ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್ ಇದೇ ಮೇ 2 ರಿಂದ ಪ್ರಾರಂಭ!
ಜನಪ್ರಿಯ ಇ-ಕಾಮರ್ಸ್ ಪ್ಲಾಟ್‌ಫಾರ್ಮ್ ಫ್ಲಿಪ್‌ಕಾರ್ಟ್ ತನ್ನ ರಿಯಾಯಿತಿ ಸೇಲ್‌ಗಳ ಮೂಲಕ ಆನ್‌ಲೈನ್ ಗ್ರಾಹಕರನ್ನು ಆಕರ್ಷಿಸುತ್ತಾ ಬಂದಿದೆ. ಸದ್ಯ ಇದೀಗ ತನ್ನ ಆನ್‌ಲೈನ್ ಗ್ರಾಹಕರಿಗೆ ಬಿಗ್ ಸೇವಿಂಗ್ ಡೇಸ್ ಸೇಲ್ ಅನ್ನು ಇದೇ ಮೇ 2ರಿಂದ ಆಯೋಜಿಸಲಿದೆ. ಭಾನುವಾರದಿಂದ ಲೈವ್ ಆಗಲಿರುವ ಬಿಗ್ ಸೇವಿಂಗ್ ಡೇಸ್ ಸೇಲ್ ಮೇ 7 ರ ಶುಕ್ರವಾರದವರೆಗೆ ನಡೆಯಲಿದೆ. ಒಟ್ಟು ಆರು ದಿನಗಳ ಈ ಸೇಲ್‌ನಲ್ಲಿ ವಿವಿಧ ಮೊಬೈಲ್ ಫೋನ್‌ಗಳು, ಲ್ಯಾಪ್‌ಟಾಪ್‌ಗಳು, ವೆರಿಯೆಬಲ್ಸ್ ಪ್ರಾಡಕ್ಟ್ ಮತ್ತು ಇತರ ಗ್ಯಾಜೆಟ್‌ಗಳಲ್ಲಿ ರಿಯಾಯಿತಿ ಮತ್ತು ಕೊಡುಗೆಗಳನ್ನು ನೀಡಲಿದೆ.

ಹೌದು, ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್ ಇದೇ ಮೇ 2ರಿಂದ ಪ್ರಾರಂಭವಾಗಲಿದೆ. ಈ ಸೇಲ್ ಸ್ಮಾರ್ಟ್ ಟಿವಿಗಳು, ಟ್ಯಾಬ್ಲೆಟ್‌ಗಳು ಮತ್ತು ಆಡಿಯೊ ಡಿವೈಸ್‌ಗಳಾದ ಹೆಡ್‌ಫೋನ್‌ಗಳು ಮತ್ತು ಬ್ಲೂಟೂತ್ ಸ್ಪೀಕರ್‌ಗಳಲ್ಲಿ ಭರ್ಜರಿ ಡೀಲ್ ಮತ್ತು ರಿಯಾಯಿತಿಯನ್ನು ನೀಡಲಿದೆ. ಇದಲ್ಲದೆ ಹೆಚ್ಚುವರಿಯಾಗಿ, ಪ್ರಿಪೇಯ್ಡ್ ಖರೀದಿಗೆ 10% ತ್ವರಿತ ರಿಯಾಯಿತಿ ನೀಡಲು ಫ್ಲಿಪ್‌ಕಾರ್ಟ್ ಎಚ್‌ಡಿಎಫ್‌ಸಿ ಬ್ಯಾಂಕ್‌ನೊಂದಿಗೆ ಪಾಲುದಾರಿಕೆ ಹೊಂದಿದೆ. ಹಾಗಾದ್ರೆ ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್‌ನಲ್ಲಿ ಏನೆಲ್ಲಾ ರಿಯಾಯಿತಿಯನ್ನು ಪಡೆದುಕೊಳ್ಳಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಇನ್ನು ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ಸ್ ಡೇಸ್ ಸೇಲ್‌ನಲ್ಲಿ ಆಪಲ್, ರಿಯಲ್‌ಮಿ, ಸ್ಯಾಮ್‌ಸಂಗ್ ಮತ್ತು ಶಿಯೋಮಿ ಸೇರಿದಂತೆ ಕಂಪನಿಗಳ ವಿವಿಧ ಜನಪ್ರಿಯ ಸ್ಮಾರ್ಟ್‌ಫೋನ್‌ಗಳಿಗೆ ಭರ್ಜರಿ ರಿಯಾಯಿತಿಯನ್ನು ಪಡದುಕೊಳ್ಳಬಹುದಾಗಿದೆ. ಇದರಲ್ಲಿ 23,999.ರೂ ಮೂಲ ಬೆಲೆ ಹೊಂದಿರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ F62 ಸ್ಮಾರ್ಟ್‌ಫೋನ್ 17,999 ರೂ ಬೆಲೆಗೆ ದೊರೆಯಲಿದೆ. ಇದಲ್ಲದೆ ಸ್ಯಾಮ್‌ಸಂಗ್ ಗ್ಯಾಲಕ್ಸಿ F41 ಸ್ಮಾರ್ಟ್‌ಫೋನ್ 12,999 ರೂ.ಗೆ ದೊರೆಯಲಿದೆ. ಇದರಲ್ಲಿ 2,000ರೂ. ರಿಯಾಯಿತಿ ದೊರೆಯಲಿದೆ. ಇನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ F12 ಸ್ಮಾರ್ಟ್‌ಫೋನ್ 9,999 ರೂ.ಗೆ ದೊರೆಯಲಿದ್ದು, 1,000ರೂ. ರಿಯಾಯಿತಿಯನ್ನು ಪಡೆದುಕೊಳ್ಳಬಹುದಾಗಿದೆ.

ಅಲ್ಲದೆ ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್‌ನಲ್ಲಿ ರಿಯಲ್‌ಮಿ ಕಂಪೆನಿ ಸ್ಮಾರ್ಟ್‌ಫೋನ್‌ಗಳಿಗೆ ಭರ್ಜರಿ ಡಿಸ್ಕೌಂಟ್ ದೊರೆಯಲಿದೆ. ಈ ಸೇಲ್‌ನಲ್ಲಿ ಗ್ರಾಹಕರು ರಿಯಲ್‌ಮಿ ನಾರ್ಜೊ 30 ಪ್ರೊ 5G ಸ್ಮಾರ್ಟ್‌ಫೋನ್ 15,999 ರೂ.ಗೆ ಖರೀದಿಸಬಹುದಾಗಿದ್ದು, 1,000 ರೂ ಗಳ ರಿಯಾಯಿತಿ ದೊರೆಯಲಿದೆ. ಇನ್ನು ರಿಯಲ್‌ಮಿ X50 ಪ್ರೊ 5G ಸ್ಮಾರ್ಟ್‌ಫೋನ್ ಮೂಲಬೆಲೆ 31,999 ರೂ ಹೊಂದಿದ್ದು, ರಿಯಾಯಿತಿ ದರದಲ್ಲಿ 24,999,ರೂ.ಗೆ ಖರೀದಿಸಬಹುದಾಗಿದೆ.

ಇನ್ನು ಐಫೋನ್ ಪ್ರಿಯರು ಕೂಡ ಈ ಭಾರಿಯ ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್‌ನಲ್ಲಿ ಭರ್ಜರಿ ಡಿಸ್ಕೌಂಟ್ ಪಡೆದುಕೊಳ್ಳಬಹುದಾಗಿದೆ. ಐಫೋನ್ 11 ಬೆಲೆ 58,400 ರೂ. ಆಗಿದೆ. ಆದರೆ ಮಾರಾಟದ ಸಮಯದಲ್ಲಿ 7,000 ರಿಯಾಯಿತಿಯನ್ನು ಪಡೆದುಕೊಳ್ಳಬಹುದಾಗಿದ್ದು, ಇದು ಆರಂಭಿಕ ದರದಲ್ಲಿ 44,999 ರೂ.ಗೆ ಲಭ್ಯವಿರುತ್ತದೆ. ಇದಲ್ಲದೆ ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್ ಸಮಯದಲ್ಲಿ ಹೆಚ್‌ಡಿಎಫ್‌ಸಿ ಬ್ಯಾಂಕ್ ಗ್ರಾಹಕರು ಸ್ಮಾರ್ಟ್‌ಫೋನ್ ಖರೀದಿಗೆ 10% (1,000 ರೂ.) ರಿಯಾಯಿತಿ ಪಡೆದುಕೊಳ್ಳಬಹುದಾಗಿದೆ. ಆಯ್ದ ಮಾದರಿಗಳಲ್ಲಿ ಹೆಚ್ಚುವರಿ ವಿನಿಮಯ ರಿಯಾಯಿತಿಗಳು ಸಹ ಇರುತ್ತವೆ.

ಸ್ಮಾರ್ಟ್‌ಫೋನ್‌ಗಳ ಜೊತೆಗೆ, ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್ ಲ್ಯಾಪ್‌ಟಾಪ್‌ಗಳಲ್ಲಿ 40% ರಿಯಾಯಿತಿ ಮತ್ತು ಹೆಡ್‌ಫೋನ್‌ಗಳು ಮತ್ತು ಸ್ಪೀಕರ್‌ಗಳಿಗೆ 70%ರಿಯಾಯಿತಿ ನೀಡಲಿದೆ. ಆಪಲ್ ವಾಚ್ ಸರಣಿ 3 ಮತ್ತು 8 ನೇ ತಲೆಮಾರಿನ ಆಪಲ್ ಐಪ್ಯಾಡ್‌ನಂತಹ ಸಾಧನಗಳ ಮೇಲೆ ಭರ್ಜರಿ ಡಿಸ್ಕೌಂಟ್ ದೊರೆಯಲಿದ್ದು, ಸ್ಯಾಮ್‌ಸಂಗ್ ಗ್ಯಾಲಕ್ಸಿ ಟ್ಯಾಬ್ ಎ 8.0 ಮತ್ತು ಹಾನರ್ ಪ್ಯಾಡ್ 5 ನಂತಹ ಮಾದರಿಗಳ ಮೇಲೂ ರಿಯಾಯಿತಿಯನ್ನು ಪಡೆದುಕೊಳ್ಳಬಹುದಾಗಿದೆ.


Click it and Unblock the Notifications








