Flipkart Big Saving Days sale: ಈ ಸ್ಮಾರ್ಟ್‌ಫೋನ್‌ಗಳಿಗೆ ಭರ್ಜರಿ ಡಿಸ್ಕೌಂಟ್!
ಇ-ಕಾಮರ್ಸ್ ಪ್ಲಾಟ್‌ಫಾರ್ಮ್ ಫ್ಲಿಪ್‌ಕಾರ್ಟ್ ತನ್ನ ಜನಪ್ರಿಯ ಬಿಗ್ ಸೇವಿಂಗ್ ಡೇಸ್ ಸೇಲ್ ಅನ್ನು ಇದೇ ಮೇ 2 ರಿಂದ ಆರಂಭವಾಗಲಿದೆ. ಇನ್ನು ಈ ಸೇಲ್‌ನಲ್ಲಿ ಆನ್‌ಲೈನ್ ಗ್ರಾಹಕರಿಗೆ ಭರ್ಜರಿ ಡಿಸ್ಕೌಂಟ್ ದೊರೆಯಲಿದ್ದು, ವಿವಿಧ ಬೆಲೆ ವಿಭಾಗಗಳಲ್ಲಿ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸಬಹುದಾಗಿದೆ. ಸ್ಮಾರ್ಟ್‌ಫೋನ್‌ಗಳು ಸೇರಿದಂತೆ ಎಲೆಕ್ಟ್ರಾನಿಕ್ಸ್, ಲ್ಯಾಪ್‌ಟಾಪ್‌ಗಳು, ಸೇರಿದಂತೆ ಹಲವು ಪ್ರಾಡಕ್ಟ್‌ಗಳ ಮೇಲೆ ಭರ್ಜರಿ ಡಿಸ್ಕೌಂಟ್ ದೊರೆಯಲಿದೆ. ಹೆಚ್ಚುವರಿಯಾಗಿ, ಹೆಚ್‌ಡಿಎಫ್‌ಸಿ ಬ್ಯಾಂಕ್ ಗ್ರಾಹಕರು ಕಾರ್ಡ್‌ಗಳು ಮತ್ತು ಇಎಂಐ ಮೂಲಕ ಮಾಡುವ ವಹಿವಾಟಿನ ಮೇಲೆ 10% ರಷ್ಟು ರಿಯಾಯಿತಿ ಪಡೆದುಕೊಳ್ಳಬಹುದಾಗಿದೆ.

ಹೌದು, ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್ ಇದೇ ಮೇ 2 ರಿಂದ ಶುರುವಾಗಲಿದೆ. ಇನ್ನು ಈ ಭಾರಿಯ ಬಿಗ್ ಸೇವಿಂಗ್ ಡೇಸ್ ಸೇಲ್‌ನಲ್ಲಿ ಹಲವಾರು ಸ್ಮಾರ್ಟ್‌ಫೋನ್‌ಗಳಿಗೆ ವಿವಿಧ ಬೆಲೆಗಳಲ್ಲಿ ರಿಯಾಯಿತಿಯನ್ನು ಪಡೆದುಕೊಳ್ಳಬಹುದಾಗಿದ. ಹಾಗಾದ್ರೆ ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್‌ನಲ್ಲಿ ಯಾವೆಲ್ಲಾ ಸ್ಮಾರ್ಟ್‌ಫೋನ್‌ಗಳಿಗೆ ರಿಯಾಯಿತಿ ದೊರೆಯಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಪೊಕೊ m3
ಪೊಕೊ m3 ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್‌ನಲ್ಲಿ 1,000ರೂ ಗಳ ರಿಯಾಯಿತಿಯನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ ಆರಂಭಿಕ ಬೆಲೆ 9,999 ರೂ.ಗಳನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.53-ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 662 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದೆ. ಹಾಗೆಯೇ 6GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದು 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F62
ಸ್ಯಾಮ್‌ಸಂಗ್ ಗ್ಯಾಲಕ್ಸಿ F62 ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್‌ನಲ್ಲಿ 6,000 ರೂ.ಗಳ ರಿಯಾಯಿತಿಯನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.7 ಇಂಚಿನ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ ಕೋರ್ exynos 9825 SoC ಪ್ರೊಸೆಸರ್ ಹೊಂದಿದೆ. ಈ ಸ್ಮಾರ್ಟ್‌ಫೋನ್ 6GB RAM ಮತ್ತು 128GB ಸ್ಟೋರೇಜ್ ಮತ್ತು 8GB RAM ಮತ್ತು 128GB ಸಾಮರ್ಥ್ಯ ಸ್ಟೋರೇಜ್ ಆಯ್ಕೆಗಳನ್ನು ಪಡೆದಿದೆ. ಗ್ಯಾಲಕ್ಸಿ F62 ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಆಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 64ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ.ಇದು 7,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್ ಅಪ್ ಸಾಮರ್ಥ್ಯವನ್ನು ಪಡೆದಿದೆ.

ರಿಯಲ್‌ಮಿ ನಾರ್ಜೊ 30A
ರಿಯಲ್‌ಮಿ ನಾರ್ಜೊ 30A ಸ್ಮಾರ್ಟ್‌ಫೋನ್ ಈ ಭಾರಿ ಫ್ಲಿಪ್‌ಕಾರ್ಟ್‌ನಲ್ಲಿ 2,000 ರೂ.ಗಳ ರಿಯಾಯಿತಿ ಪಡೆದುಕೊಂಡಿದ್ದು, 7,999 ರೂ.ಬೆಲೆಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.5-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹಿಲಿಯೊ G85 SoC ಪ್ರೊಸೆಸರ್ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 10 ಆಧಾರಿತ ರಿಯಲ್‌ಮಿ UI ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ.

ರಿಯಲ್‌ಮಿ 8
ಇತ್ತೀಚೆಗೆ ಬಿಡುಗಡೆಯಾದ ರಿಯಲ್‌ಮಿ 8 ಸ್ಮಾರ್ಟ್‌ಫೋನ್ ಮೇಲೆ 1,000ರೂ. ರಿಯಾಯಿತಿಯನ್ನು ಪಡೆದುಕೊಂಡಿದೆ. ಈ ಮೂಲಕ ಈ ಸ್ಮಾರ್ಟ್‌ಫೋನ್ ಕೇವಲ 13,999 ರೂ. ಗೆ ಖರೀದಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.4 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹಿಲಿಯೊ G95 SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ರಿಯಲ್ಮೆ ಯುಐ 2.0 ou ನಲ್ಲಿ ಕಾರ್ಯನಿರ್ವಹಿಸುತ್ತದೆ. ಈ ಸ್ಮಾರ್ಟ್‌ಫೋನ್ ಕ್ವಾಡ್-ಕ್ಯಾಮೆರಾ ರಿಯರ್ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ರಿಯಲ್‌ಮಿ X7 ಪ್ರೊ 5G
ರಿಯಲ್‌ಮಿ X7 ಪ್ರೊ 5G ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್‌ನಲ್ಲಿ 2,000 ರೂ. ರಿಯಾಯಿತಿಯನ್ನು ಪಡೆದುಕೊಂಡಿದೆ. ಫ್ಲಿಪ್‌ಕಾರ್ಟ್‌ನಲ್ಲಿ ಈ ಸ್ಮಾರ್ಟ್‌ಫೋನ್ ಅನ್ನು 27,999 ರೂ.ಗೆ ಖರೀದಿಸಬಹುದು. ಇನ್ನು ಈ ಸ್ಮಾರ್ಟ್‌ಫೋನ್ 6.55 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಡೈಮೆನ್ಸಿಟಿ 1000+ SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.


Click it and Unblock the Notifications








