ಫ್ಲಿಪ್‌ಕಾರ್ಟ್‌ ಬಿಗ್‌ ಸೇವಿಂಗ್‌ ಡೇಸ್‌ ಸೇಲ್‌ನಲ್ಲಿ ಸಿಗಲಿದೆ ವಿಶೇಷ ಡಿಸ್ಕೌಂಟ್‌!

|

ಜನಪ್ರಿಯ ಇ-ಕಾಮರ್ಸ್‌ ಸೈಟ್‌ ಫ್ಲಿಪ್‌ಕಾರ್ಟ್‌ ಆನ್‌ಲೈನ್‌ ಶಾಪಿಂಗ್‌ ಪ್ರಿಯರ ನೆಚ್ಚಿನ ತಾಣಗಳಲ್ಲಿ ಒಂದಾಗಿದೆ. ಆನ್‌ಲೈನ್‌ ಶಾಪಿಂಗ್‌ ಮಾಡೋರಿಗಾಗಿ ವಿಶೇಷ ಡಿಸ್ಕೌಂಟ್‌ ಮೇಳಗಳನ್ನು ಆಯೋಜಿಸುತ್ತಲೇ ಬಂದಿದೆ. ಸದ್ಯ ಇದೀಗ ಭಾರತದಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ಫ್ಲಿಪ್‌ಕಾರ್ಟ್‌ ಬಿಗ್‌ ಸೇವಿಂಗ್‌ ಡೇಸ್‌ ಸೇಲ್‌ ಮೂಲಕ ಮರಳಿದೆ. ಇನ್ನು ಬಿಗ್‌ ಸೇವಿಂಗ್‌ ಡೇಸ್‌ 2022 ಸೇಲ್‌ ಇಂದಿನಿಂದ (ಜ.17) ಲೈವ್‌ ಆಗಿದ್ದು, ಈ ಸೇಲ್‌ ಜನವರಿ 22ರ ತನಕ ಮುಂದುವರೆಯಲಿದೆ. ಆರು ದಿನಗಳ ಕಾಲ ನಡೆಯಲಿರುವ ಈ ಸೇಲ್‌ನಲ್ಲಿ ಮೊಬೈಲ್ ಫೋನ್‌ಗಳು, ಎಲೆಕ್ಟ್ರಾನಿಕ್ಸ್, ಗೃಹೋಪಯೋಗಿ ವಸ್ತುಗಳ ಮೇಲೆ ವಿಶೇಷ ಡಿಸ್ಕೌಂಟ್‌ ಅನ್ನು ಪಡೆಯಬಹುದಾಗಿದೆ.

ಫ್ಲಿಪ್‌ಕಾರ್ಟ್‌

ಹೌದು, ಫ್ಲಿಪ್‌ಕಾರ್ಟ್‌ ಬಿಗ್‌ ಸೇವಿಂಗ್‌ ಡೇಸ್‌ ಸೇಲ್‌ನಲ್ಲಿ ವಿಶೇಷ ಆಫರ್‌ಗಳನ್ನು ನೀಡಲಾಗ್ತಿದೆ. ಐಸಿಐಸಿಐ ಬ್ಯಾಂಕ್‌ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ ಬಳಕೆದಾರು ಈ ಸೇಲ್‌ನಲ್ಲಿ 10% ರಿಯಾಯಿತಿ ಪಡೆಯಬಹುದಾಗಿದೆ. ಇದಕ್ಕಾಗಿ ಐಸಿಐಸಿಐ ಬ್ಯಾಂಕ್‌ ಜೊತೆಗೆ ಫ್ಲಿಪ್‌ಕಾರ್ಟ್‌ ವಿಶೇಷ ಒಪ್ಪಂದವನ್ನು ಕೂಡ ಮಾಡಿಕೊಂಡಿದೆ. ಹಾಗಾದ್ರೆ ಫ್ಲಿಪ್‌ಕಾರ್ಟ್‌ ಬಿಗ್ ಸೇವಿಂಗ್ ಡೇಸ್ 2022 ಸೇಲ್‌ನಲ್ಲಿ ನೀವು ಡಿಸ್ಕೌಂಟ್‌ನಲ್ಲಿ ಖರೀದಿಸಬಹುದಾದ ಗ್ಯಾಜೆಟ್ಸ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಆಪಲ್‌ ಐಫೋನ್‌ 12 ಮಿನಿ

ಆಪಲ್‌ ಐಫೋನ್‌ 12 ಮಿನಿ

ಆಪಲ್‌ ಐಫೋನ್‌ 12 ಮಿನಿ ಫ್ಲಿಪ್‌ಕಾರ್ಟ್‌ ಬಿಗ್‌ ಸೇವಿಂಗ್‌ ಡೇಸ್‌ ಸೇಲ್‌ನಲ್ಲಿ ರಿಯಾಯಿತಿ ದರದಲ್ಲಿ ಮಾರಾಟವಾಗುತ್ತಿದೆ. ಈ ಸೇಲ್‌ನಲ್ಲಿ ಆಪಲ್‌ 12 ಮಿನಿ ಅನ್ನು 41,999ರೂ.ಗಳಿಗೆ ಖರೀದಿಸಬಹುದಾಗಿದೆ. ಇನ್ನು ಐಫೋನ್ 12 ಮಿನಿ ಫೋನ್ 5.4 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇಯು ಸೂಪರ್ ರೆಟಿನಾ XRD ಡಿಸ್‌ಪ್ಲೇ ಮಾದರಿಯಲ್ಲಿದೆ. ಹಾಗೆಯೇ ಐಫೋನ್ 12 ಮಿನಿ ಡ್ಯುಯೆಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಪಡೆದಿದ್ದು,12 ಮೆಗಾಪಿಕ್ಸೆಲ್‌ ಸೆನ್ಸಾರ್‌ ಕ್ಯಾಮೆರಾ ಹೊಂದಿದೆ. ಇದು ಕಡಿಮೆ ಬೆಳಕಿನಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ. ಇದರೊಂದಿಗೆ ಐಫೋನ್ 12 ಮಿನಿ ಫೋನ್ A14 ಬಯೋನಿಕ್ ಎಸ್‌ಒಸಿ ಹಾಗೂ, 5G ಸಪೋರ್ಟ್ ಪಡೆದಿದೆ. ಈ ಫೋನ್ ನೀಲಿ, ಹಸಿರು, ಕಪ್ಪು, ಬಿಳಿ ಮತ್ತು ಕೆಂಪು ಬಣ್ಣಗಳ ಆಯ್ಕೆಯನ್ನು ಪಡೆದಿದೆ.

ರಿಯಲ್‌ಮಿ GT ಮಾಸ್ಟರ್ ಆವೃತ್ತಿ

ರಿಯಲ್‌ಮಿ GT ಮಾಸ್ಟರ್ ಆವೃತ್ತಿ

ಫ್ಲಿಪ್‌ಕಾರ್ಟ್‌ ಬಿಗ್‌ ಸೇವಿಂಗ್‌ ಡೇಸ್‌ ಸೇಲ್‌ನಲ್ಲಿ ರಿಯಲ್‌ಮಿ GT ಮಾಸ್ಟರ್‌ ಎಡಿಷನ್‌ ಸ್ಮಾರ್ಟ್‌ಫೋನ್‌ ವಿಶೇಷ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ ಸೇಲ್‌ನಲ್ಲಿ 25,999ರೂ.ಗಳಿಗೆ ಖರೀದಿಸಬಹುದಾಗಿದೆ. ಅಲ್ಲದೆ ನೀವು ಯಾವುದೇ ಡೆಬಿಟ್ ಅಥವಾ ಕ್ರೆಡಿಟ್ ಕಾರ್ಡ್ ಬಳಸಿ ಆನ್‌ಲೈನ್‌ನಲ್ಲಿ ಪಾವತಿಸಿದಾಗ 4,000.ರೂ.ಗಳ ರಿಯಾಯಿತಿ ಕೂಡ ದೊರೆಯಲಿದೆ. ಇದರಿಂದ ಈ ಸ್ಮಾರ್ಟ್‌ಫೋನ್‌ 21,999.ರೂ.ಗಳಿಗೆ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.43 ಇಂಚಿನ ಫುಲ್‌ ಹೆಚ್‌ಡಿ + ಸೂಪರ್ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಈ ಫೋನ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 778 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 4,300mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ.

ರಿಯಲ್‌ಮಿ C11

ರಿಯಲ್‌ಮಿ C11

ರಿಯಲ್‌ಮಿ C11 ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ 2022 ಸೇಲ್‌ನಲ್ಲಿ ಕೇವಲ 7,499ರೂ.ಗಳಿಗೆ ಲಭ್ಯವಾಗಲಿದೆ. ನಿಮ್ಮ ಹಳೆಯ ಸ್ಮಾರ್ಟ್‌ಫೋನ್ ಅನ್ನು ಎಕ್ಸ್‌ಚೇಂಜ್‌ ಮಾಡಿದರೆ ಈ ಫೋನ್‌ 6,950.ರೂ.ಗಳಿಗೆ ಲಭ್ಯವಾಗಲಿದೆ. ಇದಲ್ಲದೆ ICICI ಬ್ಯಾಂಕ್ ಕಾರ್ಡ್‌ ಮೂಲಕ ಫೋನ್‌ ಖರೀದಿಸಿದರೆ ಹೆಚ್ಚುವರಿ 10% ಪ್ರತಿಶತ ಹೆಚ್ಚುವರಿ ತ್ವರಿತ ರಿಯಾಯಿತಿಯನ್ನು ಪಡೆಯಬಹುದು. ಇನ್ನು ಈ ಸ್ಮಾರ್ಟ್‌ಫೋನ್‌ 6.5-ಇಂಚಿನ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ SoC ಪ್ರೊಸೆಸರ್‌ ಸಾಮರ್ಥ್ಯ ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 11 ರಿಯಲ್‌ಮಿ ಯುಐ 2.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯ ಬ್ಯಾಟರಿಯನ್ನು ಹೊಂದಿದೆ.

ಅಸುಸ್‌ ವಿವೋಬುಕ್‌ 15

ಅಸುಸ್‌ ವಿವೋಬುಕ್‌ 15

ಇನ್ನು ಫ್ಲಿಪ್‌ಕಾರ್ಟ್‌ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್‌ ಮಾತ್ರವಲ್ಲದೆ ಲ್ಯಾಪ್‌ಟಾಪ್‌ಗಳ ಮೇಲೂ ವಿಶೇಷ ರಿಯಾಯಿತಿ ದೊರೆಯಲಿದೆ. ಇದರಲ್ಲಿ ಆಸುಸ್‌ ನ ವಿವೋಬುಕ್‌ 15 ಲ್ಯಾಪ್‌ಟಾಪ್‌ ಡಿಸ್ಕೌಂಟ್‌ ಪಡೆದಿದ್ದು, ಕೇವಲ 53,890ರೂ.ಗಳಿಗೆ ಲಭ್ಯವಾಗಲಿದೆ. ಇನ್ನು ಈ ಲ್ಯಾಪ್‌ಟಾಪ್‌ 15.6 ಇಂಚಿನ ಡಿಸ್‌ಪ್ಲೇ ಹೊಂದಿದ್ದು, 11ನೇ ತಲೆಮಾರಿ ಇಂಟೆಲ್‌ ಕೋರ್‌ i5 ಪ್ರೊಸೆಸರ್‌ ಹೊಂದಿದೆ. ಜೊತೆಗೆ 8GB RAM ಮತ್ತು 512GB ಇಂಟರ್‌ ಸ್ಟೋರೇಜ್‌ ಒಳಗೊಂಡಿದೆ.

Most Read Articles
Best Mobiles in India

English summary
Flipkart Big Saving Days 2022 sale is back this week in a Republic Day special avatar. The six-day sale brings hundreds of great deals on mobile phones.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X