Flipkart Big Billion Days sale Live: ಈ ಹೊಸ ಫೋನಿಗೆ ಭರ್ಜರಿ ಡಿಸ್ಕೌಂಟ್!
ಇ ಕಾಮರ್ಸ್ ದೈತ್ಯ ಫ್ಲಿಪ್‌ಕಾರ್ಟ್ ತಾಣವು ಬಿಗ್ ಬಿಲಿಯನ್ ಡೇಸ್ ಸೇಲ್ 2024 (Flipkart Big Billion Days sale 2024) ಸೇಲ್ ಅನ್ನು ಆಯೋಜಿಸಿದೆ. ಈ ಮಾರಾಟ ಮೇಳ ಈಗಾಗಲೇ ಸದಸ್ಯರಿಗೆ ಲೈವ್ ಆಗಿದೆ. ಸಂಸ್ಥೆಯು ಈ ಮಾರಾಟದಲ್ಲಿ ಕೆಲವು ಆಯ್ದ ಸ್ಮಾರ್ಟ್‌ಫೋನ್‌ಗಳಿಗೆ ಬಲು ಆಕರ್ಷಕ ರಿಯಾಯಿತಿ ಘೋಷಣೆ ಮಾಡಿದ್ದು, ಈ ಮೂಲಕ ಆನ್‌ಲೈನ್ ಶಾಪಿಂಗ್ ಪ್ರಿಯರನ್ನು ಸೆಳೆಯುತ್ತಿದೆ. ಇದೀಗ ಅಮೆಜಾನ್ ವೆಬ್‌ಸೈಟ್‌ನಲ್ಲಿ ಒಪ್ಪೋ ಸಂಸ್ಥೆಯ ಒಪ್ಪೋ K12x 5G (OPPO K12x 5G) ಮೊಬೈಲ್ ಗ್ರಾಹಕರು ವಾವ್ ಎನಿಸುವಂತಹ ಕೊಡುಗೆಯಲ್ಲಿ ಕಾಣಿಸಿಕೊಂಡಿದೆ.
ಹೌದು, ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್‌ನಲ್ಲಿ ಒಪ್ಪೋ K12x 5G (OPPO K12x 5G) ಮೊಬೈಲ್ ಶೇ. 23% ರಷ್ಟು ಡಿಸ್ಕೌಂಟ್ ಪಡೆದಿದೆ. ಈ ಫೋನಿನ 6GB RAM + 128 GB ಸ್ಟೋರೇಜ್ ವೇರಿಯಂಟ್ ಅನ್ನು ಖರೀದಿದಾರರು 12,999ರೂ. ಗಳ ಆಫರ್ ಬೆಲೆಯಲ್ಲಿ ಖರೀದಿ ಮಾಡಬಹುದು. ಇದರ ಜೊತೆಗೆ ಹೆಚ್ಚುವರಿಯಾಗಿ ಆಯ್ದ ಬ್ಯಾಂಕ್‌ಗಳಿಂದ ಇತರೆ ರಿಯಾಯಿತಿ ಕೂಡಾ ದೊರೆಯುತ್ತವೆ.

ಹಾಗೆಯೇ ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 5G ಚಿಪ್‌ಸೆಟ್ ಪ್ರೊಸೆಸರ್ ಪಡೆದಿದ್ದು, ಹಾಗೆಯೇ ಇದು 5,100mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಹ ಪಡೆದಿದೆ. ಇನ್ನು ಇದು ಬ್ರೀಜ್ ಬ್ಲೂ ಮತ್ತು ಮೀಡ್‌ನೈಟ್ ವೈಲೆಟ್ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಹಾಗಾದರೇ ಒಪ್ಪೋ K12x 5G (OPPO K12x 5G) ಮೊಬೈಲ್‌ನ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಪಡೆದಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.
ಒಪ್ಪೋ K12x 5G - ಫೀಚರ್ಸ್
ಒಪ್ಪೋ K12x 5G ಮೊಬೈಲ್ 6.67 ಇಂಚಿನ ಹೆಚ್‌ಡಿ + ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಫೋನ್ ಡಿಸ್‌ಪ್ಲೇ 1,612 x 720 ಪಿಕ್ಸಲ್ ರೆಸಲ್ಯೂಶನ್ ಸೌಲಭ್ಯ ಪಡೆದಿದೆ. ಅಲ್ಲದೇ 120Hz ರಿಫ್ರೆಶ್ ರೇಟ್ ಹಾಗೂ 1000 nits ಬ್ರೈಟ್ನೆಸ್ ಆಯ್ಕೆಯೊಂದಿಗೆ, ಪಾಂಡಾ ಗ್ಲಾಸ್ 3 ರಕ್ಷಣೆ ಸಹ ಪಡೆದುಕೊಂಡಿದೆ.
ಒಪ್ಪೋ K12x 5G ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 5G ಚಿಪ್‌ಸೆಟ್ ಪ್ರೊಸೆಸರ್ ಮೂಲಕ ಕೆಲಸ ನಿರ್ವಹಿಸಲಿದ್ದು, ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಅನ್ನು ಸಹ ಪಡೆದಿದೆ. ಇದರ ಜೊತೆಗೆ 6 + 128 GB ಹಾಗೂ 8 + 256 GB ಸ್ಟೋರೇಜ್ ವೇರಿಯಂಟ್ ಆಯ್ಕೆ ಒಳಗೊಂಡಿದೆ.
ಒಪ್ಪೋ K12x 5G ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಪಡೆದಿದೆ. ಇದರ ಪ್ರಾಥಮಿಕ ಕ್ಯಾಮೆರಾವು 32 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯದಲ್ಲಿ ಇದ್ದು, ಹಾಗೆಯೇ ದ್ವಿತೀಯ ಕ್ಯಾಮೆರಾವು 2 ಮೆಗಾ ಪಿಕ್ಸಲ್ ಸೆನ್ಸಾರ್ ರಚನೆ ಅನ್ನು ಪಡೆದಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಈ ಫೋನ್ 8 ಮೆಗಾ ಪಿಕ್ಸೆಲ್ ಕ್ಯಾಮೆರಾ ನೀಡಲಾಗಿದೆ.
ಒಪ್ಪೋ K12x 5G ಮೊಬೈಲ್ 5,100mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಜೊತೆಗೆ 45W SuperVOOC ಚಾರ್ಜಿಂಗ್ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಇದು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ ಫೈ, ಜಿಪಿಎಸ್, ಬ್ಲೂಟೂತ್ 5.0 ಮತ್ತು ಯುಎಸ್‌ಬಿ ಟೈಪ್-ಸಿ ಆಯ್ಕೆಗಳನ್ನು ಪಡೆದಿದೆ. ಇನ್ನು ಈ ಮೊಬೈಲ್ ಬ್ರೀಜ್ ಬ್ಲೂ ಮತ್ತು ಮೀಡ್‌ನೈಟ್ ವೈಲೆಟ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಇದೆ.


Click it and Unblock the Notifications








