ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್: ಈ ಮೂರು ಪ್ರೊ ಫೋನ್‌ಗಳಿಗೆ ಸಖತ್ ಡಿಸ್ಕೌಂಟ್!
ಇ ಕಾಮರ್ಸ್ ದೈತ್ಯ ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್ ಇದೀಗ ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ (Flipkart Big Saving Days) ಸೇಲ್ ಮೇಳವನ್ನು ಆಯೋಜಿಸಿದೆ. ಈ ಸೇಲ್ ಇದೇ ಮೇ 9 ರ ವರೆಗೂ ಚಾಲ್ತಿ ಇರಲಿದೆ. ಈ ಮಾರಾಟ ಮೇಳದಲ್ಲಿ ಆಯ್ದ ಸ್ಮಾರ್ಟ್‌ಫೋನ್‌ಗಳು ಆಕರ್ಷಕ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿವೆ. ಈ ಮೇಳವು ಮೊಬೈಲ್ ಪ್ರಿಯರಿಗೆ ಸಂತಸ ಎನಿಸಿದೆ.
ಹೌದು, ಫ್ಲಿಪ್‌ಕಾರ್ಟ್ ತಾಣದಲ್ಲಿ ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಲೈವ್ ಇದ್ದು ಈ ಸೇಲ್‌ನಲ್ಲಿ ಜನಪ್ರಿಯ ಬ್ರ್ಯಾಂಡ್‌ಗಳ ಕೆಲವು ಪ್ರೊ ಮಾದರಿಯ ಫೋನ್‌ಗಳು ಸಖತ್ ಡಿಸ್ಕೌಂಟ್ ಪಡೆದುಕೊಂಡಿವೆ. ಅವುಗಳಲ್ಲಿ ಮೊಟೊ, ರಿಯಲ್‌ಮಿ, ರೆಡ್ಮಿ, ಪೊಕೊ ಹಾಗೂ ಇನ್ಫಿನಿಕ್ಸ್ ಸಂಸ್ಥೆಯ ಫೋನ್‌ಗಳಯ ಸೇರಿವೆ. ಹಾಗಾದರೇ ಭರ್ಜರಿ ರಿಯಾಯಿತಿ ಪಡೆದಿರುವ 5 ಪ್ರೊ ಮಾದರಿಯ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಮೊಟೊರೊಲಾ ಎಡ್ಜ್ 50 ಪ್ರೊ ಫೋನ್
ಮೊಟೊರೊಲಾ ಎಡ್ಜ್ 50 ಪ್ರೊ ಫೋನ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಈ ಡಿಸ್‌ಪ್ಲೇಯು 2712 × 1220 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಪೋರ್ಟ್ ಪಡೆದಿದೆ. ಹಾಗೆಯೇ ಕ್ವಾಲ್ಕಮ್ ಸ್ನಾಪ್‌ಡ್ರಾಗನ್ 7 ಜೆನ್ 3 SoC ಪ್ರೊಸೆಸರ್ ಸಾಮರ್ಥ್ಯದ ಬಲವನ್ನು ಪಡೆದಿದ್ದು, ಇದಕ್ಕೆ ಬೆಂಬಲವಾಗಿ ಆಂಡ್ರಾಯ್ಡ್ 14 ಓಎಸ್ ಪಡೆದಿದೆ.
ಅಲ್ಲದೇ ಈ ಫೋನ್ ಮೂರು ಕ್ಯಾಮೆರಾ ಸೆಟ್‌ಅಪ್ ಪಡೆದಿದೆ. ಇದರ ಜೊತೆಗೆ 4500 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿದೆ. ಇನ್ನು ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಆರಂಭಿಕ ಆಫರ್ ಬೆಲೆ 27,999 ರೂ. ಗಳು ಆಗಿದೆ.
ರಿಯಲ್‌ಮಿ P1 ಪ್ರೊ 5G ಫೋನ್
ರಿಯಲ್‌ಮಿ P1 ಪ್ರೊ 5G ಫೋನ್ 6.67 ಇಂಚಿನ ಅಮೋಲೆಡ್ ಕರ್ವ್ ಡಿಸ್‌ಪ್ಲೇ ಪಡೆದಿದ್ದು, ಇದು 120 Hz ರಿಫ್ರೆಶ್ ರೇಟ್ ಆಯ್ಕೆ ಪಡೆದಿದೆ. ಹಾಗೆಯೇ ಸ್ನಾಪ್‌ಡ್ರಾಗನ್ 6 ಜನ್ 1 ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಲಭ್ಯ.
ಇದಲ್ಲದೇ ರಿಯಲ್‌ಮಿ P1 ಪ್ರೊ ಫೋನ್ 50 ಮೆಗಾ ಪಿಕ್ಸೆಲ್ OIS ಸಕ್ರಿಯಗೊಳಿಸಿದ ಮುಖ್ಯ ಸೆನ್ಸರ್ ಅನ್ನು ಪಡೆದಿದೆ. ಜೊತೆಗೆ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಕೂಡಾ ಹೊಂದಿದೆ. ಇನ್ನು ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಆರಂಭಿಕ ಆಫರ್ ಬೆಲೆ 19,999 ರೂ. ಗಳು ಆಗಿದೆ.
ಪೊಕೊ X6 ಪ್ರೊ ಫೋನ್
ಪೊಕೊ X6 ಪ್ರೊ ಮೊಬೈಲ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಈ ಡಿಸ್‌ಪ್ಲೇ 1220 x 2712 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ. ಹಾಗೆಯೇ ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 8300 ಅಲ್ಟ್ರಾ ಪ್ರೊಸೆಸರ್ ಬಲದಲ್ಲಿ ಕೆಲಸ ನಿರ್ವಹಿಸಲಿದ್ದು, ಇದಕ್ಕೆ ಅನುಗುಣವಾಗಿ ಆಂಡ್ರಾಯ್ಡ್ 14 ಸಪೋರ್ಟ್ ಇದೆ.
ಇದರೊಂದಿಗೆ ಈ ಫೋನ್ ಟ್ರಿಪಲ್ ಕ್ಯಾಮೆರಾ ರಚನೆ ಪಡೆದಿದ್ದು, ಮೊದಲ ಕ್ಯಾಮೆರಾ 64 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿ ಇದೆ. ಇದಲ್ಲದೇ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಹೊಂದಿದೆ. ಇನ್ನು ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಆರಂಭಿಕ ಆಫರ್ ಬೆಲೆ 22,999 ರೂ. ಗಳು ಆಗಿದೆ.


Click it and Unblock the Notifications








