ಫ್ಲಿಪ್‌ಕಾರ್ಟ್‌ ಬಿಗ್‌ ದೀಪಾವಳಿ ಸೇಲ್‌ ಡೇಟ್‌ ಫಿಕ್ಸ್‌!

|

ಜನಪ್ರಿಯ ಇ-ಕಾಮರ್ಸ್‌ ಸೈಟ್‌ ಫ್ಲಿಪ್‌ಕಾರ್ಟ್‌ ಆನ್‌ಲೈನ್‌ ಶಾಪಿಂಗ್‌ ಪ್ರಿಯರಿಗಾಗಿ ವಿಶೇಷ ಸೇಲ್‌ಗಳನ್ನು ಆಯೋಜಿಸುತ್ತಲೇ ಬಂದಿದೆ. ವಿಕೆಂಡ್‌ ಸೇಲ್‌, ಮಂತ್‌ಎಂಡ್‌ ಸೇಲ್‌, ಸೇರಿದಂತೆ ಹಲವು ಸೇಲ್‌ಗಳನ್ನು ನಡೆಸುತ್ತಲೇ ಬಂದಿದೆ. ಸದ್ಯ ಫ್ಲಿಪ್‌ಕಾರ್ಟ್‌ ನವರಾತ್ರಿ ಹಬ್ಬದ ಪ್ರಯುಕ್ತ ಆಯೋಜಿಸಿದ್ದ ಬಿಗ್‌ ಬಿಲಿಯನ್‌ ಡೇಸ್‌ ಸೇಲ್‌ ಎರಡು ದಿನಗಳ ಹಿಂದೆಯಷ್ಟೇ ತೆರೆ ಎಳೆದಿತ್ತು. ಇದೀಗ ಫ್ಲಿಪ್‌ಕಾರ್ಟ್‌ ದೀಪಾವಳಿ ಪ್ರಯುಕ್ತ ಮತ್ತೊಂದು ವಿಶೇಷ ಸೇಲ್‌ ಡೇಟ್‌ ಫಿಕ್ಸ್‌ ಮಾಡಿದೆ.

ಫ್ಲಿಪ್‌ಕಾರ್ಟ್‌

ಹೌದು, ಫ್ಲಿಪ್‌ಕಾರ್ಟ್‌ ಬಿಗ್ ಬಿಲಿಯನ್ ಡೇಸ್ ಸೇಲ್‌ ನಂತರ ಇದೀಗ ದೀಪಾವಳಿ ಸೇಲ್‌ ದಿನಾಂಕವನ್ನು ಬಹಿರಂಗ ಪಡಿಸಿದೆ. ಬಿಗ್‌ ಬಿಲಿಯನ್‌ ಡೇಸ್‌ ಸೇಲ್‌ ಆಫರ್‌ ಮಿಸ್‌ ಮಾಡಿಕೊಂಡವರಿಗೆ ಮತ್ತೊಮ್ಮೆ ಫ್ಲಿಪ್‌ಕಾರ್ಟ್‌ ಆಫರ್‌ನಲ್ಲಿ ಖರೀದಿಸಲು ಒಳ್ಳೆ ಸಮಯ ಬಂದಿದೆ. ದೀಪಾವಳಿ ಸಂದರ್ಭದಲ್ಲಿ ಅಂದರೆ ಇದೇ ಅಕ್ಟೋಬರ್ 17 ರಿಂದ ಅಕ್ಟೋಬರ್ 23 ರವರೆಗೆ ನಡೆಯಲಿದೆ. ಫ್ಲಿಪ್‌ಕಾರ್ಟ್‌ ಇದಕ್ಕೆ ಬಿಗ್ ದೀಪಾವಳಿ ಸೇಲ್ ಎಂದು ಹೆಸರಿಸಿದ್ದು, ಈ ಸೇಲ್‌ನಲ್ಲಿ ಮೊಬೈಲ್‌ಗಳು, ಟ್ಯಾಬ್ಲೆಟ್‌ಗಳು, ಟಿವಿಗಳು ಮತ್ತು ಇತರ ಎಲೆಕ್ಟ್ರಾನಿಕ್ಸ್‌ಗಳಲ್ಲಿ ಕೆಲವು ರೋಮಾಂಚಕಾರಿ ಡೀಲ್‌ಗಳನ್ನು ನೀಡುವುದಾಗಿ ಭರವಸೆ ನೀಡಿದೆ. ಹಾಗಾದ್ರೆ ಫ್ಲಿಪ್‌ಕಾರ್ಟ್‌ ಬಿಗ್‌ ದೀಪಾವಳಿ ಸೇಲ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಫ್ಲಿಪ್‌ಕಾರ್ಟ್‌

ಫ್ಲಿಪ್‌ಕಾರ್ಟ್‌ ಬಿಗ್ ದೀಪಾವಳಿ ಸೇಲ್‌ ಅಕ್ಟೋಬರ್ 17 ರಿಂದ ಆರಂಭವಾಗಲಿದ್ದು, ಅಕ್ಟೋಬರ್ 23 ರವರೆಗೆ ನಡೆಯಲಿದೆ. ಫ್ಲಿಪ್‌ಕಾರ್ಟ್‌ ಪ್ಲಸ್ ಸದಸ್ಯರಿಗೆ ಈ ಸೇಲ್‌ ಅಕ್ಟೋಬರ್ 16ರ ಮಧ್ಯಾಹ್ನ 12 ಗಂಟೆಯಿಂದಲೇ ಲೈವ್‌ ಆಗಲಿದೆ. ಇನ್ನು ಈ ಸೇಲ್‌ನಲ್ಲಿ ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಹೊಂದಿರುವವರಿಗೆ ಮತ್ತು ಆಕ್ಸಿಸ್ ಬ್ಯಾಂಕ್ ಬಳಕೆದಾರರಿಗೆ ಶೇಕಡಾ 10 ರಷ್ಟು ತ್ವರಿತ ರಿಯಾಯಿತಿ ದೊರೆಯಲಿದೆ. ಆದರೆ ಸೇಲ್‌ ಅವಧಿಯಲ್ಲಿ ನೀವು ನಿರೀಕ್ಷಿಸಬಹುದಾದ ಡೀಲ್‌ಗಳ ಬಗ್ಗೆ ಯಾವುದೇ ಮಾಹಿತಿಯನ್ನು ಫ್ಲಿಪ್‌ಕಾರ್ಟ್ ಇನ್ನೂ ಹಂಚಿಕೊಂಡಿಲ್ಲ.

ಫ್ಲಿಪ್‌ಕಾರ್ಟ್‌

ಆದರೂ ಕೂಡ ಈ ಬಾರಿಯ ಫ್ಲಿಪ್‌ಕಾರ್ಟ್‌ ಬಿಗ್‌ ದೀಪಾವಳಿ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್‌ಗಳು ಮತ್ತು ಟ್ಯಾಬ್ಲೆಟ್‌ಗಳ ಮೇಲೆ 80% ರಿಯಾಯಿತಿ ಲಭ್ಯವಿರೋದು ಪಕ್ಕಾ ಆಗಿದೆ. ಇದರ ಜೊತೆಗೆ, ಎಲೆಕ್ಟ್ರಾನಿಕ್ಸ್ ಮತ್ತು ಪರಿಕರಗಳ ಮೇಲೆ ಕೂಡ 80% ರಿಯಾಯಿತಿ ಲಭ್ಯವಾಗಲಿದೆ. ಇನ್ನು ಟಿವಿಗಳು ಮತ್ತು ಇತರೆ ಉಪಕರಣಗಳ ಮೇಲೆ 75% ವರೆಗೆ ರಿಯಾಯಿತಿಯನ್ನು ನಿರೀಕ್ಷಿಸಬಹುದಾಗಿದೆ. ಮಾರಾಟದ ಸಮಯದಲ್ಲಿ ಫ್ಲಿಪ್‌ಕಾರ್ಟ್ ಸಮಯೋಚಿತ ಡೀಲ್‌ಗಳನ್ನು ಸಹ ಆಯೋಜಿಸಲಿದೆ.

ಫ್ಲಿಪ್‌ಕಾರ್ಟ್‌

ಇನ್ನು ಫ್ಲಿಪ್‌ಕಾರ್ಟ್‌ ವೆಬ್‌ಪೇಜ್‌ನಲ್ಲಿ ಕ್ರೇಜಿ ಡೀಲ್ಸ್‌ ಎಂಬ ವರ್ಗವನ್ನು ಉಲ್ಲೇಖಿಸಿದೆ. ಇದು ಮಾರಾಟದ ದಿನಗಳಲ್ಲಿ ಬೆಳಿಗ್ಗೆ 12, 8 ಮತ್ತು ಸಂಜೆ 4 ಕ್ಕೆ ಹೊಸ ಡೀಲ್‌ಗಳನ್ನು ತೋರಿಸುತ್ತದೆ. ಮತ್ತೊಂದು ಟೈಮ್ ಬಾಂಬ್ ಡೀಲ್ ವಿಭಾಗವು ಈ ದಿನಗಳಲ್ಲಿ ಪ್ರತಿ ಗಂಟೆಗೆ ಸಂಜೆ 6 ರಿಂದ ಬೆಳಿಗ್ಗೆ 12 ರವರೆಗೆ ಒಂದು ಹೊಸ ಡೀಲ್ ಅನ್ನು ತೋರಿಸಲಿದೆ. ಸದ್ಯ ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್‌ನಲ್ಲಿ ಡೀಲ್‌ಗಳ ಕುರಿತು ಹೆಚ್ಚಿನ ವಿವರಗಳನ್ನು ನೋಡಬೇಕಾಗಿದೆ. ಕಳೆದ ವಾರ ಕೊನೆಗೊಂಡ ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್‌ನಲ್ಲಿಯೂ ಕೂಡ ಇದೇ ರೀತಿಯ ಡೀಲ್‌ಗಳನ್ನು ನೀಡಲಾಗಿತ್ತು.

ಫ್ಲಿಪ್‌ಕಾರ್ಟ್‌

ಇದೀಗ ಫ್ಲಿಪ್‌ಕಾರ್ಟ್‌ ತನ್ನ ಬಿಗ್‌ ಬಿಲಿಯನ್‌ ಡೇಸ್‌ ಸೇಳ್‌ ಮುಗಿದ ಒಂದು ವಾರದ ಅವಧಿಯಲ್ಲಿ ಈ ಸೇಲ್‌ ಅನ್ನು ಆಯೋಜಿಸುತ್ತಿದೆ. ಈ ಮೂಲಕ ಹಬ್ಬದ ಸಂಭ್ರಮವನ್ನು ಇನ್ನಷ್ಟು ಇಮ್ಮಡಿ ಗೊಳಿಸಿದೆ. ದೀಪಾವಳಿ ಸಮಯದಲ್ಲಿ ಸ್ಮಾರ್ಟ್‌ಫೋನ್‌ ಖರೀದಿಸುವವರು, ಲ್ಯಾಪ್‌ಟಾಪ್‌ ಖರೀದಿಸಬೇಕೆಂದುಕೊಂಡವರಿಗೆ ಇದು ಉತ್ತಮ ಅವಕಾಶವಾಗಿದೆ. ಅಷ್ಟೇ ಅಲ್ಲ ಯಾವುದೇ ಆಯ್ದ ಪ್ರಾಡಕ್ಟ್‌ಗಳನ್ನು ಖರೀದಿಸದರೂ ಕೂಡ ಹೆಚ್ಚುವರಿ ಆಫರ್‌ ಅನ್ನು ಪಡೆದುಕೊಳ್ಳಬಹುದಾಗಿದೆ.

ಫ್ಲಿಪ್‌ಕಾರ್ಟ್‌

ಫ್ಲಿಪ್‌ಕಾರ್ಟ್‌ ಒಂದು ವಾರದ ಅವಧಿಯಲ್ಲಿ ಹೊಸ ಸೇಲ್‌ ಆಯೋಜಿಸಿದೆ. ಆದರೆ ಅಮೆಜಾನ್‌ನ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್‌ ಈ ತಿಂಗಳು ಪೂರ್ತಿ ನಡೆಯಲಿದೆ. ಹೀಗಾಗಿ ಫ್ಲಿಪ್‌ಕಾರ್ಟ್‌ ಬಿಗ್ ದೀಪಾವಳಿ ಸೇಲ್‌ ಇನ್ನಷ್ಟು ಡಿಲ್ಸ್‌ಗಳನ್ನು ನೀಡುವ ಸಾದ್ಯತೆ ಇದೆ. ಹೀಗಾಗಿ ದೀಪಾವಳಿ ಸಮಯದಲ್ಲಿ ಇ-ಕಾಮರ್ಸ್‌ ಪ್ಲಾಟ್‌ಫಾರ್ಮ್‌ಗಳು ಭರ್ಜರಿ ಡಿಸ್ಕೌಂಟ್‌ಗಳನ್ನು ಹೊತ್ತು ತಂದಿವೆ.

Most Read Articles
Best Mobiles in India

English summary
Flipkart is hosting yet another sale during the Diwali festive period in India that promises to offer up to 80 per cent off on smartphone.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X