ಫ್ಲಿಪ್‌ಕಾರ್ಟ್ ಸೇಲ್‌ನಲ್ಲಿ ಈ ಸ್ಮಾರ್ಟ್‌ಫೋನ್‌ಗಳಿಗೆ ಬಿಗ್ ಡಿಸ್ಕೌಂಟ್!
ಜನಪ್ರಿಯ ಇ-ಕಾಮರ್ಸ್ ಸೈಟ್ ಫ್ಲಿಪ್‌ಕಾರ್ಟ್ ತನ್ನ ವಿಶೇಷ ಸೇಲ್‌ಗಳಿಗೆ ಹೆಸರುವಾಸಿಯಾಗಿದೆ. ವಿಕೆಂಡ್, ಮಂತ್‌ಎಂಡ್ ಸೇಲ್‌ಗಳಲ್ಲದೆ ಹಬ್ಬ ಹರಿದಿಗಳಲ್ಲಿ ವಿಶೇಷ ರಿಯಾಯಿತಿ ಸೇಲ್‌ಗಳನ್ನು ಆಯೋಜಿಸುತ್ತಲೇ ಬಂದಿದೆ. ಸದ್ಯ ಇದೀಗ ಸ್ವಾತಂತ್ರ ದಿನಾಚರಣೆಯ ಸಂಭ್ರಮವನ್ನು ಇನ್ನಷ್ಟು ಹೆಚ್ಚಿಸಲು ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ 2021 ಸೇಲ್ ಆಯೋಜಿಸಿದೆ. ಈ ಸೇಲ್ ಆಗಸ್ಟ್ 5 ರಿಂದಲೇ ಲೈವ್ ಆಗಿದ್ದು, ಎರಡನೇ ದಿನವಾದ ಇಂದು ಕೂಡ ಹೆಚ್ಚಿನ ರಿಯಾಯಿತಿಗಳನ್ನು ಘೋಷಿಸಿದೆ.

ಹೌದು, ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್‌ನ ಎರಡನೇ ದಿನವಾದ ಇಂದು ಸ್ಮಾರ್ಟ್‌ಫೋನ್‌ಗಳ ಮೇಲೆ ಹೆಚ್ಚಿನ ರಿಯಾಯಿತಿ ನೀಡುತ್ತಿದೆ. ಅದರಲ್ಲೂ ನಿಮ್ಮ ನೆಚ್ಚಿನ ಸ್ಮಾರ್ಟ್‌ಫೋನ್‌ಗಳನ್ನು ಬಜೆಟ್ ಬೆಲೆಯಲ್ಲಿ ಖರೀದಿಸಲು ಇದು ನಿಮಗೆ ಉತ್ತಮ ಅವಕಾಶವಾಗಿದೆ. ಹಾಗಾದ್ರೆ ಇಂದು ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ 2021 ಸೇಲ್‌ನಲ್ಲಿ ಲಭ್ಯವಿರುವ ಸ್ಮಾರ್ಟ್‌ಫೋನ್ ಡೀಲ್‌ಗಳು ಮತ್ತು ಆಫರ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸ್ಯಾಮ್ಸಂಗ್ ಗ್ಯಾಲಕ್ಸಿ ಎಫ್ 12
ಫ್ಲಿಪ್‌ಕಾರ್ಟ್‌ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ ಎಫ್ 12 ಸ್ಮಾರ್ಟ್‌ಫೋನ್ 14% ರಿಯಾಯಿತಿ ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ 4GB RAM ಮತ್ತು 128GB ಆಯ್ಕೆಗೆ 13,999ರೂ, ಎಂಆರ್‌ಪಿ ಹೊಂದಿದ್ದು, ಆಫರ್‌ನಲ್ಲಿ 11,999 ರೂ,ಗಳಿಗೆ ಖರೀದಿಸಬಹುದಾಗಿದೆ. ಇದಲ್ಲದೆ ಆಕ್ಸಿಸ್ ಬ್ಯಾಂಕ್,ಐಸಿಐಸಿಐ, ಕ್ರೆಡಿಟ್ ಕಾರ್ಡ್‌ಗಳಿಗೆ ಬ್ಯಾಂಕ್ ಆಫರ್ 10% ರಿಯಾಯಿತಿ ಸಿಗಲಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಒಪ್ಪೋ A12
ಒಪ್ಪೋ A12 ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್‌ನಲ್ಲಿ 22% ರಿಯಾಯಿತಿಯನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 6.22 ಇಂಚಿನ HD+ ಡಿಸ್‌ಪ್ಲೇ ಹೊಂದಿದೆ. ಇದು 3GB RAM ಮತ್ತು 32GB ಇಂಟರ್ ಸ್ಟೋರೇಜ್ ಆಯ್ಕೆಯನ್ನು ಹೊಂದಿದೆ. ಇದಲ್ಲದೆ 256GB ವರೆಗೆ ಸಂಗ್ರ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಇದು ಡ್ಯುಯೆಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮೂಲ ಬೆಲೆ 10,990ರೂ, ಆಗಿದ್ದು ಆಫರ್‌ನಲ್ಲಿ 8,490 ರೂ,ಗಳಿಗೆ ಖರೀದಿಸಬಹುದಾಗಿದೆ.

ಪೊಕೊ M3
ಪೊಕೊ M3 ಸ್ಮಾರ್ಟ್‌ಪೋನ್ ಫ್ಲಿಪ್‌ಕಾರ್ಟ್‌ನಲ್ಲಿ 12% ರಿಯಾಯಿತಿ ಪಡೆದುಕೊಂಡಿದೆ. ಇದು 11,999 ರೂ ಮೂಲ ಬೆಲೆ ಹೊಂದಿದ್ದು, ರಿಯಾಯಿತಿ ದರದಲ್ಲಿ 10,499 ರೂ,ಗಳಿಗೆ ಖರೀದಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಮುಖ್ಯ ಕ್ಯಾಮೆರಾ 48ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಜೊತೆಗೆ 6000 mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಅನ್ನು ಇಎಂಐ ಆಯ್ಕೆಯಲ್ಲಿ ತೆಗೆದುಕೊಂಡರೆ EMI 364ರೂ/ತಿಂಗಳಿಂದ ಪ್ರಾರಂಭವಾಗುತ್ತದೆ. ನೆಟ್ ಬ್ಯಾಂಕಿಂಗ್ ಮತ್ತು ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್ ಮೂಲಕ ಖರೀದಿಸಿದರೆ ಹೆಚ್ಚುವರಿ ರಿಯಾಯಿತಿ ಸಿಗಲಿದೆ.

ಆಪಲ್ ಐಫೋನ್ 12
ಇನ್ನು ಈ ಸೇಲ್‌ನಲ್ಲಿ ಆಪಲ್‌ನ ಐಫೋನ್ 12 64GB ಕೂಡ ರಿಯಾಯಿತಿಯನ್ನು ಪಡೆದುಕೊಂಡಿದೆ. 79,900ರೂ. ಮೂಲಬೆಲೆಯ ಈ ಐಫೋನ್ ಆಫರ್‌ನಲ್ಲಿ ಕೇವಲ 67,999ರೂ,ಗಳಿಗೆ ಲಭ್ಯವಾಗಲಿದೆ. ಇನ್ನು ಈ ಸೇಲ್‌ನಲ್ಲಿ ನಿಮ್ಮ ಹಳೆಯ ಫೋನ್ ಅನ್ನು ವಿನಿಮಯ ಮಾಡಿಕೊಳ್ಳುವ ಮೂಲಕ ಹೆಚ್ಚಿನ ರಿಯಾಯಿತಿ ಪಡೆದುಕೊಳ್ಳಬಹುದು. ಇದಲ್ಲದೆ ಐಸಿಐಸಿಐ ಬ್ಯಾಂಕ್ ಮತ್ತು ಆಕ್ಸಿಸ್ ಬ್ಯಾಂಕ್ ಕಾರ್ಡ್ ಹೊಂದಿರುವವರು 10 ಶೇಕಡಾ ಹೆಚ್ಚುವರಿ ರಿಯಾಯಿತಿ ಪಡೆಯಬಹುದು.

ಆಪಲ್ ಐಫೋನ್ 12 ಮಿನಿ
ಫ್ಲಿಪ್‌ಕಾರ್ಟ್‌ನ ಬಿಗ್ ಸೇವಿಂಗ್ ಡೇಸ್ ಸೇಲ್‌ನಲ್ಲಿ ಆಪಲ್‌ನ ಐಫೋನ್ 12 ಮಿನಿ 64GB ಆಯ್ಕೆಗೆ ಭರ್ಜರಿ ರಿಯಾಯಿತಿ ದೊರೆಯಲಿದೆ. 69,900 ಎಮ್‌ಆರ್‌ಪಿ ಹೊಂದಿರುವ ಈ ಐಫೋನ್ ನಿಮಗೆ ಫ್ಲಿಪ್‌ಕಾರ್ಟ್ ಆಫರ್‌ನಲ್ಲಿ 59,999 ರೂ ಗಳಿಗೆ ದೊರೆಯಲಿದೆ. ಅಲ್ಲದೆ ನೀವು ಬಂಡಲ್ ವಿನಿಮಯ ಮತ್ತು ಪಾವತಿ ಕೊಡುಗೆಗಳನ್ನು ಬಳಸಿದರೆ, ಇನ್ನು ಹೆಚ್ಚಿನ ರಿಯಾಯಿತಿ ಪಡೆದುಕೊಳ್ಳಬಹುದಾಗಿದೆ. ಐಸಿಐಸಿಐ ಬ್ಯಾಂಕ್ ಮತ್ತು ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ ಬಳಕೆದಾರರು ಹೆಚ್ಚುವರಿಯಾಗಿ 10 ಶೇಕಡಾ ರಿಯಾಯಿತಿ ಪಡೆಯಬಹುದು.


Click it and Unblock the Notifications








