ಫ್ಲಿಪ್‌ಕಾರ್ಟ್ ಸೇಲ್‌ನಲ್ಲಿ ಈ ಫೋನ್‌ಗಳಿಗೆ ಭಾರೀ ರಿಯಾಯಿತಿ!..ಇಲ್ಲಿದೆ ವಿವರ!
ಇ ಕಾಮರ್ಸ್ ದಿಗ್ಗಜ ಎಂದೇ ಬಿಂಬಿತವಾಗಿರುವ ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್ ಒಂದಿಲ್ಲೊಂದು ಕೊಡುಗೆ ಮೂಲಕ ಗ್ರಾಹಕರನ್ನು ಸೆಳೆಯುತ್ತದೆ. ಅದೇ ರೀತಿ ದೀಪಾವಳಿ ಹಬ್ಬದ ಪ್ರಯುಕ್ತ ಫ್ಲಿಪ್‌ಕಾರ್ಟ್ ಬಿಗ್ ದೀಪಾವಳಿ ಸೇಲ್ ಅನ್ನು ಆಯೋಜಿಸಿದೆ. ಈ ಸೇಲ್‌ನಲ್ಲಿ ಕೆಲವು ಆಯ್ದ ಸ್ಮಾರ್ಟ್‌ಫೋನ್‌ಗಳಿಗೆ ಸುಮಾರು 50% ವರೆಗೂ ಡಿಸ್ಕೌಂಟ್ ಘೋಷಿಸಿದೆ. ಇನ್ನು ಫ್ಲಿಪ್‌ಕಾರ್ಟ್ ದೀಪಾವಳಿ ಸೇಲ್ ಇದೇ ಅ.23 ರ ವರೆಗೂ ಲೈವ್ ಇರಲಿದೆ.

ಹೌದು, ಫ್ಲಿಪ್‌ಕಾರ್ಟ್ ಆಯೋಜಿಸಿರುವ ಬಿಗ್ ದೀಪಾವಳಿ ಸೇಲ್ (Flipkart Diwali sale) ಮಾರಾಟದಲ್ಲಿ ಶಿಯೋಮಿ, ಸ್ಯಾಮ್‌ಸಂಗ್, ರಿಯಲ್‌ಮಿ ಸೇರಿದಂತೆ ಇತರೆ ಕೆಲವು ಕಂಪನಿಗಳ ಸ್ಮಾರ್ಟ್‌ಫೋನ್‌ಗಳಿಗೆ ಭರ್ಜರಿ ರಿಯಾಯಿತಿ ತಿಳಿಸಿದೆ. ಹಾಗೆಯೇ ಇನ್ನು ಎಸ್‌ಬಿಐ ಕಾರ್ಡ್ ಮೂಲಕ ಖರೀದಿಸುವ ಗ್ರಾಹಕರಿಗೆ ಹೆಚ್ಚುವರಿಯಾಗಿ 10% ಡಿಸ್ಕೌಂಟ್ ದೊರೆಯಲಿದೆ. ಹಾಗಾದರೆ ಫ್ಲಿಪ್‌ಕಾರ್ಟ್ ಸೇಲ್‌ನಲ್ಲಿ ಯಾವೆಲ್ಲಾ ಫೋನ್‌ಗಳು ಹೆಚ್ಚಿನ ರಿಯಾಯಿತಿಯಲ್ಲಿ ಕಾಣಿಸಿಕೊಂಡಿವೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE 5G ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE 5G ಫೋನ್ 128 GB ಸ್ಟೋರೇಜ್ ವೇರಿಯಂಟ್ ಫ್ಲಿಪ್‌ಕಾರ್ಟ್‌ನಲ್ಲಿ 52 ಪರ್ಸೆಂಟ್ ರಿಯಾಯಿತಿಯಲ್ಲಿ ಕಾಣಿಸಿಕೊಂಡಿದ್ದು, 35,999ರೂ. ಗಳಿಗೆ ಲಭ್ಯವಿದೆ. ಇನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE ಸ್ಮಾರ್ಟ್‌ಫೋನ್ 2340 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.4 ಇಂಚಿನ AMOLED ಡಿಸ್‌ಪ್ಲೇಯನ್ನು ಹೊಂದಿದೆ. ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಹಾಗೆಯೇ 4000mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದೆ.

ರೆಡ್ಮಿ 10 ಫೋನ್
ನೀವೇನಾದರೂ ಸುಮಾರು 10,000ರೂ. ಒಳಗೆ ಫೋನ್ ಖರೀದಿಸುವ ಪ್ಲ್ಯಾನ್ ಹೊಂದಿದ್ದರೆ, ರೆಡ್ಮಿ 10 ಸೂಕ್ತ ಆಯ್ಕೆ ಆಗಿದೆ. ಫ್ಲಿಪ್‌ಕಾರ್ಟ್ ಸೇಲ್‌ನಲ್ಲಿ ಈ ಫೋನ್ ಶೇಕಡಾ 40 ರಷ್ಟು ರಿಯಾಯಿತಿ ಪಡೆದಿದ್ದು, 8,999ರೂ. ಗಳಿಗೆ ಲಭ್ಯವಿದೆ. ಇನ್ನು ರೆಡ್ಮಿ 10 ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಡಿಸ್‌ಪ್ಲೇ ಹೊಂದಿದೆ. ಹಾಗೆಯೇ ಇದು ಮೀಡಿಯಾಟೆಕ್ ಹಿಲಿಯೋ G35 ಪ್ರೊಸೆಸರ್ ಬಲವನ್ನು ಪಡೆದಿದ್ದು, ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಹಾಗೆಯೇ 5000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ಫಾಸ್ಟ್ ಚಾರ್ಜಿಂಗ್ ಹಾಗೂ 9W ರಿವರ್ಸ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F23 5G ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ F23 5G ಫೋನ್‌ಫೋನ್ ಫ್ಲಿಪ್‌ಕಾರ್ಟ್ ದೀಪಾವಳಿ ಸೇಲ್‌ನಲ್ಲಿ 41 ಪರ್ಸೆಂಟ್ ರಿಯಾಯಿತಿಯಲ್ಲಿ ಕಾಣಿಸಿಕೊಂಡಿದ್ದು, 35,999ರೂ. ಗಳಿಗೆ ಲಭ್ಯವಿದೆ. ಇನ್ನುಸ್ಯಾಮ್‌ಸಂಗ್ ಗ್ಯಾಲಕ್ಸಿ F23 5G ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ ಹೆಚ್‌ಡಿ + ಇನ್ಫಿನಿಟಿ-ಯು ಡಿಸ್‌ಪ್ಲೇ ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 750G SoC ಪ್ರೊಸೆಸರ್ ಬಲವನ್ನು ಪಡೆದಿದೆ. ಅಲ್ಲದೇ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಹಾಗೆಯೇ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ರಿಯಲ್‌ಮಿ C33 ಫೋನ್
ಫ್ಲಿಪ್‌ಕಾರ್ಟ್ ಬಿಗ್ ದೀಪಾವಳಿ ಸೇಲ್‌ನಲ್ಲಿ ರಿಯಲ್‌ಮಿ C33 ಫೋನ್ ಸುಮಾರು 20% ರಿಯಾಯಿತಿ ಪಡೆದಿದೆ. ಈ ಫೋನ್ ಅನ್ನು ಗ್ರಾಹಕರು 10,000ರೂ. ಗಳ ಒಳಗೆ ಖರೀದಿಸಬಹುದಾಗಿದೆ. ಇನ್ನು ಈ ಫೋನ್ 6.5 ಇಂಚಿನ ಡಿಸ್‌ಪ್ಲೇ ಪಡೆದಿದ್ದು, ಡ್ಯುಯಲ್ ಕ್ಯಾಮೆರಾ ರಚನೆ ಇದೆ. ಹಾಗೆಯೇ 5000mAh ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿದೆ.


Click it and Unblock the Notifications








