿಪ್‌ಕಾರ್ಟ್‌ನ ಮೇಲಿನ ಸ್ಕ್ರೀನ್‌ಗ್ರಾಬ್ 21,999ರೂ ಬೆಲೆಯು ಫ್ಲಿಪ್‌ಕಾರ್ಟ್‌ನಲ್ಲಿ ದೊರೆಯುವ ಎಲ್ಲಾ ಆಫರ್‌ಗಳನ್ನು ಒಳಗೊಂಡಿರುತ್ತದೆ ಎಂದು ಸೂಚಿಸಿದೆ.

ಪೊಕೊ F4 5G ಫೋನ್‌ ಫೀಚರ್ಸ್‌ ಹೇಗಿದೆ?

ಪೊಕೊ F4 5G ಫೋನ್‌ ಫೀಚರ್ಸ್‌ ಹೇಗಿದೆ?

ಡಿಸ್‌ಪ್ಲೇ
ಪೊಕೊ F4 5G ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ HD+ E4 ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು 120Hz ರಿಫ್ರೆಶ್ ರೇಟ್‌ ಮತ್ತು 360Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಹೊಂದಿದೆ. ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಅನ್ನು ಒಳಗೊಂಡಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಪೊಕೊ F4 5G ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 870 SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ MIUI 13 ನಲ್ಲಿ ಕಾರ್ಯನಿರ್ವಹಿಸಲಿದೆ. ಅಲ್ಲದೆ ಫೋರ್‌ ಕಾರ್ಟೆಕ್ಸ್-A78 ಕೋರ್‌ಗಳನ್ನು ಒಳಗೊಂಡಿದೆ.

ಕ್ಯಾಮೆರಾ ಸೆಟ್‌ಅಪ್‌ ಎಷ್ಟಿದೆ?

ಕ್ಯಾಮೆರಾ ಸೆಟ್‌ಅಪ್‌ ಎಷ್ಟಿದೆ?

ಪೊಕೊ F4 5G ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಹೊಂದಿರುವ f/1.8 ಲೆನ್ಸ್‌ನೊಂದಿಗೆ ಬರುತ್ತದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಒಳಗೊಂಡಿದೆ. ಇದಲ್ಲದೆ 20 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಪೊಕೊ F4 5G ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 67W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಈ ಬ್ಯಾಟರಿ ಕೇವಲ 38 ನಿಮಿಷಗಳಲ್ಲಿ 0% to 100% ಚಾರ್ಜ್‌ ಮಾಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 802.11ac, ಬ್ಲೂಟೂತ್ v5.2, GPS/ A-GPS/ NavIC, NFC, ಮತ್ತು USB ಟೈಪ್-C ಪೋರ್ಟ್ ಸೇರಿವೆ.

ಫ್ಲಿಪ್‌ಕಾರ್ಟ್‌ನಲ್ಲಿ ಡಿಸ್ಕೌಂಟ್‌ ಪಡೆದಿರುವ ಇತರೆ ಪೊಕೊ ಫೋನ್‌ಗಳು

ಫ್ಲಿಪ್‌ಕಾರ್ಟ್‌ನಲ್ಲಿ ಡಿಸ್ಕೌಂಟ್‌ ಪಡೆದಿರುವ ಇತರೆ ಪೊಕೊ ಫೋನ್‌ಗಳು

ಪೊಕೊ F4 5G ಜೊತೆಗೆ, ಪೊಕೊ X4 ಪ್ರೊ, ಪೊಕೊ M4 ಪ್ರೊ, M5 ಮತ್ತು M4 5G ಸಹ ಬಿಗ್ ಬಿಲಿಯನ್ ಡೇಸ್ 2022ಸೇಲ್‌ ಸಮಯದಲ್ಲಿ ಆಕರ್ಷಕ ಡಿಸ್ಕೌಂಟ್‌ ಪಡೆದುಕೊಂಡಿವೆ. ಇದರಲ್ಲಿ ಪೊಕೊ X4 ಪ್ರೊ13,999ರೂ. ನಿಂದ ಪ್ರಾರಂಭವಾಗುತ್ತದೆ.

Best Mobiles in India

English summary
Flipkart Big Billion Days: Poco F4 5G will be available in offer price

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X