ಫ್ಲಿಪ್‌ಕಾಟ್‌ ದೀಪಾವಳಿ ಬಿಗ್‌ ಸೇಲ್‌ನಲ್ಲಿ ಈ ಸ್ಮಾರ್ಟ್‌ಫೋನ್‌ಗಳಿಗೆ ಬಿಗ್‌ ಆಫರ್‌!

|

ಫ್ಲಿಪ್‌ಕಾರ್ಟ್‌ ತನ್ನ ಆನ್‌ಲೈನ್‌ ಶಾಪಿಂಗ್‌ ಪ್ರಿಯರಿಗಾಗಿ ವಿಶೇಷ ಸೇಲ್‌ಗಳನ್ನು ಆಯೋಜಿಸುತ್ತಲೇ ಬಂದಿದೆ. ವಿಶೇಷ ರಿಯಾಯಿತಿ ಮೇಳಗಳ ಮೂಲಕ ಗ್ರಾಹಕರಿಗೆ ಭರ್ಜರಿ ಆಫರ್‌ ನೀಡುತ್ತಲೇ ಬಂದಿದೆ. ಇನ್ನು ಕಳೆದ ವಾರವಷ್ಟೇ ಫ್ಲಿಪ್‌ಕಾರ್ಟ್‌ ತನ್ನ ಬಿಗ್‌ ಬಿಲಿಯನ್‌ ಡೇಸ್‌ ಸೇಲ್‌ ಅನ್ನು ಎಂಡ್‌ ಮಾಡಿತ್ತು. ಇದೀಗ ದೀಪಾವಳಿ ಸಂಭ್ರಮವನ್ನು ಇನ್ನಷ್ಟು ಹೆಚ್ಚಿಸಲು ಅಕ್ಟೋಬರ್ 17 ರಿಂದ ದೀಪಾವಳಿ ಬಿಗ್‌ ಸೇಲ್‌ ಆಯೋಜಿಸಿದೆ. ಈ ಸೇಲ್‌ ಅಕ್ಟೋಬರ್ 23 ರವರೆಗೆ ಮುಂದುವರಿಯಲಿದೆ.

ಫ್ಲಿಪ್‌ಕಾರ್ಟ್‌ ದೀಪಾವಳಿ ಬಿಗ್‌ ಸೇಲ್‌

ಹೌದು, ಫ್ಲಿಪ್‌ಕಾರ್ಟ್‌ ದೀಪಾವಳಿ ಬಿಗ್‌ ಸೇಲ್‌ ಅನ್ನು ಆಯೋಜಿಸಿದೆ. ಫ್ಲಿಪ್‌ಕಾರ್ಟ್ ಪ್ಲಸ್ ಸದಸ್ಯರು ದೀಪಾವಳಿ ಬಿಗ್‌ ಸೇಲ್‌ಗೆ ಇಂದು ಮಧ್ಯರಾತ್ರಿಯಿಂದಲೇ ಪ್ರವೇಶವನ್ನು ಪಡೆಯಲಿದ್ದಾರೆ. ಇನ್ನು ಈ ಸೇಲ್‌ನಲ್ಲಿ ಗ್ಯಾಜೆಟ್‌ಗಳು ಮತ್ತು ಇತರ ಉಪಕರಣಗಳ ಮೇಲೆ ಬಿಗ್‌ಡೀಲ್‌ ಮತ್ತು ಡಿಸ್ಕೌಂಟ್‌ ಅನ್ನು ಪಡೆಯಬಹುದಾಗಿದೆ. ಫ್ಲಿಪ್‌ಕಾರ್ಟ್‌ ಬಿಗ್ ಬಿಲಿಯನ್ ಡೇಸ್ ಸೇಲ್‌‌ ಆಫರ್‌ ಮಿಸ್‌ ಮಾಡಿಕೊಂಡವರಿಗೆ ಈ ಸೇಲ್‌ ಮತ್ತೊಂದು ಅವಕಾಶವಾಗಿದೆ. ಹಾಗಾದ್ರೆ ಈ ಸೇಲ್‌ನಲ್ಲಿ ಏನೆಲ್ಲಾ ಡಿಸ್ಕೌಂಟ್‌ ದೊರೆಯಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಇನ್ಫಿನಿಕ್ಸ್ ಹಾಟ್ 10 ಪ್ಲೇ

ಇನ್ಫಿನಿಕ್ಸ್ ಹಾಟ್ 10 ಪ್ಲೇ

ಇನ್ಫಿನಿಕ್ಸ್ ಹಾಟ್ 10 ಪ್ಲೇ ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾಟ್‌ ದೀಪಾವಳಿ ಬಿಗ್‌ ಸೇಲ್‌ನಲ್ಲಿ ಬಿಗ್‌ ಡಿಸ್ಕೌಂಟ್‌ ಪಡೆದಿದೆ. 8,299ರೂ ಬೆಲೆಗೆ ಬಿಡುಗಡೆ ಆಗಿದದ್ದ ಈ ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ ಸೇಲ್‌ನಲ್ಲಿ 7,799ರೂ.ಬೆಲೆಗೆ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನಿನ 4GB RAM ಮತ್ತು 64 GB ರೂಪಾಂತರವು 8,499ರೂ.ಗಳಿಗೆ ಲಭ್ಯವಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.82-ಇಂಚಿನ HD+ ಡ್ರಾಪ್ ನಾಚ್ ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾ ಟೆಕ್‌ ಹಿಲಿಯೋ G35 ಪ್ರೊಸೆಸರ್‌ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ 13MP AI ಡ್ಯುಯಲ್ ರಿಯರ್‌ ಕ್ಯಾಮೆರಾ ಹೊಂದಿದೆ. ಜೊತೆಗೆ ಕ್ವಾಡ್-ಎಲ್ಇಡಿ ಫ್ಲ್ಯಾಷ್ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6000mAh ಬ್ಯಾಟರಿಯನ್ನು ಹೊಂದಿದೆ.

ಇನ್ಫಿನಿಕ್ಸ್ HOT 10S

ಇನ್ಫಿನಿಕ್ಸ್ HOT 10S

ಇನ್ಫಿನಿಕ್ಸ್ HOT 10S ಸ್ಮಾರ್ಟ್‌ಫೋನ್‌ ದೀಪಾವಳಿ ಬಿಗ್‌ ಸೇಲ್‌ನಲ್ಲಿ 4GB ರೂಪಾಂತರಕ್ಕೆ 9,499ರೂ.ಬೆಲೆ ನಿಗಧಿಪಡಿಸಲಾಗಿದೆ. ಜೊತೆಗೆ 6+64 GB ರೂಪಾಂತರವು 10,499ರೂ.ಬೆಲೆಗೆ ಸೇಲ್‌ ಆಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.82 ಇಂಚಿನ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಇದು ಮಿಡಿಯಾ ಟೆಕ್‌ ಹಿಲಿಯೋ G85 SoC ಪ್ರೊಸೆಸರ್‌ ಅನ್ನು ಒಳಗೊಂಡಿದ್ದು, ಆಂಡ್ರಾಯ್ಡ್ 11 ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48MP ಸೆನ್ಸಾರ್‌ ಹೊಂದಿದೆ. ಇದಲ್ಲದೆ 8MP AI ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ 6000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಇನ್ಫಿನಿಕ್ಸ್ ಸ್ಮಾರ್ಟ್ 5ಎ

ಇನ್ಫಿನಿಕ್ಸ್ ಸ್ಮಾರ್ಟ್ 5ಎ

ಇನ್ಫಿನಿಕ್ಸ್ ಸ್ಮಾರ್ಟ್ 5ಎ ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ ದೀಪಾವಳಿ ಬಿಗ್‌ ಸೇಲ್‌ನಲ್ಲಿ 6,499ರೂ.ಗಳಿಗೆ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.52 ಇಂಚಿನ ಹೆಚ್‌ಡಿ ಪ್ಲಸ್‌ IPS LCD ಡಿಸ್‌ಪ್ಲೇಯನ್ನು ಪಡೆದಿದೆ. ಇದು ಮೀಡಿಯಾ ಟೆಕ್ ಹೆಲಿಯೊ A20 SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 ಗೋ ಓಎಸ್‌ ಸಪೋರ್ಟ್‌ ನೀಡಲಾಗಿದೆ. ಹಾಗೆಯೇ ಈ ಫೋನ್ 2GB RAM ಮತ್ತು 32GB ಇಂಟರ್ನಲ್ ಸ್ಟೋರೇಜ್ ಆಯ್ಕೆಯನ್ನು ಹೊಂದಿದೆ. ಅದರೊಂದಿಗೆ ಎಸ್‌ಡಿ ಕಾರ್ಡ್‌ ಮೂಲಕ 256GB ವರೆಗೆ ಬಾಹ್ಯ ಮೆಮೊರಿ ವಿಸ್ತರಿಸುವ ಅವಕಾಶ ಪಡೆದಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯೆಲ್‌ ರಿಯರ್‌ ಕ್ಯಾಮೆರಾ ಸೆಟಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 8 ಮೆಗಾ ಪಿಕ್ಸಲ್ ಸೆನ್ಸಾರ್‌ ಹೊಂದಿದೆ. ಇದು 5000 mAh ಬ್ಯಾಟರಿ ಸಾಮರ್ಥ್ಯದೊಂದಿಗೆ ಬರುತ್ತದೆ.

ಫ್ಲಿಪ್‌ಕಾರ್ಟ್‌

ಇದಲ್ಲದೆ ಫ್ಲಿಪ್‌ಕಾರ್ಟ್‌ ದೀಪಾವಳಿ ಬಿಗ್‌ ಸೇಲ್‌ನಲ್ಲಿ ಪೊಕೊ F3 GTಅನ್ನು 25,999ರೂ ಬೆಲೆಗೆ ಲಭ್ಯವಾಗಲಿದೆ. ಪೊಕೊ X3 Pro ಮೂಲ ರೂಪಾಂತರಕ್ಕೆ ರೂ .16,999 ಕ್ಕೆ ಲಭ್ಯವಿರುತ್ತದೆ. ರಿಯಲ್‌ಮಿ ಜಿಟಿ ಮಾಸ್ಟರ್ ಆವೃತ್ತಿ 21,999 ರೂಗಳಲ್ಲಿ ಲಭ್ಯವಿದೆ. ಹಾಗೆಯೇ ಮೊಟೊ G40 ಫ್ಯೂಷನ್‌ 12,999ರೂ. ಬೆಲೆಗೆ ಲಭ್ಯವಿದೆ. ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಫ್ 42 5ಜಿ ಅನ್ನು 17,999 ರೂಗಳ ರಿಯಾಯಿತಿ ದರದಲ್ಲಿ ಲಭ್ಯವಿರುತ್ತದೆ.

Most Read Articles
Best Mobiles in India

English summary
Flipkart Big Diwali sale will be offering scores of deals on smartphones.to know more visit to kannada.gizbot.com.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X