Flipkart Big Billion Days Sale: ಸ್ಯಾಮ್‌ಸಂಗ್ ಫೋನ್‌ಗಳಿಗೆ ಭಾರಿ ಡಿಸ್ಕೌಂಟ್!
ಆಫರ್‌ಗಳ ಅಡ್ಡಾ ಎಂದೆನಿಸಿಕೊಂಡಿರುವ ಜನಪ್ರಿಯ ಇ-ಕಾಮರ್ಸ್ ಪ್ಲಾಟ್‌ಫಾರ್ಮ್ ಫ್ಲಿಪ್‌ಕಾರ್ಟ್ ವಿಶೇಷ ಸೇಲ್‌ಗಳ ಮೂಲಕ ಗ್ರಾಹಕರನ್ನು ಸೆಳೆಯುತ್ತ ಸಾಗಿದೆ. ಅದರಲ್ಲೂ ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ ಎಂದರೇ ಬಹುತೇಕ ಆನ್‌ಲೈನ್ ಪ್ರಿಯರಿಗೆ ಹಬ್ಬವೇ ಸರಿ. ಇದೀಗ ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ ಮತ್ತೆ ಬಂದಿದೆ. ಸ್ಯಾಮ್‌ಸಂಗ್ ಕಂಪನಿಯ ಕೆಲ ಆಯ್ದ ಸ್ಮಾರ್ಟ್‌ಫೋನ್‌ಗಳಿಗೆ ಬಿಗ್ ಡಿಸ್ಕೌಂಟ್ ತಂದಿದೆ.

ಹೌದು, ಇದೇ ಅಕ್ಟೋಬರ್ 16 ರಿಂದ ಶುರುವಾಗಲಿರುವ ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ ನಲ್ಲಿ ಸ್ಮಾರ್ಟ್‌ಫೋನ್‌ಗಳಿಗೆ ಭಾರಿ ರಿಯಾಯಿತಿ ಸಿಗಲಿದೆ. ವಿವಿಧ ಬ್ರ್ಯಾಂಡ್‌ಗಳ ಭಿನ್ನ ಪ್ರೈಸ್‌ನ ಫೋನ್‌ಗಳಿಗೂ ಈ ಸೇಲ್‌ನಲ್ಲಿ ರಿಯಾಯಿತಿ ಘೋಷಿಸಲಾಗಿದೆ. ಹಾಗೆಯೇ ಸ್ಯಾಮ್‌ಸಂಗ್ ಸಂಸ್ಥೆಯ ನೋಟ್, ಗ್ಯಾಲಕ್ಸಿ ಸರಣಿಯ ಸ್ಮಾರ್ಟ್‌ಫೋನ್‌ಗಳಿಗೂ ಹಾಗೂ ಕಂಪನಿಯ ಗ್ಯಾಡ್ಜೆಟ್ಸ್‌ಗಳಿಗೂ ವಿಶೇಷ ಕೊಡುಗೆ ಲಭ್ಯ. ಹಾಗಾದರೇ ಫ್ಲಿಪ್‌ಕಾರ್ಟ್‌ನ ಈ ಸೇಲ್‌ನಲ್ಲಿ ಯಾವೆಲ್ಲಾ ಸ್ಯಾಮ್‌ಸಂಗ್ ಫೋನ್‌ಗಳಿಗೆ ಡಿಸ್ಕೌಂಟ್ ಇರಲಿದೆ ಎನ್ನುವ ಬಗ್ಗೆ ತಿಳಿಸಲಾಗಿದೆ ಮುಂದೆ ಓದಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S20+
ಫ್ಲಿಪ್‌ಕಾರ್ಟ್ ಸೇಲ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ S20+ ಫೋನ್ 49,999ರೂ.ಗಳಿಗೆ ಲಭ್ಯವಾಗಲಿದೆ. ಇನ್ನು ಈ ಫೋನ್ 12MP + 64MP + 12MP ಕ್ಯಾಮೆರಾ ಸೆನ್ಸಾರ್ ರಚನೆಯನ್ನು ಪಡೆದಿದೆ. ಹಾಗೂ 4500mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್ 10+
ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್ 10+ 6.8 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದ್ದು, 12MP + 16MP + 12MP + 0.3MP ಕ್ಯಾಮೆರಾ ಸೆನ್ಸಾರ್ ಪಡೆದಿದೆ. ಇನ್ನು ಫ್ಲಿಪ್‌ಕಾರ್ಟ್ ಸೇಲ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್ 10+ ಫೋನ್ 54,999ರೂ.ಗಳಿಗೆ ಲಭ್ಯವಾಗಲಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F41
ಸ್ಯಾಮ್‌ಸಂಗ್ ಸಂಸ್ಥೆಯ ಇತ್ತೀಚಿಗಿನ ಸ್ಯಾಮ್‌ಸಂಗ್ ಗ್ಯಾಲಕ್ಸಿ F41 ಸ್ಮಾರ್ಟ್‌ಫೋನ್‌ಗೆ ಫ್ಲಿಪ್‌ಕಾರ್ಟ್ ಸೇಲ್‌ನಲ್ಲಿ ಸುಮಾರು 1000ರೂ. ರಿಯಾಯಿತಿ ಲಭ್ಯವಾಗಲಿದೆ. ಇನ್ನು ಈ ಫೋನ್ 64MP + 8MP + 5MP ಕ್ಯಾಮೆರಾ ಸೆಟ್‌ಅಪ್ ಹೊಂದಿರುವುದು ಹಾಗೂ 6000mAh ಬ್ಯಾಟರಿ ಬ್ಯಾಕ್‌ಅಪ್ ಪ್ರಮುಖ ಹೈಲೈಟ್‌ಗಳಾಗಿವೆ.

ಇತರೆ ಸ್ಯಾಮ್‌ಸಂಗ್ ಡಿವೈಸ್‌ಗಳು
ಸ್ಯಾಮ್‌ಸಂಗ್ ಗ್ಯಾಲಕ್ಸಿ ವಾಚ್ 46mm ಬ್ಲೂಟೂತ್ ವೇರಿಯಂಟ್ ಫ್ಲಿಪ್‌ಕಾರ್ಟ್ ಸೇಲ್‌ನಲ್ಲಿ 11,990ರೂ.ಗಳಿಗೆ ಸಿಗಲಿದೆ. ಹಾಗೆಯೇ ಗ್ಯಾಲಕ್ಸಿ ಟ್ಯಾಬ್ A 8.0 ಡಿವೈಸ್ 8,999ರೂ.ಗಳಿಗೆ ಲಭ್ಯವಾಗಲಿದೆ.


Click it and Unblock the Notifications








