Flipkart ಬಿಗ್‌ ಸೇವಿಂಗ್‌ ಡೇಸ್‌ ಸೇಲ್‌ ಡೇಟ್‌ ಫಿಕ್ಸ್‌!

|

ಜನಪ್ರಿಯ ಇ-ಕಾಮರ್ಸ್‌ ಸೈಟ್‌ ಫ್ಲಿಪ್‌ಕಾರ್ಟ್‌ ತನ್ನ ವಿಶೇಷ ಆಫರ್‌, ಡಿಸ್ಕೌಂಟ್‌ಗಳಿಂದ ಆನ್‌ಲೈನ್‌ ಶಾಪಿಂಗ್ ಪ್ರಿಯರನ್ನು ಆಕರ್ಷಿಸಿದೆ. ಈಗಾಗಲೇ ಮಂತ್ ಎಂಡ್ ಸೇಲ್‌, ಬಿಗ್ ಬಿಲಿಯನ್ ಸೇಲ್‌ ಸಂದರ್ಭಗಳಲ್ಲಿ ಹೆಚ್ಚಿನ ರಿಯಾಯಿತಿ ಕೊಡುಗೆಗಳ ಮೂಲಕ ಗ್ರಾಹಕರನ್ನು ಸೆಳೆಯುತ್ತದೆ. ಇದೀಗ ಫ್ಲಿಪ್‌ಕಾರ್ಟ್‌ ಬಿಗ್ ಸೇವಿಂಗ್‌ ಡೇಸ್‌ ಸೇಲ್‌ ಆಯೋಜಿಸಲು ಮುಂದಾಗಿದೆ. ಇನ್ನು ಈ ಸೇಲ್‌ ಇದೇ ಜೂನ್ 13 ರಿಂದ ಪ್ರಾರಂಭವಾಗಲಿದೆ.

ಫ್ಲಿಪ್‌ಕಾರ್ಟ್‌

ಹೌದು, ಫ್ಲಿಪ್‌ಕಾರ್ಟ್‌ ಬಿಗ್‌ ಸೇವಿಂಗ್‌ ಡೇಸ್‌ ಸೇಲ್‌ ಇದೇ ಜೂನ್‌ 13ರಿಂದ ಪ್ರಾರಂಭವಾಗಲಿದೆ. ಇನ್ನು ಈ ಸೇಲ್‌ನಲ್ಲಿ ವಿವಿಧ ಉತ್ಪನ್ನಗಳ ಮೇಲೆ ಭರ್ಜರಿ ರಿಯಾಯಿತಿಯನ್ನು ಘೋಷಿಸಲಾಗಿದೆ. ಫ್ಲಿಪ್‌ಕಾರ್ಟ್ ಪ್ರಕಾರ, ಕಂಪನಿಯು ಸ್ಮಾರ್ಟ್‌ಫೋನ್‌ಗಳು, ಟ್ಯಾಬ್ಲೆಟ್‌ಗಳು, ಲ್ಯಾಪ್‌ಟಾಪ್‌ಗಳು, ವೆರಿಯೆಬಲ್ಸ್‌ ಪ್ರಾಡಕ್ಟ್‌ಗಳ ಮೇಲೆ ಮತ್ತು ಇತರ ಎಲೆಕ್ಟ್ರಾನಿಕ್ ಡಿವೈಸ್‌ಗಳಿಗೆ ಭಾರಿ ಆಫರ್‌ ನೀಡಲಾಗುತ್ತಿದೆ. ಅಲ್ಲದೆ ಈ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್‌ಗಳಿಗೆ ಭರ್ಜರಿ ಡಿಸ್ಕೌಂಟ್‌ ದೊರೆಯಲಿದೆ. ಹಾಗಾದ್ರೆ ಈ ಸೇಲ್‌ನಲ್ಲಿ ಯಾವೆಲ್ಲಾ ಸ್ಮಾರ್ಟ್‌ಫೋನ್‌ಗಳಿಗೆ ರಿಯಾಯಿತಿ ದೊರೆಯಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರಿಯಲ್‌ಮಿ X7 5G

ರಿಯಲ್‌ಮಿ X7 5G

ಫ್ಲಿಪ್‌ಕಾರ್ಟ್‌ ಬಿಗ್‌ ಸೇವಿಂಗ್‌ ಡೇಸ್‌ ಸೇಲ್‌ನಲ್ಲಿ ರಿಯಲ್‌ಮಿ X7 5G ಸ್ಮಾರ್ಟ್‌ಫೋನ್‌ ಮೇಲೆ ಭರ್ಜರಿ ರಿಯಾಯಿತಿ ನೀಡಲಾಗ್ತಿದೆ. ಈ ಸ್ಮಾರ್ಟ್‌ಫೋನ್‌ ಮೂಲ ಬೆಲೆ 21,999 ರೂ,ಆಗಿದ್ದು, ಬಿಗ್‌ ಸೇವಿಂಗ್‌ ಡೇಸ್‌ ಸೇಲ್‌ನಲ್ಲಿ 19,999 ರೂ.ಗಳಿಗೆ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ರಿಯಲ್‌ಮಿ X7 5G ಸ್ಮಾರ್ಟ್‌ಫೋನ್ 6.4 ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ರಿಯಲ್‌ಮಿ X7 5G ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ Dimensity 800U 5G SoC ಪ್ರೊಸೆಸರ್‌ ಅನ್ನು ಹೊಂದಿದೆ. ಜೊತೆಗೆ 4310mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದರೊಂದಿಗೆ 65W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಫ್ 12

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಫ್ 12

ಫ್ಲಿಪ್‌ಕಾರ್ಟ್‌ ಬಿಗ್‌ ಸೇವಿಂಗ್‌ ಡೇಸ್‌ ಸೇಲ್‌ನಲ್ಲಿ ಸ್ಯಾಮ್‌ಸಂಗ್ ಸ್ಮಾರ್ಟ್‌ಫೋನ್‌ಗಳ ಮೇಲೂ ಕೂಡ ಭರ್ಜರಿ ರಿಯಾಯಿತಿ ನೀಡಲಾಗಿದೆ. ಇದರಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಎಫ್ 12 ಸ್ಮಾರ್ಟ್‌ಫೋನ್‌ 10,999, ರೂ. ಬದಲಿಗೆ 9,999 ರೂ.ಗೆ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 450 ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಓಎಸ್‌ ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾವು f/2.0 ಅಪರ್ಚರ್ ನೊಂದಿಗೆ 48 ಮೆಗಾ ಪಿಕ್ಸೆಲ್ ಸೆನ್ಸಾರ್‌,ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. 15W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ.

ಗೂಗಲ್ ಪಿಕ್ಸೆಲ್ 4A

ಗೂಗಲ್ ಪಿಕ್ಸೆಲ್ 4A

ಫ್ಲಿಪ್‌ಕಾರ್ಟ್‌ನಲ್ಲಿ ಗೂಗಲ್ ಪಿಕ್ಸೆಲ್ 4A ಸ್ಮಾರ್ಟ್‌ಫೋನ್‌ ಪ್ರಸ್ತುತ ರೂ. 34,990 ರೂ. ಬೆಲೆಗೆ ಲಭ್ಯವಾಗಲಿದೆ. ಇನ್ನು ಗೂಗಲ್ ಪಿಕ್ಸಲ್ 4a ಸ್ಮಾರ್ಟ್‌ಫೋನ್ 1080 x 2340 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 5.8 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಗೂಗಲ್ ಪಿಕ್ಸಲ್ 4a ಸ್ಮಾರ್ಟ್‌ಫೋನ್ ಸ್ನ್ಯಾಪ್‌ಡ್ರಾಗನ್ 730 ಪ್ರೊಸೆಸರ್ ಬಲವನ್ನು ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 10 ಓಎಸ್‌ ಸಪೋರ್ಟ್‌ ಸಹ ಪಡೆದಿದೆ. ಇದು ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ರಚನೆಯನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾವು 12.2 ಎಂಪಿ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿದೆ. ಜೊತೆಗೆ 3300 mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದೆ.

ಮೊಟೊರೊಲಾ ರೇಜರ್ 5G

ಮೊಟೊರೊಲಾ ರೇಜರ್ 5G

ಮೊಟೊರೊಲಾ ರೇಜರ್ 5G ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ನಲ್ಲಿ ಈಗ ರಿಯಾಯಿತಿ ದರದಲ್ಲಿ 89,999.ರೂ ಗಳಿಗೆ ಲಭ್ಯವಾಗಲಿದೆ. ಇದು 21: 9ರಚನೆಯ ಅನುಪಾತ ಹೊಂದಿರುವ ಮಡಿಸಬಹುದಾದ 6.2-ಇಂಚಿನ ಪ್ಲಾಸ್ಟಿಕ್ OLED ಡಿಸ್‌ಪ್ಲೇಯನ್ನು ಹೊಂದಿದೆ. ಮೊಟೊರೊಲಾ ರೇಜರ್ 5G ಆಕ್ಟಾ-ಕೋರ್ ಸ್ನಾಪ್ಡ್ರಾಗನ್ 765G SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ 48 ಮೆಗಾಪಿಕ್ಸೆಲ್ ಸಾಮರ್ಥ್ಯದ ಪ್ರೈಮರಿ ಕ್ಯಾಮೆರಾವನ್ನು ಹೊಂದಿದೆ. ಇದು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (ಒಐಎಸ್) ಅನ್ನು ಒಳಗೊಂಡಿದೆ.

ಎಲೆಕ್ಟ್ರಾನಿಕ್

ಇದಲ್ಲದೆ ಫ್ಲಿಪ್ಕಾರ್ಟ್ನ ಈ ಸೇಲ್‌ನಲ್ಲಿ ಎಲೆಕ್ಟ್ರಾನಿಕ್ ವಸ್ತುಗಳ ಮೇಲೆ ಅತ್ಯಾಕರ್ಷಕ ವ್ಯವಹಾರಗಳನ್ನು ಸಹ ನೀಡುತ್ತದೆ. ಎಲೆಕ್ಟ್ರಾನಿಕ್ ಡಿವೈಸ್‌ಗಳು ಮತ್ತು ಪರಿಕರಗಳ ಮೇಲೆ ಕಂಪನಿಯು ಶೇಕಡಾ 80 ರಷ್ಟು ರಿಯಾಯಿತಿ ನೀಡುತ್ತದೆ. ವರದಿಗಳ ಪ್ರಕಾರ, ಸ್ಮಾರ್ಟ್ ವಾಚ್‌ಗಳಿಗೆ 60%ವರೆಗೆ ರಿಯಾಯಿತಿ, ಟ್ಯಾಬ್ಲೆಟ್‌ಗಳಿಗೆ 50%ವರೆಗೆ ರಿಯಾಯಿತಿ ಮತ್ತು ಡೆಸ್ಕ್‌ಟಾಪ್ ಪಿಸಿಗಳು ಮತ್ತು ಲ್ಯಾಪ್‌ಟಾಪ್‌ಗಳಿಗೆ 30% ರಿಯಾಯಿತಿ ಇರುತ್ತದೆ ಎಂದು ವಾಲ್‌ಮಾರ್ಟ್ ಒಡೆತನದ ಇ-ಕಾಮರ್ಸ್ ದೈತ್ಯ ಮೈಕ್ರೋಸೈಟ್‌ನಲ್ಲಿ ಹೇಳಿದೆ.

Most Read Articles
Best Mobiles in India

Read more about:
English summary
Flipkart Big Saving Days will start from June 13, Sunday with some of the best and big offers.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X