ಐಫೋನ್ 13 ಭಾರೀ ಡಿಸ್ಕೌಂಟ್‌ನಲ್ಲಿ ಲಭ್ಯ!..ಇಂಥಾ ಆಫರ್ ಮತ್ತೆ ಸಿಗಲ್ಲ!

|

ಇ ಕಾಮರ್ಸ್ ದೈತ್ಯ ಫ್ಲಿಪ್‌ಕಾರ್ಟ್ ತನ್ನ ಬಹುನಿರೀಕ್ಷಿತ ಬಿಗ್ ಬಿಲಿಯನ್ ಡೇಸ್ ಸೇಲ್ ದಿನಾಂಕವನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ. ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್‌ ಇದೇ ಸೆಪ್ಟೆಂಬರ್ 23 ರಂದು ಶುರುವಾಗಲಿದ್ದು, ಸೆಪ್ಟೆಂಬರ್ 30 ರವರೆಗೆ ಚಾಲ್ತಿ ಇರಲಿದೆ. ಈ ಸೇಲ್‌ನಲ್ಲಿ ಫ್ಲಿಪ್‌ಕಾರ್ಟ್ ಕೆಲವು ಆಯ್ದ ಸ್ಮಾರ್ಟ್‌ಫೋನ್‌ಗಳ ಮೇಲೆ ಬೊಂಬಾಟ್‌ ಕೊಡುಗೆಗಳನ್ನು ಲಭ್ಯ ಮಾಡಲಿದೆ.

ಟೀಸರ್

ಹೌದು, ಫ್ಲಿಪ್‌ಕಾರ್ಟ್‌ ತಾಣವು ಬಿಗ್ ಬಿಲಿಯನ್ ಡೇಸ್ ಸೇಲ್ ಆರಂಭಕ್ಕೂ ಮುನ್ನವೇ ಸ್ಮಾರ್ಟ್‌ಫೋನ್ ಡೀಲ್‌ಗಳ ಬಗ್ಗೆ ಟೀಸರ್‌ಗಳನ್ನು ಬಿಡಲು ಪ್ರಾರಂಭಿಸಿದೆ. ಇತ್ತೀಚಿನ ಟೀಸರ್ ಫ್ಲಿಪ್‌ಕಾರ್ಟ್ ಐಫೋನ್ 13 ಫೋನ್‌ಗೆ ಭರ್ಜರಿ ಡಿಸ್ಕೌಂಟ್‌ ನೀಡುವ ಸೂಚನೆ ನೀಡಿದೆ. ಇತ್ತೀಚಿಗೆ ಆಪಲ್‌ ಸಂಸ್ಥೆಯು ಅಧಿಕೃತವಾಗಿ ಐಫೋನ್ 13 ಸರಣಿಯಲ್ಲಿ ಬೆಲೆ ಇಳಿಕೆಯನ್ನು ಘೋಷಿಸಿತು. ಇದೀಗ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣವು ರಿಯಾಯಿತಿ ತಿಳಿಸಿದೆ.

ಐಫೋನ್

ಆಪಲ್ ಕಂಪನಿಯು ಈ ತಿಂಗಳ ಆರಂಭದಲ್ಲಿ ಐಫೋನ್ 13 ಬೆಲೆಯಲ್ಲಿ ಇಳಿಕೆ ಮಾಡಿದೆ. ಫೋನ್‌ನ 128 GB ರೂಪಾಂತರವು ಆಪಲ್ ಸಂಸ್ಥೆಯ ವೆಬ್‌ಸೈಟ್‌ನಲ್ಲಿ 69,900 ರೂ. ಗಳಿಗೆ ಲಭ್ಯವಿದೆ. ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್‌ನಲ್ಲಿ ಐಫೋನ್ 13 ಫೋನ್‌ ಬೆಲೆ 49,990 ರೂ. ಗಳಿಂದ ಪ್ರಾರಂಭವಾಗಲಿದೆ ಹಾಗೆಯೇ ಐಫೋನ್‌ 12 ಮಿನಿ 40,000 ರೂ. ಒಳಗೆ ದೊರೆಯಲಿದೆ ಎಂದು ಫ್ಲಿಪ್‌ಕಾರ್ಟ್‌ ದೃಢಪಡಿಸಿದೆ. ಹಾಗಾದರೇ ಐಫೋನ್‌ 13 ಫೋನಿನ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಐಫೋನ್ 13 ಫೀಚರ್ಸ್

ಐಫೋನ್ 13 ಫೀಚರ್ಸ್

ಐಫೋನ್ 13 ಫೋನ್‌ 6.1 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತುಮ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. 1200 nits ಬ್ರೈಟ್ನೆಸ್‌ ಹೊಂದಿದೆ. ಹಾಗೆಯೇ ಈ ಫೋನ್ A15 ಬಯೋನಿಕ್ ಸೋಕ್ ಕ್ವಾಡ್‌ ಕೋರ್ ಪ್ರೊಸೆಸರ್‌ ಅನ್ನು ಹೊಂದಿದೆ. 5G ಅನ್ನು ಬೆಂಬಲಿಸುತ್ತದೆ. ಐಫೋನ್ 13 ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಅಲ್ಟ್ರಾ ಕ್ಯಾಮೆರಾ ಸೆನ್ಸಾರ್ ಹೊಂದಿದ್ದು, ಇನ್ನೊಂದು ಕ್ಯಾಮೆರಾವು 12 ಮೆಗಾ ಪಿಕ್ಸಲ್ ವೈಲ್ಡ್‌ ಆಂಗಲ್ ಲೆನ್ಸ್‌ ಪಡೆದಿದೆ. ಯಾವುದೇ ಸಂದರ್ಭದಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ. ಸಿನಿಮ್ಯಾಟಿಕ್ ಮೋಡ್ ಆಯ್ಕೆ ಪಡೆದಿದೆ. ಇನ್ನು ಈ ಫೋನ್ ಪಿಂಕ್, ರೆಡ್, ಬ್ಲ್ಯಾಕ್, ವೈಟ್ ಸೇರಿದಂತೆ ಐದು ಬಣ್ಣಗಳಲ್ಲಿ ಲಭ್ಯವಾಗಲಿದೆ.

ಐಫೋನ್‌ 12 ಮಿನಿ ಫೀಚರ್ಸ್‌

ಐಫೋನ್‌ 12 ಮಿನಿ ಫೀಚರ್ಸ್‌

ಐಫೋನ್ 12 ಮಿನಿ 5.4 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇಯು ಸೂಪರ್ ರೆಟಿನಾ XRD ಡಿಸ್‌ಪ್ಲೇ ಮಾದರಿಯಲ್ಲಿದೆ. ಇದು ಸಹ A14 ಬಯೋನಿಕ್ ಎಸ್‌ಒಸಿ ಹಾಗೂ, 5G ಸಪೋರ್ಟ್ ಪಡೆದಿದೆ. ಐಫೋನ್ 12 ಮಿನಿ ಬಹುತೇಕ ಐಫೋನ್ 12 ಫೀಚರ್ಸ್‌ಗಳನ್ನು ಹೊಂದಿದ್ದು, ಗಾತ್ರದಲ್ಲಿ ಮಾತ್ರ ವ್ಯತ್ಯಾಸವಿದೆ. ಇನ್ನು ಈ ಫೋನ್ ಡ್ಯುಯಲ್‌ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, iOS 16 ಅಪ್‌ಡೇಟ್‌ಗೆ ಬೆಂಬಲ ನೀಡಲಿದೆ.

ಇತ್ತೀಚಿಗೆ ಲಾಂಚ್‌ ಆದ ಐಫೋನ್‌ 14 ಫೀಚರ್ಸ್‌

ಇತ್ತೀಚಿಗೆ ಲಾಂಚ್‌ ಆದ ಐಫೋನ್‌ 14 ಫೀಚರ್ಸ್‌

ಐಫೋನ್ 14 ಫೀಚರ್ಸ್‌
6.1 ಇಂಚಿನ FHD+ ಡಿಸ್‌ಪ್ಲೇ ಹೊಂದಿದ್ದು, 1200nits ಬ್ರೈಟ್ನಸ್‌ ಸಪೋರ್ಟ್‌ ಹಾಗೆಯೇ ಇದು ಡ್ಯುಯಲ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 12 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಮುಂಭಾಗದಲ್ಲಿ 12 ಮೆಗಾ ಪಿಕ್ಸಲ್‌ನ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇದು 128GB, 256GB ಮತ್ತು 512GB ಸ್ಟೋರೇಜ್‌ ಆಯ್ಕೆಗಳನ್ನು ಒಳಗೊಂಡಿದೆ. ಐಫೋನ್‌ 14 ಫೋನ್ 5G ಕನೆಕ್ಟಿವಿಟಿ ಸೌಲಭ್ಯ ಪಡೆದಿದೆ. ಇದು ಇ-ಸಿಮ್ ಆಯ್ಕೆ ಒಳಗೊಂಡಿದೆ.

ಐಫೋನ್ 14 ಪ್ಲಸ್‌ ಫೀಚರ್ಸ್‌

ಐಫೋನ್ 14 ಪ್ಲಸ್‌ ಫೀಚರ್ಸ್‌

ಐಫೋನ್ 14 ಪ್ಲಸ್‌ ಫೋನ್ 6.7 ಇಂಚಿನ ಡಿಸ್‌ಪ್ಲೇ ಸಾಮರ್ಥ್ಯ ಪಡೆದಿದ್ದು, OLED ಡಿಸ್‌ಪ್ಲೇ ಹೊಂದಿದ್ದು, 1200nits ಬ್ರೈಟ್ನಸ್‌ ಸಪೋರ್ಟ್‌ ಹಾಗೆಯೇ ಇದು ಡ್ಯುಯಲ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 12 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಮುಂಭಾಗದಲ್ಲಿ 12 ಮೆಗಾ ಪಿಕ್ಸಲ್‌ನ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. 128GB, 256GB ಮತ್ತು 512GB ಸ್ಟೋರೇಜ್‌ ಆಯ್ಕೆಗಳನ್ನು ಒಳಗೊಂಡಿದೆ. ಐಫೋನ್‌ 14 ಗೆ ಹೋಲಿಸಿದರೆ, ಈ ಫೋನ್ ದೀರ್ಘ ಬ್ಯಾಟರಿ ಸಾಮರ್ಥ್ಯವನ್ನು ಪಡೆದಿದೆ. ಇದು ಐಫೋನ್‌ 14 ಪ್ಲಸ್ ಫೋನ್ ಸಹ 5G ಕನೆಕ್ಟಿವಿಟಿ ಸೌಲಭ್ಯ ಪಡೆದಿದೆ. ಇದು ಇ-ಸಿಮ್ ಸಪೋರ್ಟ್‌ ಪಡೆದಿದೆ.

Best Mobiles in India

English summary
Big Billion Days sale will kick off on September 23 and go on till September 30.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X