Home
ಸುದ್ದಿಜಾಲ

ಡಿಸ್ಕೌಂಟ್‌ನಲ್ಲಿ 'ಸ್ಯಾಮ್‌ಸಂಗ್‌ ಗ್ಯಾಲಕ್ಸಿ Z ಫ್ಲಿಪ್‌ 3' ಫೋನ್‌ ಖರೀದಿಗೆ ಇದೇ ಬೆಸ್ಟ್‌ ಆಫರ್‌!

ಮೊಬೈಲ್‌ ಮಾರುಕಟ್ಟೆಗೆ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳು ಎಂಟ್ರಿ ಕೊಡುತ್ತಲೇ ಇರುತ್ತವೆ. ಅವುಗಳಲ್ಲಿ ಫ್ಲಿಪ್‌ ಮಾದರಿಯ ಸ್ಮಾರ್ಟ್‌ಫೋನ್‌ಗಳು ಹೆಚ್ಚಿನ ಗಮನ ಸೆಳೆದಿವೆ. ಮುಖ್ಯವಾಗಿ ಸ್ಯಾಮ್‌ಸಂಗ್ ಕಂಪನಿಯ ಗ್ಯಾಲಕ್ಸಿ ಫ್ಲಿಪ್‌ ಸರಣಿಯ ಫೋನ್‌ಗಳು ಗ್ರಾಹಕರನ್ನು ಆಕರ್ಷಿಸಿವೆ. ನೀವೇನಾದರೂ ಭರ್ಜರಿ ಆಫರ್‌ನಲ್ಲಿ ಫ್ಲಿಪ್‌ ಸ್ಮಾರ್ಟ್‌ಫೋನ್‌ ಖರೀದಿಸುವ ಪ್ಲ್ಯಾನ್ ಮಾಡಿದ್ರೆ, ಸದ್ಯ ಫ್ಲಿಪ್‌ಕಾರ್ಟ್‌ ಅತ್ಯುತ್ತಮ ಪ್ಲಾಟ್‌ಫಾರ್ಮ್ ಎನಿಸಲಿದೆ.

ಬಿಗ್ ದೀಪಾವಳಿ ಸೇಲ್‌

ಹೌದು, ಜನಪ್ರಿಯ ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ ದೀಪಾವಳಿ ಪ್ರಯುಕ್ತ ಆಯೋಜಿಸಿರುವ ಬಿಗ್ ದೀಪಾವಳಿ ಸೇಲ್‌ (Flipkart's Big Diwali Sale) ನಲ್ಲಿ ಸ್ಮಾರ್ಟ್‌ಫೋನ್‌ಗಳಿಗೆ ಆಕರ್ಷಕ ರಿಯಾಯಿತಿ ಲಭ್ಯ. ಹಾಗೆಯೇ ಸ್ಯಾಮ್‌ಸಂಗ್‌ ಗ್ಯಾಲಕ್ಸಿ Z ಫ್ಲಿಪ್‌ 3 (Samsung Galaxy Z Flip 3) ಸ್ಮಾರ್ಟ್‌ಫೋನ್‌ ಸಹ ಬೊಂಬಾಟ್‌ ಡಿಸ್ಕೌಂಟ್‌ನಲ್ಲಿ ಕಾಣಿಸಿಕೊಂಡಿದೆ. ಗ್ರಾಹಕರು ಸುಮಾರು 50,000ರೂ. ಒಳಗೆ ಈ ಫೋನ್‌ ಅನ್ನು ಖರೀದಿಸಬಹುದಾಗಿದೆ.

ಗ್ಯಾಲಕ್ಸಿ Z ಫ್ಲಿಪ್‌ 3

ಸ್ಯಾಮ್‌ಸಂಗ್‌ ಗ್ಯಾಲಕ್ಸಿ Z ಫ್ಲಿಪ್‌ 3 ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ ದೀಪಾವಳಿ ಸೇಲ್‌ನಲ್ಲಿ 59,999ರೂ. ಗಳಿಗೆ ಕಾಣಿಸಿಕೊಂಡಿದೆ. ಗ್ರಾಹಕರು SBI ಕ್ರೆಡಿಟ್ ಕಾರ್ಡ್ ಬಳಸಿ 10,000ರೂ. ರಿಯಾಯಿತಿ ಪಡೆಯಬಹುದು. ಹಾಗೆಯೇ ಆಕರ್ಷಕ ಇಎಮ್‌ಐ (EMI) ಆಯ್ಕೆಗಳು ಸಹ ಲಭ್ಯ ಇವೆ. ಅಂದಹಾಗೆ ಬಿಗ್ ದೀಪಾವಳಿ ಸೇಲ್‌ ಇದೇ ಅ.23 ರ ವರೆಗೂ ವಾಲ್ತಿ ಇರಲಿದೆ. ಹಾಗಾದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫ್ಲಿಪ್‌ 3 ಸ್ಮಾರ್ಟ್‌ಫೋನ್‌ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ Z ಫ್ಲಿಪ್ 3

ಸ್ಯಾಮ್‌ಸಂಗ್‌ ಗ್ಯಾಲಕ್ಸಿ Z ಫ್ಲಿಪ್ 3

ಸ್ಯಾಮ್‌ಸಂಗ್‌ ಗ್ಯಾಲಕ್ಸಿ Z ಫ್ಲಿಪ್ 3 ಫೋನಿನ ಫೀಚರ್ಸ್‌ ಗ್ಯಾಲಕ್ಸಿ ಫ್ಲಿಪ್ 3 ಫೋನ್‌ 1,080x2,640 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥದೊಂದಿಗೆ 6.7 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಮಾದರಿಯನ್ನು ಹೊಂದಿದೆ. ಡಿಸ್‌ಪ್ಲೇಯು ಡೈನಾಮಿಕ್ AMOLED 2X ಸಪೋರ್ಟ್‌ ಸಹ ಪಡೆದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್‌ ಸಪೋರ್ಟ್ ಸಹ ಪಡೆದಿದೆ. ಹಾಗೆಯೇ ಈ ಫೋನ್ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಬಲವನ್ನು ಒಳಗೊಂಡಿದೆ.

ಮೆಗಾ ಪಿಕ್ಸಲ್

ಇನ್ನು ಈ ಫೋನ್ ಡ್ಯುಯಲ್ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಅವುಗಳು ಕ್ರಮವಾಗಿ 12 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿವೆ. ಸೆಲ್ಫಿ ಕ್ಯಾಮೆರಾವು 10 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಇದರೊಂದಿಗೆ 15W ಫಾಸ್ಟ್‌ ಚಾರ್ಜಿಂಗ್ ಜೊತೆಗೆ 3,300mAh ಡ್ಯುಯಲ್ ಸೆಲ್ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದೆ. ಅಲ್ಲದೇ ಈ ಫೋನ್ ಆಂಡ್ರಾಯ್ಡ್ 12 ಓಎಸ್‌ ಸಪೋರ್ಟ್‌ ಪಡೆದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ Z ಫ್ಲಿಪ್‌ 4 ಫೀಚರ್ಸ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ Z ಫ್ಲಿಪ್‌ 4 ಫೀಚರ್ಸ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ Z ಫ್ಲಿಪ್‌ 4 ಸ್ಮಾರ್ಟ್‌ಫೋನ್‌ ಮೇನ್‌ ಡಿಸ್‌ಪ್ಲೇ 6.7 ಇಂಚಿನ ಫಿಲ್‌ HD+ ಡೈನಾಮಿಕ್ ಅಮೋಲೆಡ್‌ ಡಿಸ್‌ಪ್ಲೇ ಆಗಿದೆ. ಇದು 2X ಇನ್ಫಿನಿಟಿ ಫ್ಲೆಕ್ಸ್ ಡಿಸ್‌ಪ್ಲೇ ಆಗಿದ್ದು, 120Hz ಅಡಾಪ್ಟಿವ್ ರಿಫ್ರೆಶ್ ರೇಟ್ ಜೊತೆಗೆ 22:9 ರಚನೆಯ ಅನುಪಾತವನ್ನು ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ 4nm ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8+ ಜೆನ್‌ 1 SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್‌ 12 ನಲ್ಲಿ OneUI 4.1.1 ಮೂಲಕ ರನ್‌ ಆಗಲಿದೆ. ಹಾಗೆಯೇ ಇದು 8GB RAM ಮತ್ತು 512GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ.

ಸ್ಮಾರ್ಟ್‌ಫೋನ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ Z ಫ್ಲಿಪ್ 4 ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಲೆನ್ಸ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ವೈಡ್-ಆಂಗಲ್ ಕ್ಯಾಮೆರಾ ಜೊತೆಗೆ f/1.8 ಲೆನ್ಸ್, 83-ಡಿಗ್ರಿ ಫೀಲ್ಡ್ ಆಫ್ ವ್ಯೂ ಹೊಂದಿದೆ. ಇದಲ್ಲದೆ 10 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದು 80-ಡಿಗ್ರಿ ಫೀಲ್ಡ್ ಆಫ್ ವ್ಯೂ ಹೊಂದಿದೆ. ಜೊತೆಗೆ 3,700mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 25W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

Best Mobiles in India

English summary
Flipkart Big Diwali Sale: Samsung Galaxy Z Flip 3 available under Rs. 50,000.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+