ಫ್ಲಿಪ್‌ಕಾರ್ಟ್‌ ಈ ಎರಡು ಫೋನ್‌ಗಳಿಗೆ ನೀಡಿರುವ ಡಿಸ್ಕೌಂಟ್‌ ತಿಳಿದ್ರೆ, ಶಾಕ್‌ ಆಗ್ತೀರಾ?

|

ಜನಪ್ರಿಯ ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್ ತನ್ನ ಬಹುನಿರೀಕ್ಷಿತ ಬಿಗ್ ಬಿಲಿಯನ್ ಡೇಸ್ ಸೇಲ್‌ ಇನ್ನೇನು ಪ್ರಾರಂಭಿಸಲಿದೆ. ಈಗಾಗಲೇ ಈ ಮಾರಾಟದ ಕೊಡುಗೆಗಳು ಮತ್ತು ಟೀಸರ್‌ಗಳು ಆನ್‌ಲೈನ್‌ನಲ್ಲಿ ಕಾಣಿಸಿಕೊಳ್ಳಲು ಪ್ರಾರಂಭಿಸಿವೆ. ಈ ಸೇಲ್‌ನಲ್ಲಿ ಮುಖ್ಯವಾಗಿ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳು ಹಾಗೂ ಇತ್ತೀಚಿಗೆ ಬಿಡುಗಡೆ ಆಗಿರುವ ಕೆಲವು ನೂತನ ಫೋನ್‌ಗಳು ಭಾರೀ ಡಿಸ್ಕೌಂಟ್‌ ದರದಲ್ಲಿ ಲಭ್ಯವಾಗಲಿವೆ.

ನಥಿಂಗ್‌

ಹೌದು, ಫ್ಲಿಪ್‌ಕಾರ್ಟ್‌ ತಾಣವು ಬಿಗ್ ಬಿಲಿಯನ್ ಡೇಸ್ ಸೇಲ್‌ (Flipkart Big Billion Days sale) ಅನ್ನು ಇದೇ ಸೆಪ್ಟೆಂಬರ್ 13 ರಂದು ಮಾರಾಟ ಪ್ರಾರಂಭವಾಗಲಿದೆ. ಇನ್ನು ಈ ಸೇಲ್‌ನಲ್ಲಿ ನಥಿಂಗ್‌ ಫೋನ್‌ 1 ಹಾಗೂ ಗೂಗಲ್ ಪಿಕ್ಸಲ್‌ 6a ಫೋನ್‌ಗಳು ಆಕರ್ಷಕ ರಿಯಾಯಿತಿಯಲ್ಲಿ ಲಭ್ಯವಾಗುವುದಾಗಿ ತಿಳಿಸಿದೆ. ಹಾಗೆಯೇ ಇತರೆ ಕೆಲವು ಫೋನ್‌ಗಳು ಹಾಗೂ ಡಿವೈಸ್‌ಗಳಿಗೂ ಬೊಂಬಾಟ್‌ ಕೊಡುಗೆ ದೊರೆಯಲಿವೆ.

ಲಾಂಚ್

ನಥಿಂಗ್‌ ಫೋನ್‌ 1 ಫೋನ್ ಫ್ಲಿಪ್‌ಕಾರ್ಟ್‌ ಬಿಲಿಯನ್ ಡೇಸ್ ಸೇಲ್‌ ನಲ್ಲಿ 28,999 ರೂ.ಗಳಿಗೆ ಲಭ್ಯವಾಗಲಿದೆ. ಇನ್ನು ಈ ಫೋನ್‌ 32,999ರೂ.ಗಳ ಆರಂಭಿಕ ಬೆಲೆಯಲ್ಲಿ ಲಾಂಚ್ ಆಗಿತ್ತು. ಬಿಡುಗಡೆ ನಂತರ ಸಂಸ್ಥೆಯು 1,000ರೂ. ಏರಿಕೆ ಮಾಡಿತ್ತು. ಹೀಗಾಗಿ 8GB + 128GB ವೇರಿಯಂಟ್‌ 33,999ರೂ. ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಹಾಗೆಯೇ ಗೂಗಲ್ ಪಿಕ್ಸಲ್‌ 6a ಫೋನಿಗೆ 16,300ರೂ. ರಿಯಾಯಿತಿ ಲಭ್ಯವಾಗಲಿದೆ. ಹಾಗಾದರೆ ನಥಿಂಗ್‌ ಫೋನ್‌ 1 ಫೋನಿನ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ನಥಿಂಗ್ ಫೋನ್ (1) 6.55 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ಅಡಾಪ್ಟಿವ್ ರಿಫ್ರೆಶ್ ರೇಟ್ ಹೊಂದಿದ್ದು, 1,200 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ HDR10+ ಬೆಂಬಲ, 402 ppi ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಕಾರ್ನಿಂಗ್‌ ಗೊರಿಲ್ಲಾ ಗ್ಲಾಸ್‌ 5 ಪ್ರೊಟೆಕ್ಷನ್‌ ಅನ್ನು ಹೊಂದಿದೆ. ಇದಲ್ಲದೆ ಹ್ಯಾಪ್ಟಿಕ್ ಟಚ್ ಮೋಟರ್‌ಗಳನ್ನು ಕೂಡ ಒಳಗೊಂಡಿದೆ.

ಪ್ರೊಸೆಸರ್‌ ಕಾರ್ಯವೈಖರಿ ಹೇಗಿದೆ?

ಪ್ರೊಸೆಸರ್‌ ಕಾರ್ಯವೈಖರಿ ಹೇಗಿದೆ?

ನಥಿಂಗ್ ಫೋನ್ (1) ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G+ SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 8GB RAM + 128GB, 8GB RAM + 256 GB ಮತ್ತು 12GB RAM + 256 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಮೂರು ವೇರಿಯೆಂಟ್‌ ಆಯ್ಕೆಯಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್‌ ಯಾವುದೇ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯವನ್ನು ಬೆಂಬಲಿಸುವುದಿಲ್ಲ ಎಂದು ನಥಿಂಗ್‌ ಕಂಪೆನಿ ಹೇಳಿದೆ.

ಕ್ಯಾಮೆರಾ ಸೆನ್ಸಾರ್ ವಿಶೇಷತೆ

ಕ್ಯಾಮೆರಾ ಸೆನ್ಸಾರ್ ವಿಶೇಷತೆ

ನಥಿಂಗ್ ಫೋನ್ (1) ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮೊದಲನೇ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX766 ಸೆನ್ಸಾರ್‌ ಹೊಂದಿದೆ. ಇದು OIS ಜೊತೆಗೆ EIS ಇಮೇಜ್ ಸ್ಟೆಬಿಲೈಸೇಶನ್‌ನೊಂದಿಗೆ ಬರುತ್ತದೆ. ಇನ್ನು ಎರಡನೇ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದು EIS ಇಮೇಜ್ ಸ್ಟೆಬಿಲೈಸೇಶನ್, 114-ಡಿಗ್ರಿ ಫೀಲ್ಡ್-ಆಫ್-ವ್ಯೂ ಮತ್ತು ಮ್ಯಾಕ್ರೋ ಮೋಡ್‌ ಅನ್ನು ಒಳಗೊಂಡಿದೆ. ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಪನೋರಮಾ ನೈಟ್ ಮೋಡ್, ಪೋರ್ಟ್ರೇಟ್ ಮೋಡ್, ಸೀನ್ ಡಿಟೆಕ್ಷನ್, ಎಕ್ಸ್‌ಟ್ರೀಮ್ ನೈಟ್ ಮೋಡ್ ಮತ್ತು ಎಕ್ಸ್‌ಪರ್ಟ್ ಮೋಡ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟು? ಇತರೆ ಫೀಚರ್ಸ್‌ಗಳೇನು?

ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟು? ಇತರೆ ಫೀಚರ್ಸ್‌ಗಳೇನು?

ನಥಿಂಗ್ ಫೋನ್ (1) ಸ್ಮಾರ್ಟ್‌ಫೋನ್‌ 4500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೈರ್ಡ್ ಚಾರ್ಜಿಂಗ್, 15W Qi ವೈರ್‌ಲೆಸ್ ಚಾರ್ಜಿಂಗ್ ಮತ್ತು 5W ರಿವರ್ಸ್ ಚಾರ್ಜಿಂಗ್‌ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, Wi-Fi 6 ಡೈರೆಕ್ಟ್, ಬ್ಲೂಟೂತ್ v5.2, NFC, GPS/A-GPS, ಗ್ಲೋನಾಸ್‌ ಮತ್ತು USB ಟೈಪ್-ಸಿ ಪೋರ್ಟ್ ಬೆಂಬಲಿಸಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌, ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ಗಳು, ಫೇಸ್ ಅನ್‌ಲಾಕ್ ಬೆಂಬಲವನ್ನು ಕೂಡ ಹೊಂದಿದೆ.

Best Mobiles in India

English summary
Flipkart Big Billion Days Sale: Pixel 6a and Nothing Phone (1) to get Big discount.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X