Flipkart Big Savings Days sale!..ಈ ಸ್ಮಾರ್ಟ್‌ಫೋನ್‌ಗಳಿಗೆ ಭಾರಿ ಡಿಸ್ಕೌಂಟ್!
ಇ-ಕಾಮರ್ಸ್ ದೈತ್ಯ ಫ್ಲಿಪ್‌ಕಾರ್ಟ್ ಡಿಸೆಂಬರ್ 18 ರಿಂದ ಬಿಗ್ ಸೇವಿಂಗ್ ಡೇಸ್ ಸೇಲ್ ಆಯೋಜಿಸಿದೆ. ಇಂದು ಸೇಲ್‌ನ ಕೊನೆಯ ದಿನವಾಗಿದ್ದು, ಅಂತಿಮ ದಿನ ಸ್ಮಾರ್ಟ್‌ಫೋನ್‌ಗಳ ಮೇಲೆ ಭಾರಿ ರಿಯಾಯಿತಿಯನ್ನು ಘೋಷಿಸಲಾಗಿದೆ. ಸದ್ಯ ಈ ಸೇಲ್‌ನಲ್ಲಿ ಫ್ಲಿಪ್‌ಕಾರ್ಟ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದೊಂದಿಗೆ ಪಾಲುದಾರಿಕೆ ಹೊಂದಿದ್ದು, ಖರೀದಿದಾರರಿಗೆ ತ್ವರಿತ 10% ರಷ್ಟು ರಿಯಾಯಿತಿ ನೀಡುತ್ತಿದೆ. ಎಸ್‌ಬಿಐ ಕ್ರೆಡಿಟ್ ಕಾರ್ಡ್ ಬಳಕೆದಾರರಿಂದ ಮಾತ್ರ 10% ರಷ್ಟು ರಿಯಾಯಿತಿ ಪಡೆಯಬಹುದು ಎಂದು ಹೇಳಿದೆ.

ಹೌದು, ಫ್ಲಿಪ್‌ಕಾರ್ಟ್‌ನ ಬಿಗ್ ಸೇವಿಂಗ್ ಡೇಸ್ ಸೇಲ್ ಇಂದು ಕೊನೆಯಾಗಲಿದೆ. ಕೊನೆಯ ದಿನದ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್‌ಗಳು ಮತ್ತು ಇತರ ಗ್ರಾಹಕ ಎಲೆಕ್ಟ್ರಾನಿಕ್ಸ್ ಸೇರಿದಂತೆ ವಿಭಾಗಗಳಲ್ಲಿ ರಿಯಾಯಿತಿ ಕೊಡುಗೆಗಳನ್ನು ನೀಡುತ್ತಿದೆ. ಫ್ಲಿಪ್‌ಕಾರ್ಟ್‌ನಲ್ಲಿ ಇಂದು ಅನೇಕ ಬ್ರಾಂಡ್‌ಗಳ ಅನೇಕ ಸ್ಮಾರ್ಟ್‌ಫೋನ್‌ಗಳು ರಿಯಾಯಿತಿ ದರದಲ್ಲಿ ಲಭ್ಯವಿದ್ದರೂ, ಲಭ್ಯವಿರುವ ಐದು ಅತ್ಯುತ್ತಮ ಸ್ಮಾರ್ಟ್‌ಫೋನ್ ಡೀಲ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F41
ಈ ವರ್ಷದ ಆರಂಭದಲ್ಲಿ ಬಿಡುಗಡೆ ಆದ ಸ್ಯಾಮ್‌ಸಂಗ್ ಗ್ಯಾಲಕ್ಸಿ F41 ಸ್ಮಾರ್ಟ್‌ಫೋನ್ ಕೂಡ ಫ್ಲಿಪ್‌ಕಾರ್ಟ್‌ನ್ಲ್ಲಿ ರಿಯಾಯಿತಿ ದರದಲ್ಲಿ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮೂಲಬೆಲೆ 19,999 ರೂ ಆಗಿದ್ದು, ಸದ್ಯ ಫ್ಲಿಪ್‌ಕಾರ್ಟ್‌ನಲ್ಲಿ 15,499 ರೂ ಗೆ ಲಭ್ಯವಾಗಲಿದೆ. ಇದಲ್ಲದೆ, ಖರೀದಿದಾರರು ತಮ್ಮ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಕ್ರೆಡಿಟ್ ಕಾರ್ಡ್ ಬಳಸಿ ಶಾಪಿಂಗ್‌ಗೆ 10% ತ್ವರಿತ ರಿಯಾಯಿತಿ ಪಡೆಯಬಹುದು. ಫ್ಲಿಪ್‌ಕಾರ್ಟ್ ಸಹ ಎಕ್ಸಚೇಂಜ್ ಆಫರ್‌ನಲ್ಲಿ 1000 ರೂ ಹೆಚ್ಚುವರಿ ರಿಯಾಯಿತಿ ನೀಡುತ್ತಿದೆ.

ಪೊಕೊ X3
ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್‌ನಲ್ಲಿ ಪೊಕೊ X3 ಸ್ಮಾರ್ಟ್‌ಫೋನ್ ರಿಯಾಯಿತಿ ಬೆಲೆಯಲ್ಲಿ ಲಭ್ಯವಾಲಿದೆ. ಈ ವರ್ಷದ ಆರಂಭದಲ್ಲಿ ಬಿಡುಗಡೆ ಆದ ಈ ಸ್ಮಾರ್ಟ್‌ಫೋನ್ ಮೂಲ ಬೆಲೆ 19,999 ರೂ ಆಗಿದ್ದು, ಫ್ಲಿಪ್‌ಕಾರ್ಟ್ ಸೇಲ್‌ನಲ್ಲಿ 15,999 ರೂ.ಗಳ ರಿಯಾಯಿತಿ ದರದಲ್ಲಿ ಲಭ್ಯವಾಗಲಿದೆ. ಇದಕ್ಕಿಂತ ಹೆಚ್ಚಾಗಿ, ಖರೀದಿದಾರರು ತಮ್ಮ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಕ್ರೆಡಿಟ್ ಕಾರ್ಡ್ ಬಳಸಿ ಶಾಪಿಂಗ್‌ಗೆ 10% ರಷ್ಟು ತ್ವರಿತ ರಿಯಾಯಿತಿ ಪಡೆಯಬಹುದು.

ಆಪಲ್ ಐಫೋನ್ XR
ನೀವು ಇದೀಗ ಐಫೋನ್ ಖರೀದಿಸಲು ಬಯಸಿದರೆ, ಫ್ಲಿಪ್‌ಕಾರ್ಟ್‌ನಿಂದ ಐಫೋನ್ ಎಕ್ಸ್‌ಆರ್ ಅನ್ನು ಖರೀದಿಸಲು ಉತ್ತಮ ಅವಕಾಶವಿದೆ. ಫ್ಲಿಪ್‌ಕಾರ್ಟ್‌ನ ಬಿಗ್ ಸೇವಿಂಗ್ಸ್ ಡೇಸ್ ಸೇಲ್‌ನ ಕೊನೆಯ ದಿನವಾದ ಇಂದು ಐಫೋನ್ ಎಕ್ಸ್ಆರ್ ಕೇವಲ 38,999 ರೂ.ಗಳ ರಿಯಾಯಿತಿ ದರದಲ್ಲಿ ಖರೀದಿಸಬಹುದಾಗಿದೆ. ಇದಲ್ಲದೆ, ಖರೀದಿದಾರರು ತಮ್ಮ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಕ್ರೆಡಿಟ್ ಕಾರ್ಡ್ ಬಳಸಿ ಶಾಪಿಂಗ್‌ಗೆ 10% ತ್ವರಿತ ರಿಯಾಯಿತಿ ಪಡೆಯಬಹುದು.

ರಿಯಲ್‌ಮಿ X3 ಸೂಪರ್ ಜೂಮ್
ರಿಯಲ್‌ಮಿ X3 ಸೂಪರ್ ಜೂಮ್ ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್ ಸಮಯದಲ್ಲಿ, 23,999 ರೂ.ಗಳ ರಿಯಾಯಿತಿ ದರದಲ್ಲಿ ಮಾರಾಟವಾಗುತ್ತಿದೆ. ಇದಲ್ಲದೆ, ಖರೀದಿದಾರರು ತಮ್ಮ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಕ್ರೆಡಿಟ್ ಕಾರ್ಡ್ ಬಳಸಿ ಶಾಪಿಂಗ್‌ಗೆ 10% ತ್ವರಿತ ರಿಯಾಯಿತಿ ಪಡೆಯಬಹುದು.

ಎಲ್‌ಜಿ G8X
ಎಲ್‌ಜಿ G8X ಸ್ಮಾರ್ಟ್‌ಫೋನ್ ಬಿಗ್ ಸೇವಿಂಗ್ಸ್ ಡೇಸ್ ಸೇಲ್ ನಲ್ಲಿ ಫ್ಲಿಪ್‌ಕಾರ್ಟ್‌ನಲ್ಲಿ ಲಭ್ಯವಿರುವ ಅತ್ಯುತ್ತಮ ಡೀಲ್‌ಗಳಲ್ಲಿ ಒಂದಾಗಿದೆ. ಡ್ಯುಯಲ್ ಸ್ಕ್ರೀನ್ ಎಲ್‌ಜಿ G8X 25,990 ರೂ.ಗಳ ರಿಯಾಯಿತಿ ದರದಲ್ಲಿ ಲಭ್ಯವಿದೆ. ಇದಲ್ಲದೆ, ಖರೀದಿದಾರರು ತಮ್ಮ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಕ್ರೆಡಿಟ್ ಕಾರ್ಡ್ ಬಳಸಿ ಶಾಪಿಂಗ್‌ಗೆ 10% ತ್ವರಿತ ರಿಯಾಯಿತಿ ಪಡೆಯಬಹುದು.


Click it and Unblock the Notifications








