ಫ್ಲಿಪ್‌ಕಾರ್ಟ್‌ ಸೇಲ್‌ನಲ್ಲಿ ಮೊಟೊರೊಲಾ ಫೋನ್‌ಗಳಿಗೆ ಬಿಗ್‌ ಡಿಸ್ಕೌಂಟ್‌!

|

ಆನ್‌ಲೈನ್‌ ಶಾಪಿಂಗ್‌ ಪ್ರಿಯರ ನೆಚ್ಚಿನ ತಾಣಗಳಲ್ಲಿ ಫ್ಲಿಪ್‌ಕಾರ್ಟ್‌ ಕೂಡ ಒಂದಾಗಿದೆ. ಈಗಾಗಲೇ ಫ್ಲಿಪ್‌ಕಾರ್ಟ್‌ ವಿಶೇಷ ಸೇಲ್‌ಗಳನ್ನು ಆಯೋಜಿಸುವ ಮೂಲಕ ಆನ್‌ಲೈನ್‌ ಗ್ರಾಹಕರನ್ನು ಆಕರ್ಷಿಸುತ್ತಲೇ ಬಂದಿದೆ. ಹಬ್ಬ ಹರಿದಿನಗಳಲ್ಲಿ ವಿಶೇಷ ಡಿಸ್ಕೌಂಟ್‌ ಮೇಳಗಳನ್ನು ನಡೆಸುವ ಮೂಲಕ ಗ್ರಾಹಕರ ಮನ ಗೆದ್ದಿದೆ. ಇದೀಗ ಫ್ಲಿಪ್‌ಕಾರ್ಟ್‌ ಬಿಗ್‌ ಬಿಲಿಯನ್‌ ಡೇಸ್‌ ಸೇಲ್‌ ಮೂಲಕ ಮತ್ತೆ ಬಂದಿದೆ. ಈ ಸೇಲ್‌ ಇದೇ ಅಕ್ಟೋಬರ್ 3ರಿಂದ ಪ್ರಾರಂಭವಾಗಲಿದೆ. ಈ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್‌ ಸೇರಿದಂತೆ ಆಯ್ದ ಗ್ಯಜೆಟ್ಸ್‌ಗಳ ಮೇಲೆ ಬಿಗ್‌ ಡಿಸ್ಕೌಂಟ್‌ ದೊರೆಯಲಿದೆ.

ಫ್ಲಿಪ್‌ಕಾರ್ಟ್‌

ಹೌದು, ಫ್ಲಿಪ್‌ಕಾರ್ಟ್‌ ಬಿಗ್‌ ಬಿಲಿಯನ್‌ ಡೇಸ್‌ ಸೇಲ್‌ನಲ್ಲಿ ಹೆಚ್ಚಿನ ರಿಯಾಯಿತಿ ಘೋಷಣೆ ಮಾಡಲಾಗಿದೆ. ಈಗಾಗಲೇ ಫ್ಲಿಪ್‌ಕಾರ್ಟ್‌ ತಿಳಿಸಿರುವಂತೆ ಆಯ್ದ ಪ್ರಾಡಕ್ಟ್‌ಗಳ ಮೇಲೆ ಗ್ರಾಹಕರಿಗೆ ಬಿಗ್‌ ಆಫರ್‌ ದೊರೆಯಲಿದೆ. ಕ್ರೇಡಿಟ್‌ ಕಾರ್ಡ್‌‌, ಡೆಬಿಟ್‌ ಕಾರ್ಡ್‌ ಮೂಲಕ ಖರೀದಿಸುವವರಿಗೆ ಹೆಚ್ಚುವರಿ ಕ್ಯಾಶ್‌ಬ್ಯಾಕ್‌ ಕೂಡ ಸಿಗಲಿದೆ. ಇನ್ನು ಈ ಬಾರಿಯೂ ಫ್ಲಿಪ್‌ಕಾರ್ಟ್‌ನಲ್ಲಿ ಸ್ಮಾರ್ಟ್‌ಫೋನ್‌ಗಳಿಗೆ ಬಿಗ್‌ ಡಿಸ್ಕೌಂಟ್‌ ಸಿಗಲಿದೆ. ಹಾಗಾದ್ರೆ ಫ್ಲಿಪ್‌ಕಾರ್ಟ್‌ನಲ್ಲಿ ಯಾವೆಲ್ಲಾ ಸ್ಮಾರ್ಟ್‌ಫೋನ್‌ಗಳಿಗೆ ಡಿಸ್ಕೌಂಟ್‌ ಸಿಗಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಫ್ಲಿಪ್‌ಕಾರ್ಟ್‌

ಈ ಭಾರಿಯ ಫ್ಲಿಪ್‌ಕಾರ್ಟ್‌ ಸೇಲ್‌ನಲ್ಲಿ ಮೊಟೊರೊಲಾ ಕಂಪೆನಿ ಇತ್ತೀಚಿಗೆ ಬಿಡುಗಡೆ ಮಾಡಿರುವ ಸ್ಮಾರ್ಟ್‌ಫೋನ್‌ಗಳ ಮೇಲೆ ಹೆಚ್ಚಿನ ರಿಯಾಯಿತಿ ನೀಡುತ್ತಿದೆ. ಅದರಲ್ಲೂ ಮೋಟೋ ಜಿ 60, ಮೊಟೊರೊಲಾ ಎಡ್ಜ್ 20 ಫ್ಯೂಷನ್ 5ಜಿ, ಮೊಟೊರೊಲಾ ಎಡ್ಜ್ 20 5 ಜಿ ಮತ್ತು ಮೋಟೋ ಜಿ 40 ಫ್ಯೂಷನ್ ಸೇರಿದಂತೆ ಜನಪ್ರಿಯ ಮೊಟೊರೊಲಾ ಮಿಡ್ ರೇಂಜರ್‌ಗಳನ್ನು ರಿಯಾಯಿತಿ ದರದಲ್ಲಿ ಸೇಲ್‌ ಮಾಡಲು ಮುಂದಾಗಿದೆ.

ಮೋಟೋ G60

ಮೋಟೋ G60

ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್‌ನಲ್ಲಿ 21,999 ಬೆಲೆ ಹೊಂದಿರುವ ಮೋಟೋ G60 ಸ್ಮಾರ್ಟ್‌ಫೋನ್‌ ಕೇವಲ 15,999ರೂ ಗಳಿಗೆ ಲಭ್ಯವಾಗಲಿದೆ. ಜೊತೆಗೆ ಖರೀದಿದಾರರು ಹೆಚ್ಚುವರಿಯಾಗಿ ಕೆಲವು ಬ್ಯಾಂಕ್ ಆಫರ್‌ಗಳನ್ನು ಕೂಡ ಪಡೆಯಬಹುದು. ಇನ್ನು ಈ ಸ್ಮಾರ್ಟ್‌ಫೋನ್‌ 6.80-ಇಂಚಿನ ಮ್ಯಾಕ್ಸ್ ವಿಷನ್ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ HDR10 ಅನ್ನು ಬೆಂಬಲಿಸಲಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732ಜಿ ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 6GB RAM ಮತ್ತು 128GB ಇಂಟರ್‌ ಸ್ಟೋರೇಜ್ ಆಯ್ಕೆಯನ್ನು ಹೊಂದಿದೆ. ಮೈಕ್ರೋ ಎಸ್‌ಡಿ ಕಾರ್ಡ್ ಬಳಸಿ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು. ಇದು 6000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಮೋಟೋ G40 ಫ್ಯೂಷನ್

ಮೋಟೋ G40 ಫ್ಯೂಷನ್

ಮೋಟೋ G40 ಫ್ಯೂಷನ್ ಸ್ಮಾರ್ಟ್‌ಫೋನ್‌ ಮೂಲ ಬೆಲೆ 16,999ರೂ. ಆಗಿದ್ದು, ಬಿಗ್ ಬಿಲಿಯನ್ ಡೇಸ್ ಸೇಲ್‌ನಲ್ಲಿ 12,999ರೂ.ಗಳಿಗೆ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.80 ಇಂಚಿನ ಮ್ಯಾಕ್ಸ್ ವಿಷನ್ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಹೆಚ್‌ಡಿಆರ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732ಜಿ ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಆಯ್ಕೆಯನ್ನು ಹೊಂದಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್ ಬಳಸಿ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಇದು ಬೃಹತ್ 6000 mAh ಬ್ಯಾಟರಿಯನ್ನು ಹೊಂದಿದ್ದು, ಒಂದೇ ಚಾರ್ಜ್‌ನಲ್ಲಿ ಎರಡು ದಿನಗಳವರೆಗೆ ಕಾರ್ಯನಿರ್ವಹಿಸುತ್ತದೆ.

ಮೋಟೋ ಎಡ್ಜ್ 20 ಫ್ಯೂಷನ್

ಮೋಟೋ ಎಡ್ಜ್ 20 ಫ್ಯೂಷನ್

ಮೋಟೋ ಎಡ್ಜ್ 20 ಫ್ಯೂಷನ್ ಸ್ಮಾರ್ಟ್‌ಫೋನ್‌ ಫ್ಲಿಪ್ ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ ನಲ್ಲಿ ರೂ .19,999ರೂ ಗಳಿಗೆ ಲಭ್ಯವಾಗಲಿದೆ. 6.7-ಇಂಚಿನ ಫುಲ್‌ ಹೆಚ್‌ಡಿ+ ಮ್ಯಾಕ್ಸ್ ವಿಷನ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತ ಮತ್ತು 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 800U 5G SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಇದೆ, ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಈ ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಟರ್ಬೊಪವರ್ 30 ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 802.11ac, ಬ್ಲೂಟೂತ್ v5, ಅನ್ನು ಬೆಂಬಲಿಸಲಿದೆ.

Most Read Articles
Best Mobiles in India

English summary
Flipkart has revealed some of its popular deals on smartphone brands Motorola.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X