Flipkart ಬಿಗ್ ಬಿಲಿಯನ್ ಡೇಸ್ ಸೇಲ್‌ಗೆ ಮುಹೂರ್ತ ಫಿಕ್ಸ್; ಬಿಗ್ ಆಫರ್ ಲಿಸ್ಟ್!
ಆನ್‌ಲೈನ್ ಶಾಪಿಂಗ್ ಪ್ರಿಯರ ನೆಚ್ಚಿನ ತಾಣ ಫ್ಲಿಪ್‌ಕಾರ್ಟ್ ಒಂದಿಲ್ಲೊಂದು ವಿಶೇಷ ಕೊಡುಗೆಗಳ ಮೂಲಕ ಗ್ರಾಹಕರನ್ನು ಸೆಳೆದಿದೆ. ಮುಖ್ಯವಾಗಿ ಹಬ್ಬದ ದಿನಗಳು, ವಿಶೇಷ ದಿನಗಳು ಅಥವಾ ಮಂತ್ ಎಂಡ್ ದಿನಗಳಲ್ಲಿ ಮತ್ತಷ್ಟು ರಿಯಾಯಿತಿ ಸೇಲ್ ಮೇಳಗಳನ್ನು ಆಯೋಜಿಸುವ ಮೂಲಕ ಶಾಪಿಂಗ್ ಪ್ರಿಯರನ್ನು ಆಕರ್ಷಿಸುತ್ತದೆ. 'ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್' ಫ್ಲಿಪ್‌ಕಾರ್ಟ್‌ನ ಜನಪ್ರಿಯ ಸೇಲ್ ಮೇಳವಾಗಿದ್ದು, ಈ ವೇಳೆ ಗ್ಯಾಡ್ಜೆಟ್ಸ್ ಉತ್ಪನ್ನಗಳ ಮೇಲೆ ಸಂಸ್ಥೆಯು ಭರಪೂರ ಕೊಡುಗೆಗಳನ್ನು ಘೋಷಿಸುತ್ತದೆ. ಇದೀಗ ಫ್ಲಿಪ್‌ಕಾರ್ಟ್‌ನ ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ ಮತ್ತೆ ಬಂದಿದೆ.

ಹೌದು, ಜನಪ್ರಿಯ ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ 2021 ಆಯೋಜಿಸಲಿದ್ದು, ಅಧಿಕೃತ ದಿನಾಂಕ ಬಹಿರಂಗ ಮಾಡಿದೆ. ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ ಆರು ದಿನಗಳ ಕಾಲ ನಡೆಯಲಿದ್ದು, ಇದೇ ಅಕ್ಟೋಬರ್ 2 ರಿಂದ ಪ್ರಾರಂಭವಾಗಿ, ಅಕ್ಟೋಬರ್ 12ರ ವರೆಗೂ ಮುಂದುವರಿಯಲಿದೆ. ಹಾಗೆಯೇ ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ 2021 ಗಾಗಿ ಕಂಪನಿಯು ಆಕ್ಸಿಸ್ ಬ್ಯಾಂಕ್ ಮತ್ತು ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್‌ಗಳೊಂದಿಗೆ ಪಾಲುದಾರಿಕೆ ಹೊಂದಿದೆ. ಇದಲ್ಲದೇ ಯುಪಿಐ ಪೇಮೆಂಟ್ ಮೂಲಕ ಖರೀದಿಸಿದರೇ ಕ್ಯಾಶ್‌ಬ್ಯಾಕ್ ಸಹ ಲಭ್ಯವಾಗಲಿದೆ. ಹಾಗಾದರೇ ಫ್ಲಿಪ್‌ಕಾರ್ಟ್ ಸೇಲ್‌ನ ಆಫರ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಫ್ಲಿಪ್‌ಕಾರ್ಟ್ ತಾಣವು ಬಿಗ್ ಬಿಲಿಯನ್ ಡೇಸ್ ಸೇಲ್‌ಗಾಗಿ ಮೈಕ್ರೊಸೈಟ್ ಅನ್ನು ರಚಿಸಿದೆ. ಈ ಸೇಲ್‌ನಲ್ಲಿ ಸೌಂಡ್‌ಕೋರ್, ಎಂಎಸ್‌ಐ, ಬೋಲ್ಟ್, ಬೋಟ್, ಡೀಜೊ, ಇಂಟೆಲ್ ಮತ್ತು ಬೋಟ್‌ನಂತಹ ಉತ್ಪನ್ನಗಳ ಮೇಲೆ ಆಕರ್ಷಕ ರಿಯಾಯಿತಿಗಳನ್ನು ನೀಡುತ್ತದೆ. ಇದಷ್ಟೇ ಅಲ್ಲದೇ ಈ ವಿಶೇಷ ಸೇಲ್‌ನಲ್ಲಿ ಸ್ಯಾಮ್‌ಸಂಗ್, ಆಪಲ್, ಒಪ್ಪೋ ಮತ್ತು ವಿವೋ ಸ್ಮಾರ್ಟ್‌ಫೋನ್‌ಗಳ ಮೇಲೆ ಉತ್ತಮ ರಿಯಾಯಿತಿಗಳನ್ನು ನೀಡಲಾಗುವುದು ಎಂದು ಕಂಪನಿ ತಿಳಿಸಿದೆ.

ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ 2021 ಸೇಲ್ ಮೇಳವು ಗ್ರಾಹಕರ ಎಲ್ಲ ಅಗತ್ಯತೆಗಳನ್ನು ಪೂರೈಸಲು ಹೆಚ್ಚಿನ ಸಂಗ್ರಹ ಸ್ಟೋರ್‌ನಲ್ಲಿ ಇದೆ ಎಂದಿದೆ. ಸ್ಮಾರ್ಟ್‌ಫೋನ್‌ಗಳು, ಟ್ಯಾಬ್ಲೆಟ್‌ಗಳು, ಟಿವಿಗಳು, ವಾಶಿಂಗ್ ಮಿಷಿನ್ ಸೇರಿದಂತೆ ಇನ್ನೂ ಅನೇಕ ಅಗತ್ಯ ಗ್ಯಾಡ್ಜೆಟ್ಸ್ ಉತ್ಪನ್ನಗಳು ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ 2021 ನಲ್ಲಿ ಲಭ್ಯ ಇರಲಿವೆ. ಗ್ಯಾಡ್ಜೆಟ್ಸ್ ವಸ್ತುಗಳ ಜೊತೆಗೆ ಫ್ಯಾಶನ್ ನಿಂದ ಹಿಡಿದು ಫರ್ನಿಚರ್ ಉತ್ಪನ್ನಗಳ ವರೆಗೂ ಸೇಲ್‌ನಲ್ಲಿ ದೊರೆಯಲಿವೆ. ಅತ್ಯುತ್ತಮ ರಿಯಾಯಿತಿ ಕೊಡುಗೆಗಳು ಸಹ ಲಭ್ಯವಾಗಲಿವೆ.
ಫ್ಲಿಪ್‌ಕಾರ್ಟ್ ತಾಣದ ಬಿಗ್ ಬಿಲಿಯನ್ ಡೇಸ್ ಸೇಲ್ 2021 ಸೇಲ್ ಅಡಿಯಲ್ಲಿ, ಸ್ಮಾರ್ಟ್‌ಫೋನ್‌ಗಳು, ಎಲೆಕ್ಟ್ರಾನಿಕ್ಸ್, ಟಿವಿಗಳು, ಫ್ಯಾಷನ್ ಇತ್ಯಾದಿಗಳಿಗೆ ರಿಯಾಯಿತಿ ಕೊಡುಗೆಗಳು ಲಭ್ಯವಿರುತ್ತವೆ. ಹಾಗೆಯೇ ಫ್ಲಿಪ್‌ಕಾರ್ಟ್ ಸೇಲ್‌ನಲ್ಲಿ ಐಫೋನ್ 12 ಸ್ಮಾರ್ಟ್‌ಫೋನ್‌ನಲ್ಲಿ ರಿಯಾಯಿತಿ ಭರ್ಜರಿ ರಿಯಾಯಿತಿ ಸಿಗುವ ಸಾಧ್ಯತೆಗಳಿವೆ. ಇದರೊಂದಿಗೆ ರಿಯಲ್‌ಮಿ 4K ಗೂಗಲ್ ಟಿವಿ ಸ್ಟಿಕ್ ಅನ್ನು ಮುಂಬರುವ ಮಾರಾಟದ ಸಮಯದಲ್ಲಿ ಬಿಡುಗಡೆ ಮಾಡಲಾಗುವುದು ಎನ್ನಲಾಗಿದೆ.
ಬಿಗ್ ಬಿಲಿಯನ್ ಡೇಸ್ ಸೇಲ್ ವೇಳೆ, ಮೊಟೊರೊಲಾ, ಒಪ್ಪೋ, ಪೊಕೊ, ರಿಯಲ್‌ಮಿ, ಸ್ಯಾಮ್‌ಸಂಗ್ ಮತ್ತು ವಿವೋ ಸ್ಮಾರ್ಟ್‌ಫೋನ್ ಬ್ರಾಂಡ್‌ಗಳು ತಮ್ಮ ಇತ್ತೀಚಿನ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಲಿವೆ. ರಿಯಲ್‌ಮಿಯು ತನ್ನ ಹೊಸ ರಿಯಲ್‌ಮಿ ನಾರ್ಜೊ 50 ಸ್ಮಾರ್ಟ್‌ಫೋನ್ ಸರಣಿಯನ್ನುಇ-ರಿಟೇಲ್ ಪ್ಲಾಟ್‌ಫಾರ್ಮ್‌ನಲ್ಲಿ ಇದೇ ಸೆಪ್ಟೆಂಬರ್ 24 ರಂದು ಬಿಡುಗಡೆ ಮಾಡಲಿದೆ. ಹಾಗೆಯೇ ಫ್ಲಿಪ್‌ಕಾರ್ಟ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಫೋನ್ ಖರೀದಿಗೆ ಲಭ್ಯವಾಗಲಿದೆ ಎಂದು ಹೇಳಲಾಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G- ಫೀಚರ್ಸ್
ಈ ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ ಫುಲ್ HD+ ಡಿಸ್‌ಪ್ಲೇ ಹೊಂದಿರುವ ಸಾಧ್ಯತೆ ಇದೆ. ಇದು ಸೂಪರ್ AMOLED ಡಿಸ್‌ಪ್ಲೇ ಜೊತೆಗೆ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಅನ್ನು ಪಡೆದುಕೊಂಡಿದೆ. ಹಾಗೆಯೇ ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಅನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. ಹಾಗೆಯೇ ಸ್ನಾಪ್‌ಡ್ರಾಗನ್ 778G SoC ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಒನ್ UI 3.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 6GB ಮತ್ತು 8GB RAM ಹಾಗೂ 128GB ಇಂಟರ್ ಸ್ಟೋರೇಜ್ ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. ಇನ್ನು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ ಎಂದು ನಿರೀಕ್ಷಿಸಲಾಗಿದೆ.


Click it and Unblock the Notifications








