ಮೊಟೊರೊಲಾ ಮೊಬೈಲ್‌ ಖರೀದಿಸುವವರಿಗೆ ಇಲ್ಲಿದೆ ಸಖತ್ ಡಿಸ್ಕೌಂಟ್‌ ಕೊಡುಗೆ!

|

ಇ ಕಾಮರ್ಸ್‌ ದೈತ್ಯ ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್‌ ಇದೀಗ ಬಿಗ್ ಸೇವಿಂಗ್ ಡೇಸ್ ಸೇಲ್‌ ಘೋಷಿಸಿದೆ. ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಮಾರಾಟವು ಇದೇ ಜುಲೈ 23 ರಂದು ಪ್ರಾರಂಭ ಆಗಲಿದೆ. ಇನ್ನು ಫ್ಲಿಪ್‌ಕಾರ್ಟ್ ಪ್ಲಸ್ ಬಳಕೆದಾರರಿಗೆ ಈ ಮಾರಾಟವು ಈಗಾಗಲೇ ಲೈವ್ ಆಗಿದೆ. ಇನ್ನು ಫ್ಲಿಪ್‌ಕಾರ್ಟ್ ಆಯೋಜಿಸಿರುವ ಈ ಮಾರಾಟವು ವಾರದ ಅವಧಿಯ ಮಾರಾಟವಾಗಿದ್ದು, ಇದೇ ಜುಲೈ 28 ರಂದು ಮಧ್ಯರಾತ್ರಿ ಮುಕ್ತಾಯವಾಗಲಿದೆ.

ಫ್ಲಿಪ್‌ಕಾರ್ಟ್‌

ಹೌದು, ಫ್ಲಿಪ್‌ಕಾರ್ಟ್ ತಾಣದಲ್ಲಿ ಜುಲೈ 23 ರಿಂದ ಜುಲೈ 28 ರ ವರೆಗೂ ಬಿಗ್ ಸೇವಿಂಗ್ ಡೇಸ್ ಸೇಲ್‌ ನಡೆಯಲಿದೆ. ಈ ಮಾರಾಟ ಮೇಳದಲ್ಲಿ ಆಯ್ದ ಸ್ಮಾರ್ಟ್‌ಫೋನ್‌ಗಳಿಗೆ ಫ್ಲಿಪ್‌ಕಾರ್ಟ್‌ ಕೆಲವು ಭರ್ಜರಿ ರಿಯಾಯಿತಿಗಳು ಮತ್ತು ಡೀಲ್‌ಗಳನ್ನು ತಿಳಿಸಿದೆ. ಮುಖ್ಯವಾಗಿ ಮೊಟೊರೊಲಾ ಸಂಸ್ಥೆಯ ಕೆಲವು ಮೊಬೈಲ್‌ಗಳಿಗೆ ಆಕರ್ಷಕ ಕೊಡುಗೆ ನೀಡುತ್ತಿದೆ. ಇದರೊಂದಿಗೆ ಇತರೆ ಕೆಲವು ಉತ್ಪನ್ನಗಳಿಗೂ ಬೊಂಬಾಟ್ ಡಿಸ್ಕೌಂಟ್‌ ಲಭ್ಯ ಮಾಡುತ್ತಿದೆ. ಹಾಗಾದರೇ ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್‌ನಲ್ಲಿ ಆಕರ್ಷಕ ರಿಯಾಯಿತಿ ಪಡೆದ ಮೊಟೊರೊಲಾ ಫೋನ್‌ಗಳ ಬಗ್ಗೆ ತಿಳಿಯೋಣ ಬನ್ನಿರಿ.

ಮೊಟೊರೊಲಾ ಫೋನ್‌ಗಳಿಗೆ ಧಮಾಕಾ ಕೊಡುಗೆ

ಮೊಟೊರೊಲಾ ಫೋನ್‌ಗಳಿಗೆ ಧಮಾಕಾ ಕೊಡುಗೆ

ಮೊಟೊರೊಲಾ ಕಂಪನಿಯ ಮೊಟೊ G ಸರಣಿಯ ಫೋನ್‌ಗಳು ಮತ್ತು ಮೊಟೊ G71, ಮೊಟೊ G51, ಮೊಟೊ G31, ಮೊಟೊ G60 ಮತ್ತು ಮೊಟೊರೊಲಾ ಎಡ್ಜ್ 20 ಫ್ಯೂಜನ್‌ ಸೇರಿದಂತೆ ಇತರೆ ಎಡ್ಜ್ ಸರಣಿಯ ಸ್ಮಾರ್ಟ್‌ಫೋನ್‌ಗಳ ಮೇಲೆ ರಿಯಾಯಿತಿಗಳನ್ನು ನೀಡುತ್ತಿದೆ. ಇದರೊಂದಿಗೆ ಕೆಲವು ಬ್ಯಾಂಕ್ ಕೊಡುಗೆಗಳನ್ನು ಒಳಗೊಂಡಿವೆ. ಹೆಚ್ಚುವರಿಯಾಗಿ, ಯಾವುದೇ ವೆಚ್ಚದ EMI ಆಯ್ಕೆಗಳು ಮತ್ತು ವಿನಿಮಯ ಕೊಡುಗೆಗಳಂತಹ ಹೆಚ್ಚುವರಿ ಪ್ರಯೋಜನಗಳನ್ನು ಸಹ ಪಡೆಯಬಹುದು.

ಪಡೆಯಬಹುದು

ಮೊಟೊ G ಸರಣಿಯ ಮೊಟೊ G71 ಬ್ಯಾಂಕ್ ಕೊಡುಗೆಗಳನ್ನು ಒಳಗೊಂಡಂತೆ 14,999ರೂ, ಗೆ ಪಡೆಯಬಹುದು. ಅದೇ ರೀತಿ, ಮೊಟೊ G51, ಮೊಟೊ G31, ಮೊಟೊ G60, ಮೊಟೊ G22, ಮೊಟೊ G40 ಫ್ಯೂಜನ್ ಮತ್ತು ಮೊಟೊ G82 ಫೋನ್‌ಗಳ ಮೇಲೆ ಬೆಲೆ ಇಳಿಕೆ ಹಾಗೂ ಬ್ಯಾಂಕ್‌ ಕಾರ್ಡ್‌ಗಳ ಕೊಡುಗೆ ಒಳಗೊಂಡಂತೆ 3,000 ರೂ. ವರೆಗೆ ರಿಯಾಯಿತಿಯೊಂದಿಗೆ ಖರೀದಿಸಬಹುದು.

ಮೊಟೊ

ಇನ್ನು ಮೊಟೊರೊಲಾ ಎಡ್ಜ್ 20 ಫ್ಯೂಜನ್‌ 16,999 ರೂ. ಗಳ ಆಫರ್‌ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಅದೇ ರೀತಿ ಮೊಟೊ ಎಡ್ಜ್ 20 ಮತ್ತು ಮೊಟೊ ಎಡ್ಜ್ 20 ಪ್ರೊ ಫೋನ್‌ಗಳು ಬ್ಯಾಂಕ್ ಕೊಡುಗೆಗಳೊಂದಿಗೆ 3,000 ರೂ. ರಿಯಾಯಿತಿಯನ್ನು ಪಡೆದಿವೆ. ಹಾಗೆಯೇ ಕೊನೆಯದಾಗಿ, ಮೊಟೊ ಎಡ್ಜ್ 30 ಸರಣಿ ಫೋನ್‌ಗಳು 3,000ರೂ. ಗಳ ವರೆಗೆ ರಿಯಾಯಿತಿಯನ್ನು ಪಡೆಯಬಹುದು.

ಮೊಟೊ G71 5G : ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಮೊಟೊ G71 5G : ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಮೊಟೊ G71 5G ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ರೆಸಲ್ಯೂಶನ್‌ ಸಾಮರ್ಥ್ಯ ಪಡೆದಿರುವ 6.4-ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ ಮ್ಯಾಕ್ಸ್‌ ವಿಷನ್‌ ಅಮೋಲೆಡ್‌ ಡಿಸ್‌ಪ್ಲೇ ಆಗಿದ್ದು, 20:9 ರಚನೆಯ ಅನುಪಾತ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್‌ ಅನ್ನು ಪಡೆದುಕೊಂಡಿದೆ.

ಮೊಟೊ G71 5G: ಪ್ರೊಸೆಸರ್‌ ಯಾವುದು?

ಮೊಟೊ G71 5G: ಪ್ರೊಸೆಸರ್‌ ಯಾವುದು?

ಮೊಟೊ G71 5G ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 695 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 11 ನಲ್ಲಿ My UX ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ.

ಮೊಟೊ G71 5G: ಕ್ಯಾಮೆರಾ ಮತ್ತು ಬ್ಯಾಟರಿ

ಮೊಟೊ G71 5G: ಕ್ಯಾಮೆರಾ ಮತ್ತು ಬ್ಯಾಟರಿ

ಮೊಟೊ G71 5G ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ f/1.8 ಲೆನ್ಸ್ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಜೊತೆಗೆ f/2.2 ಅಲ್ಟ್ರಾ-ವೈಡ್ ಲೆನ್ಸ್ ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇನ್ನು ಮೊಟೊ G71 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ಟರ್ಬೊ ಪವರ್‌ ಚಾರ್ಜರ್ ಮೂಲಕ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 802.11ac, ಬ್ಲೂಟೂತ್ v5.0, GPS/ A-GPS, NFC, USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಬೆಂಬಲಿಸಲಿದೆ.

ಮೊಟೊ G51 5G: ಡಿಸ್‌ಪ್ಲೇ ಮತ್ತು ಪ್ರೊಸೆಸರ್‌

ಮೊಟೊ G51 5G: ಡಿಸ್‌ಪ್ಲೇ ಮತ್ತು ಪ್ರೊಸೆಸರ್‌

ಮೊಟೊ G51 5G ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.8-ಇಂಚಿನ ಫುಲ್‌ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಮ್ಯಾಕ್ಸ್ ವಿಷನ್ ಡಿಸ್‌ಪ್ಲೇ ಆಗಿದೆ. ಇದು 20:9 ರಚನೆಯ ಅನುಪಾತವನ್ನು ಹೊಂದಿದ್ದು, 120Hz ರಿಫ್ರೆಶ್ ರೆಟ್‌ ಅನ್ನು ಒಳಗೊಂಡಿದೆ. ಹಾಗೆಯೇ ಈ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 480 ಪ್ಲಸ್‌ SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್‌11 ನಲ್ಲಿ My UX ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ.

ಮೊಟೊ G51 5G: ಕ್ಯಾಮೆರಾ ಮತ್ತು ಬ್ಯಾಟರಿ

ಮೊಟೊ G51 5G: ಕ್ಯಾಮೆರಾ ಮತ್ತು ಬ್ಯಾಟರಿ

ಮೊಟೊ G51 5G ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ f/1.8 ಲೆನ್ಸ್‌ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಮತ್ತು ಡೆಪ್ತ್ ಶೂಟರ್ ಹಾಗೂ ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಹೊಂದಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಮೊಟೊ G51 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

Best Mobiles in India

English summary
Flipkart Big Saving Days: These Motorola Mobiles Get Discount Offers.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X