ಸೆಪ್ಟೆಂಬರ್‌ ಅಂತ್ಯದಲ್ಲಿ ನಡೆಯಲಿದೆ ಫ್ಲಿಪ್‌ಕಾರ್ಟ್‌ ಬಿಗ್‌ ಬಿಲಿಯನ್‌ ಡೇಸ್‌ ಸೇಲ್‌!

|

ಆನ್‌ಲೈನ್‌ ಶಾಪಿಂಗ್‌ ಪ್ರಿಯರ ನೆಚ್ಚಿನ ತಾಣಗಳಲ್ಲಿ ಫ್ಲಿಪ್‌ಕಾರ್ಟ್‌ ಕೂಡ ಒಂದಾಗಿದೆ. ಫ್ಲಿಪ್‌ಕಾರ್ಟ್‌ ತನ್ನ ಗ್ರಾಹಕರಿಗಾಗಿ ವಿಶೇಷ ಸೇಲ್‌ಗಳ ನಡೆಸುತ್ತಾ ಬಂದಿದೆ. ವಿಶೇಷ ದಿನಗಳಲ್ಲಿ ಮಾತ್ರವಲ್ಲದೆ ವಿಕೆಂಡ್‌, ಮಂತ್‌ಎಂಡ್‌ ಸೇಲ್‌ಗಳನ್ನು ನಡೆಸುತ್ತಿದೆ. ಸದ್ಯ ಇದೀಗ ತನ್ನ ಪ್ಲಾಟ್‌ಫಾರ್ಮ್‌ನಲ್ಲಿ ಬಿಗ್‌ ಬಿಲಿಯನ್‌ ಡೇಸ್‌ ಸೇಲ್‌ ಆಯೋಜಿಸಲು ಸಿದ್ಧತೆ ನಡೆಸಿದೆ. ಈ ಸೇಲ್‌ ಡೇಟ್‌ ಅನ್ನು ಇನ್ನು ಅಧಿಕೃತವಾಗಿ ಘೋಷಣೆ ಮಾಡಿಲ್ಲವಾದರೂ ಇದೇ ತಿಂಗಳ ಅಂತ್ಯದಲ್ಲಿ ನಡೆಯಲಿದೆ ಅನ್ನೊದು ಪಕ್ಕಾ ಆಗಿದೆ.

ಫ್ಲಿಪ್‌ಕಾರ್ಟ್‌

ಹೌದು, ಫ್ಲಿಪ್‌ಕಾರ್ಟ್‌ ಬಿಗ್‌ ಬಿಲಿಯನ್‌ ಡೇಸ್‌ ಸೇಲ್‌ ಸೆಪ್ಟೆಂಬರ್ ತಿಂಗಳ ಅಂತ್ಯದಲ್ಲಿ ನಡೆಯುವ ಸಾಧ್ಯತೆಯಿದೆ. ಆನ್‌ಲೈನ್‌ನಲ್ಲಿ ಸೋರಿಕೆಯಾದ ಮಾಹಿತಿ ಪ್ರಕಾರ ಈ ಸೇಲ್‌ ಸೆಪ್ಟೆಂಬರ್‌ 23 ರಂದು ಲೈವ್ ಆಗಲಿದ್ದು, ಸೆಪ್ಟೆಂಬರ್ 30 ರವರೆಗೆ ನಡೆಯಲಿದೆ ಎನ್ನಲಾಗಿದೆ. ಇದೇ ಸಮಯದಲ್ಲಿ ಅಮೆಜಾನ್‌ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್‌ ಕೂಡ ನಡೆಯುವ ಸಾಧ್ಯತೆಯಿದೆ. ಹಾಗಾದ್ರೆ ಈ ಸೇಲ್‌ ಸಮಯದಲ್ಲಿ ಏನೆಲ್ಲಾ ಡಿಸ್ಕೌಂಟ್‌ ನಿರೀಕ್ಷಿಸಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಫ್ಲಿಪ್‌ಕಾರ್ಟ್‌

ಫ್ಲಿಪ್‌ಕಾರ್ಟ್‌ ಬಿಗ್‌ ಬಿಲಿಯನ್‌ ಡೇಸ್‌ ಸೇಲ್‌ನಲ್ಲಿ ಖರೀದಿದಾರರು ಐಫೋನ್‌ 13 ಮತ್ತು ಐಫೋನ್‌ 12 ಮೇಲೆ ಹಲವು ಡೀಲ್‌ ಮತ್ತು ಡಿಸ್ಕೌಂಟ್‌ ನಿರೀಕ್ಷಿಸಬಹುದು. ಇದಲ್ಲದೆ ಬ್ಯಾಂಕ್‌ ಆಫರ್‌ಗಳನ್ನು ಕೂಡ ಪಡೆದುಕೊಳ್ಳಬಹುದಾಗಿದೆ. ಇದರಲ್ಲಿ ಐಸಿಐಸಿಐ ಬ್ಯಾಂಕ್‌ ಕಾರ್ಡ್‌ ಅಥವಾ ಆಕ್ಸಿಸ್‌ ಬ್ಯಾಂಕ್‌ ಕಾರ್ಡ್‌ಗಳ ಮೇಲೆ 10% ಡಿಸ್ಕೌಂಟ್‌ ಪಡೆಯುವ ಸಾಧ್ಯತೆಯಿದೆ. ಇನ್ನು ಬ್ಯಾಂಕ್‌ ಆಫರ್‌ಗಳ ಜೊತೆಗೆ ನೋ ಕಾಸ್ಟ್‌ ಇಎಂಐ ಮತ್ತು ಸ್ಮಾರ್ಟ್‌ಫೋನ್‌ ಎಕ್ಸ್‌ಚೇಂಜ್‌ ಆಫರ್‌ ಕೂಡ ಪಡೆದುಕೊಳ್ಳಬಹುದಾಗಿದೆ.

ಐಫೋನ್‌

ಇನ್ನು ಇದೇ ತಿಂಗಳು ಅಂದರೆ ಸೆಪ್ಟೆಂಬರ್ 7 ರಂದು ಐಫೋನ್ 14 ಬಿಡುಗಡೆ ಆಗುವುದರಿಂದ ಐಫೋನ್‌ 13 ಮೇಲೆ ಎಷ್ಟು ಡಿಸ್ಕೌಂಟ್‌ ಸಿಗಲಿದೆ ಅನ್ನೊದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಹಿಂದಿನ ಟ್ರೆಂಡ್‌ಗಳನ್ನು ಪರಿಗಣಿಸಿದರೆ ಐಫೋನ್‌ 13 ಮತ್ತು ಐಫೋನ್‌ 12ನ ಬೆಲೆಗಳು ಕಡಿಮೆಯಾಗುವ ನಿರೀಕ್ಷೆಯಿದೆ. ಫ್ಲಿಪ್‌ಕಾರ್ಟ್ ಪ್ರಸ್ತುತ ಐಫೋನ್ 13 ನಲ್ಲಿ ಉತ್ತಮ ಕೊಡುಗೆಯನ್ನು ನೀಡುತ್ತಿದೆ, ನೀವು ಐಫೋನ್ ಖರೀದಿಸಲು ಯೋಜಿಸುತ್ತಿದ್ದರೆ ಅದನ್ನು ನೀವು ಪರಿಗಣಿಸಬಹುದು.

ಫ್ಲಿಪ್‌ಕಾರ್ಟ್‌

ಇದಲ್ಲದೆ ಫ್ಲಿಪ್‌ಕಾರ್ಟ್‌ ಸೇಲ್‌ನಲ್ಲಿ ರಿಯಲ್‌ಮಿ, ಪೊಕೊ, ವಿವೋ, ಆಪಲ್‌ ಮತ್ತು ಸ್ಯಾಮ್‌ಸಂಗ್‌ ಸ್ಮಾರ್ಟ್‌ಫೋನ್‌ಗಳ ಮೇಲೆ ಕೂಡ ಬಿಗ್‌ ಡಿಸ್ಕೌಂಟ್‌ಗಳನ್ನು ನೀಡಲಿದೆ ಎಂದು ವರದಿಯಾಗಿದೆ. ಇದಲ್ಲದೆ ಎಲೆಕ್ಟ್ರಾನಿಕ್ಸ್, ಪರಿಕರಗಳು, ಟಿವಿಗಳು ಮತ್ತು ಉಪಕರಣಗಳ ಮೇಲೆ ಖರೀದಿದಾರರು 80% ವರೆಗೆ ರಿಯಾಯಿತಿ ಪಡೆಯಬಹುದು. ಸದ್ಯ ಫ್ಲಿಪ್‌ಕಾರ್ಟ್‌ನಲ್ಲಿ ಐಫೋನ್ 13 ಅನ್ನು 69,999 ರೂಗಳಿಗೆ ಸೇಲ್‌ ಮಾಡುತ್ತಿದೆ. ನೀವು HDFC ಕ್ರೆಡಿಟ್ ಕಾರ್ಡ್ ಹೊಂದಿದ್ದರೆ, 2000ರೂ. ಹೆಚ್ಚುವರಿ ರಿಯಾಯಿತಿ ಕೂಡ ಲಭ್ಯವಾಗಲಿದೆ.

ಐಫೋನ್ 13 ಫೀಚರ್ಸ್‌

ಐಫೋನ್ 13 ಫೀಚರ್ಸ್‌

ಐಫೋನ್ 13 ಫೋನ್‌ 6.1 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತುಮ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. ಈ ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್‌ ಹೊಂದಿದ್ದು, 1200 ನಿಟ್ಸ್‌ ಬ್ರೈಟ್‌ನೆಸ್‌ ಅನ್ನು ಹೊಂದಿದೆ. ಹಾಗೆಯೇ ಈ ಫೋನ್ A15 ಬಯೋನಿಕ್ ಸೋಕ್ ಕ್ವಾಡ್‌ ಕೋರ್ ಪ್ರೊಸೆಸರ್‌ ಅನ್ನು ಹೊಂದಿದೆ. 5G ಅನ್ನು ಬೆಂಬಲಿಸುತ್ತದೆ. ಐಫೋನ್ 13 ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಅಲ್ಟ್ರಾ ಕ್ಯಾಮೆರಾ ಸೆನ್ಸಾರ್ ಹೊಂದಿದ್ದು, ಇನ್ನೊಂದು ಕ್ಯಾಮೆರಾವು 12 ಮೆಗಾ ಪಿಕ್ಸಲ್ ವೈಲ್ಡ್‌ ಆಂಗಲ್ ಲೆನ್ಸ್‌ ಪಡೆದಿದೆ. ಇದು ಐಆರ್ ಆಧಾರಿತ ಫೇಸ್ ಐಡಿಯನ್ನು ಹೊಂದಿದೆ ಮತ್ತು ಮಿಂಚಿನ ಕೇಬಲ್ ಮೂಲಕ ಚಾರ್ಜ್ ಮಾಡುವ ದೊಡ್ಡ ಬ್ಯಾಟರಿಯೊಂದಿಗೆ ಬರುತ್ತದೆ. ಯಾವುದೇ ಸಂದರ್ಭದಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ. ಸಿನಿಮ್ಯಾಟಿಕ್ ಮೋಡ್ ಆಯ್ಕೆ ಪಡೆದಿದೆ. ಐಫೋನ್ 13 ಮಿಡ್‌ನೈಟ್, ಬ್ಲೂ, ಪಿಂಕ್, ಸ್ಟಾರ್‌ಲೈಟ್ ಮತ್ತು ಪ್ರಾಡಕ್ಟ್ ರೆಡ್ ರೂಪಾಂತರಗಳಲ್ಲಿ ಲಭ್ಯವಿರುತ್ತದೆ.

Best Mobiles in India

Read more about:
English summary
Flipkart Big Billion Days sale 2022 will go live on September 23rd: Report

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X