ಫ್ಲಿಪ್‌ಕಾರ್ಟ್‌ ಸೇಲ್‌: ಡಿಸ್ಕೌಂಟ್‌ನಲ್ಲಿ ಐಫೋನ್‌ ಖರೀದಿಗೆ ಸುಸಮಯ!

|

ಫ್ಲಿಪ್‌ಕಾರ್ಟ್‌ ಇ-ಕಾಮರ್ಸ್‌ ತಾಣವು ಒಂದಿಲ್ಲೊಂದು ರಿಯಾಯಿತಿ ಕೊಡುಗೆಗಳನ್ನು ನೀಡುತ್ತ ಸಾಗಿದೆ. ಮುಖ್ಯವಾಗಿ ಎಲೆಕ್ಟ್ರಾನಿಕ್ ಹಾಗೂ ಗ್ಯಾಡ್ಜೆಟ್ಸ್‌ಗಳಿಗೆ ವಿಶೇಷ ಡಿಸ್ಕೌಂಟ್‌ ಸೇಲ್‌ ಅನ್ನು ಆಯೋಜಿಸಿ ಗಮನ ಸೆಳೆದಿದೆ. ಫ್ಲಿಪ್‌ಕಾರ್ಟ್‌ ಇದೀಗ ಫ್ಲಿಪ್‌ಕಾರ್ಟ್‌ ಬಿಗ್ ಸೇವಿಂಗ್ ಡೇಸ್ 2021 ಸೇಲ್‌ ಅನ್ನು ಆಯೋಜಿಸಿದೆ. ಫ್ಲಿಪ್‌ಕಾರ್ಟ್‌ ಪ್ಲಸ್‌ ಸದಸ್ಯರಿಗೆ ಈ ಸೇಲ್‌ ಈಗ ಚಾಲ್ತಿ ಇದೆ. ಇನ್ನು ಇತರರಿಗೆ ಇಂದು ರಾತ್ರಿಯಿಂದ ಪ್ರಾರಂಭವಾಗಲಿದೆ.

ಫ್ಲಿಪ್‌ಕಾರ್ಟ್‌ ಸೇಲ್‌: ಡಿಸ್ಕೌಂಟ್‌ನಲ್ಲಿ ಐಫೋನ್‌ ಖರೀದಿಗೆ ಸುಸಮಯ!

ಹೌದು, ಫ್ಲಿಪ್‌ಕಾರ್ಟ್‌ ಆಯೋಜಿಸಿರುವ ಬಿಗ್ ಸೇವಿಂಗ್ ಡೇಸ್ 2021 ಸೇಲ್‌ ಇದೇ ಜುಲೈ 29ರ ವರೆಗೂ ಚಾಲ್ತಿ ಇರಲಿದೆ. ಈ ಬಿಗ್ ಸೇವಿಂಗ್ ಡೇಸ್ 2021 ಮಾರಾಟವು ಜನಪ್ರಿಯ ಮೊಬೈಲ್ ಫೋನ್‌ಗಳು, ಲ್ಯಾಪ್‌ಟಾಪ್‌ಗಳು, ಸ್ಪೀಕರ್‌ಗಳು, ಸ್ಮಾರ್ಟ್‌ವಾಚ್‌ಗಳು ಮತ್ತು ಇತರ ಎಲೆಕ್ಟ್ರಾನಿಕ್ಸ್‌ಗಳಿಗೆ ದೊಡ್ಡ ರಿಯಾಯಿತಿಯನ್ನು ನೀಡುತ್ತದೆ. ಮುಖ್ಯವಾಗಿ ಈ ಸೇಲ್‌ನಲ್ಲಿ ಆಯ್ದ ಐಫೋನ್‌ಗಳಿಗೆ ಭರ್ಜರಿ ಡಿಸ್ಕೌಂಟ್‌ ದೊರೆಯಲಿದೆ. ಹಾಗಾದರೇ ಫ್ಲಿಪ್‌ಕಾರ್ಟ್‌ನ ಬಿಗ್ ಸೇವಿಂಗ್ ಡೇಸ್‌ ಸೇಲ್‌ನಲ್ಲಿ ರಿಯಾಯಿತಿಯಲ್ಲಿ ಲಭ್ಯವಿರುವ ಐಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಆಪಲ್ ಐಫೋನ್ 12 ಮಿನಿ
ಫ್ಲಿಪ್‌ಕಾರ್ಟ್‌ನ ಬಿಗ್ ಸೇವಿಂಗ್ ಡೇಸ್‌ ಸೇಲ್ ನಲ್ಲಿ ಆಪಲ್‌ನ ಐಫೋನ್ 12 ಮಿನಿ 64GB ವೇರಿಯಂಟ್‌ 57,999ರೂ.ಗಳಿಗೆ (MRP 69,900ರೂ.) ಸಿಗಲಿದೆ. ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ ಬಳಕೆದಾರರು ಹೆಚ್ಚುವರಿ 10 ಪ್ರತಿಶತದಷ್ಟು ರಿಯಾಯಿತಿ ಪಡೆಯಬಹುದು. ಇನ್ನು ಐಫೋನ್ 12 ಮಿನಿ 5.4-ಇಂಚಿನ ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇಯು ಸೂಪರ್ ರೆಟಿನಾ XRD ಡಿಸ್‌ಪ್ಲೇ ಮಾದರಿಯಲ್ಲಿದೆ. ಇದು ಸಹ A14 ಬಯೋನಿಕ್ ಎಸ್‌ಒಸಿ ಹಾಗೂ, 5G ಸಪೋರ್ಟ್ ಪಡೆದಿದೆ. ಐಫೋನ್ 12 ಮಿನಿ ಬಹುತೇಕ ಐಫೋನ್ 12 ಫೀಚರ್ಸ್‌ಗಳನ್ನು ಹೊಂದಿದ್ದು, ಗಾತ್ರದಲ್ಲಿ ಮಾತ್ರ ವ್ಯತ್ಯಾಸವಿದೆ.

ಆಪಲ್ ಐಫೋನ್ 12
ಫ್ಲಿಪ್‌ಕಾರ್ಟ್‌ನ ಬಿಗ್ ಸೇವಿಂಗ್ ಡೇಸ್‌ ಸೇಲ್ ನಲ್ಲಿ ಆಪಲ್‌ನ ಐಫೋನ್ 12 64GB ವೇರಿಯಂಟ್‌ 67,999 ರೂ.ಗಳಿಗೆ (MRP 79,900ರೂ). ನೀವು ಹಳೆಯ ಸ್ಮಾರ್ಟ್‌ಫೋನ್ ಅನ್ನು ವಿನಿಮಯ ಮಾಡಿಕೊಳ್ಳಬಹುದು. ಹಾಗೂ ಐಸಿಐಸಿಐ ಬ್ಯಾಂಕ್ ಕಾರ್ಡುದಾರರು 10 ಪ್ರತಿಶತ ಹೆಚ್ಚುವರಿ ರಿಯಾಯಿತಿ ಪಡೆಯಬಹುದು. ಇನ್ನು ಐಫೋನ್ 12 OLED ಡಿಸ್‌ಪ್ಲೇ ಹೊಂದಿದ್ದು, A14 ಬಯೋನಿಕ್ ಸೋಕ್ ಕ್ವಾಡ್‌ ಕೋರ್ ಪ್ರೊಸೆಸರ್‌ ಅನ್ನು ಹೊಂದಿದೆ. 5G ಅನ್ನು ಬೆಂಬಲಿಸುತ್ತದೆ. ಐಫೋನ್ 12 ಫೋನ್ ಎರಡು ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾಪಿಕ್ಸೆಲ್ ವೈಡ್-ಆಂಗಲ್ ಸಂವೇದಕಗಳನ್ನು ಹೊಂದಿವೆ. ನೈಟ್‌ ಮೋಡ್‌ ಆಯ್ಕೆ ಇದ್ದು ಕಡಿಮೆ ಬೆಳಕಿನಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ.

Best Mobiles in India

English summary
Flipkart Big Saving Days 2021 Sale: Best Offers On Apple IPhones.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X