Home
ಸುದ್ದಿಜಾಲ

ಫ್ಲಿಪ್‌ಕಾರ್ಟ್‌ ಬಿಗ್‌ ಸೇವಿಂಗ್ ಡೇಸ್‌ ಸೇಲ್‌ ಶುರು!..ಈ ಫೋನಿಗೆ ಬೊಂಬಾಟ್‌ ಡಿಸ್ಕೌಂಟ್‌!

ಫ್ಲಿಪ್‌ಕಾರ್ಟ್ ಇ ಕಾಮರ್ಸ್‌ ಹೊಸದಾಗಿ ಬಿಗ್ ಸೇವಿಂಗ್ ಡೇಸ್ ಸೇಲ್ (Flipkart Big Saving Days sale) ಕಾರ್ಯಕ್ರಮದೊಂದಿಗೆ ಈಗ ಮತ್ತೆ ಸುದ್ದಿಯಲ್ಲಿದೆ. ಈ ಕಾರ್ಯಕ್ರಮವು ಇಂದಿನಿಂದ (ಜೂನ್ 10) ರಂದು ಪ್ರಾರಂಭವಾಗಿದ್ದು, ಆಯ್ದ ಸ್ಮಾರ್ಟ್‌ಫೋನ್‌ಗಳಿಗೆ ಸಖತ್ ಡಿಸ್ಕೌಂಟ್‌ ನೀಡಿದೆ.

ಹೌದು, ಫ್ಲಿಪ್‌ಕಾರ್ಟ್‌ ಇದೀಗ ಬಿಗ್ ಸೇವಿಂಗ್ ಡೇಸ್ ಸೇಲ್ ಮೇಳವನ್ನು ಆಯೋಜಿಸಿದೆ. ಅಂದಹಾಗೆ ಈ ಮಾರಾಟ ಮೇಳವು ಇದೇ ಜೂನ್ 14 ರವರೆಗೆ ಚಾಲ್ತಿ ಇರಲಿದೆ. ಮುಖ್ಯವಾಗಿ ಈ ಸೇಲ್‌ನಲ್ಲಿ ಪೊಕೊ X5 ಫೋನ್‌ ಆಕರ್ಷಕ ರಿಯಾಯಿತಿ ಪಡೆದಿದ್ದು, ಗ್ರಾಹಕರ ಗಮನ ಸೆಳೆದಿದೆ. ಇನ್ನು ಈ ಫೋನ್‌ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 695 ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತದೆ.

ಫ್ಲಿಪ್‌ಕಾರ್ಟ್‌ ಬಿಗ್‌ ಸೇವಿಂಗ್ ಡೇಸ್‌ ಸೇಲ್‌ ಶುರು!..ಈ ಫೋನಿಗೆ ಡಿಸ್ಕೌಂಟ್‌!

ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಪೊಕೊ X5 ಫೋನ್ 23% ರಿಯಾಯಿತಿ ಪಡೆದಿದೆ. 6GB RAM + 128 GB ವೇರಿಯಂಟ್‌ ಫೋನ್‌ 20,999ರೂ. ಬೆಲೆ ಹೊಂದಿದ್ದು, ಈಗ ಫೋನ್‌ 15,999ರೂ. ಗಳಿಗೆ ಖರೀದಿಸಬಹುದಾಗಿದೆ. ಇದರೊಂದಿಗೆ ಆಯ್ದ ಬ್ಯಾಂಕ್ ಕಾರ್ಡ್‌ಗಳ ಮೇಲೆ ಮತ್ತು ವಿನಿಮಯ ಕೊಡುಗೆಗಳನ್ನು ಸಹ ಲಭ್ಯ. ಹಾಗಾದರೆ ಪೊಕೊ X5 ಫೋನಿನ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಪೊಕೊ X5 5G ಡಿಸ್‌ಪ್ಲೇ ರಚನೆ : ಪೊಕೊ X5 5G ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್‌ಹೆಚ್‌ಡಿ + ಸೂಪರ್ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ರಕ್ಷಣೆ ಪಡೆದಿದೆ. ಹಾಗೆಯೇ 120hz ಸ್ಕ್ರೀನ್ ರಿಫ್ರೆಶ್ ರೇಟ್‌ ಹಾಗೂ 240Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಬೆಂಬಲವನ್ನು ಪಡೆದುಕೊಂಡಿರುವ ಈ ಫೋನ್‌, 1200nits ಗರಿಷ್ಠ ಬ್ರೈಟ್‌ನೆಸ್‌ ನೀಡಲಿದೆ. ಈ ಮೂಲಕ ಎಂತಹ ಸೂರ್ಯನ ಬೆಳಕಿನ ಪ್ರಖರತೆಯಲ್ಲೂ ಸ್ಪಷ್ಟವಾಗಿ ಮೊಬೈಲ್‌ ಡಿಸ್‌ಪ್ಲೇ ವೀಕ್ಷಣೆ ಮಾಡಬಹುದು.

ಪೊಕೊ X5 5G ಪ್ರೊಸೆಸರ್‌ ಬಲ : ಪೊಕೊ X5 5G ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 695 ಪ್ರೊಸೆಸರ್‌ನಿಂದ ಕಾರ್ಯನಿರ್ವಹಿಸಲಿದ್ದು, 8 GB RAM ಹಾಗೂ 256 GB ಇಂಟರ್‌ ಸ್ಟೋರೇಜ್‌ ಸೇರಿದಂತೆ ಎರಡು ವೇರಿಯಂಟ್‌ನಲ್ಲಿ ಕಾಣಿಸಿಕೊಂಡಿದೆ. ಇದರ ಜೊತೆಗೆ 5GB ಯ ಹೆಚ್ಚುವರಿ ಟರ್ಬೊ RAM ವಿಸ್ತರಣೆ ಸೌಲಭ್ಯವನ್ನೂ ಒದಗಿಸಲಾಗಿದೆ.

ಪೊಕೊ X5 5G ಕ್ಯಾಮೆರಾ ಆಯ್ಕೆ : ಪೊಕೊ X5 5G ಸ್ಮಾರ್ಟ್‌ಫೋನ್ ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆ ಹೊಂದಿದ್ದು, ಇದರಲ್ಲಿ 48 ಮೆಗಾ ಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 8 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಲೆನ್ಸ್ ಹಾಗೂ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾದ ಆಯ್ಕೆ ನೀಡಲಾಗಿದೆ. ಇದರೊಂದಿಗೆ ಹೆಚ್‌ಡಿಆರ್‌ ಫೀಚರ್ಸ್‌, ನೈಟ್ ಮೋಡ್ ಮತ್ತು ಕ್ಯಾಪ್ಚರ್ ಮೋಡ್‌ಗಳನ್ನು ಹೊಂದಿದೆ. ಹಾಗೆಯೇ ಸೆಲ್ಫಿಗಾಗಿ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಕ್ಯಾಮೆರಾವನ್ನು ನೀಡಲಾಗಿದೆ.

ಪೊಕೊ X5 5G ಬ್ಯಾಟರಿ ಬ್ಯಾಕ್‌ಅಪ್‌ : ಪೊಕೊ X5 ಸ್ಮಾರ್ಟ್‌ಫೋನ್ 5000 mAh ಸಾಮರ್ಥ್ಯದ ಬ್ಯಾಟರಿಯಿಂದ ಪ್ಯಾಕ್‌ ಆಗಿದ್ದು, ಇದು 33W ವೇಗದ ಚಾರ್ಜಿಂಗ್‌ಗೆ ಬೆಂಬಲ ನೀಡಲಿದೆ. ಈ ಮೂಲಕ 22 ನಿಮಿಷಗಳಲ್ಲಿ ಫೋನ್‌ ಅನ್ನು ಸಂಪೂರ್ಣ ವಾಗಿ ಚಾರ್ಜಿಂಗ್‌ ಮಾಡಿಕೊಳ್ಳಬಹುದಾಗಿದೆ. ಹಾಗೆಯೇ ಈ ಫೋನ್ ಸೂಪರ್ನೋವಾ ಗ್ರೀನ್, ವೈಲ್ಡ್ಕ್ಯಾಟ್ ಬ್ಲೂ ಮತ್ತು ಜಾಗ್ವಾರ್ ಬ್ಲಾಕ್‌ ಎಂಬ ಮೂರು ಬಣ್ಣದ ಆಯ್ಕೆಯಲ್ಲಿ ಲಭ್ಯ.

Best Mobiles in India

English summary
Flipkart Big Saving Days sale: Big Deals On Poco X5 Phone. check offer price and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+