ಸ್ಯಾಮ್‌ಸಂಗ್‌ ಸ್ಮಾರ್ಟ್‌ಫೋನ್‌ ಖರೀದಿ ಮಾಡುವ ಗ್ರಾಹಕರಿಗೆ ಇಲ್ಲಿದೆ ಗುಡ್‌ನ್ಯೂಸ್‌!

|

ಸದ್ಯದಲ್ಲೇ ಪ್ರಾರಂಭವಾಗಲಿರುವ ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ 2022 ರ ಸೇಲ್‌ ಈಗಾಗಲೇ ಆನ್‌ಲೈನ್‌ ಶಾಪಿಂಗ್‌ ಪ್ರಿಯರಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಮೂಡಿಸಿದೆ. ಈ ಹಬ್ಬದ ಮಾರಾಟದಲ್ಲಿ ಜನಪ್ರಿಯ ಸ್ಯಾಮ್‌ಸಂಗ್ ಕಂಪನಿಯು ತನ್ನ ಕೆಲವು ಆಯ್ದ ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳ ಹಾಗೂ ಕೆಲವು ಬಜೆಟ್‌ ಬೆಲೆಯ ಫೋನ್‌ಗಳ ಮೇಲೆ 57% ರಷ್ಟು ರಿಯಾಯಿತಿಗಳನ್ನು ತಿಳಿಸಿದೆ.

ಬಿಲಿಯನ್

ಹೌದು, ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ 2022 ರ ಸೇಲ್‌ ಇದೇ ಸೆಪ್ಟೆಂಬರ್ 23 ರಿಂದ ಪ್ರಾರಂಭವಾಗಲಿದ್ದು, ಸೆಪ್ಟೆಂಬರ್ 30 ರ ವರೆಗೂ ಚಾಲ್ತಿ ಇರಲಿದೆ. ಈ ಸೇಲ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE 5G, ಸ್ಯಾಮ್‌ಸಂಗ್ ಗ್ಯಾಲಕ್ಸಿ S22+, ಸ್ಯಾಮ್‌ಸಂಗ್ ಗ್ಯಾಲಕ್ಸಿ F23 5G ಮತ್ತು ಸ್ಯಾಮ್‌ಸಂಗ್ ಗ್ಯಾಲಕ್ಸಿ F13 ಸ್ಮಾರ್ಟ್‌ಫೋನ್‌ಗಳು ಆಕರ್ಷಕ ರಿಯಾಯಿತಿಯಲ್ಲಿ ದೊರೆಯಲಿವೆ.

ಎಕ್ಸ್‌ಚೇಂಜ್‌

ಈ ಸೇಲ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE 5G ಫೋನ್‌ 31,999ರೂ. ಗಳಿಗೆ ಲಭ್ಯವಾಗಲಿದೆ ಎಂದು ಫ್ಲಿಪ್‌ಕಾರ್ಟ್‌ನಲ್ಲಿ ಲಿಸ್ಟ್‌ ಮಾಡಲಾಗಿದೆ. ಹಾಗೆಯೇ 24,000 ರೂ. ಗಳ ವರೆಗೂ ಎಕ್ಸ್‌ಚೇಂಜ್‌ ಕೊಡುಗೆ ಸಹ ದೊರೆಯಲಿದೆ. ಸ್ಯಾಮ್‌ಸಂಗ್ ಗ್ಯಾಲಕ್ಸಿ S22+, 59,999ರೂ. ಗಳಿಗೆ ಖರೀದಿಸಬಹುದಾಗಿದೆ. ಅದೇ ರೀತಿ ಸ್ಯಾಮ್‌ಸಂಗ್ ಗ್ಯಾಲಕ್ಸಿ F23 5G ಫೋನ್ 13,499ರೂ. ಗಳಿಗೆ ಹಾಗೂ ಸ್ಯಾಮ್‌ಸಂಗ್ ಗ್ಯಾಲಕ್ಸಿ F13 ಫೋನ್ 8,499ರೂ. ಗಳಿಗೆ ಲಭ್ಯವಾಗಲಿದೆ. ಹಾಗಾದರೇ ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE 5G ಫೋನಿನ ಫೀಚರ್ಸ್‌ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಗ್ಯಾಲಕ್ಸಿ S21 FE ಡಿಸ್‌ಪ್ಲೇ ರಚನೆ

ಗ್ಯಾಲಕ್ಸಿ S21 FE ಡಿಸ್‌ಪ್ಲೇ ರಚನೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S21 FE ಸ್ಮಾರ್ಟ್‌ಫೋನ್‌ 2340 × 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.4 ಇಂಚಿನ AMOLED ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಮತ್ತು 240Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಬೆಂಬಲಿಸುತ್ತದೆ. ಇದಲ್ಲದೆ ಅಂಡರ್ ಡಿಸ್‌ಪ್ಲೇ ಆಪ್ಟಿಕಲ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಪಡೆದುಕೊಂಡಿದೆ.

ಗ್ಯಾಲಕ್ಸಿ S21 FE ಪ್ರೊಸೆಸರ್‌

ಗ್ಯಾಲಕ್ಸಿ S21 FE ಪ್ರೊಸೆಸರ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S21 FE ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 888 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಒನ್‌ ಯುಐ 4.0 ಆಧಾರಿತ ಆಂಡ್ರಾಯ್ಡ್‌ 12 ಔಟ್ ಆಫ್ ದಿ ಬಾಕ್ಸ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 6GB ಮತ್ತು 128GB, 8GB ಮತ್ತು 128GB, ಹಾಗೂ 8GB ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಮೂರು ವೇರಿಯೆಂಟ್‌ ಆಯ್ಕೆಗಳನ್ನು ಪಡೆದುಕೊಂಡಿದೆ.

ಗ್ಯಾಲಕ್ಸಿ S21 FE ಕ್ಯಾಮೆರಾ

ಗ್ಯಾಲಕ್ಸಿ S21 FE ಕ್ಯಾಮೆರಾ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S21 FE ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯವನ್ನು ಹೊಂದಿದೆ. ಎರಡನೇ ಕ್ಯಾಮೆರಾ 12 ಮೆಗಾ ಪಿಕ್ಸಲ್‌ ಅಲ್ಟ್ರಾವೈಡ್‌ ಸೆನ್ಸಾರ್‌ ಅನ್ನು ಹೊಂದಿದೆ. ಇನ್ನು ಮೂರನೇ ಕ್ಯಾಮೆರಾ 8 ಮೆಗಾ ಪಿಕ್ಸಲ್‌ 3x ಟೆಲಿಫೋಟೋ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾ ಪಿಕ್ಸಲ್‌ ಫಿಕ್ಸೆಡ್ ಫೋಕಸ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಕ್ಯಾಮೆರಾ ಬಂಪ್ ಅನ್ನು ಮ್ಯಾಟ್ ಫಿನಿಶ್ ಬ್ಯಾಕ್ ಪ್ಯಾನೆಲ್‌ಗೆ ಸಂಯೋಜಿಸಲಾಗಿದೆ. ಫ್ಲ್ಯಾಶ್ ಮಾಡ್ಯೂಲ್ ಅನ್ನು ಕ್ಯಾಮರಾ ಲೈಟ್‌ ಹೊರಗೆ ಇರಿಸಲಾಗಿದೆ.

ಗ್ಯಾಲಕ್ಸಿ S21 FE ಬ್ಯಾಟರಿ

ಗ್ಯಾಲಕ್ಸಿ S21 FE ಬ್ಯಾಟರಿ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S21 FE ಸ್ಮಾರ್ಟ್‌ಫೋನ್‌ 4,500 mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 25W ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 15W ವೈರ್‌ಲೆಸ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌ಗಳನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಹಲವಾರು ಶೂಟಿಂಗ್ ಮೋಡ್‌ಗಳನ್ನು ಸಹ ಹೊಂದಿದೆ. ಇದು ಮಲ್ಟಿ ಕ್ಯಾಮೆರಾ ರೆಕಾರ್ಡಿಂಗ್ ಮೋಡ್ ಅನ್ನು ಒಳಗೊಂಡಿದೆ. ಇದರಿಂದ ಒಂದೇ ಸಮಯದಲ್ಲಿ ಸೆಲ್ಫಿ ಮತ್ತು ರಿಯರ್‌ ಕ್ಯಾಮೆರಾಗಳಿಂದ ವೀಡಿಯೊವನ್ನು ಸೆರೆಹಿಡಿಯಲು ನಿಮಗೆ ಅನುಮತಿಸುತ್ತದೆ.

Best Mobiles in India

English summary
Flipkart Big Billion Days Sale: Samsung Galaxy S22+, Galaxy S21 FE 5G and more Phones Available With Up to 57 Percent Discount.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X