ಫ್ಲಿಪ್‌ಕಾರ್ಟ್ ಸೇಲ್: ವಿವೋ T2 ಪ್ರೊ 5G ಮೊಬೈಲ್‌ಗೆ ಬಿಗ್ ಡಿಸ್ಕೌಂಟ್!
ಲೀಡಿಂಗ್ ಇ ಕಾಮರ್ಸ್ ತಾಣವಾಗಿ ಗುರುತಿಸಿಕೊಂಡಿರುವ ಫ್ಲಿಪ್‌ಕಾರ್ಟ್ ಸಂಸ್ಥೆಯು ಇದೀಗ ತನ್ನ ಬಿಗ್ ಸೇವಿಂಗ್ ಡೇಸ್ (Big Saving Days) ಮಾರಾಟ ಮೇಳವನ್ನು ಪ್ರಾರಂಭ ಮಾಡಿದ್ದು, ಆನ್‌ಲೈನ್ ಶಾಪಿಂಗ್ ಪ್ರಿಯರಿಗೆ ಭರ್ಜರಿ ಖುಷಿ ನೀಡಿದೆ. ಈ ಮೇಳದಲ್ಲಿ ವಿವೋ ಸಂಸ್ಥೆಯು ವಿವೋ T2 ಪ್ರೊ 5G ಫೋನ್ ಸಖತ್ ಡಿಸ್ಕೌಂಟ್ ಬೆಲೆಯಲ್ಲಿ ಖರೀದಿಗೆ ಲಭ್ಯ ಆಗಲಿದೆ.
ಹೌದು, ದೈತ್ಯ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಆಯೋಜಿಸಿದೆ. ಈ ಮಾರಾಟ ಮೇಳವು ಇಂದು ಮಧ್ಯಾಹ್ನ 12 ರಿಂದ ಪ್ರಾರಂಭವಾಗಲಿದೆ. ಮೇಳದಲ್ಲಿ ವಿವೋ T2 ಪ್ರೊ 5G (vivo T2 Pro 5G) ಮೊಬೈಲ್ ಶೇ. 10% ರಷ್ಟು ನೇರ ರಿಯಾಯಿತಿ ಪಡೆದುಕೊಂಡಿದೆ. ಈ ಫೋನಿನ 8 GB RAM + 256 GB ವೇರಿಯಂಟ್ 24,999ರೂ. ಗಳ ಆಫರ್ ಬೆಲೆ ಲಭ್ಯ. ಅಲ್ಲದೇ ಆಯ್ದ ಬ್ಯಾಂಕ್‌ನಿಂದ ಇನ್‌ಸ್ಟಂಟ್ ಡಿಸ್ಕೌಂಟ್ ಸಹ ಲಭ್ಯ.

ಅಂದಹಾಗೆ ವಿವೋದ ಈ ಮೊಬೈಲ್ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ನ ಪ್ರಾಥಮಿಕ ಕ್ಯಾಮೆರಾ ಒಳಗೊಂಡಿದ್ದು, ಜೊತೆಗೆ 4,600 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪಡೆದಿದೆ. ಹಾಗೆಯೇ ಮೀಡಿಯಾ ಟೆಕ್ ಡೈಮೆನ್ಸಿಟಿ 7200 ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸಲಿದೆ. ಇನ್ನುಳಿದಂತೆ ವಿವೋ T2 ಪ್ರೊ ಮೊಬೈಲ್‌ನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ವಿವೋ T2 ಪ್ರೊ 5G ಫೀಚರ್ಸ್ ಮಾಹಿತಿ
ವಿವೋ T2 ಪ್ರೊ 5G ಮೊಬೈಲ್ 6.78 ಇಂಚಿನ ಫುಲ್ ಹೆಚ್‌ಡಿ+ ಅಮೋಲೆಡ್ ಮಾದರಿಯ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, 2400 × 1080 ಪಿಕ್ಸಲ್ ರೆಸಲ್ಯೂಶನ್ ಆಯ್ಕೆ ಹೊಂದಿದೆ. ಇದರೊಂದಿಗೆ 120Hz ರಿಫ್ರೆಶ್ ರೇಟ್ ಮತ್ತು 1300 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಆಯ್ಕೆ ಅನ್ನು ಇದು ಪಡೆದುಕೊಂಡಿದ್ದು, ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 388 ppi ಆಗಿದೆ.
ವಿವೋ T2 ಪ್ರೊ 5G ಮೊಬೈಲ್ ಪ್ರೊಸೆಸರ್ ಮೀಡಿಯಾ ಟೆಕ್ ಡೈಮೆನ್ಸಿಟಿ 7200 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಇದರ ಜೊತೆಗೆ ಆಂಡ್ರಾಯ್ಡ್ 13 ಅನ್ನು ಆಧರಿಸಿ ಫನ್‌ಟಚ್ ಓಎಸ್ 13 ಸಪೋರ್ಟ್ ಕೂಡಾ ಹೊಂದಿದೆ. ಇದರೊಂದಿಗೆ ಈ ಫೋನ್ 8GB + 128GB ಮತ್ತು 8GB + 256 GB ಸ್ಟೋರೇಜ್‌ನ ವೇರಿಯಂಟ್ ಆಯ್ಕೆಗಳಲ್ಲಿ ಲಭ್ಯ ಇದೆ.
ವಿವೋ T2 ಪ್ರೊ 5G ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಕಾಣಬಹುದಾಗಿದ್ದು, ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. 2 ಮೆಗಾ ಪಿಕ್ಸೆಲ್ ಸೆನ್ಸಾರ್‌ನಲ್ಲಿ ದ್ವಿತೀಯ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದೆ. ಇದರೊಂದಿಗೆ ಮುಂಭಾಗದಲ್ಲಿ ಸೆಲ್ಫಿಗಾಗಿ ಈ ಮೊಬೈಲ್ 16 ಮೆಗಾ ಪಿಕ್ಸೆಲ್ ಕ್ಯಾಮೆರಾ ಆಯ್ಕೆ ಒದಗಿಸಲಾಗಿದೆ.
ವಿವೋ T2 ಪ್ರೊ 5G ಮೊಬೈಲ್ 4,600 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಅನ್ನು ಪಡೆದಿದ್ದು, 66W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಪಡೆದುಕೊಂಡಿದೆ. ಹಾಗೆಯೇ ಈ ಫೋನ್ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್ ಆಯ್ಕೆ ಸಹ ಒಳಗೊಂಡಿದ್ದು, ಬಳಕೆದಾರರಿಗೆ ವಿಶೇಷ ಭದ್ರತಾ ಫೀಚರ್ಸ್ ಅನ್ನು ಒದಗಿಸಲಿದೆ.
ವಿವೋ ಸಂಸ್ಥೆಯ ವಿವೋ T2 ಪ್ರೊ 5G ಮೊಬೈಲ್ 8GB RAM + 128GB ಸ್ಟೋರೇಜ್ ಹಾಗೂ 8GB RAM + 256GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಖರೀದಿದಾರರು ಇದನ್ನು ಗೋಲ್ಡ್ ಹಾಗೂ ಬ್ಲ್ಯಾಕ್ ಬಣ್ಣಗಳ ಆಯ್ಕೆಯಲ್ಲಿ ಖರೀದಿ ಮಾಡಬಹುದಾಗಿದೆ.


Click it and Unblock the Notifications








