ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್: ಈ ಫೋನ್‌ಗಳಿಗೆ ಆಕರ್ಷಕ ಡಿಸ್ಕೌಂಟ್!
ಜನಪ್ರಿಯ ಇ-ಕಾಮರ್ಸ್ ದೈತ್ಯ ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್ ಒಂದಿಲ್ಲೊಂದು ವಿಶೇಷ ಸೇಲ್ ಆಯೋಜಿಸುತ್ತಲೇ ಸಾಗಿದೆ. ಭಾರೀ ರಿಯಾಯಿತಿ ಕೊಡುಗೆಗಳನ್ನು ನೀಡುತ್ತ ಗ್ರಾಹಕರನ್ನು ತನ್ನತ್ತ ಸೆಳೆದಿದೆ. ಮುಖ್ಯವಾಗಿ ಎಲೆಕ್ಟ್ರಾನಿಕ್ ಹಾಗೂ ಗ್ಯಾಡ್ಜೆಟ್ಸ್‌ಗಳಿಗೆ ವಿಶೇಷ ಡಿಸ್ಕೌಂಟ್ ಸೇಲ್ ಅನ್ನು ಆಯೋಜಿಸಿ ಗಮನ ಸೆಳೆದಿದೆ. ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಫ್ಲಿಪ್‌ಕಾರ್ಟ್ ಇದೀಗ ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ 2021 ಸೇಲ್ ಅನ್ನು ಘೋಷಿಸಿದೆ. ಈ ಹಬ್ಬದ ಸೇಲ್‌ನಲ್ಲಿ ಆಯ್ದ ಕೆಲವು ನೂತನ ಸ್ಮಾರ್ಟ್‌ಫೋನ್‌ಗಳಿಗೆ ಆಕರ್ಷಕ ರಿಯಾಯಿತಿಗಳನ್ನು ತಿಳಿಸಿದೆ.

ಹೌದು, ಫ್ಲಿಪ್‌ಕಾರ್ಟ್ ಆಯೋಜಿಸಿರುವ ಬಿಗ್ ಸೇವಿಂಗ್ ಡೇಸ್ 2021 ಸೇಲ್ ಅನ್ನು ಘೋಷಿಸಿದೆ. ಈ ಸೇಲ್ ಇದೇ ಅಕ್ಟೋಬರ್ 3ರಂದು ಶುರುವಾಗಲಿದ್ದು, ಅಕ್ಟೋಬರ್ 10ರ ವರೆಗೂ ಚಾಲ್ತಿ ಇರಲಿದೆ ಎಂದು ತಿಳಿಸಿದೆ. ಇನ್ನು ಈ ಬಿಗ್ ಸೇವಿಂಗ್ ಡೇಸ್ 2021 ಮಾರಾಟವು ಜನಪ್ರಿಯ ಮೊಬೈಲ್ ಫೋನ್‌ಗಳು, ಲ್ಯಾಪ್‌ಟಾಪ್‌ಗಳು, ಸ್ಪೀಕರ್‌ಗಳು, ಸ್ಮಾರ್ಟ್‌ವಾಚ್‌ಗಳು ಮತ್ತು ಇತರ ಎಲೆಕ್ಟ್ರಾನಿಕ್ಸ್‌ಗಳಿಗೆ ದೊಡ್ಡ ರಿಯಾಯಿತಿಯನ್ನು ನೀಡುತ್ತದೆ.

ಮುಖ್ಯವಾಗಿ ಈ ಸೇಲ್‌ನಲ್ಲಿ ಆಯ್ದ ಸ್ಮಾರ್ಟ್‌ಫೋನ್‌ಗಳಿಗೆ ಭರ್ಜರಿ ಡಿಸ್ಕೌಂಟ್ ದೊರೆಯಲಿದೆ. ಹೆಚ್ಚುವರಿಯಾಗಿ, ಆಕ್ಸಿಸ್ ಬ್ಯಾಂಕ್ ಮತ್ತು ಐಸಿಐಸಿಐ ಬ್ಯಾಂಕ್ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ ಹೊಂದಿರುವವರು ಹೆಚ್ಚುವರಿ 10% ತ್ವರಿತ ರಿಯಾಯಿತಿ ಪಡೆಯಬಹುದು. ಹಾಗಾದರೇ ಫ್ಲಿಪ್‌ಕಾರ್ಟ್‌ನ ಬಿಗ್ ಸೇವಿಂಗ್ ಡೇಸ್ ಸೇಲ್‌ನಲ್ಲಿ ರಿಯಾಯಿತಿಯಲ್ಲಿ ಲಭ್ಯವಾಗುವ ಸ್ಮಾರ್ಟ್‌ಫೋನ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಪೊಕೊ M3 ಸ್ಮಾರ್ಟ್‌ಫೋನ್
ಪೊಕೊ M3 ಸ್ಮಾರ್ಟ್‌ಫೋನ್ 1,080x2,340 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.53-ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 662 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 10 ನಲ್ಲಿ MIUI 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಪೊಕೊ M3 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದು 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಪೊಕೊ M3 ಸ್ಮಾರ್ಟ್‌ಫೋನ್ ಬೇಸ್ ವೇರಿಯಂಟ್ ಈ ಸೇಲ್‌ನಲ್ಲಿ 9,499ರೂ.ಗಳಿಗೆ ಲಭ್ಯವಾಗಲಿದೆ ಎನ್ನಲಾಗಿದೆ.

ಒಪ್ಪೋ A53 ಸ್ಮಾರ್ಟ್‌ಫೋನ್
ಒಪ್ಪೋ A53 ಸ್ಮಾರ್ಟ್‌ಫೋನ್ 1,600x720 ಪಿಕ್ಸಲ್ ರೆಸಲ್ಯೂಶನ್ ಜೊತೆಗೆ 6.5 ಇಂಚಿನ HD + ಗುಣಮಟ್ಟವನ್ನು ಹೊಂದಿದೆ. 90Hz ರೀಫ್ರೇಶ್ ರೇಟ್ ಅನ್ನು ಹೊಂದಿದ್ದು, ಡಿಸ್‌ಪ್ಲೇಯು 20:9 ಅನುಪಾತವನ್ನು ಹೊಂದಿದೆ. ಇನ್ನು ಈ ಫೋನ್ ಆಕ್ಟಾ ಕೋರ್ ಸ್ನ್ಯಾಪ್‌ಡ್ರಾಗನ್ 460 SoC ಪ್ರೊಸೆಸರ್ ಅನ್ನು ಒಳಗೊಂಡಿದೆ. 4GB RAM + 64GB ಮತ್ತು 6GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ನೀಡಲಾಗಿದೆ. ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. 16MP ಕ್ಯಾಮೆರಾವನ್ನು ನೀಡಲಾಗಿದೆ. ಹಾಗೆಯೇ ಈ ಫೋನ್ 5000mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದುಕೊಂಡಿದೆ. ಈ ಫೋನಿನ ಬೇಸ್ ವೇರಿಯಂಟ್ ಫ್ಲಿಪ್‌ಕಾರ್ಟ್ ಸೇಲ್‌ನಲ್ಲಿ 12,990ರೂ.ಗಳಿಗೆ ದೊರೆಯಲಿದೆ ಎನ್ನಲಾಗಿದೆ.

ಮೊಟೊರೊಲಾ G60 ಸ್ಮಾರ್ಟ್‌ಫೋನ್
ಮೊಟೊ G60 ಸ್ಮಾರ್ಟ್‌ಫೋನ್ 1080x2460 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.8ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732 G SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದರೊಂದಿಗೆ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಟರ್ಬೊ ಪವರ್ 20 ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಕೊಡುಗೆಯಲ್ಲಿ ಈ ಫೊನ್ 15,999ರೂ.ಗಳ ಪ್ರೈಸ್‌ನಲ್ಲಿ ಸಿಗಲಿದೆ.

ಮೈಕ್ರೋಮ್ಯಾಕ್ಸ್ ಇನ್ 1 ಸ್ಮಾರ್ಟ್‌ಫೋನ್
ಮೈಕ್ರೋಮ್ಯಾಕ್ಸ್ ಇನ್ 1 ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.67-ಇಂಚಿನ ಫುಲ್-ಹೆಚ್‌ಡಿ + ಡಿಸ್‌ಪ್ಲೇಯನ್ ನು ಹೊಂದಿದೆ.ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G 80 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಅಲ್ಲದೆ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದಕ್ಕೆ ಪೂರಕವಾಗಿ 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಈ ಫೋನ್ 9,499ರೂ.ಗಳ ದರದಲ್ಲಿ ಕಾಣಿಸಿಕೊಳ್ಳಲಿದೆ ಎನ್ನಲಾಗಿದೆ.


Click it and Unblock the Notifications








