Home
ಸುದ್ದಿಜಾಲ

ಫ್ಲಿಪ್‌ಕಾರ್ಟ್‌ ಬಿಗ್ ದೀಪಾವಳಿ ಸೇಲ್; ಪೊಕೊ M2 ಫೋನ್ ಡಿಸ್ಕೌಂಟ್‌ನಲ್ಲಿ ಲಭ್ಯ!

ಪ್ರಸ್ತುತ ಇ-ಕಾಮರ್ಸ್‌ ತಾಣಗಳು ಆಫರ್‌ಗಳ ಅಡ್ಡಾಗಳಾಗಿ ಗುರುತಿಸಿಕೊಂಡಿವೆ. ಅವುಗಳಲ್ಲಿ ಫ್ಲಿಪ್‌ಕಾರ್ಟ್‌ ತಾಣವು ದೀಪಾವಳಿ ಹಬ್ಬದ ಪ್ರಯುಕ್ತ ಕೆಲವು ನೂತನ ಫೋನ್‌ಗಳಿಗೆ ಭರ್ಜರಿ ಡಿಸ್ಕೌಂಟ್‌ ಘೋಷಿಸಿದೆ. ಆ ಪೈಕಿ ಇತ್ತೀಚಿಗೆ ಬಿಡುಗಡೆ ಆಗಿರುವ ಪೊಕೊ M2 ಸ್ಮಾರ್ಟ್‌ಫೋನ್ ಸಹ ಬಿಗ್ ಡಿಸ್ಕೌಂಟ್‌ನಲ್ಲಿ ಕಾಣಿಸಿಕೊಂಡಿದೆ.

ಪ್ಲಾಟ್‌ಫಾರ್ಮ್

ಹೌದು, ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್ ದೀಪಾವಳಿ ಹಬ್ಬದ ಅಂಗವಾಗಿ ಬಿಗ್ ದೀಪಾವಳಿ ಸೇಲ್‌ ಅನ್ನು ಆಯೋಜಿಸಿದೆ. ಈ ಸೇಲ್‌ನಲ್ಲಿ ಪೊಕೊ M2 ಸ್ಮಾರ್ಟ್‌ಫೋನ್ 1,000ರೂ. ದರ ಇಳಿಕೆ ಕಂಡಿದ್ದು, 6GB + 64GB ಬೇಸ್‌ ವೇರಿಯಂಟ್‌ 9,999ರೂ.ಗಳಿಗೆ ಲಭ್ಯವಾಗಲಿದೆ. ಈ ಫೋನ್ ಬ್ಲ್ಯಾಕ್, ಬ್ಲೂ, ಗ್ರೀನ್‌ ಬಣ್ಣಗಳ ಆಯ್ಕೆ ಪಡೆದಿದೆ. ಅಂದಹಾಗೇ ಫ್ಲಿಪ್‌ಕಾರ್ಟ್‌ ಬಿಗ್ ದೀಪಾವಳಿ ಸೇಲ್ ಇದೇ ನವೆಂಬರ್ 8ರಿಂದ ಶುರುವಾಗಲಿದ್ದು, ನ.13ರ ವರೆಗೂ ಚಾಲ್ತಿ ಇರಲಿದೆ. ಪೊಕೊ M2 ಫೋನ್ ಫೀಚರ್ಸ್‌ಗಳು ಯಾವುವು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ಡಿಸೈನ್

ಡಿಸ್‌ಪ್ಲೇ ಡಿಸೈನ್

ಪೊಕೊ M2 ಸ್ಮಾರ್ಟ್‌ಪೋನ್‌ 1,080x2,400 ಪಿಕ್ಸೆಲ್‌ ರೆಸಲ್ಯೂಶನ್‌ ಸಾಮರ್ಥ್ಯದ 6.53 ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಆಗಿದ್ದು, 60 Hz ರೀಫ್ರೇಶ್ ರೇಟ್ ಅನ್ನು ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇಯು ಗೊರಿಲ್ಲಾ ಗ್ಲಾಸ್‌ ಸೌಲಭ್ಯವನ್ನು ಪಡೆದಿದೆ.

ಯಾವ ಪ್ರೊಸೆಸರ್‌

ಯಾವ ಪ್ರೊಸೆಸರ್‌

ಪೊಕೊ M2 ಸ್ಮಾರ್ಟ್‌ಪೋನ್‌ ಮೀಡಿಯಾ ಟೆಕ್ ಹಿಲಿಯೊ G80 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 10 ಓಎಸ್‌ ಬೆಂಬಲವನ್ನು ಪಡೆದಿದೆ. 6GB RAM ಮತ್ತು 64GB ಹಾಗೂ 6GB RAM ಮತ್ತು 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಹೊಂದಿದೆ. ಇದಲ್ಲದೆ ಎಸ್‌ಡಿ ಕಾರ್ಡ್‌ ಮೂಲಕ ಮೆಮೊರಿ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಿಸಿಕೊಳ್ಳಬಹುದಾಗಿದೆ.

ಕ್ಯಾಮೆರಾ ಸೆನ್ಸಾರ್

ಕ್ಯಾಮೆರಾ ಸೆನ್ಸಾರ್

ಪೊಕೊ M2 ಸ್ಮಾರ್ಟ್‌ಪೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮೊದಲನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್‌ ಕ್ಯಾಮೆರಾ ಸೆನ್ಸಾರ್‌, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಸೆನ್ಸಾರ್‌ ಅನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಪೊಕೊ M2 ಸ್ಮಾರ್ಟ್‌ಪೋನ್‌ 5000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, 18W ಫಾಸ್ಟ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ವೈ-ಫೈ, ಬ್ಲೂಟೂತ್ V5.0, GPS, ಯುಎಸ್‌ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ.

Best Mobiles in India

English summary
Flipkart has announced another sale – Big Diwali Sale – to celebrate the festive occasion. This new sale will begin on November 8 and go on till November 13.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+