Flipkart Big Billion Days Sale 2024: ಈ ಸ್ಟೈಲಿಶ್ ಫೋನಿಗೆ ಭಾರೀ ಡಿಸ್ಕೌಂಟ್ ಖಚಿತ!
ದೈತ್ಯ ಇ ಕಾಮರ್ಸ್ ಎಂದೇ ಗುರುತಿಸಿಕೊಂಡಿರುವ ಫ್ಲಿಪ್‌ಕಾರ್ಟ್ ಇದೀಗ ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ (Flipkart Big Billion Days Sale) ಅನ್ನು ಘೋಷಿಸಿದ್ದು, ಆನ್‌ಲೈನ್ ಶಾಪಿಂಗ್ ಗ್ರಾಹಕರಿಗೆ ಭಾರೀ ಖುಷಿ ತಂದಿದೆ. ಈ ಮಾರಾಟದಲ್ಲಿ ಆಯ್ದ ಸ್ಮಾರ್ಟ್‌ಫೋನ್ ಬ್ರ್ಯಾಂಡ್‌ಗಳು ಆಕರ್ಷಕ ರಿಯಾಯಿತಿ ದರದಲ್ಲಿ ಖರೀದಿಗೆ ಲಭ್ಯ ಆಗಲಿವೆ. ಅವುಗಳ ಪೈಕಿ ಬಜೆಟ್ ದರದ CMF ಫೋನ್ 1 (CMF Phone 1) ಬೊಂಬಾಟ್ ಕೊಡುಗೆಯಲ್ಲಿ ಲಭ್ಯವಾಗಲಿದೆ.
ಹೌದು, ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ (Flipkart Big Billion Days Sale) ಇದೇ ಸೆಪ್ಟೆಂಬರ್ 27 ರಿಂದ ಪ್ರಾರಂಭವಾಗಲಿದೆ. ಈ ಮಾರಾಟದ ವೇಳೆ CMF ಫೋನ್ 1 (CMF Phone 1) 12,999 ರೂ.ಗಳಿಗೆ ಲಭ್ಯವಿರುತ್ತದೆ ಎಂದು ವರದಿಗಳಿಂದ ತಿಳಿದುಬಂದಿದೆ. ಅಂದಹಾಗೆ ಈ ಫೋನ್ 6GB + 128GB ಹಾಗೂ 8GB + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಇದೆ.

ಇನ್ನು ಈ ಮೊಬೈಲ್ ಬ್ಲ್ಯಾಕ್, ಲೈಟ್ ಗ್ರೀನ್, ಬ್ಲೂ ಮತ್ತು ಆರೆಂಜ್ ಕಲರ್ ಆಯ್ಕೆಯಲ್ಲಿ ಖರೀದಿಗೆ ಸಿಗುತ್ತದೆ. ಇದರ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಅಲ್ಲದೇ ಇದು 33 W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ವನ್ನು ಪಡೆದಿದೆ. ಇನ್ನುಳಿದಂತೆ CMF Phone 1 ಫೋನ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.
CMF Phone 1 - ಫೀಚರ್ಸ್ ಹೀಗಿವೆ
CMF Phone 1 ಫೋನ್ 6.7 ಇಂಚಿನ ಫುಲ್ ಹೆಚ್‌ಡಿ+ ಅಮೋಲೆಡ್ ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಇದು 2000 nits ಬ್ರೈಟ್ನೆಸ್ ಸಾಮರ್ಥ್ಯ ಹೊಂದಿದೆ. ಅಲ್ಲದೇ 120 Hz ರಿಫ್ರೆಶ್ ರೇಟ್ ಆಯ್ಕೆ ಒಳಗೊಂಡಿದ್ದು, ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕೆಲಸ ನಿರ್ವಹಿಸಲಿದೆ. ಅಲ್ಲದೇ ಇದು ಇತ್ತೀಚಿನ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಸಹ ಮಾಡುತ್ತದೆ.
CMF Phone 1 ಫೋನ್ 6 GB RAM + 128 GB ಹಾಗೂ 8 GB RAM + 128 GB ಸ್ಟೋರೇಜ್ ವೇರಿಯಂಟ್ ಆಯ್ಕೆ ಒಳಗೊಂಡಿದೆ. ಅಲ್ಲದೇ ಇದು ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಈ ಫೋನಿನ ದ್ವಿತೀಯ ಕ್ಯಾಮೆರಾವು 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸರ್ ಸೌಲಭ್ಯ ಹೊಂದಿದೆ. ಮುಂಭಾಗದಲ್ಲಿ ಇದರ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾ ಸೌಲಭ್ಯ ನೀಡಲಾಗಿದೆ.
CMF Phone 1 ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಸಹ ಪಡೆದಿದ್ದು, ಇದಕ್ಕೆ ಪೂರಕವಾಗಿ 33W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಸಹ ಹೊಂದಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಈ ಫೋನ್ ಡ್ಯುಯಲ್ 4G VoLTE, ವೈ ಫೈ 6, ಜಿಪಿಎಸ್, ಯುಎಸ್‌ಬಿ ಟೈಪ್ ಸಿ, ಸೈಡ್ ಮೌಂಟ್ ಫಿಂಗರ್ ಫ್ರಿಂಟ್ ಸೆನ್ಸಾರ್ ಆಯ್ಕೆಗಳನ್ನು ಒಳಗೊಂಡಿದೆ. ಅಲ್ಲದೇ ಫೋನಿನ ಬ್ಯಾಕ್ ಕವರ್ ಬದಲಾಯಿಸುವ ಆಯ್ಕೆ ಈ ಫೋನಿನಲ್ಲಿ ಹೈಲೈಟ್ ಎನಿಸಿದೆ.


Click it and Unblock the Notifications








