ಸ್ಟೈಲಿಶ್ ಡಿಸೈನ್ ಇರುವ Nothing Phone (2a) 5G ಫೋನಿಗೆ ಬಿಗ್ ಆಫರ್!
ಫ್ಲಿಪ್‌ಕಾರ್ಟ್ ತಾಣದಲ್ಲಿ ಈಗ ಬಿಗ್ ಬಿಲಿಯನ್ ಡೇಸ್ 2024 (Flipkart Big Billion Days Sale 2024) ಸೇಲ್ ಲೈವ್ ಆಗಿದೆ. ಈ ಸ್ಪೆಷಲ್ ಮಾರಾಟ ಮೇಳದಲ್ಲಿ ಕೆಲವು ಆಯ್ದ ಸ್ಮಾರ್ಟ್‌ಫೋನ್‌ಗಳು ಸಖತ್ ಡಿಸ್ಕೌಂಟ್ ಪಡೆದಿದ್ದು, ಇದರೊಂದಿಗೆ ಕೆಲವು ಬ್ಯಾಂಕ್ ಆಫರ್‌ಗಳು ಸಹ ಲಭ್ಯ ಇವೆ. ಪ್ರಸ್ತುತ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ನಥಿಂಗ್ ಫೋನ್ 2a ಫೋನ್ (Nothing Phone (2a) 5G) ಗಮನಾರ್ಹ ಡಿಸ್ಕೌಂಟ್ ಪ್ರೈಸ್‌ಟ್ಯಾಗ್‌ನಲ್ಲಿ ಖರೀದಿಗೆ ಲಭ್ಯ ಇದೆ.
ಹೌದು, ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್‌ನಲ್ಲಿ ನಥಿಂಗ್ ಫೋನ್ 2a ಫೋನ್ (Nothing Phone (2a) 5G) ಮೊಬೈಲ್ ಶೇ. 23% ರಷ್ಟು ಡಿಸ್ಕೌಂಟ್ ಪಡೆದಿದೆ. ಈ ಫೋನಿನ 8GB RAM + 128 GB ಸ್ಟೋರೇಜ್ ವೇರಿಯಂಟ್ ಅನ್ನು ಖರೀದಿದಾರರು 19,999ರೂ. ಗಳ ಕೊಡುಗೆಯ ಬೆಲೆಯಲ್ಲಿ ಖರೀದಿ ಮಾಡಬಹುದು. ಇದರ ಜೊತೆಗೆ ಹೆಚ್ಚುವರಿಯಾಗಿ ಆಯ್ದ ಬ್ಯಾಂಕ್‌ಗಳ ಆಫರ್ ಪಡೆದುಕೊಂಡರೆ, ಇನ್ನಷ್ಟು ಡಿಸ್ಕೌಂಟ್ ಬೆಲೆಯಲ್ಲಿ ಖರೀದಿಸಲು ಚಾನ್ಸ್ ಸಹ ಇದೆ.

ನಥಿಂಗ್ ಫೋನ್ 2a ಫೋನ್ ಬ್ಲ್ಯಾಕ್ ಹಾಗೂ ವೈಟ್ ಕಲರ್ ಆಯ್ಕೆ ಪಡೆದಿದ್ದು, 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಇದು ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಆಗಿದೆ. ಹಾಗಾದರೇ ನಥಿಂಗ್ ಫೋನ್ 2a ಫೋನ್ (Nothing Phone (2a) 5G) ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ನಥಿಂಗ್ ಫೋನ್ 2a - ಫೀಚರ್ಸ್
ನಥಿಂಗ್ ಫೋನ್ 2a ಫೋನ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಪಡೆದಿದೆ. ಇದು ಅಮೋಲೆಡ್ ಡಿಸ್‌ಪ್ಲೇ ಆಗಿದ್ದು, 1,080x2,412 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿ ಇದೆ. ಇದರ ಡಿಸ್‌ಪ್ಲೇಯು 30Hz ನಿಂದ 120Hz ವರೆಗಿನ ರಿಫ್ರೆಶ್ ರೇಟ್, 394ppi ಪಿಕ್ಸೆಲ್ ಸಾಂದ್ರತೆ ಮತ್ತು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ರಕ್ಷಣೆಯನ್ನು ಹೊಂದಿದೆ. HDR10+ ಬೆಂಬಲ ಮತ್ತು 1,300 nits ಗರಿಷ್ಠ ಬ್ರೈಟ್‌ನೆಸ್ ಅನ್ನು ಪಡೆದಿದೆ.
ನಥಿಂಗ್ ಫೋನ್ 2a ಫೋನ್ ಆಕ್ಟಾ-ಕೋರ್ 4nm ಮೀಡಿಯಾ ಟೆಕ್ ಡೈಮೆನ್ಸಿಟಿ 7200 ಪ್ರೊ SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 14 ಆಧಾರಿತ ನಥಿಂಗ್ ಓಎಸ್ 2.5 ಸಪೋರ್ಟ್‌ನಲ್ಲಿ ರನ್ ಆಗಲಿದೆ. ಇದು ಮೂರು ವರ್ಷಗಳ ಆಂಡ್ರಾಯ್ಡ್ ನವೀಕರಣಗಳು ಲಭ್ಯ. ಹಾಗೆಯೇ 12GB RAM ಮತ್ತು 256GB ಸ್ಟೋರೇಜ್ ಆಯ್ಕೆ ಇದೆ.
ನಥಿಂಗ್ ಫೋನ್ 2a ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ದ್ವಿತೀಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
ನಥಿಂಗ್ ಫೋನ್ 2a ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದ್ದು, ಇದು 45W ಫಾಸ್ಟ್ ಚಾರ್ಜಿಂಗ್‌ಗೆ ಬೆಂಬಲವನ್ನು ನೀಡಲಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 5G, 4G LTE, Wi-Fi 6, Wi-Fi 6 ಡೈರೆಕ್ಟ್, ಬ್ಲೂಟೂತ್ 5.3, NFC, GPS ಮತ್ತು USB ಟೈಪ್-ಸಿ ಪೋರ್ಟ್ ಅನ್ನು ಸಪೋರ್ಟ್ ಮಾಡಲಿದೆ.


Click it and Unblock the Notifications








