ಫ್ಲಿಪ್‌ಕಾರ್ಟ್‌ ಸೇಲ್‌ನಲ್ಲಿ ಈ ಸ್ಮಾರ್ಟ್‌ಫೋನ್‌ಗಳಿಗೆ ಬಿಗ್‌ ಡಿಸ್ಕೌಂಟ್‌!

|

ಫ್ಲಿಪ್‌ಕಾರ್ಟ್‌ ಆನ್‌ಲೈನ್‌ ಶಾಪಿಂಗ್‌ ಪ್ರಿಯರ ನೆಚ್ಚಿನ ತಾಣಗಳಲ್ಲಿ ಒಂದೆನಿಸಿಕೊಂಡಿದೆ. ತನ್ನ ವಿಶೇಷ ಸೇಲ್‌ಗಳ ಮೂಲಕ ಗ್ರಾಹಕರಿಗೆ ರಿಯಾಯಿತಿಗಳನ್ನು ನೀಡುತ್ತಾ ಬಂದಿದೆ. ಸದ್ಯ ಇದೀಗ ತನ್ನ ಫ್ಲಿಪ್‌ಕಾರ್ಟ್‌ ಬಿಗ್‌ ಸೇವಿಂಗ್‌ ಡೇ ಸೇಲ್‌ ಮೂಲಕ ಮರಳಿದೆ. ಈ ಸೇಲ್‌ ಇಂದಿನಿಂದ ಲೈವ್‌ ಆಗಿದ್ದು, ಇದೇ ಮಾರ್ಚ್‌ 16 ರವರೆಗೆ ಲೈವ್ ಆಗಿರುತ್ತದೆ. ಇನ್ನು ಫ್ಲಿಪ್‌ಕಾರ್ಟ್ ಬಿಗ್‌ ಸೇವಿಂಗ್‌ ಡೇ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್‌ಗಳು, ಲ್ಯಾಪ್‌ಟಾಪ್‌ಗಳು, ಗೃಹೋಪಯೋಗಿ ವಸ್ತುಗಳು, ಫ್ಯಾಷನ್ ಪರಿಕರಗಳ ಮೇಲೆ ಬಿಗ್‌ ಆಫರ್‌ ಮತ್ತು ಡಿಸ್ಕೌಂಟ್‌ ಪಡೆದುಕೊಳ್ಳಬಹುದಾಗಿದೆ.

ಫ್ಲಿಪ್‌ಕಾರ್ಟ್‌

ಹೌದು, ಫ್ಲಿಪ್‌ಕಾರ್ಟ್‌ ಬಿಗ್‌ ಸೇವಿಂಗ್‌ ಡೇ ಸೇಲ್‌ ಇಂದಿನಿಂದ ಲೈವ್‌ ಆಗಿದೆ. ಈ ಸೇಲ್‌ನಲ್ಲಿ ಆಪಲ್‌, ಸ್ಯಾಮ್‌ಸಂಗ್‌, ರಿಯಲ್‌ಮಿ ಸೇರಿದಂತೆ ಅನೇಕ ಜನಪ್ರಿಯ ಸ್ಮಾರ್ಟ್‌ಫೋನ್ ಬ್ರಾಂಡ್‌ಗಳು ತಮ್ಮ ಫೋನ್‌ಗಳನ್ನು ರಿಯಾಯಿತಿ ದರದಲ್ಲಿ ಮಾರಾಟ ಮಾಡುತ್ತಿವೆ. ಫ್ಲಾಟ್ ಡಿಸ್ಕೌಂಟ್‌ಗಳ ಹೊರತಾಗಿ, ಫ್ಲಿಪ್‌ಕಾರ್ಟ್ ಆಯ್ದ ಉತ್ಪನ್ನಗಳ ಮೇಲೆ ಬ್ಯಾಂಕ್ ರಿಯಾಯಿತಿಗಳನ್ನು ಸಹ ನೀಡುತ್ತಿದೆ. ಇದರಲ್ಲಿ ಎಸ್‌ಬಿಐ ಕಾರ್ಡ್‌ಗಳನ್ನು ಬಳಸಿಕೊಂಡು ಖರೀದಿಸುವ ಗ್ರಾಹಕರಿಗೆ 10% ರಷ್ಟು ತ್ವರಿತ ರಿಯಾಯಿತಿ ಕೂಡ ಸಿಗಲಿದೆ. ಹಾಗಾದ್ರೆ ಫ್ಲಿಪ್‌ಕಾರ್ಟ್‌ ಬಿಗ್‌ ಸೇವಿಂಗ್‌ ಡೇ ಸೇಲ್‌ನಲ್ಲಿ ಖರೀದಿಸಬಹುದಾದ ಸ್ಮಾರ್ಟ್‌ಫೋನ್‌ಗಳ ವಿವರ ಇಲ್ಲಿದೆ ಓದಿರಿ.

ಆಪಲ್‌ ಐಫೋನ್‌ SE 2020

ಆಪಲ್‌ ಐಫೋನ್‌ SE 2020

ಆಪಲ್‌ ಕಂಪೆನಿಯ ಐಫೋನ್‌ SE 2020 ಅನ್ನು ನೀವು 30,000 ರೂ.ಗಿಂತ ಕಡಿಮೆ ಬೆಲೆಯಲ್ಲಿ ಖರೀದಿಸಬಹುದು. ಅಂದರೆ 44,999 ರೂ. ಮೂಲಬೆಲೆ ಹೊಂದಿರುವ ಐಫೋನ್‌ SE 2020 ಅನ್ನು ನೀವು ಕೇವಲ 29,999 ರೂಗಳಲ್ಲಿ ಖರೀದಿಸಬಹುದು. ಆಪಲ್ ಕಂಪೆನಿ ಈ ಫೋನ್‌ ಮೇಲೆ 13,000 ರೂಪಾಯಿಗಳವರೆಗೆ ಎಕ್ಸ್‌ಚೇಜ್‌ ಆಫರ್‌ ನೀಡುತ್ತಿದೆ. ಈ ಆಫರ್‌ ಅನ್ನು ಕೂಡ ನೀವು ಪಡೆದುಕೊಂಡರೆ ಐಫೋನ್‌ SE 2020 ನಿಮಗೆ ಕೇವಲ 19,999ರೂ.ಗಳಿಗೆ ದೊರೆಯಲಿದೆ.

ಗೂಗಲ್‌ ಪಿಕ್ಸೆಲ್‌ 4a

ಗೂಗಲ್‌ ಪಿಕ್ಸೆಲ್‌ 4a

ಫ್ಲಿಪ್‌ಕಾರ್ಟ್‌ ಬಿಗ್‌ ಸೇವಿಂಗ್‌ ಡೇ ಸೇಲ್‌ನಲ್ಲಿ ಗೂಗಲ್‌ ಪಿಕ್ಸೆಲ್‌ 4a ಬಿಗ್‌ ಆಫರ್‌ ಪಡೆದುಕೊಂಡಿದೆ. ಈ ಫೋನ್‌ ಸೇಲ್‌ ಸಮಯದಲ್ಲಿ ಕೇವಲ 27,999 ರೂ.ಗೆ ಮಾರಾಟವಾಗುತ್ತಿದೆ.ಈ ಸ್ಮಾರ್ಟ್‌ಫೋನ್‌ನ ಮೂಲ ಬೆಲೆ 31,999 ರೂ.ಆಗಿದೆ. ಇದಲ್ಲದೆ ನೀವು SBI ಕಾರ್ಡ್ ಬಳಸಿ ಪಾವತಿ ಮಾಡಿದರೆ 10% ರಷ್ಟು ತ್ವರಿತ ಡಿಸ್ಕೌಂಟ್‌ ಅನ್ನು ಕೂಡ ಪಡೆದುಕೊಳ್ಳಬಹುದಾಗಿದೆ. ಇನ್ನು ಗೂಗಲ್‌ ಪಿಕ್ಸೆಲ್‌ 4a ಸ್ಮಾರ್ಟ್‌ಫೋನ್‌ 5.8 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಸ್ನ್ಯಾಪ್‌ಡ್ರಾಗನ್ 730G ಪ್ರೊಸೆಸರ್ ಬಲವನ್ನು ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 10 ಓಎಸ್‌ ಸಪೋರ್ಟ್‌ ಸಹ ಪಡೆದಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ರಚನೆಯನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾವು 12ಎಂಪಿ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿದೆ.

ಮೊಟರೊಲಾ ಎಡ್ಜ್‌ 20 ಪ್ರೊ

ಮೊಟರೊಲಾ ಎಡ್ಜ್‌ 20 ಪ್ರೊ

ಮೊಟೊರೊಲಾ ಎಡ್ಜ್‌ 20 ಪ್ರೊ ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ ಬಿಗ್‌ ಸೇವಿಂಗ್‌ ಡೇಸ್‌ ಸೇಲ್‌ನಲ್ಲಿ ರಿಯಾಯಿತಿ ದರದಲ್ಲಿ 32,999ರೂ.ಗಳಿಗೆ ಲಭ್ಯವಾಗಲಿದೆ. ಈ ಫೋನ್‌ನ ಮೂಲ ಬೆಲೆ 36,999 ರೂ. ಆಗಿದೆ. ಇದಲ್ಲದೆ ಬ್ಯಾಂಕ್ ಆಫರ್‌ ಮೂಲಕ 32,249ರೂ.ಗಳಿಗೆ ಖರೀದಿಸಬಹುದು. ಇನ್ನು ಈ ಸ್ಮಾರ್ಟ್‌ಫೋನ್‌ 6.7 ಇಂಚಿನ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 144Hzಗಿಂತ ಹೆಚ್ಚಿನ ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 870SoC ಪ್ರೊಸೆಸರ್‌ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ f/1.9 ಲೆನ್ಸ್ ಹೊಂದಿದೆ. ಜೊತೆಗೆ 4,500mAh ಬ್ಯಾಟರಿಯನ್ನು ಒದಗಿಸಿದ್ದು, 30W ಟರ್ಬೊಪವರ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಮೊಟೊರೊಲಾ ಎಡ್ಜ್ 20

ಮೊಟೊರೊಲಾ ಎಡ್ಜ್ 20

ಇನ್ನು ಫ್ಲಿಪ್‌ಕಾರ್ಟ್‌ ಸೇಲ್‌ನಲ್ಲಿ ಮೊಟೊರೊಲಾ ಎಡ್ಜ್‌ 20 ಫೋನ್‌ ಡಿಸ್ಕೌಂಟ್‌ನಲ್ಲಿ 25,999ರೂ.ಗಳಿಗೆ ದೊರೆಯಲಿದೆ. ಈ ಫೋನ್‌ನ ಮೂಲ ಬೆಲೆ 29,999 ರೂ.ಆಗಿದೆ. ಇದಲ್ಲದೆ ಬ್ಯಾಂಕ್‌ ಆಫರ್‌ ಮೂಲಕ ಈ ಸ್ಮಾರ್ಟ್‌ಫೋನ್‌ 25,249ರೂ.ಗಳಿಗೆ ಖರೀದಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.7-ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಹೊಂದಿದೆ. ಇನ್ನು ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ. ಜೊತೆಗೆ 4,000mAh ಬ್ಯಾಟರಿ ಹೊಂದಿದ್ದು, 30W ಟರ್ಬೊಪವರ್ ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2,ಬೆಂಬಲಿಸಲಿದೆ.

Best Mobiles in India

English summary
Flipkart big savings day sale offers deals on best selling phones like Pixel 4a, Motorola Edge 20

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X