ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೆ ಫ್ಲಿಪ್‌ಕಾರ್ಟ್‌ನಲ್ಲಿ ಬಿಗ್ ಆಫರ್!
ಜನಪ್ರಿಯ ಇ-ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ ನಡೆಸುತ್ತಿದೆ. ಹಬ್ಬದ ಸೀಸನ್‌ನಲ್ಲಿ ಭರ್ಜರಿ ಡಿಸ್ಕೌಂಟ್ ಸೇಲ್‌ನೊಂದಿಗೆ ಮರಳಿರುವ ಫ್ಲಿಪ್‌ಕಾರ್ಟ್ ಗ್ರಾಹಕರಿಗೆ ಇನ್ನಿಲ್ಲದ ರಿಯಾಯಿತಿಗಳನ್ನು ನೀಡುತ್ತಿದೆ. ಎಂದಿನಂತೆ ಈ ಬಾರಿಯು ಕೂಡ ಬಿಗ್ ಬಿಲಿಯನ್ ಡೇಸ್ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್‌ಗಳ ಮೇಲೆ ಅತ್ಯಾಕರ್ಷಕ ಆಫರ್‌ಗಳನ್ನು ನೀಡಲಾಗ್ತಿದೆ. ಆಪಲ್, ಶಿಯೋಮಿ, ಸ್ಯಾಮ್‌ಸಂಗ್, ಮೊಟೊರೊಲಾ ಸೇರಿದಂತೆ ಹಲವು ಜನಪ್ರಿಯ ಬ್ರ್ಯಾಂಡ್‌ಗಳ ಸ್ಮಾರ್ಟ್‌ಫೋನ್‌ಗಳು ಡಿಸ್ಕೌಂಟ್ ಪಡೆದುಕೊಂಡಿವೆ.

ಹೌದು, ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ 2022 ಸೇಲ್‌ನಲ್ಲಿ ಸ್ಮಾರ್ಟ್‌ಫೋನ್‌ಗಳ ಮೇಲೆ ವಿಶೇಷ ರಿಯಾಯಿತಿ ಪಡೆದುಕೊಳ್ಳಬಹುದಾಗಿದೆ. ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸುವ ಗ್ರಾಹಕರಿಗೆ ಫ್ಲಿಪ್‌ಕಾರ್ಟ್ ಅತ್ಯುತ್ತಮ ಡೀಲ್ಸ್ ಮತ್ತು ಡಿಸ್ಕೌಂಟ್‌ಗಳನ್ನು ಒದಗಿಸಿದೆ. ಇದರಲ್ಲಿ 20,000ರೂ. ಒಳಗಿನ ಸ್ಮಾರ್ಟ್‌ಫೋನ್‌ಗಳ ಮೆಲೆ ವಿಶೇಷ ಎಕ್ಸ್‌ಚೇಂಜ್ ಆಫರ್ ಸೇರಿದಂತೆ ಬ್ಯಾಂಕ್ ಡಿಸ್ಕೌಂಟ್ ಅನ್ನು ಕೂಡ ನೀಡುತ್ತಿದೆ. ಹಾಗಾದ್ರೆ ಫ್ಲಿಪ್‌ಕಾರ್ಟ್ ಸೇಲ್‌ನಲ್ಲಿ ಬಜೆಟ್ ಸ್ಮಾರ್ಟ್‌ಫೋನ್‌ಗಳ ಮೇಲೆ ಏನೆಲ್ಲಾ ಡಿಸ್ಕೌಂಟ್ ಸಿಗಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ರೆಡ್ಮಿ ನೋಟ್ 11SE
ರೆಡ್ಮಿ ನೋಟ್ 11SE ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್‌ನಲ್ಲಿ 27% ಡಿಸ್ಕೌಂಟ್ ಪಡೆದುಕೊಂಡಿದೆ. ಇದರಿಂದ ಈ ಫೋನ್ ನಿಮಗೆ ಕೇವಲ 12,249ರೂ. ಬೆಲೆಯಲ್ಲಿ ಲಭ್ಯವಾಗಲಿದೆ. ಅಲ್ಲದೆ ಎಕ್ಸ್‌ಚೇಂಜ್ ಆಫರ್ ಆಯ್ಕೆ ಮಾಡಿಕೊಂಡರೆ ಇದನ್ನು 11,700ರೂ. ಬೆಲೆಯಲ್ಲಿ ಖರೀದಿಸುವುದಕ್ಕೆ ಸಾಧ್ಯವಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.43 ಇಂಚಿನ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್ ಹಿಲಿಯೋ G95 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F13
ಫ್ಲಿಪ್‌ಕಾರ್ಟ್ ಸೇಲ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ F13 ಸ್ಮಾರ್ಟ್‌ಫೋನ್ 36% ಡಿಸ್ಕೌಂಟ್ ಪಡೆದಿದೆ. ಜೊತೆಗೆ ಬ್ಯಾಂಕ್ ಆಫರ್ ಕೂಡ ಒಳಗೊಂಡಿದೆ. ಇದರಿಂದ ಈ ಸ್ಮಾರ್ಟ್‌ಫೋನ್ ಅನ್ನು ನೀವು ಕೇವಲ 9,499ರೂ. ಬೆಲೆಯಲ್ಲಿ ಪಡೆದುಕೊಳ್ಳಬಹುದು. ಇನ್ನು ಈ ಸ್ಮಾರ್ಟ್‌ಫೋನ್ 6.6-ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಸ್ಯಾಮ್‌ಸಂಗ್ ಎಕ್ಸಿನೋಸ್ 850 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.

ವಿವೋ T1 44W
ಫ್ಲಿಪ್‌ಕಾಟ್ ವಿವೋ T1 44W ಸ್ಮಾರ್ಟ್‌ಫೋನ್ ಮೇಲೆ 32% ಡಿಸ್ಕೌಂಟ್ ನೀಡಿದೆ. ಆದರಿಂದ ಈ ಸ್ಮಾರ್ಟ್‌ಫೋನ್ ನಿಮಗೆ ಕೇವಲ 13,499ರೂ. ಬೆಲೆಯಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್ 6.44 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ.

ಒಪ್ಪೋ K10 5G
ಒಪ್ಪೋ K10 5G ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್‌ನಲ್ಲಿ 8GB RAM + 128GB ರೂಪಾಂತರದ ಆಯ್ಕೆಗೆ 38% ಡಿಸ್ಕೌಂಟ್ ಪಡೆದಿದೆ. ಇದರಿಂದ ಈ ಸ್ಮಾರ್ಟ್‌ಫೋನ್ ನಿಮಗೆ ಕೇವಲ 15,999ರೂ. ಬೆಲೆಯಲ್ಲಿ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.59 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ನೊಂದಿಗೆ ಬರಲಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ರಿಯಲ್‌ಮಿ 9 4G
ರಿಯಲ್‌ಮಿ 9 4G ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ಸೇಲ್‌ನಲ್ಲಿ 32% ಡಿಸ್ಕೌಂಟ್‌ನಲ್ಲಿ ಲಭ್ಯವಿದೆ. ಈ ಸ್ಮಾರ್ಟ್‌ಫೋನ್ ನಿಮಗೆ ಕೇವಲ 14,950ರೂ. ಬೆಲೆಗೆ ದೊರೆಯಲಿದೆ. ಇದಲ್ಲದೆ ಎಕ್ಸ್‌ಚೇಂಜ್ ಆಫರ್ ಹಾಗೂ ಬ್ಯಾಂಕ್ ಆಫರ್‌ಗಳು ಕೂಡ ಲಭ್ಯವಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.4 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ರಿಯಲ್‌ಮಿ 9 4G ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ.


Click it and Unblock the Notifications








