Home
ಸುದ್ದಿಜಾಲ

ಶುರುವಾಯ್ತು ಫ್ಲಿಪ್‌ಕಾರ್ಟ್‌ ಸೇಲ್‌!..ಈ ಮೊಬೈಲ್‌ಗೆ ಈಗ ಧಮಾಕಾ ಆಫರ್‌!

ಜನಪ್ರಿಯ ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ ನಲ್ಲಿ ಈಗ ಬಿಗ್‌ ಸೇವಿಂಗ್‌ ಡೇಸ್‌ ಮಾರಾಟ ಮೇಳವು ಆರಂಭವಾಗಿದೆ. ಈ ಮೇಳದಲ್ಲಿ ಮೊಬೈಲ್‌ಗಳು ಬೊಂಬಾಟ್‌ ಡಿಸ್ಕೌಂಟ್‌ ಬೆಲೆಯಲ್ಲಿ ಕಾಣಿಸಿಕೊಂಡಿದ್ದು, ಆ ಪೈಕಿ ಪೊಕೊ ಸಂಸ್ಥೆಯ ಎಂಟ್ರಿ ಲೆವೆಲ್‌ ಪೊಕೊ C51 ಸ್ಮಾರ್ಟ್‌ಫೋನ್‌ ಭಾರೀ ರಿಯಾಯಿತಿ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯ ಇದೆ.

ಹೌದು, ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್ ನಲ್ಲಿ ಪೊಕೊ C51 ಸ್ಮಾರ್ಟ್‌ಫೋನ್‌ ಸಖತ್‌ ಡಿಸ್ಕೌಂಟ್‌ ದರದಲ್ಲಿ ಖರೀದಿಗೆ ಲಭ್ಯ ಇದೆ. ಈ ಫೋನ್‌ 9,999ರೂ. ದರವನ್ನು ಹೊಂದಿದ್ದು, ಕೊಡುಗೆಯಲ್ಲಿ ಈಗ 6,499ರೂ. ಗಳ ಬೆಲೆಯಲ್ಲಿ ಲಭ್ಯ. ಅಲ್ಲದೇ ಇತರೆ ಆಫರ್‌ ಸೇರಿ ಈ ಫೋನ್‌ ಇನ್ನಷ್ಟು ರಿಯಾಯಿತಿಯಲ್ಲಿ ಖರೀದಿ ಮಾಡಬಹುದು.

ಶುರುವಾಯ್ತು ಫ್ಲಿಪ್‌ಕಾರ್ಟ್‌ ಸೇಲ್‌!..ಈ ಮೊಬೈಲ್‌ಗೆ ಈಗ ಧಮಾಕಾ ಆಫರ್‌!

ಅಂದಹಾಗೆ ಪೊಕೊ C51 ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ G36 SoC ಪ್ರೊಸೆಸರ್ ನಲ್ಲಿ ಕೆಲಸ ಮಾಡಲಿದೆ. ಇದು ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಇನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಆಗಿದೆ. ಈ ಫೋನ್ ಬ್ಲೂ ಮತ್ತು ಬ್ಲ್ಯಾಕ್ ಬಣ್ಣಗಳ ಆಯ್ಕೆ ಪಡೆದಿದೆ. ಇನ್ನುಳಿದಂತೆ ಪೊಕೊ C51 ಫೋನ್‌ ಯಾವೆಲ್ಲಾ ಫೀಚರ್ಸ್‌ ಪಡೆದಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಪೊಕೊ C51 ಡಿಸ್‌ಪ್ಲೇ ಮಾಹಿತಿ : ಪೊಕೊ C51 ಸ್ಮಾರ್ಟ್‌ಫೋನ್‌ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಅನ್ನು ಹೊಂದಿದೆ. ಇದು 6.52 ಇಂಚಿನ ಎಲ್‌ಸಿಡಿ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಜೊತೆಗೆ ವಾಟರ್‌ ಸ್ಟೈಲ್‌ ನಾಚ್‌ ರಚನೆಯ ಈ ಡಿಸ್‌ಪ್ಲೇಯು 269 ppi ಪಿಕ್ಸೆಲ್‌ ಸಾಂದ್ರತೆಯನ್ನು ಪಡೆದಿದೆ.

ಪೊಕೊ C51 ಪ್ರೊಸೆಸರ್‌ ಕಾರ್ಯ ವೈಖರಿ : ಪೊಕೊ C51 ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ G36 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್‌ 13 ಓಎಸ್‌ ಬೆಂಬಲದೊಂದಿಗೆ ಕಾರ್ಯ ನಿರ್ವಹಿಸುತ್ತದೆ. ಹಾಗೇಯೇ 4GB + 64 GB ಸ್ಟೋರೇಜ್‌ ಸಾಮರ್ಥ್ಯವನ್ನು ವೇರಿಯಂಟ್‌ ಆಯ್ಕೆಗಳನ್ನು ಹೊಂದಿದೆ. ಜೊತೆಗೆ ಮೆಮೊರಿ ಕಾರ್ಡ್‌ ಮೂಲಕ 1 TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಆಯ್ಕೆ ಇದೆ.

ಪೊಕೊ C51 ಕ್ಯಾಮೆರಾ ಸೆನ್ಸಾರ್ ವಿವರದ ಮಾಹಿತಿ : ಪೊಕೊ C51 ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ QVGA ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 5 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಪೊಕೊ C51 ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು : ಪೊಕೊ C51 ಸ್ಮಾರ್ಟ್‌ಫೋನ್‌ 5000 mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದು 10W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್‌ v.5, ಹಾಟ್‌ಸ್ಪಾಟ್‌, ವೈಫೈ, ಅನ್ನು ಬೆಂಬಲಿಸಲಿದೆ.

ಪೊಕೊ C51 ಬೆಲೆ ಮತ್ತು ಕಲರ್‌ ಆಯ್ಕೆ : ಪೊಕೊ C51 ಸ್ಮಾರ್ಟ್‌ಫೋನ್‌ 4GB RAM + 64GB ವೇರಿಯಂಟ್‌ ಆಯ್ಕೆ ಪಡೆದಿದೆ. ಹಾಗೆಯೇ ಈ ಫೋನ್ ಬ್ಲೂ ಮತ್ತು ಬ್ಲ್ಯಾಕ್ ಬಣ್ಣಗಳ ಆಯ್ಕೆಯಲ್ಲಿ ಖರೀದಿ ಮಾಡಬಹುದಾಗಿದೆ.

Best Mobiles in India

English summary
Flipkart Big Saving Days Sale: Massive price cut on POCO C51 phone. check price and specifications.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+