Flipkart ಬಿಗ್ ಸೇವಿಂಗ್ ಡೇಸ್‌ ಸೇಲ್‌ನಲ್ಲಿ ಈ ಫೋನ್‌ಗಳಿಗೆ ಭಾರೀ ಡಿಸ್ಕೌಂಟ್‌!

|

ಇ-ಕಾಮರ್ಸ್ ದೈತ್ಯ ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್ ಏನಾದರೊಂದು ವಿಶೇಷ ಸೇಲ್‌ ಆಯೋಜಿಸುತ್ತಲೇ ಇರುತ್ತದೆ. ಭರ್ಜರಿ ರಿಯಾಯಿತಿ ಕೊಡುಗೆಗಳನ್ನು ನೀಡುತ್ತ ಗ್ರಾಹಕರನ್ನು ಅಟ್ರ್ಯಾಕ್ಟ್‌ ಮಾಡಿದೆ. ಮುಖ್ಯವಾಗಿ ಎಲೆಕ್ಟ್ರಾನಿಕ್ ಹಾಗೂ ಗ್ಯಾಡ್ಜೆಟ್ಸ್‌ಗಳಿಗೆ ವಿಶೇಷ ಡಿಸ್ಕೌಂಟ್‌ ಸೇಲ್‌ ಅನ್ನು ಆಯೋಜಿಸಿ ಗಮನ ಸೆಳೆದಿದೆ. ಫ್ಲಿಪ್‌ಕಾರ್ಟ್‌ ಇದೀಗ ಫ್ಲಿಪ್‌ಕಾರ್ಟ್‌ ಬಿಗ್ ಸೇವಿಂಗ್ ಡೇಸ್ 2021 ಸೇಲ್‌ ಅನ್ನು ಆಯೋಜಿಸಿದೆ. ಈ ವಿಶೇಷ ಸೇಲ್‌ನಲ್ಲಿ ಆಯ್ದ ಕೆಲವು ನೂತನ ಸ್ಮಾರ್ಟ್‌ಫೋನ್‌ಗಳಿಗೆ ಆಕರ್ಷಕ ರಿಯಾಯಿತಿಗಳನ್ನು ತಿಳಿಸಿದೆ.

Flipkart ಬಿಗ್ ಸೇವಿಂಗ್ ಡೇಸ್‌ ಸೇಲ್‌ನಲ್ಲಿ ಈ ಫೋನ್‌ಗಳಿಗೆ ಭಾರೀ ಡಿಸ್ಕೌಂಟ್‌!

ಹೌದು, ಫ್ಲಿಪ್‌ಕಾರ್ಟ್‌ ಆಯೋಜಿಸಿರುವ ಬಿಗ್ ಸೇವಿಂಗ್ ಡೇಸ್ 2021 ಸೇಲ್‌ ಇದೀಗ ಲೈವ್‌ ಆಗಿದೆ. ಇನ್ನು ಈ ಮಾರಾಟ ಮೇಳವು ಇದೇ ಜುಲೈ 29ರ ವರೆಗೂ ಚಾಲ್ತಿ ಇರಲಿದೆ. ಈ ಬಿಗ್ ಸೇವಿಂಗ್ ಡೇಸ್ 2021 ಮಾರಾಟವು ಜನಪ್ರಿಯ ಮೊಬೈಲ್ ಫೋನ್‌ಗಳು, ಲ್ಯಾಪ್‌ಟಾಪ್‌ಗಳು, ಸ್ಪೀಕರ್‌ಗಳು, ಸ್ಮಾರ್ಟ್‌ವಾಚ್‌ಗಳು ಮತ್ತು ಇತರ ಎಲೆಕ್ಟ್ರಾನಿಕ್ಸ್‌ಗಳಿಗೆ ದೊಡ್ಡ ರಿಯಾಯಿತಿಯನ್ನು ನೀಡುತ್ತದೆ. ಮುಖ್ಯವಾಗಿ ಈ ಸೇಲ್‌ನಲ್ಲಿ ಆಯ್ದ ಸ್ಮಾರ್ಟ್‌ಫೋನ್‌ಗಳಿಗೆ ಭರ್ಜರಿ ಡಿಸ್ಕೌಂಟ್‌ ದೊರೆಯಲಿದೆ. ಹಾಗಾದರೇ ಫ್ಲಿಪ್‌ಕಾರ್ಟ್‌ನ ಬಿಗ್ ಸೇವಿಂಗ್ ಡೇಸ್‌ ಸೇಲ್‌ನಲ್ಲಿ ರಿಯಾಯಿತಿಯಲ್ಲಿ ಲಭ್ಯವಿರುವ ಸ್ಮಾರ್ಟ್‌ಫೋನ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಪೊಕೊ M3 ಸ್ಮಾರ್ಟ್‌ಫೋನ್
ಜನಪ್ರಿಯ ಪೊಕೊ M3 ಸ್ಮಾರ್ಟ್‌ಫೋನ್ ಫ್ಲಿಕ್‌ಕಾರ್ಟ್‌ ಸೇಲ್‌ನಲ್ಲಿ ರಿಯಾಯಿತಿ ಪಡೆದಿದೆ. 4 GB RAM ಮತ್ತು 64 GB ಸ್ಟೋರೇಜ್‌ ವೇರಿಯಂಟ್‌ ಮಾಡೆಲ್‌ 500ರೂ.ಗಳ ಡಿಸ್ಕೌಂಟ್‌ ಪಡೆದಿದ್ದು, ಸದ್ಯ 10,499ರೂ.ಗಳ ಪ್ರೈಸ್‌ ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.53 ಇಂಚಿನ ಪೂರ್ಣ ಹೆಚ್‌ಡಿ ಡಿಸ್‌ಪ್ಲೇ ಪಡೆದಿದೆ. ಇದರೊಂದಿಗೆ ಟ್ರಿಪಲ್‌ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಜೊತೆಗೆ 6000 mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದೆ.

ರಿಯಲ್‌ಮಿ 8 ಸ್ಮಾರ್ಟ್‌ಫೋನ್
ರಿಯಲ್‌ಮಿ 8 ಸ್ಮಾರ್ಟ್‌ಫೋನ್ ಸಹ ಫ್ಲಿಕ್‌ಕಾರ್ಟ್‌ ಸೇಲ್‌ನಲ್ಲಿ 1,000ರೂ.ಗಳ ಆಕರ್ಷಕ ಡಿಸ್ಕೌಂಟ್‌ ಪಡೆದಿದೆ. 14,999ರೂ. ಪ್ರೈಸ್‌ ಟ್ಯಾಗ್‌ ಹೊಂದಿದ್ದ ರಿಯಲ್‌ಮಿ 8 4GB RAM ಮತ್ತು 128 GB ಸ್ಟೋರೇಜ್‌ ವೇರಿಯಂಟ್‌ ಫೋನ್‌ ಈಗ ರಿಯಾಯಿತಿ ದರದಲ್ಲಿ 13,999ರೂ.ಗಳ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಈ ಫೋನ್ 6.4-ಇಂಚಿನ ಪೂರ್ಣ ಹೆಚ್‌ಡಿ + ಡಿಸ್ಪ್ಲೇಯನ್ನು ಹೊಂದಿದೆ. ಇದರೊಂದಿಗೆ ಕ್ವಾಡ್ ರಿಯರ್ ಕ್ಯಾಮೆರಾ ಸೆಟಅಪ್‌ನೊಂದಿಗೆ 64 ಮೆಗಾ ಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾವನ್ನು ಹೊಂದಿದೆ. ಮುಂಭಾಗದ ಸೆಲ್ಫಿ ಕ್ಯಾಮೆರಾ 16 ಮೆಗಾ ಪಿಕ್ಸೆಲ್ ಸಂವೇದಕವಾಗಿದೆ. ಇದು ಮೀಡಿಯಾ ಟೆಕ್ ಹೆಲಿಯೊ ಜಿ95 ಪ್ರೊಸೆಸರ್ ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೂ 5000mAh ಬ್ಯಾಟರಿಯನ್ನು ಹೊಂದಿದೆ.

Most Read Articles
Best Mobiles in India

English summary
Flipkart Big Saving Days Sale Live: Best Discount On These Smartphones.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X