Home
ಸುದ್ದಿಜಾಲ

ಬರೀ 5,999ರೂ. ಮಾತ್ರ!..ಸ್ಟನ್ನಿಂಗ್ ಲುಕ್‌...5000mAh ಬ್ಯಾಟರಿ ಬ್ಯಾಕ್‌ಅಪ್‌!

ದಿಗ್ಗಜ ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ ವೆಬ್‌ಸೈಟ್‌ನಲ್ಲಿ ( Flipkart ) ಮೊಬೈಲ್‌ಗಳು ಒಂದಿಲ್ಲೊಂದು ಆಕರ್ಷಕ ಡಿಸ್ಕೌಂಟ್‌ ದರದಲ್ಲಿ ಖರೀದಿಗೆ ಲಭ್ಯ ಇರುತ್ತವೆ. ಇದೀಗ ಎಂಟ್ರಿ ಲೆವೆಲ್ ವಿಭಾಗದಲ್ಲಿ ಕಾಣಿಸಿಕೊಂಡಿರುವ ಪೊಕೊ C61 (POCO C61) ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಅತ್ಯುತ್ತಮ ಇಳಿಕೆ ಕಂಡು ಬಂದಿದ್ದು, ಸದ್ಯ ಈ ಮೊಬೈಲ್‌ ಖರೀದಿಸುವ ಗ್ರಾಹಕರು ಖುಷಿ ಹೆಚ್ಚಿದೆ.

ಹೌದು, ಫ್ಲಿಪ್‌ಕಾರ್ಟ್‌ (Flipkart) ತಾಣದಲ್ಲಿ ಇದೀಗ ಪೊಕೊ C61 (POCO C61) ಸ್ಮಾರ್ಟ್‌ಫೋನ್‌ ಶೇ. 33% ರಷ್ಟು ರಿಯಾಯಿತಿ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಈ ಮೊಬೈಲ್‌ನ 4GB RAM + 64GB ವೇರಿಯಂಟ್‌ 5,999ರೂ. ಗಳ ಗಮನಾರ್ಹ ಡಿಸ್ಕೌಂಟ್‌ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇದರ ಜೊತೆಗೆ ಎಕ್ಸ್‌ಚೇಂಜ್ ಆಫರ್‌ ಸಹ ಪಡೆದುಕೊಂಡರೆ, ಇನ್ನಷ್ಟು ಕಡಿಮೆ ಬೆಲೆಯಲ್ಲಿ ಖರೀದಿ ಮಾಡಬಹುದು.

ಬರೀ 5,999ರೂ. ಮಾತ್ರ!..ಸ್ಟನ್ನಿಂಗ್ ಲುಕ್‌...5000mAh ಬ್ಯಾಟರಿ ಬ್ಯಾಕ್‌ಅಪ್‌!

ಅಲ್ಲದೇ ಈ ಮೊಬೈಲ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಜೊತೆಗೆ 4GB + 64GB ಹಾಗೂ 6GB + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದುಕೊಂಡಿದೆ. ಇನ್ನು ಇದು ಡೈಮಂಡ್ ಡಸ್ಟ್ ಬ್ಲಾಕ್, ಎಥೆರಿಯಲ್ ಬ್ಲೂ ಮತ್ತು ಮಿಸ್ಟಿಕಲ್ ಗ್ರೀನ್ ಕಲರ್‌ ಆಯ್ಕೆಗಳನ್ನು ಪಡೆದುಕೊಂಡಿದೆ. ಇನ್ನುಳಿದಂತೆ ಪೊಕೊ C61 ಸ್ಮಾರ್ಟ್‌ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.

ಪೊಕೊ C61 ಫೋನ್‌ ಫೀಚರ್ಸ್‌ ಮಾಹಿತಿ

ಪೊಕೊ C61 ಸ್ಮಾರ್ಟ್‌ಫೋನ್‌ 6.71 ಇಂಚಿನ ಹೆಚ್‌ಡಿ ಪ್ಲಸ್‌ ಎಲ್‌ಸಿಡಿ ಡಿಸ್‌ಪ್ಲೇ ಆಯ್ಕೆ ಅನ್ನು ಪಡೆದುಕೊಂಡಿದ್ದು, 500 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಆಯ್ಕೆ ಒಳಗೊಂಡಿದೆ. ಇದರ ಜೊತೆಗೆ 90Hz ರಿಫ್ರೆಶ್ ರೇಟ್‌ ಮತ್ತು 180Hz ಟಚ್‌ಸ್ಯಾಂಪಲಿಂಗ್‌ ರೇಟ್‌ ಒಳಗೊಂಡಿದೆ.

ಪೊಕೊ C61 ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್‌ ಹಿಲಿಯೋ G36 ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದ್ದು, VR GE8320 ಜಿಪಿಯು ಬೆಂಬಲದ ಜೊತೆಗೆ ಕೆಲಸ ಮಾಡಲಿದೆ. ಹಾಗೆಯೇ ಇದು ಆಂಡ್ರಾಯ್ಡ್ 14 ಓಎಸ್‌ ಬೆಂಬಲ ಒಳಗೊಂಡಿದೆ. ಅಲ್ಲದೇ ಈ ಫೋನ್‌ 4GB + 64GB ಮತ್ತು 6GB + 128GB ಸ್ಟೋರೇಜ್‌ ವೇರಿಯಂಟ್‌ ಒಳಗೊಂಡಿದ್ದು, 6GB ವರೆಗಿನ ವರ್ಚುವಲ್ RAM ಆಯ್ಕೆ ಸಹ ಪಡೆದಿದೆ.

ಪೊಕೊ C61 ಸ್ಮಾರ್ಟ್‌ಫೋನ್‌ ಡ್ಯುಯಲ್‌ ಕ್ಯಾಮೆರಾ ರಚನೆ ಪಡೆದಿದ್ದು, ಇದರ ಮೊದಲ ಕ್ಯಾಮೆರಾವು 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಇದರ ದ್ವಿತೀಯ ಕ್ಯಾಮೆರಾ ಬೇಸಿಕ್‌ ಲೆನ್ಸ್‌ ಸಪೋರ್ಟ್‌ ಒಳಗೊಂಡಿದೆ. ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ 5 ಮೆಗಾ ಪಿಕ್ಸೆಲ್‌ ಸೆಲ್ಫಿ ಕ್ಯಾಮೆರಾ ಆಯ್ಕೆ ನೀಡಲಾಗಿದೆ.

ಪೊಕೊ C61 ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯವನ್ನು ಪಡೆದಿದ್ದು, ಹಾಗೆಯೇ 10W ವೈರ್ಡ್ ಚಾರ್ಜಿಂಗ್ ಆಯ್ಕೆ ಒಳಗೊಂಡಿದೆ. ಅಲ್ಲದೇ ಇದು ಯುಎಸ್‌ಬಿ ಟೈಪ್-ಸಿ ಪೋರ್ಟ್, ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ರೀಡರ್, 3.5mm ಆಡಿಯೊ ಜಾಕ್ ಆಯ್ಕೆ ಸಹ ಒಳಗೊಂಡಿದೆ. ಇದಲ್ಲದೇ 4G LTE, ಬ್ಲೂಟೂತ್ ಆವೃತ್ತಿ 5.4, ವೈ-ಫೈ 5 ಆಯ್ಕೆಗಳು ಸಹ ಪಡೆದಿದೆ. ಇನ್ನು ಈ ಫೋನ್‌ ಡೈಮಂಡ್ ಡಸ್ಟ್ ಬ್ಲಾಕ್, ಎಥೆರಿಯಲ್ ಬ್ಲೂ ಮತ್ತು ಮಿಸ್ಟಿಕಲ್ ಗ್ರೀನ್ ಕಲರ್‌ ಆಯ್ಕೆಗಳಲ್ಲಿ ಗ್ರಾಹಕರ ಖರೀದಿಗೆ ಲಭ್ಯ.

Best Mobiles in India

English summary
Flipkart Big Saving Days Sale: Fantastic deal on Poco C61 mobile. Check offer details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+