ಬಜೆಟ್ ಬೆಲೆಯ ಫೋನ್‌ಗಳಿಗೆ ಫ್ಲಿಪ್‌ಕಾರ್ಟ್ ಸೇಲ್‌ನಲ್ಲಿ ಬೊಂಬಾಟ್ ಆಫರ್!
ಜನಪ್ರಿಯ ಇ-ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್ ತನ್ನ ಸೈಟ್‌ನಲ್ಲಿ ಫ್ಲಿಪ್‌ಕಾರ್ಟ್ ಬ್ಲ್ಯಾಕ್ ಫ್ರೈಡೇ ಸೇಲ್ ನಡೆಸುತ್ತಿದೆ. ಈ ಸೇಲ್ ಇದೇ ನವೆಂಬರ್ 30 ರವರೆಗೆ ನಡೆಯಲಿದ್ದು, ಸೇಲ್ ಸಮಯದಲ್ಲಿ ಸ್ಮಾರ್ಟ್‌ಫೋನ್‌ಗಳ ಮೇಲೆ ಭಾರಿ ರಿಯಾಯಿತಿಯನ್ನು ನೀಡಲಾಗ್ತಿದೆ. ಇನ್ನು ಈ ಸೇಲ್‌ನಲ್ಲಿ ಖರೀದಿದಾರರು ಐಸಿಐಸಿಐ ಬ್ಯಾಂಕ್ ಕಾರ್ಡ್, ಕೋಟಾಕ್ ಬ್ಯಾಂಕ್ ಕಾರ್ಡ್, ಸಿಟಿ ಬ್ಯಾಂಕ್ ಕಾರ್ಡ್ ಬಳಸಿ ಸ್ಮಾರ್ಟ್‌ಫೋನ್ ಖರೀದಿಸಿದರೆ 12% ವರೆಗೆ ರಿಯಾಯಿತಿಯನ್ನು ಪಡೆದುಕೊಳ್ಳಬಹುದಾಗಿದೆ.

ಹೌದು, ಫ್ಲಿಪ್‌ಕಾರ್ಟ್ ಬ್ಲ್ಯಾಕ್ ಫ್ರೈಡೇ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್‌ಗಳ ಮೇಲೆ ಬಿಗ್ ಡಿಸ್ಕೌಂಟ್ ಲಭ್ಯವಿದೆ. ಇದೇ ಸಮಯದಲ್ಲಿ ನೀವು 20,000ರೂ. ಒಳಗಿನ ಸ್ಮಾರ್ಟ್‌ಫೋನ್ ಖರೀದಿಸಲು ಬಯಸಿದರೆ ವಿಶೇಷ ರಿಯಾಯಿತಿಗಳನ್ನು ಪಡೆದುಕೊಳ್ಳಬಹುದಾಗಿದೆ. ಇದಲ್ಲದೆ ಎಕ್ಸ್‌ಚೇಂಜ್ ಆಫರ್‌ಗಳು, ನೋ-ಕಾಸ್ಟ್ ಇಎಂಐ ಮತ್ತು ಸ್ಕ್ರೀನ್ ಡ್ಯಾಮೇಜ್ ಪ್ರೊಟೆಕ್ಷನ್ ಅನ್ನು ಕೂಡ ಪಡೆದುಕೊಳ್ಳಬಹುದಾಗಿದೆ. ಜೊತೆಗೆ ಫ್ಲಿಪ್‌ಕಾರ್ಟ್ ಪೇ ಲೇಟರ್ ಖರೀದಿ ಆಯ್ಕೆಯೂ ಇದೆ. ಹಾಗಾದ್ರೆ ಈ ಸೇಲ್‌ನಲ್ಲಿ ನೀವು ಖರೀದಿಸಬಹುದಾದ ಸ್ಮಾರ್ಟ್‌ಫೋನ್‌ಗಳು ಯಾವುವು ಎಂಬುದರ ವಿವರ ಇಲ್ಲಿದೆ ಓದಿರಿ.

ಪೊಕೊ X4 ಪ್ರೊ 5G
ಪೊಕೊ X4 ಪ್ರೊ 5G ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ಬ್ಲ್ಯಾಕ್ ಫ್ರೈಡೇ ಸೇಲ್‌ನಲ್ಲಿ 25% ಡಿಸ್ಕೌಂಟ್ ಪಡೆದುಕೊಂಡಿದೆ. ಇದರಿಂದ ಈ ಸ್ಮಾರ್ಟ್‌ಫೋನ್ ನಿಮಗೆ ಕೇವಲ 17,999ರೂ. ಬೆಲೆಯಲ್ಲಿ ದೊರೆಯಲಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಸೂಪರ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 5G ಪ್ರೊಸೆಸರ್ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಜೊತೆಗೆ 5,000mAh ಬ್ಯಾಟರಿಯನ್ನು ಹೊಂದಿದೆ.

ಮೊಟೊರೊಲಾ ಎಡ್ಜ್ 20 ಫ್ಯೂಶನ್ 5G
ಮೊಟೊರೊಲಾ ಎಡ್ಜ್ 20 ಫ್ಯೂಶನ್ 5G ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್‌ನಲ್ಲಿ ಇದೀಗ 24% ಡಿಸ್ಕೌಂಟ್ ಪಡೆದಿದೆ. ಇದೇ ಕಾರಣಕ್ಕೆ ಈ ಸ್ಮಾರ್ಟ್‌ಫೋನ್ 24,999ರೂ. ಬದಲಿಗೆ 18,999ರೂ. ಬೆಲೆಯಲ್ಲಿ ದೊರೆಯಲಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 800U 5G SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಜೊತೆಗ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಮೊಟೊರೊಲಾ g82 5G
ಮೊಟೊರಲಾ g82 5G ಸ್ಮಾರ್ಟ್‌ಫೋನಿನ 6GB RAM + 128GB ಸ್ಟೋರೇಜ್ ಆಯ್ಕೆಯು ಫ್ಲಿಪ್‌ಕಾರ್ಟ್‌ನಲ್ಲಿ 16% ರಿಯಾಯಿತಿಯಲ್ಲಿ ದೊರೆಯಲಿದೆ. ಆದರಿಂದ ಈ ಫೋನ್ ಇದೀಗ 23,999ರೂ. ಬದಲಿಗೆ 19,999ರೂ. ಬೆಲೆಯಲ್ಲಿ ದೊರೆಯಲಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 30W ಚಾರ್ಜಿಂಗ್‌ಗೆ ಬೆಂಬಲಿಸಲಿದೆ.

ರಿಯಲ್‌ಮಿ 9 5G SE
ರಿಯಲ್‌ಮಿ 9 5G SE ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್‌ನಲ್ಲಿ 20% ಡಿಸ್ಕೌಂಟ್ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ ನಿಮಗೆ ಕೇವಲ 19,999ರೂ. ಬೆಲೆಗೆ ದೊರೆಯಲಿದೆ. ಇದಲ್ಲದೆ 17,500ರೂ. ವರೆಗೆ ಎಕ್ಸ್‌ಚೇಂಜ್ ಆಫರ್ ಕೂಡ ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.6 ಇಂಚಿನ FHD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ ಕೋರ್ ಸ್ನ್ಯಾಪ್‌ಡ್ರಾಗನ್ 778G SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಜೊತೆಗೆ 5,000mAh ಬ್ಯಾಟರಿಯನ್ನು ಹೊಂದಿದೆ.


Click it and Unblock the Notifications








