Home
ಸುದ್ದಿಜಾಲ

ಒಪ್ಪೋ ಫೋನ್‌ ಖರೀದಿಸುವ ಗ್ರಾಹಕರಿಗೆ ಸಿಹಿಸುದ್ದಿ; ಈ ಫೋನ್‌ ಬೆಲೆ ಇಳಿಕೆ!

ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್‌ನಲ್ಲಿ ಇದೀಗ ಬಿಗ್‌ ಸೇವಿಂಗ್‌ ಡೇಸ್‌ ಮಾರಾಟ ಚಾಲ್ತಿ ಇದೆ. ಈ ಮಾರಾಟ ಮೇಳದಲ್ಲಿ ಆಯ್ದ ಬ್ರ್ಯಾಂಡ್‌ಗಳ ಮೊಬೈಲ್‌ಗಳು ಭಾರೀ ರಿಯಾಯಿತಿ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿವೆ. ಆ ಪೈಕಿ ಒಪ್ಪೋ ಮೊಬೈಲ್‌ ಸಂಸ್ಥೆಯ ಒಪ್ಪೋ A17 ಫೋನ್‌ ಸಹ ಆಕರ್ಷಕ ಡಿಸ್ಕೌಂಟ್‌ ಪಡೆದಿದೆ.

ಹೌದು, ಫ್ಲಿಪ್‌ಕಾರ್ಟ್‌ ತಾಣದಲ್ಲಿ ಈಗ ಬಿಗ್‌ ಸೇವಿಂಗ್‌ ಡೇಸ್‌ ಮಾರಾಟ ಲೈವ್ ಇದ್ದು ಈ ಮಾರಾಟದಲ್ಲಿ ಒಪ್ಪೋ A17 ಮೊಬೈಲ್‌ ಶೇ 33% ರಷ್ಟು ನೇರ ಕೊಡುಗೆ ಪಡೆದಿದೆ. ಗ್ರಾಹಕರು ಈ ಫೋನಿನ 4GB RAM + 64GB ವೇರಿಯಂಟ್‌ ಅನ್ನು 9,999ರೂ. ಗಳ ಡಿಸ್ಕೌಂಟ್‌ ಬೆಲೆಗೆ ಖರೀದಿಸಬಹುದಾಗಿದೆ. ಅಲ್ಲದೇ ವೆಬ್‌ಸೈಟ್‌ನಲ್ಲಿ ಲಭ್ಯ ಇರುವ ಇತರೆ ಬ್ಯಾಂಕ್‌ ಕೊಡುಗೆ ಪಡೆದುಕೊಂಡರೆ, ಹೆಚ್ಚಿನ ರಿಯಾಯಿತಿ ದೊರೆಯಲಿದೆ.

ಒಪ್ಪೋ ಫೋನ್‌ ಖರೀದಿಸುವ ಗ್ರಾಹಕರಿಗೆ ಸಿಹಿಸುದ್ದಿ; ಈ ಫೋನ್‌ ಬೆಲೆ ಇಳಿಕೆ!

ಇನ್ನು ಈ ಫೋನ್‌ ಮೀಡಿಯಾ ಟೆಕ್ ಹಿಲಿಯೊ G35 ಪ್ರೊಸೆಸರ್‌ ಬಲದಲ್ಲಿ ಕೆಲಸ ಮಾಡಲಿದೆ. ಇದಲ್ಲದೇ ಈ ಮೊಬೈಲ್‌ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ನ ಮುಖ್ಯ ಕ್ಯಾಮೆರಾ ಸೆಟ್‌ಅಪ್‌ ಪಡೆದಿದೆ. ಹಾಗೆಯೇ ಇದು 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಒಳಗೊಂಡಿದೆ. ಹಾಗಾದರೇ ಒಪ್ಪೋ A17 ಮೊಬೈಲ್‌ನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ಡಿಸೈನ್‌

ಒಪ್ಪೋ A17 ಫೋನ್‌ 6.56 ಇಂಚಿನ ಹೆಚ್‌ಡಿ ಪ್ಲಸ್‌ LCD ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿಎ. ಇದಲ್ಲದೆ ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್‌ ಅನ್ನು ಪಡೆದಿದ್ದು, 100% DCI-P3 ಕಲರ್‌ ಗ್ಯಾಮಟ್‌ ರೇಂಜ್‌ ಅನ್ನು ಪಡೆದುಕೊಂಡಿದೆ. ಇದು ವಾಟರ್ ಡ್ರಾಪ್ ನಾಚ್ ಡಿಸ್‌ಪ್ಲೇ ವಿನ್ಯಾಸವನ್ನು ಒಳಗೊಂಡಿದೆ.

ಪ್ರೊಸೆಸರ್‌ ಪವರ್

ಒಪ್ಪೋ A17 ಫೋನ್‌ ಮೀಡಿಯಾ ಟೆಕ್ ಹಿಲಿಯೊ G35 ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಓಎಸ್ ಸಪೋರ್ಟ್ ಹೊಂದಿದೆ. ಇದರೊಂದಿಗೆ 4GB RAM ಮತ್ತು 64GB ಆಂತರೀಕ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 256 GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ಇದೆ.

ಕ್ಯಾಮೆರಾ ಸೆನ್ಸಾರ್

ಒಪ್ಪೋ A17 ಫೋನ್‌ ಡ್ಯುಯಲ್ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಅನ್ನು ಪಡೆದಿದೆ. ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಡೆಪ್ತ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ ವೀಡಿಯೋ ಕರೆಗಳು ಹಾಗೂ ಸೆಲ್ಫಿಗಾಗಿ 5 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ. ಇದರೊಂದಿಗೆ ಕ್ಯಾಮೆರಾ ಫೀಚರ್ಸ್‌ಗಳಲ್ಲಿ AI, 360 ಡಿಗ್ರಿ ಫಿಲ್ ಲೈಟ್ ಆಯ್ಕೆಗಳು ಇವೆ.

ಬಿಗ್ ಬ್ಯಾಟರಿ

ಒಪ್ಪೋ A17 ಫೋನ್‌ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದುಕೊಂಡಿದೆ. ಇದು ಸೂಪರ್ ಪವರ್ ಸೇವಿಂಗ್ ಮೋಡ್ ಮತ್ತು ಸೂಪರ್ ನೈಟ್‌ಟೈಮ್ ಸ್ಟ್ಯಾಂಡ್‌ಬೈ ಅನ್ನು ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, USB-C ಅನ್ನು ಪಡೆದಿದೆ. ಹಾಗೆಯೇ ಲೈಟ್‌ ಸೆನ್ಸಾರ್‌, ಪ್ರಾಕ್ಸಿಮಿಟಿ ಸೆನ್ಸಾರ್‌ ಮತ್ತು ಆಕ್ಸಿಲೆರೋಮೀಟರ್‌ ಅನ್ನು ಹೊಂದಿದೆ.

ಮೆಮೊರಿ ಹಾಗೂ ಕಲರ್‌

ಒಪ್ಪೋ A17 ಸ್ಮಾರ್ಟ್‌ಫೋನ್‌ 4GB + 64GB ವೇರಿಯಂಟ್‌ ಸೌಲಭ್ಯದ ಆಯ್ಕೆ ಪಡೆದುಕೊಂಡಿದೆ. ಇನ್ನು ಈ ಅಗ್ಗದ ಫೋನ್‌ ಲೇಕ್ ಬ್ಲೂ ಮತ್ತು ಮಿಡ್ನೈಟ್ ಬ್ಲಾಕ್ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ದೊರೆಯುತ್ತದೆ. ಗ್ರಾಹಕರು ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಖರೀದಿ ಮಾಡಬಹುದಾಗಿದೆ.

Best Mobiles in India

English summary
Flipkart Big Saving Days: Greatest Price Drops on OPPO A17 Mobile. check out offer, price and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+