ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್: 5G ಸ್ಮಾರ್ಟ್‌ಫೋನ್‌ಗಳಿಗೆ ಬಿಗ್ ಆಫರ್!
ಆನ್‌ಲೈನ್ ಶಾಪಿಂಗ್ ಪ್ರಿಯರ ನೆಚ್ಚಿನ ತಾಣ ಫ್ಲಿಪ್‌ಕಾರ್ಟ್ ತನ್ನ ಬಿಗ್ ಸೇವಿಂಗ್ ಡೇಸ್ ಸೇಲ್‌ನೊಂದಿಗೆ ಮರಳಿದೆ. ಇನ್ನು ಫ್ಲಿಪ್‌ಕಾರ್ಟ್ ತನ್ನ ಸೇಲ್‌ನಲ್ಲಿ ಹಲವು ವಿಭಾಗಗಳಲ್ಲಿ ವಿಶೇಷ ಡಿಸ್ಕೌಂಟ್‌ಗಳನ್ನು ನೀಡುತ್ತಿದೆ. ಅದರಲ್ಲೂ 5G ಸ್ಮಾರ್ಟ್‌ಫೋನ್ ಖರೀದಿಸುವವರಿಗೆ ಬಿಗ್ ಆಫರ್ ಅನ್ನು ಘೋಷಣೆ ಮಾಡಿದೆ.
ಹೌದು, ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್‌ನಲ್ಲಿ 5G ಸ್ಮಾರ್ಟ್‌ಫೋನ್‌ಗಳ ಮೇಲೆ ಬಿಗ್ ಡಿಸ್ಕೌಂಟ್ ಲಭ್ಯವಾಗಲಿದೆ. ಬಜೆಟ್ ಬೆಲೆಯಲ್ಲಿ ಲಭ್ಯವಾಗುವ 5G ಸ್ಮಾರ್ಟ್‌ಫೋನ್‌ಗಳಿಗೆ ಫ್ಲಿಪ್‌ಕಾರ್ಟ್ ಅತಿ ಹೆಚ್ಚಿನ ಡಿಸ್ಕೌಂಟ್ ನೀಡುತ್ತಿದೆ. ಹಾಗಾದ್ರೆ ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್‌ನಲ್ಲಿ ಯಾವೆಲ್ಲಾ ಸ್ಮಾರ್ಟ್‌ಫೋನ್‌ಗಳ ಮೇಲೆ ಡಿಸ್ಕೌಂಟ್ ಲಭ್ಯವಾಗಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಯಾವೆಲ್ಲಾ ಸ್ಮಾರ್ಟ್‌ಫೋನ್‌ಗಳಿಗೆ ಡಿಸ್ಕೌಂಟ್ ಲಭ್ಯ!
ಪೊಕೊ M4 ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್‌ನಲ್ಲಿ 1,000ರೂ. ರಿಯಾಯಿತಿಯನ್ನು ಪಡೆದುಕೊಂಡಿದೆ. ಆದರಿಂದ ಈ ಸ್ಮಾರ್ಟ್‌ಫೋನ್ ಅನ್ನು ನೀವು ಫ್ಲಿಪ್‌ಕಾರ್ಟ್‌ನಲ್ಲಿ ಕೇವಲ 11,999ರೂ. ಬೆಲೆಯಲ್ಲಿ ಖರೀದಿಸಬಹುದಾಗಿದೆ. ಇನ್ನು ಸ್ಮಾರ್ಟ್‌ಫೋನ್ 5,000mAh ಬ್ಯಾಟರಿ ಜೊತೆಗೆ 50-ಮೆಗಾಪಿಕ್ಸೆಲ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್‌ನೊಂದಿಗೆ ಬರುತ್ತದೆ.
ರಿಯಲ್‌ಮಿ 10 ಪ್ರೊ ಪ್ಲಸ್
ರಿಯಲ್‌ಮಿ 10 ಪ್ರೊ ಪ್ಲಸ್ ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್‌ನಲ್ಲಿ 24,999ರೂ. ಬೆಲೆಯಲ್ಲಿ ಮಾರಾಟವಾಗ್ತಿದೆ. ಇದರ ಮೂಲ ಬೆಲೆ 25,999ರೂ.ಆಗಿದ್ದು 1,000ರೂ. ರಿಯಾಯಿತಿಯನ್ನು ಪಡೆದುಕೊಳ್ಳಬಹುದಾಗಿದೆ. ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 1080 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಬರಲಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ನಥಿಂಗ್ ಫೋನ್ (1)
ನಥಿಂಗ್ ಫೋನ್ (1) ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್‌ನಲ್ಲಿ 27,999ರೂ. ಬೆಲೆಗೆ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.55 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G+ SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದು ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮೊದಲನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766 ಸೆನ್ಸಾರ್ ಹೊಂದಿದೆ.
ಐಫೋನ್ 13
ಐಫೋನ್ 13 ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ಸೇಲ್‌ನಲ್ಲಿ 59,999ರೂ. ಬೆಲೆಯಲ್ಲಿ ಮಾರಾಟವಾಗ್ತಿದೆ. ಇದು 6.1 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತುಮ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. 1200nits ಬ್ರೈಟ್ನೆಸ್ ಹೊಂದಿದೆ. ಹಾಗೆಯೇ ಈ ಫೋನ್ A15 ಬಯೋನಿಕ್ ಸೋಕ್ ಕ್ವಾಡ್ ಕೋರ್ ಪ್ರೊಸೆಸರ್ ಅನ್ನು ಹೊಂದಿದೆ. ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಅಲ್ಟ್ರಾ ಕ್ಯಾಮೆರಾ ಸೆನ್ಸಾರ್ ಹೊಂದಿದ್ದು, ಇನ್ನೊಂದು ಕ್ಯಾಮೆರಾವು 12 ಮೆಗಾ ಪಿಕ್ಸಲ್ ವೈಲ್ಡ್ ಆಂಗಲ್ ಲೆನ್ಸ್ ಪಡೆದಿದೆ.

ಒನ್‌ಪ್ಲಸ್ 11R
ಒನ್‌ಪ್ಲಸ್ 11R ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್‌ನಲ್ಲಿ 39,779ರೂ. ಬೆಲೆಗೆ ಸೇಲ್ ಆಗ್ತಿದೆ. ಈ ಸ್ಮಾರ್ಟ್‌ಫೋನ್ 6.74 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಕರ್ವ್ಡ್ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8+ Gen 1 5G SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM+256GB ಹಾಗೂ 18GB RAM ಮತ್ತು 256GB ವೇರಿಯೆಂಟ್ ಆಯ್ಕೆಯ ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ.


Click it and Unblock the Notifications








