Just In
- 21 min ago
ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ ಸ್ಯಾಮ್ಸಂಗ್ ಗ್ಯಾಲಕ್ಸಿ S23! ಫೀಚರ್ಸ್ ನಿರೀಕ್ಷೆ ಏನು?
- 1 hr ago
ChatGPT Effect: AI ಟೂಲ್ಸ್ ಬ್ಯಾನ್ ಮಾಡಲು ಮುಂದಾದ ಬೆಂಗಳೂರಿನ ಈ ಕಾಲೇಜುಗಳು!
- 17 hrs ago
ವಾಟ್ಸಾಪ್ನ ಈ ಹೊಸ ಫೀಚರ್ಸ್ನಲ್ಲಿ ಏನೆಲ್ಲಾ ಅನುಕೂಲ ಇದೆ ಗೊತ್ತಾ!?
- 18 hrs ago
ತಿಮ್ಮಪ್ಪನ ಭಕ್ತರಿಗಾಗಿ ಹೊಸ ಆ್ಯಪ್ ಪರಿಚಯಿಸಿದ ಟಿಟಿಡಿ! ಏನೆಲ್ಲಾ ಸೇವೆಗಳು ಲಭ್ಯ!
Don't Miss
- News
ರಾಜ್ಯಕ್ಕೆ ಅಮಿತ್ ಶಾ ಆಗಮನ; ಕಿತ್ತೂರು ಕರ್ನಾಟಕದಲ್ಲಿ ಸಂಚಲನ: ಬಸವರಾಜ ಬೊಮ್ಮಾಯಿ
- Sports
ನಾವು ಆಡುವುದನ್ನು ನೋಡಲು ಜನ ಬಂದಿಲ್ಲ: ಆತನಿಗಾಗಿ ಜನ ಬಂದಿದ್ದಾರೆ ಎಂದ ನ್ಯೂಜಿಲೆಂಡ್ ಕ್ರಿಕೆಟಿಗ
- Lifestyle
ಬೆಳ್ಳಿಯ ಆಭರಣಗಳು ಹೊಳಪಿನಿಂದ ಕೂಡಿರಲು ಈ ಟ್ರಿಕ್ಸ್ ಬಳಸಿ
- Movies
ಮಂಗ್ಲಿ ಹಾಡೊಂದಕ್ಕೆ ಪಡೆಯುವ ಸಂಭಾವನೆ ಎಷ್ಟು? ಸ್ಯಾಂಡಲ್ವುಡ್ನಲ್ಲಿ ಕ್ರೇಜ್ ಹೇಗಿದೆ?
- Automobiles
ಟಾಟಾದ ಜನಪ್ರಿಯ ಕಾರುಗಳ ಬೆಲೆ ಏರಿಕೆ: ಘೋಷಣೆ
- Finance
ಹಿಂಡನ್ಬರ್ಗ್ vs ಅದಾನಿ ನಡುವೆ ಎಲ್ಐಸಿ, ಎಸ್ಬಿಐ ಉಳಿತಾಯ ರಿಸ್ಕ್ನಲ್ಲಿದೆಯೇ?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಈ ಆಫರ್ ಮುಗಿಯಲು ಇನ್ನೊಂದೇ ದಿನ ಬಾಕಿ; ಫೋನ್‌ಗಳಿಗೆ ಭಾರೀ ಡಿಸ್ಕೌಂಟ್!
ಇ ಕಾಮರ್ಸ್ ದೈತ್ಯ ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್ ಇದೀಗ ಬಿಗ್ ಸೇವಿಂಗ್ ಡೇಸ್ ಸೇಲ್ ಅನ್ನು ಆಯೋಜಿಸಿ, ಆನ್‌ಲೈನ್ ಶಾಪಿಂಗ್ ಗ್ರಾಹಕರನ್ನು ಸೆಳೆಯುತ್ತಿದೆ. ಬಿಗ್ ಸೇವಿಂಗ್ ಡೇಸ್ ಸೇಲ್ ಮೇಳವು ಸದ್ಯ ಚಾಲ್ತಿ ಇದ್ದು, ಮೊಬೈಲ್‌ಗಳು, ಲ್ಯಾಪ್‌ಟಾಪ್‌ಗಳು ಹಾಗೂ ಇತರೆ ಎಲೆಕ್ಟ್ರಿಕ್ ಉತ್ಪನ್ನಗಳ ಮೇಲೆ ಅತ್ಯುತ್ತಮ ಕೊಡುಗೆಗಳನ್ನು ತಿಳಿಸಿದೆ. ಸೇಲ್‌ನಲ್ಲಿ ಮುಖ್ಯವಾಗಿ 5G ಫೋನ್‌ಗಳು, ಅತ್ಯುತ್ತಮ ಕ್ಯಾಮೆರಾ ಫೋನ್‌ಗಳು ಹಾಗೂ ಬಜೆಟ್ ದರದ ಫೋನ್‌ಗಳಿಗೆ ರಿಯಾಯಿತಿ ಲಭ್ಯ ಮಾಡಿದೆ.

ಹೌದು, ಪ್ರಸ್ತುತ ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್ ನಲ್ಲಿ ಬಿಗ್ ಸೇವಿಂಗ್ ಡೇಸ್ 2022 ಮಾರಾಟ ಮೇಳವು ಲೈವ್ ಆಗಿದೆ. ಇದೇ ಜುಲೈ 23 ರಿಂದ ಪ್ರಾರಂಭವಾಗಿರುವ ಈ ಮಾರಾಟ ಮೇಳವು ಇದೇ ಜುಲೈ 27 ರ ವರೆಗೂ ಇರಲಿದೆ. ನೂತನವಾಗಿ 5G ಫೋನ್ ಅಥವಾ ಅತ್ಯುತ್ತಮ ಕ್ಯಾಮೆರಾ ಫೋನ್ ಖರೀದಿ ಮಾಡಬಯಸುವ ಗ್ರಾಹಕರಿಗೆ ಈ ಮಾರಾಟ ಮೇಳವುಹೆಚ್ಚು ಗಮನ ಸೆಳೆಯುತ್ತದೆ. ಹಾಗೆಯೇ ಭರ್ಜರಿ ಕೊಡುಗೆಯಲ್ಲಿ ಫೋನ್ ಖರೀದಿಸಲು ಇದು ಒಳ್ಳೆಯ ಸಮಯ ಎನ್ನಬಹುದಾಗಿದೆ.

ಮಾರಾಟದಲ್ಲಿ ಕಡಿಮೆ ಬೆಲೆಯ ಹಾಗೂ ಬಜೆಟ್ ದರದ ಫೋನ್‌ಗಳು ಮತ್ತಷ್ಟು ಡಿಸ್ಕೌಂಟ್ ಬೆಲೆಯಲ್ಲಿ ಲಭ್ಯವಾಗಲಿವೆ. ಹೀಗಾಗಿ ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್ ಆಕರ್ಷಕ ಆಗಿದೆ. ಪ್ರಮುಖ ಸ್ಮಾರ್ಟ್‌ಫೋನ್‌ಗಳು ರಿಯಾಯಿತಿ ದರದಲ್ಲಿ ಲಭ್ಯ. ಹಾಗಾದರೇ ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್‌ನಲ್ಲಿ ಭರ್ಜರಿ ಡಿಸ್ಕೌಂಟ್ ಪಡೆದ ಕ್ಯಾಮೆರಾ ಹಾಗೂ 5G ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಯೋಣ ಬನ್ನಿರಿ.

ಇನ್ಫಿನಿಕ್ಸ್ ಹಾಟ್ 12 ಪ್ಲೇ ಫೋನ್
ಇನ್ಫಿನಿಕ್ಸ್ ಹಾಟ್ 12 ಪ್ಲೇ ಫೋನ್ 1,640 x 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.82 ಇಂಚಿನ ಫುಲ್ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಮತ್ತು 180Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಒಳಗೊಂಡಿದೆ. ಆಕ್ಟಾ-ಕೋರ್ ಯೂನಿಸೋಕ್ T610 SoC ಪ್ರೊಸೆಸರ್ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ XOS 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಹೊಂದಿದೆ. ಇದಲ್ಲದೆ ಹೆಚ್ಚುವರಿ ಅಂತರ್ಗತ ಸಂಗ್ರಹಣೆಯನ್ನು ಬಳಸಿಕೊಂಡು RAM ಅನ್ನು 3GB ವರೆಗೆ ವಿಸ್ತರಿಸಬಹುದು. ಕೊಡುಗೆಯಲ್ಲಿ ಈ ಫೋನ್ 7,649ರೂ. ಗಳಿಗೆ ಲಭ್ಯ ಆಗಲಿದೆ.

ಪೊಕೊ M4 5G ಸ್ಮಾರ್ಟ್‌ಫೋನ್
ಪೊಕೊ M4 5G ಫೋನ್ ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್‌ನಲ್ಲಿ ನೀವು ಖರೀದಿಸಬಹುದಾದ ಅತ್ಯಂತ ಒಳ್ಳೆ 5G ಸ್ಮಾರ್ಟ್‌ಫೋನ್ ಆಗಿದೆ. ಇದು 6GB RAM, 50ಎಂಪಿ ಟ್ರಿಪಲ್ ಹಿಂಬದಿಯ ಕ್ಯಾಮೆರಾ, 5,000 mAh ಬ್ಯಾಟರಿ, 90Hz ಪೂರ್ಣ HD+ ಡಿಸ್ಪ್ಲೇ ಮತ್ತು ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಒಳಗೊಂಡಿದೆ. ಈ ಫೋನ್ ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್‌ನಲ್ಲಿ 9,999 ರೂ. ಗಳಿಗೆ ಖರೀದಿಗೆ ಸಿಗಲಿದೆ.

ವಿವೋ T1 5G ಸ್ಮಾರ್ಟ್‌ಫೋನ್
ವಿವೋ T1 5G ಫೋನ್ 120Hz ಪೂರ್ಣ ಹೆಚ್‌ಡಿ+ ಡಿಸ್‌ಪ್ಲೇ, ಆಕ್ಟಾ ಕೋರ್ ಕ್ವಾಲ್‌ಕಾಮ್ ಸ್ನಾಪ್‌ಡ್ರಾಗನ್ 695 5G ಪ್ರೊಸೆಸರ್ ಅನ್ನು ಹೊಂದಿದೆ. ಈ ಫೋನ್ 50ಎಂಪಿ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ನೊಂದಿಗೆ, ಅತ್ಯುತ್ತಮ ಸೆಲ್ಫಿ ಕ್ಯಾಮೆರಾ ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ಗಳು ಮತ್ತು 5,000 mAh ಬ್ಯಾಟರಿ, 8GB RAM + 4GB ವರ್ಚುವಲ್ RAM ಮತ್ತು ಮೈಕ್ರೊ SD ಕಾರ್ಡ್ ಬೆಂಬಲದೊಂದಿಗೆ 12 GB RAM ವರೆಗೆ ವಿಸ್ತರಿಸಬಹುದಾಗಿದೆ. ಇನ್ನು ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್‌ನಲ್ಲಿ ಇದನ್ನು 15,000 ರೂ. ಒಳಗೆ ಖರೀದಿಸಬಹುದಾಗಿದೆ.

ಆಪಲ್ ಐಫೋನ್ 11 ಸ್ಮಾರ್ಟ್‌ಫೋನ್
ಆಪಲ್ ಐಫೋನ್ 11 ಫೋನ್ ಆಪಲ್ A13 ಬಯೋನಿಕ್ ಚಿಪ್ ಒಳಗೊಂಡಿದ್ದು, ಡ್ಯುಯಲ್ 12ಎಂಪಿ ಫ್ಲ್ಯಾಗ್‌ಶಿಪ್ ಕ್ಯಾಮೆರಾ ಸೆನ್ಸರ್ ಪಡೆದಿದೆ. ಇನ್ನು ಈ ಫೋನ್ 6.1 ಇಂಚಿನ ರೆಟಿನಾ ಹೆಚ್‌ಡಿ ಡಿಸ್‌ಪ್ಲೇ ಯನ್ನು ಹೊಂದಿದ್ದು, ಟ್ರೂ ಟೋನ್ ಮತ್ತು P3 ವೈಡ್ ಕಲರ್ ಪ್ಯಾನೆಲ್‌ಗೆ ಬೆಂಬಲವನ್ನು ಹೊಂದಿದೆ. ಹಾಗೆಯೇ ಈ ಫೋನ್ IP68 ರೇಟ್ ಮಾಡಲಾಗಿದೆ. ಆಪಲ್ ಐಫೋನ್ 11 ಅನ್ನು 39,999ರೂ. ಗಳಿಗೆ ಖರೀದಿಸಬಹುದಾಗಿದೆ.

ರಿಯಲ್‌ಮಿ 9 4G ಸ್ಮಾರ್ಟ್‌ಫೋನ್
ರಿಯಲ್‌ಮಿ 9 4G ಫೋನ್ ಇದೊಂದು ಸ್ಲಿಮ್ ಹ್ಯಾಂಡ್‌ಸೆಟ್ ಆಗಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಇದ್ದು, ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸಲ್ ಸೆನ್ಸಾರ್ ನಲ್ಲಿದೆ. ಇನ್ನು ಇದು 90Hz ಸೂಪರ್ AMOLED ಪ್ಯಾನೆಲ್ ರಚನೆ ಪಡೆದಿದೆ. ಇದರೊಂದಿಗೆ 5,000mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದೆ. ಜೊತೆಗೆ 13 GB RAM ಆಯ್ಕೆ ಒಳಗೊಂಡಿದೆ. ಇದಕ್ಕೆ ಪೂರಕವಾಗಿ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ ಪಡೆದಿದೆ. ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್‌ನಲ್ಲಿ ಈ ಫೋನ್ 15,000 ರೂ. ಒಳಗೆ ಲಭ್ಯ ಇದ್ದು, ಆಫರ್ ಬೆಲೆ 13,499 ರೂ. ಆಗಿದೆ.

ಪೊಕೊ C31 ಸ್ಮಾರ್ಟ್‌ಫೋನ್
ಪೊಕೊ C31 ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್‌ನಲ್ಲಿ ಇನ್ನಷ್ಟು ಕೈಗೆಟುಕುವ ಬೆಲೆಯಲ್ಲಿ ಲಭ್ಯವಿದೆ. ಈ ಫೋನ್ 5,000 mAh ಬ್ಯಾಟರಿ, ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೋ G35 ಚಿಪ್ ಮತ್ತು 13 ಮೆಗಾ ಪಿಕ್ಸಲ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ರಚನೆ ಹೊಂದಿದೆ. ಈ ಫೋನ್ ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್‌ನಲ್ಲಿ ಬರೀ 6,999ರೂ. ಗಳಿಗೆ ಖರೀದಿಗೆ ಸಿಗಲಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470