ಫ್ಲಿಪ್‌ಕಾರ್ಟ್‌ ಸೇಲ್‌ನಲ್ಲಿ ಸ್ಮಾರ್ಟ್‌ಟಿವಿಗಳ ಮೇಲೆ 47% ಡಿಸ್ಕೌಂಟ್‌ ಆಫರ್‌!

|

ಜನಪ್ರಿಯ ಇ-ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ ಬಿಗ್‌ ಬಿಲಿಯನ್‌ ಡೇಸ್‌ ಸೇಲ್‌ ಆಯೋಜಿಸಿದೆ. ಈ ಸೇಲ್‌ ಇದೀಗ ಫ್ಲಿಪ್‌ಕಾರ್ಟ್‌ ಪ್ಲಸ್‌ ಸದಸ್ಯರಿಗೆ ಲೈವ್‌ ಆಗಿದೆ. ಸಾಮಾನ್ಯ ಗ್ರಾಹಕರಿಗೆ ನಾಳೆ (ಸೆ.23)ರಿಂದ ಲೈವ್‌ ಆಗಲಿದೆ. ಸದ್ಯ ಪ್ಲಸ್‌ ಸದಸ್ಯರಿಗೆ ಫ್ಲಿಪ್‌ಕಾರ್ಟ್‌ ಬಿಗ್‌ ಬಿಲಿಯನ್‌ ಡೇಸ್‌ ಸೇಲ್‌ನಲ್ಲಿ ಡಿಸ್ಕೌಂಟ್‌ ಲಭ್ಯವಿದೆ. ಈ ಸಮಯದಲ್ಲಿ ಸ್ಮಾರ್ಟ್‌ಫೋನ್‌ಗಳು, ಲ್ಯಾಪ್‌ಟಾಪ್‌ಗಳು, ಟಿವಿಗಳು ಮತ್ತು ಹೋಮ್ ಎಲೆಕ್ಟ್ರಾನಿಕ್ಸ್ ಸೇರಿದಂತೆ ಅನೇಕ ಗ್ಯಾಜೆಟ್ಸ್‌ಗಳ ಮೇಲೆ ತ್ವರಿತ ರಿಯಾಯಿತಿಯನ್ನು ನೀಡಲಾಗ್ತಿದೆ.

ಫ್ಲಿಪ್‌ಕಾರ್ಟ್‌

ಹೌದು, ಫ್ಲಿಪ್‌ಕಾರ್ಟ್‌ ಬಿಗ್‌ ಬಿಲಿಯನ್‌ ಡೇಸ್‌ ಸೇಲ್‌ ಇಂದಿನಿಂದ ಪ್ಲಸ್‌ ಸದಸ್ಯರಿಗೆ ಲೈವ್‌ ಆಗಿದೆ. ಈ ಅವಧಿಯಲ್ಲಿ ಫ್ಲಿಪ್‌ಕಾರ್ಟ್‌ ಸೇಲ್‌ನಲ್ಲಿ ಲಭ್ಯವಿರುವ ಡಿಸ್ಕೌಂಟ್‌ಗಳನ್ನು ಪಡೆದುಕೊಳ್ಳಬಹುದಾಗಿದೆ. ಫ್ಲಿಪ್‌ಕಾರ್ಟ್‌ ತನ್ನ ಬಿಗ್‌ ಬಿಲಿಯನ್‌ ಡೇಸ್‌ ಸೇಲ್‌ನಲ್ಲಿ ಸ್ಮಾರ್ಟ್‌ಟಿವಿಗಳ ಮೇಲೆ 47% ತನಕ ವಿಶೇಷ ರಿಯಾಯಿತಿಯನ್ನು ನೀಡುತ್ತಿದೆ. ಅದರಲ್ಲೂ ಬ್ರ್ಯಾಂಡ್‌ ಕಂಪೆನಿಗಳಾದ ಸ್ಯಾಮ್‌ಸಂಗ್‌, ರಿಯಲ್‌ಮಿ, ಶೀಯೋಮಿ, ಇನ್ಫಿನಿಕ್ಸ್‌ ಸ್ಮಾರ್ಟ್‌ಟಿವಿಗಳನ್ನು ಕೂಡ ಡಿಸ್ಕೌಂಟ್‌ನಲ್ಲಿ ಖರೀದಿಸಬಹುದಾಗಿದೆ. ಹಾಗಾದ್ರೆ ಫ್ಲಿಪ್‌ಕಾರ್ಟ್‌ ಬಿಗ್‌ ಬಿಲಿಯನ್‌ ಡೇಸ್‌ ಸೇಲ್‌ನಲ್ಲಿ ನೀವು ಖರೀದಿಸಬಹುದಾದ ಸ್ಮಾರ್ಟ್‌ಟಿವಿಗಳ ವಿವರವನ್ನು ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಸ್ಯಾಮ್‌ಸಂಗ್‌ HD ರೆಡಿ LED ಸ್ಮಾರ್ಟ್ ಟೈಜೆನ್ ಟಿವಿ

ಸ್ಯಾಮ್‌ಸಂಗ್‌ HD ರೆಡಿ LED ಸ್ಮಾರ್ಟ್ ಟೈಜೆನ್ ಟಿವಿ

ಫ್ಲಿಪ್‌ಕಾರ್ಟ್‌ ಬಿಗ್‌ ಬಿಲಿಯನ್‌ ಡೇಸ್‌ ಸೇಲ್‌ನಲ್ಲಿ ಸ್ಯಾಮ್‌ಸಂಗ್‌ ಕಂಪೆನಿಯ ಸ್ಯಾಮ್‌ಸಂಗ್‌ ಹೆಚ್‌ಡಿ ಎಲ್‌ಇಡಿ ಸ್ಮಾರ್ಟ್‌ ಟೈಜೆನ್‌ ಟಿವಿ ಬಿಗ್‌ ಡಿಸ್ಕೌಂಟ್‌ ಪಡೆದಿದೆ. ಈ ಸ್ಮಾರ್ಟ್‌ಟಿವಿ ಫ್ಲಿಪ್‌ಕಾರ್ಟ್‌ ಸೇಲ್‌ನಲ್ಲಿ ಕೇವಲ 15,490ರೂ. ಬೆಲೆಯಲ್ಲಿ ಲಭ್ಯವಾಗಲಿದೆ. ಇದಲ್ಲದೆ ಈ ಸ್ಮಾರ್ಟ್‌ಟಿವಿ ಖರೀದಿಸುವಾಗ ಫ್ಲಿಪ್‌ಕಾರ್ಟ್‌ ಆಕ್ಸಿಸ್‌ ಬ್ಯಾಂಕ್‌ ಕಾರ್ಡ್‌ ಬಳಸಿದರೆ 5% ಕ್ಯಾಶ್‌ಬ್ಯಾಕ್ ಕೂಡ ದೊರೆಯಲಿದೆ. ಇದಲ್ಲದೆ ನೋ ಕಾಸ್ಟ್‌ EMI ಆಯ್ಕೆ ಕೂಡ ಸಹ ಲಭ್ಯವಿದೆ.

ರಿಯಲ್‌ಮಿ LED ಸ್ಮಾರ್ಟ್ ಆಂಡ್ರಾಯ್ಡ್ ಟಿವಿ

ರಿಯಲ್‌ಮಿ LED ಸ್ಮಾರ್ಟ್ ಆಂಡ್ರಾಯ್ಡ್ ಟಿವಿ

ರಿಯಲ್‌ಮಿ LED ಸ್ಮಾರ್ಟ್ ಆಂಡ್ರಾಯ್ಡ್ ಟಿವಿ ಫ್ಲಿಪ್‌ಕಾರ್ಟ್‌ ಬಿಗ್‌ ಬಿಲಿಯನ್‌ ಡೇಸ್‌ ಸೇಲ್‌ನಲ್ಲಿ 47% ಡಿಸ್ಕೌಂಟ್‌ ಪಡೆದುಕೊಂಡಿದೆ. ಇದರಿಂದ ಈ ಸ್ಮಾರ್ಟ್‌ಟಿವಿಯನ್ನು ನೀವು ಕೇವಲ 18,999ರೂ. ಬೆಲೆಯಲ್ಲಿ ಖರೀದಿಸಬಹುದಾಗಿದೆ. ಇದಲ್ಲದೆ ಹೆಚ್ಚುವರಿಯಾಗಿ ಕ್ಯಾಶ್‌ಬ್ಯಾಕ್‌, ಕೂಪನ್‌ ಆಫರ್‌ಗಳು ಕೂಡ ಲಭ್ಯವಾಗಲಿದೆ. ಇನ್ನು ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕಾರ್ಡ್ 5% ರಿಯಾಯಿತಿಯನ್ನು ಕೂಡ ನೀಡಲಿದೆ. ಈ ಸ್ಮಾರ್ಟ್‌ಟಿವಿ ಕ್ರೋಮಾ ಬೂಸ್ಟ್ ಪಿಕ್ಚರ್ ಎಂಜಿನ್‌ನಿಂದ ಚಾಲಿತವಾಗಿದೆ.

Mi 5A 80 cm HD ರೆಡಿ LED ಸ್ಮಾರ್ಟ್ ಆಂಡ್ರಾಯ್ಡ್ ಟಿವಿ

Mi 5A 80 cm HD ರೆಡಿ LED ಸ್ಮಾರ್ಟ್ ಆಂಡ್ರಾಯ್ಡ್ ಟಿವಿ

ಫ್ಲಿಪ್‌ಕಾರ್ಟ್‌ ಬಿಗ್‌ ಬಿಲಿಯನ್‌ ಡೇಸ್‌ ಸೇಲ್‌ನಲ್ಲಿ ಈ ಸ್ಮಾರ್ಟ್‌ಟಿವಿ 41% ಡಿಸ್ಕೌಂಟ್‌ ಪಡೆದಿದೆ. ಇದರಿಂದ 13,999ರೂ.ಬೆಲೆಯಲ್ಲಿ ಈ ಟಿವಿ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಟಿವಿ ಡಾಲ್ಬಿ ಆಡಿಯೊವನ್ನು ಹೊಂದಿದ್ದು, 20 W ಹೈ-ಫಿಡೆಲಿಟಿ ಸೌಂಡ್‌ ನೀಡಲಿದೆ. ಈ ಸ್ಮಾರ್ಟ್‌ಟಿವಿ ಮೇಲೆ ನಿಮಗೆ ನೋ ಕಾಸ್ಟ್‌ EMI ಆಯ್ಕೆಯು ಕೂಡ ಲಭ್ಯವಾಗಲಿದೆ. ಅಲ್ಲದೆ ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕಾರ್ಡ್‌ನಲ್ಲಿ 5% ಡಿಸ್ಕೌಂಟ್‌ ದೊರೆಯಲಿದೆ ಎಂದು ಫ್ಲಿಪ್‌ಕಾರ್ಟ್‌ ಹೇಳಿದೆ.

LG ಅಲ್ಟ್ರಾ HD LED ಸ್ಮಾರ್ಟ್ WebOS ಟಿವಿ 2022 ಎಡಿಷನ್‌

LG ಅಲ್ಟ್ರಾ HD LED ಸ್ಮಾರ್ಟ್ WebOS ಟಿವಿ 2022 ಎಡಿಷನ್‌

LG ಅಲ್ಟ್ರಾ HD ಸ್ಮಾರ್ಟ್‌ಟಿವಿ ಫ್ಲಿಪ್‌ಕಾರ್ಟ್‌ ಬಿಗ್‌ ಬಿಲಿಯನ್‌ ಡೇಸ್‌ ಸೇಲ್‌ನಲ್ಲಿ 38% ಡಿಸ್ಕೌಂಟ್‌ ಪಡೆದುಕೊಂಡಿದೆ. ಇದರಿಂದ ಈ ಟಿವಿಯನ್ನು ನೀವು ಕೇವಲ 30,990ರೂ. ಬೆಲೆಯನ್ನು ಖರೀದಿಸಬಹುದು. ಇದಲ್ಲದೆ ಹೆಚ್ಚುವರಿಯಾಗಿ ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕಾರ್ಡ್‌ ಮೂಲಕ 5% ಕ್ಯಾಶ್‌ಬ್ಯಾಕ್ ಕೂಡ ದೊರೆಯಲಿದೆ. ಈ ಸ್ಮಾರ್ಟ್‌ಟಿವಿಯು UHD 4K ರೆಸಲ್ಯೂಶನ್ ಡಿಸ್‌ಪ್ಲೇಯನ್ನು ಹೊಂದಿದೆ.

ಇನ್ಫಿನಿಕ್ಸ್ ಹೆಚ್‌ಡಿ ರೆಡಿ ಎಲ್ಇಡಿ ಸ್ಮಾರ್ಟ್ ಲಿನಕ್ಸ್ ಟಿವಿ

ಇನ್ಫಿನಿಕ್ಸ್ ಹೆಚ್‌ಡಿ ರೆಡಿ ಎಲ್ಇಡಿ ಸ್ಮಾರ್ಟ್ ಲಿನಕ್ಸ್ ಟಿವಿ

ಇನ್‌ಫಿನಿಕ್ಸ್‌ ಹೆಚ್‌ಡಿ ರೆಡಿ ಎಲ್‌ಇಡಿ ಸ್ಮಾರ್ಟ್‌ಟಿವಿಯು ಫ್ಲಿಪ್‌ಕಾರ್ಟ್‌ ಸೇಲ್‌ನಲ್ಲಿ ಕೇವಲ 8,999ರೂ. ಬೆಲೆಗೆ ಲಭ್ಯವಾಗಲಿದೆ. ಈ ಸ್ಮಾರ್ಟ್‌ಟಿವಿ 47% ರಿಯಾಯಿತಿಯನ್ನು ಪಡೆದಿದೆ. ಜೊತೆಗೆ ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕಾರ್ಡ್ ಮೂಲಕ 5% ಕ್ಯಾಶ್‌ಬ್ಯಾಕ್ ಅನ್ನು ಪಡೆಯಲು ಸಾಧ್ಯವಾಗಲಿದೆ.

Best Mobiles in India

English summary
Flipkart Big Billion Days Sale 2022: up to 47% Discounts on Smart TVs

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X