ವಿವೋ, ಪೊಕೊ, ಶಿಯೋಮಿ ಸ್ಮಾರ್ಟ್‌ಫೋನ್‌ಗಳಿಗೆ ಭಾರೀ ಡಿಸ್ಕೌಂಟ್‌!

|

ದೀಪಾವಳಿ ಹಬ್ಬದ ಅಂಗವಾಗಿ ಇ ಕಾಮರ್ಸ್ ದೈತ್ಯ ಫ್ಲಿಪ್‌ಕಾರ್ಟ್‌ ಇದೀಗ ವಿಶೇಷ ಮಾರಾಟ ಪ್ರಾರಂಭಿಸಿದೆ. ಅದುವೇ ಫ್ಲಿಪ್‌ಕಾರ್ಟ್‌ ಬಿಗ್ ದೀಪಾವಳಿ ಸೇಲ್ (Flipkart Big Diwali sale). ಈ ಸೇಲ್ ಈಗಾಗಲೇ ಲೈವ್‌ ಆಗಿದ್ದು, ಇದೇ ಅಕ್ಟೋಬರ್ 16 ರ ವರೆಗೂ ಚಾಲ್ತಿ ಇರಲಿದೆ. ಈ ಸ್ಪೆಷಲ್‌ ಸೇಲ್‌ನಲ್ಲಿ ಕೆಲವು ಸ್ಮಾರ್ಟ್‌ಫೋನ್‌ಗಳು ಭಾರೀ ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿಗೆ ಲಭ್ಯ ಇವೆ.

ದೀಪಾವಳಿ

ಹೌದು, ಫ್ಲಿಪ್‌ಕಾರ್ಟ್‌ ಬಿಗ್ ದೀಪಾವಳಿ ಸೇಲ್ ಭರ್ಜರಿ ರಿಯಾಯಿತಿ ಕೊಡುಗೆಗಳ ಮೂಲಕ ಆನ್‌ಲೈನ್‌ ಶಾಪಿಂಗ್ ಪ್ರಿಯರ ಗಮನ ಸೆಳೆದಿದೆ. ಈ ಮಾರಾಟದಲ್ಲಿ ಶಿಯೋಮಿ, ವಿವೋ, ಪೊಕೊ, ರಿಯಲ್‌ಮಿ ಸೇರಿದಂತೆ ಕೆಲವು ಬಜೆಟ್‌ ಹಾಗೂ ಮೀಡ್‌ರೇಂಜ್‌ ಪ್ರೈಸ್‌ ಟ್ಯಾಗ್‌ನ ಫೋನ್‌ಗಳು ಬೊಂಬಾಟ್‌ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿವೆ.

ಬ್ಯಾಂಕ್‌ಗಳಿಂದ

ಹಾಗೆಯೇ ಕೆಲವು ಆಯ್ದ ಬ್ಯಾಂಕ್‌ಗಳಿಂದ ಇನ್‌ಸ್ಟಂಟ್‌ ಡಿಸ್ಕೌಂಟ್‌ ಸೌಲಭ್ಯವು ದೊರೆಯಲಿದೆ. ಹಾಗಾದರೇ ಫ್ಲಿಪ್‌ಕಾರ್ಟ್‌ (Flipkart) ಬಿಗ್ ದೀಪಾವಳಿ ಸೇಲ್ ನಲ್ಲಿ ಆಕರ್ಷಕ ರಿಯಾಯಿತಿಯಲ್ಲಿ ಲಭ್ಯವಿರುವ ಕೆಲವು ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಯೋಣ ಬನ್ನಿರಿ.

ವಿವೋ V25 5G ಸ್ಮಾರ್ಟ್‌ಫೋನ್

ವಿವೋ V25 5G ಸ್ಮಾರ್ಟ್‌ಫೋನ್

ವಿವೋ V25 5G (vivo V25 5G) ಸ್ಮಾರ್ಟ್‌ಫೋನ್‌ನ 8GB RAM ಮತ್ತು 128GB ROM ಸ್ಟೋರೇಜ್‌ ವೇರಿಯಂಟ್‌ನ ಎಮ್‌ಆರ್‌ಪಿ ಬೆಲೆಯು 32,999ರೂ. ಆಗಿದ್ದು, ಹಬ್ಬದ ಕೊಡುಗೆಯಲ್ಲಿ ಗ್ರಾಹಕರು 27,999ರೂ. ಗಳಿಗೆ ಖರೀದಿಸಬಹುದಾಗಿದೆ. ಹಾಗೆಯೇ ಗ್ರಾಹಕರು ಕೋಟಾಕ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮತ್ತು ಎಸ್‌ಬಿಐ ಕ್ರೆಡಿಟ್ ಕಾರ್ಡ್‌ನಲ್ಲಿ 1,250ರೂ. ವರೆಗೆ ರಿಯಾಯಿತಿಯನ್ನು ಪಡೆಯಬಹುದು. ಹೆಚ್ಚುವರಿಯಾಗಿ, 18,900ರೂ. ಗಳ ವರೆಗೆ ಎಕ್ಸ್‌ಚೇಂಜ್ ಕೊಡುಗೆ ಆಯ್ಕೆ ಸಹ ಇದೆ. ಇನ್ನು ಈ ಸ್ಮಾರ್ಟ್‌ಫೋನ್ 6.44 ಇಂಚಿನ FHD+ ಡಿಸ್‌ಪ್ಲೇ ಅನ್ನು ಹೊಂದಿದೆ. ಈ ಫೋನ್ ಮೀಡಿಯಾ ಟೆಕ್‌ ಡೈಮೆನ್ಸಿಟಿ 900 ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತದೆ.

ಶಿಯೋಮಿ 11i 5G ಸ್ಮಾರ್ಟ್‌ಫೋನ್

ಶಿಯೋಮಿ 11i 5G ಸ್ಮಾರ್ಟ್‌ಫೋನ್

ಶಿಯೋಮಿ 11i 5G (Xiaomi 11i 5G) ಸ್ಮಾರ್ಟ್‌ಫೋನ್ ಬಿಗ್‌ ದೀಪಾವಳಿ ಸೇಲ್‌ನಲ್ಲಿ 26,999ರೂ. ಗಳ ರಿಯಾಯಿತಿ ಬೆಲೆಯಲ್ಲಿ ಲಭ್ಯವಿದೆ. ಇನ್ನು ಗ್ರಾಹಕರು ಕೋಟಾಕ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮತ್ತು ಎಸ್‌ಬಿಐ ಕ್ರೆಡಿಟ್ ಕಾರ್ಡ್‌ ಮೂಲಕ ಖರೀದಿಸಿದರೆ 1,250ರೂ. ಗಳ ವರೆಗೆ ರಿಯಾಯಿತಿಯನ್ನು ಪಡೆಯಬಹುದು. ಹಾಗೆಯೇ 19,150ರೂ. ಗಳ ವರೆಗೆ ಎಕ್ಸ್‌ಚೇಂಜ್ ಆಫರ್‌ ಸಹ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.67 ಇಂಚಿನ FHD+ AMOLED ಡಿಸ್‌ಪ್ಲೇಯನ್ನು ಹೊಂದಿದೆ. ಮೀಡಿಯಾ ಟೆಕ್‌ ಡೈಮೆನ್ಸಿಟಿ 920 ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ.

ರಿಯಲ್‌ಮಿ 9 ಪ್ರೊ+ 5G ಸ್ಮಾರ್ಟ್‌ಫೋನ್

ರಿಯಲ್‌ಮಿ 9 ಪ್ರೊ+ 5G ಸ್ಮಾರ್ಟ್‌ಫೋನ್

ರಿಯಲ್‌ಮಿ 9 ಪ್ರೊ+ 5G (Realme 9 Pro+ 5G) 6GB RAM ಜೊತೆಗೆ 128GB ಸ್ಟೋರೇಜ್‌ ವೇರಿಯಂಟ್‌ ಫೋನ್ ಆಫರ್‌ನಲ್ಲಿ 24,999ರೂ. ಗಳಿಗೆ ಲಭ್ಯವಿದೆ. ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕಾರ್ಡ್‌ನಲ್ಲಿ ಗ್ರಾಹಕರು 5% ಕ್ಯಾಶ್‌ಬ್ಯಾಕ್ ಪಡೆಯಬಹುದು. ಜೊತೆಗೆ 16,900ರೂ. ಗಳ ವರೆಗೆ ಎಕ್ಸ್‌ಚೇಂಜ್ ಕೊಡುಗೆ ಸಹ ಪಡೆಯಬಹುದು. ಇನ್ನು ಈ ಸ್ಮಾರ್ಟ್‌ಫೋನ್ 6.4 ಸಇಂಚಿನ FHD+ AMOLED ಡಿಸ್‌ಪ್ಲೇಯನ್ನು ಹೊಂದಿದೆ. ಹಾಗೆಯೇ ಮೀಡಿಯಾ ಟೆಕ್ ಡೈಮೆನ್ಸಿಟಿ 920 ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದ್ದು, 4500mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದೆ. ಇದರೊಂದಿಗೆ ಟ್ರಿಪಲ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದೆ.

ಪೊಕೊ F4 5G

ಪೊಕೊ F4 5G

ಪೊಕೊ F4 5G (Poco F4 5G) ಸ್ಮಾರ್ಟ್‌ಫೋನ್ 6GB RAM ಮತ್ತು 128GB ROM ಸ್ಟೋರೇಜ್‌ ವೇರಿಯಂಟ್‌ ಫ್ಲಿಪ್‌ಕಾರ್ಟ್ ಬಿಗ್ ದೀಪಾವಳಿ ಸೇಲ್‌ನಲ್ಲಿ ಆಕರ್ಷಕ ರಿಯಾಯಿತಿ ಪಡೆದಿದ್ದು, 23,499ರೂ. ಗಳಿಗೆ ಲಭ್ಯವಿದೆ. ಗ್ರಾಹಕರು ಕೋಟಾಕ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮತ್ತು ಎಸ್‌ಬಿಐ ಕ್ರೆಡಿಟ್ ಕಾರ್ಡ್‌ ಮೂಲಕ ಖರೀದಿ ಮಾಡಿದರೆ 1,250 ವರೆಗೆ ಡಿಸ್ಕೌಂಟ್‌ ಪಡೆಯಬಹುದು. ಇನ್ನು ಈ ಫೋನ್ 6.67 ಇಂಚಿನ FHD+ ಡಿಸ್ಪ್ಲೇಯನ್ನು ಹೊಂದಿದ್ದು, ಕ್ವಾಲ್ಕಮ್‌ ಸ್ನ್ಯಾಪ್‌ಡ್ರಾಗನ್‌ 870 ಪ್ರೊಸೆಸರ್‌ ಪಡೆದಿದೆ.

Best Mobiles in India

English summary
Flipkart Big Diwali sale: Big deals on These Vivo, Xiaomi, Poco Phones.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X