Home
ಸುದ್ದಿಜಾಲ

ಫ್ಲಿಪ್‌ಕಾರ್ಟ್‌ ಸೇಲ್‌ನಲ್ಲಿ ಮೊಟೊರೊಲಾ ಫೋನ್‌ಗಳಿಗೆ ಬಿಗ್‌ ಆಫರ್‌!

ಫ್ಲಿಪ್‌ಕಾರ್ಟ್‌ ಆನ್‌ಲೈನ್‌ ಶಾಪಿಂಗ್‌ ಪ್ರಿಯರ ನೆಚ್ಚಿನ ತಾಣ ಎನಿಸಿಕೊಂಡಿದೆ. ಆನ್‌ಲೈನ್‌ ಶಾಪಿಂಗ್‌ ಪ್ರಿಯರಿಗಾಗಿ ಫ್ಲಿಪ್‌ಕಾರ್ಟ್ ವಿಶೇಷ ಸೇಲ್‌ಗಳನ್ನು ಆಯೋಜಿಸುತ್ತಲೇ ಬಂದಿದೆ. ಸದ್ಯ ಇದೀಗ ಫ್ಲಿಪ್‌ಕಾರ್ಟ್‌ ತನ್ನ ಬಿಗ್‌ ಸೇವಿಂಗ್‌ ಡೇಸ್‌ ಸೇಲ್‌ನೊಂದಿಗೆ ಮರಳಿದೆ. ಈ ಸೇಲ್‌ ಇದೇ ಮಾರ್ಚ್ 12 ರಂದು ಲೈವ್ ಆಗಲಿದ್ದು, ಮಾರ್ಚ್‌ 17 ರವರೆಗೆ ಇರುತ್ತದೆ. ಇನ್ನು ಈ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್‌ಗಳು ಸೇರಿದಂತೆ ಅನೇಕ ಗ್ಯಾಜೆಟ್ಸ್‌ಗಳ ಮೇಲೆ ಬಿಗ್‌ ಆಫರ್‌ಗಳ ದೊರೆಯಲಿದೆ.

ಫ್ಲಿಪ್‌ಕಾರ್ಟ್‌

ಹೌದು, ಫ್ಲಿಪ್‌ಕಾರ್ಟ್‌ ಬಿಗ್‌ ಸೇವಿಂಗ್‌ ಡೇಸ್‌ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್‌ಗಳ ಮೇಲೆ ಬಿಗ್‌ ಡಿಸ್ಕೌಂಟ್‌ ದೊರೆಯಲಿದೆ. ಇದರಲ್ಲಿ ಮೊಟೊರೊಲಾ ಕಂಪೆನಿಯ ಬಜೆಟ್ ಮತ್ತು ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳ ಮೇಲೆ ಭಾರಿ ರಿಯಾಯಿತಿಗಳನ್ನು ಪಡೆದುಕೊಳ್ಳಬಹುದಾಗಿದೆ. ಇದಲ್ಲದೆ ಮೊಟೊರೊಲಾ ಕಂಪೆನಿ ತನ್ನ ಸ್ಮಾರ್ಟ್‌ಫೋನ್‌ಗಳ ಮೇಲೆ ಫ್ಲಾಟ್ ಡಿಸ್ಕೌಂಟ್‌ಗಳನ್ನು ಮತ್ತು ಬ್ಯಾಂಕ್ ಆಫರ್‌ಗಳನ್ನು ಸಹ ನೀಡುತ್ತಿದೆ. ಹಾಗಾದ್ರೆ ಫ್ಲಿಪ್‌ಕಾರ್ಟ್‌ ಬಿಗ್‌ ಸೇವಿಂಗ್‌ ಡೇಸ್‌ ಸೇಲ್‌ನಲ್ಲಿ ಮೊಟೊರೊಲಾ ಕಂಪೆನಿಗಳಿಗೆ ಏನೆಲ್ಲಾ ಆಫರ್‌ ಸಿಗಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಮೊಟೊರೊಲಾ ಎಡ್ಜ್‌ 20 ಪ್ರೊ

ಮೊಟೊರೊಲಾ ಎಡ್ಜ್‌ 20 ಪ್ರೊ

ಮೊಟೊರೊಲಾ ಎಡ್ಜ್‌ 20 ಪ್ರೊ ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ ಬಿಗ್‌ ಸೇವಿಂಗ್‌ ಡೇಸ್‌ ಸೇಲ್‌ನಲ್ಲಿ ರಿಯಾಯಿತಿ ದರದಲ್ಲಿ 32,999ರೂ.ಗಳಿಗೆ ಲಭ್ಯವಾಗಲಿದೆ. ಈ ಫೋನ್‌ನ ಮೂಲ ಬೆಲೆ 36,999 ರೂ. ಆಗಿದೆ. ಇದಲ್ಲದೆ ಬ್ಯಾಂಕ್ ಆಫರ್‌ ಮೂಲಕ 32,249ರೂ.ಗಳಿಗೆ ಖರೀದಿಸಬಹುದು. ಇನ್ನು ಈ ಸ್ಮಾರ್ಟ್‌ಫೋನ್‌ 6.7 ಇಂಚಿನ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 144Hzಗಿಂತ ಹೆಚ್ಚಿನ ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 870SoC ಪ್ರೊಸೆಸರ್‌ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ f/1.9 ಲೆನ್ಸ್ ಹೊಂದಿದೆ. ಜೊತೆಗೆ 4,500mAh ಬ್ಯಾಟರಿಯನ್ನು ಒದಗಿಸಿದ್ದು, 30W ಟರ್ಬೊಪವರ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಮೊಟೊರೊಲಾ ಎಡ್ಜ್ 20

ಮೊಟೊರೊಲಾ ಎಡ್ಜ್ 20

ಇನ್ನು ಫ್ಲಿಪ್‌ಕಾರ್ಟ್‌ ಸೇಲ್‌ನಲ್ಲಿ ಮೊಟೊರೊಲಾ ಎಡ್ಜ್‌ 20 ಫೋನ್‌ ಡಿಸ್ಕೌಂಟ್‌ನಲ್ಲಿ 25,999ರೂ.ಗಳಿಗೆ ದೊರೆಯಲಿದೆ. ಈ ಫೋನ್‌ನ ಮೂಲ ಬೆಲೆ 29,999 ರೂ.ಆಗಿದೆ. ಇದಲ್ಲದೆ ಬ್ಯಾಂಕ್‌ ಆಫರ್‌ ಮೂಲಕ ಈ ಸ್ಮಾರ್ಟ್‌ಫೋನ್‌ 25,249ರೂ.ಗಳಿಗೆ ಖರೀದಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.7-ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಹೊಂದಿದೆ. ಇನ್ನು ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ. ಜೊತೆಗೆ 4,000mAh ಬ್ಯಾಟರಿ ಹೊಂದಿದ್ದು, 30W ಟರ್ಬೊಪವರ್ ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2,ಬೆಂಬಲಿಸಲಿದೆ.

ಮೋಟೋ G60

ಮೋಟೋ G60

ಇನ್ನು ಫ್ಲಿಪ್‌ಕಾರ್ಟ್‌ ಸೇಲ್‌ನಲ್ಲಿ ಮೋಟೋ G60 ಕೂಡ ಡಿಸ್ಕೌಂಟ್‌ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ ಅನ್ನು ನೀವು ಕೇವಲ 15,999ರೂ. ಗಳಿಗೆ ಖರೀದಿಸಬಹುದಾಗಿದೆ. ಈ ಸ್ಮಾರ್ಟ್‌ಫೋನ್‌ನ ಮೂಲ ಬೆಲೆ 17,999ರೂ. ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.8ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732 G SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಟರ್ಬೊ ಪವರ್ 20 ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

Best Mobiles in India

English summary
Flipkart Big Saving Days sale: best discounts on Motorola smartphones
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+