Home
ಸುದ್ದಿಜಾಲ

ಫ್ಲಿಪ್‌ಕಾರ್ಟ್‌ ಸೇಲ್‌ನಲ್ಲಿ ಈ ಸ್ಮಾರ್ಟ್‌ವಾಚ್‌ಗಳಿಗೆ ಬಿಗ್‌ ಆಫರ್‌! ಇಂದೇ ಖರೀದಿಸಿ!

ಜನಪ್ರಿಯ ಇ-ಕಾಮರ್ಸ್‌ ತಾಣವಾದ ಫ್ಲಿಪ್‌ಕಾರ್ಟ್‌ ತನ್ನ ಪ್ಲಾಟ್‌ಫಾರ್ಮ್‌ನಲ್ಲಿ ಬಿಗ್‌ ಸೇವಿಂಗ್‌ ಡೇಸ್‌ ಸೇಲ್‌ ನಡೆಸುತ್ತಿದೆ. ಈ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್‌ಗಳು ಮಾತ್ರವಲ್ಲದೆ ಹಲವು ಪ್ರಾಡಕ್ಟ್‌ಗಳ ಮೇಲೆ ಭರ್ಜರಿ ಡಿಸ್ಕೌಂಟ್‌ ನೀಡುತ್ತಿದೆ. ಇದರಲ್ಲಿ ಸ್ಮಾರ್ಟ್‌ವಾಚ್‌ಗಳು ಕೂಡ ಸೇರಿದ್ದು ಬಿಗ್‌ ಆಫರ್‌ನಲ್ಲಿ ಖರೀದಿಸಬಹುದಾಗಿದೆ.

ಹೌದು, ಫ್ಲಿಪ್‌ಕಾರ್ಟ್‌ ಬಿಗ್‌ ಸೇವಿಂಗ್‌ ಡೇಸ್‌ ಸೇಲ್‌ನಲ್ಲಿ ಸ್ಮಾರ್ಟ್‌ವಾಚ್‌ಗಳಿಗೆ ಬಿಗ್‌ ಆಫರ್‌ ಲಭ್ಯವಿದೆ. ಅದರಲ್ಲೂ ಸ್ಯಾಮ್‌ಸಂಗ್‌ ಗ್ಯಾಲಕ್ಸಿ ವಾಚ್‌ 5 ಸರಣಿಯ ಮೇಲೆ ಹೆಚ್ಚಿನ ರಿಯಾಯಿತಿ ನೀಡಲಾಗ್ತಿದೆ. ಹಾಗಾದ್ರೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ 5 ಸರಣಿಯ ಮೇಲೆ ಏನೆಲ್ಲಾ ರಿಯಾಯಿತಿ ಲಭ್ಯವಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಫ್ಲಿಪ್‌ಕಾರ್ಟ್‌ ಸೇಲ್‌ನಲ್ಲಿ ಈ ಸ್ಮಾರ್ಟ್‌ವಾಚ್‌ಗಳಿಗೆ ಬಿಗ್‌ ಆಫರ್‌!

ಗ್ಯಾಲಕ್ಸಿ ವಾಚ್ 5 ಸರಣಿಗೆ ಆಫರ್‌ ಏನಿದೆ?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ ವಾಚ್‌ 5 ಸರಣಿಯಲ್ಲಿ ಗ್ಯಾಲಕ್ಸಿ ವಾಚ್ 5 ಮತ್ತು ಗ್ಯಾಲಕ್ಸಿ ವಾಚ್ 5 ಪ್ರೊ ಎರಡೂ ಕೂಡ ವಿಶೇಷ ರಿಯಾಯಿತಿ ಪಡೆದುಕೊಂಡಿವೆ. ಇದರಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ ವಾಚ್‌ 5 ಫ್ಲಿಪ್‌ಕಾರ್ಟ್‌ನಲ್ಲಿ 20% ಡಿಸ್ಕೌಂಟ್‌ ಪಡೆದುಕೊಂಡಿದೆ. ಇದರಿಂದ ಈ ಸ್ಮಾರ್ಟ್‌ವಾಚ್‌ ಅನ್ನು ನೀವು ಕೇವಲ 23,999ರೂ. ಬೆಲೆಗೆ ಖರೀದಿಸಬಹುದಾಗಿದೆ. ಇನ್ನು ಸ್ಯಾಮ್‌ಸಂಗ್‌ ಗ್ಯಾಲಕ್ಸಿ ವಾಚ್‌ 5 ಪ್ರೊ 18% ಡಿಸ್ಕೌಂಟ್‌ ಪಡೆದುಕೊಂಡಿದ್ದು, ನಿಮಗೆ ಸ್ಮಾರ್ಟ್‌ವಾಚ್‌ 39,999ರೂ. ಬೆಲೆಗೆ ಲಭ್ಯವಾಗಲಿದೆ.

ಬ್ಯಾಂಕ್‌ ಆಫರ್‌ ಏನಿದೆ?

ಗ್ಯಾಲಕ್ಸಿ ವಾಚ್ 5 ಸರಣಿಯ ಸ್ಮಾರ್ಟ್‌ವಾಚ್‌ಗಳ ಮೇಲೆ ಫ್ಲಿಪ್‌ಕಾರ್ಟ್‌ ಪ್ಲ್ಯಾಟ್‌ ಆಫರ್‌ಗಳ ಜೊತೆಗೆ ಬ್ಯಾಂಕ್‌ ಆಫರ್‌ಗಳು ಕೂಡ ಲಭ್ಯವಿದೆ. ಇದರಿಂದ ಸ್ಮಾರ್ಟ್‌ವಾಚ್‌ಗಳನ್ನು ನೀವು ಇನ್ನಷ್ಟು ಪರಿಣಾಮಕಾರಿ ಬೆಲೆಯಲ್ಲಿ ಖರೀದಿಸಲು ಸಾಧ್ಯವಾಗಲಿದೆ. ಅದರಂತೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ ವಾಚ್ 5 ಮೇಲೆ ಬ್ಯಾಂಕ್‌ ಕಾರ್ಡ್‌ ಆಫರ್‌ಗಳ ಮೂಲಕ 10,000ರೂ.ವರೆಗೆ ತ್ವರಿತ ರಿಯಾಯಿತಿಯನ್ನು ಪಡೆದುಕೊಳ್ಳಬಹುದು. ಇದರಿಂದ ಈ ಸ್ಮಾರ್ಟ್‌ವಾಚ್‌ ಬೆಲೆ 13,999ರೂ.ಗೆ ಇಳಿಯಲಿದೆ.

ಇನ್ನು ಇದೇ ರೀತಿಯಲ್ಲಿ ಗ್ಯಾಲಕ್ಸಿ ವಾಚ್‌ 5 ಪ್ರೊ ಮೇಲೆ ಬ್ಯಾಂಕ್‌ ಕಾರ್ಡ್‌ ಆಫರ್‌ನಲ್ಲಿ 2,000ತರೂ.ಗಳ ರಿಯಾಯಿತಿ ದೊರೆಯಲಿದೆ. ಇದರಿಂದ ಈ ಸ್ಮಾರ್ಟ್‌ವಾಚ್‌ ಅನ್ನು ನೀವು 37,999ರೂ. ಬೆಲೆಗೆ ಖರೀದಿಸಬಹುದಾಗಿದೆ.

ಫ್ಲಿಪ್‌ಕಾರ್ಟ್‌ ಸೇಲ್‌ನಲ್ಲಿ ಈ ಸ್ಮಾರ್ಟ್‌ವಾಚ್‌ಗಳಿಗೆ ಬಿಗ್‌ ಆಫರ್‌!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ ವಾಚ್‌ 5 ಫೀಚರ್ಸ್‌ ಹೇಗಿದೆ?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ ವಾಚ್‌ 5 1.4 ಇಂಚು ಮತ್ತು 1.2 ಇಂಚಿನ ಅಮೋಲೆಡ್‌ ಡಿಸ್‌ಪ್ಲೇ ಗಾತ್ರದ ಆಯ್ಕೆಗಳಲ್ಲಿ ಬರಲಿದೆ. ಇನ್ನು ಈ ಸ್ಮಾರ್ಟ್‌ವಾಚ್‌ ಮಲ್ಟಿ ಸ್ಪೋರ್ಟ್ಸ್‌ ಮೋಡ್‌ ಅನ್ನು ಬೆಂಬಲಿಸಲಿದೆ. ಇದರಲ್ಲಿ ಹೆಲ್ತ್‌ ಫೀಚರ್ಸ್‌ಗಳನ್ನು ಕೂಡ ನೀಡಲಾಗಿದ್ದು, ಬಯೋಆಕ್ಟಿವ್ ಸೆನ್ಸರ್ ಟೆಂಪರೇಚರ್ ಸೆನ್ಸರ್, ಅಕ್ಸೆಲೆರೊಮೀಟರ್, ಬ್ಯಾರೋಮೀಟರ್, ಗೈರೋ ಸೆನ್ಸರ್, ಜಿಯೋಮ್ಯಾಗ್ನೆಟಿಕ್ ಸೆನ್ಸರ್ ಮತ್ತು ಲೈಟ್ ಸೆನ್ಸರ್‌ ಹೊಂದಿದೆ. ಇನ್ನು ಈ ಸ್ಮಾರ್ಟ್‌ವಾಚ್‌ 44mm ಆವೃತ್ತಿಯು 410mAh ಬ್ಯಾಟರಿಯನ್ನು ಹೊಂದಿದೆ. ಆದರೆ ಇದರ 40mm ಆವೃತ್ತಿಯು 284mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದಿದೆ.

ಫ್ಲಿಪ್‌ಕಾರ್ಟ್‌ ಸೇಲ್‌ನಲ್ಲಿ ಈ ಸ್ಮಾರ್ಟ್‌ವಾಚ್‌ಗಳಿಗೆ ಬಿಗ್‌ ಆಫರ್‌!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ ವಾಚ್‌ 5ಪ್ರೊ ಫೀಚರ್ಸ್‌ ಹೇಗಿದೆ?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ ವಾಚ್‌ 5ಪ್ರೊ ಸ್ಮಾರ್ಟ್‌ವಾಚ್‌ 1.4 ಇಂಚಿನ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಸ್ಮಾರ್ಟ್‌ವಾಚ್‌ MIL-STD-810H ಪ್ರಮಾಣೀಕರಣವನ್ನು ಹೊಂದಿದ್ದು, IP68 ರೇಟಿಂಗ್‌ನೊಂದಿಗೆ ಬರುತ್ತದೆ. ಈ ಸ್ಮಾರ್ಟ್‌ವಾಚ್‌ ಸ್ಯಾಮ್‌ಸಂಗ್‌ ಎಕ್ಸಿನೋಸ್‌ W920 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ವಾಚ್‌ ಕೂಡ ಸ್ಯಾಮ್‌ಸಂಗ್‌ ಬಯೋಆಕ್ಟಿವ್ ಸೆನ್ಸರ್ (ಆಪ್ಟಿಕಲ್ ಹಾರ್ಟ್ ರೇಟ್ + ಎಲೆಕ್ಟ್ರಿಕಲ್ ಹಾರ್ಟ್ ಸಿಗ್ನಲ್ + ಬಯೋಎಲೆಕ್ಟ್ರಿಕಲ್ ಇಂಪೆಡೆನ್ಸ್ ಅನಾಲಿಸಿಸ್), ಟೆಂಪರೇಚರ್ ಸೆನ್ಸರ್, ಅಕ್ಸೆಲೆರೊಮೀಟರ್, ಬ್ಯಾರೋಮೀಟರ್, ಗೈರೋ ಸೆನ್ಸರ್, ಜಿಯೋಮ್ಯಾಗ್ನೆಟಿಕ್ ಸೆನ್ಸರ್ ಮತ್ತು ಲೈಟ್ ಸೆನ್ಸರ್ ಒಳಗೊಂಡಿದೆ.

Best Mobiles in India

English summary
Flipkart big saving days sale: massive discounts on Samsung Galaxy Watch 5 Series
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+