ಪೊಕೊ C31 ಸ್ಮಾರ್ಟ್‌ಫೋನ್‌ ಖರೀದಿಗೆ, ಇಷ್ಟೊಂದು ಡಿಸ್ಕೌಂಟ್‌ ಮತ್ತೆ ಸಿಗಲ್ಲ!

|

ಇತ್ತೀಚಿನ ದಿನಗಳಲ್ಲಿ ಬಹುತೇಕರು ಗ್ಯಾಡ್ಜೆಟ್ಸ್‌ ಖರೀದಿಸುವ ಮುನ್ನ ಆನ್‌ಲೈನ್‌ ತಾಣಗಳಲ್ಲಿ ಜಾಲಾಡುತ್ತಾರೆ. ಇ ಕಾಮರ್ಸ್‌ ತಾಣಗಳಲ್ಲಿ ಏನಾದರೂ ರಿಯಾಯಿತಿ ಇದೆಯಾ ಎಂದು ಚೆಕ್ ಮಾಡುತ್ತಾರೆ. ಇದಕ್ಕೆ ಕಾರಣಕ್ಕೆ ಇ ಕಾಮರ್ಸ್‌ ತಾಣಗಳು ಒಂದಿಲ್ಲೊಂದು ಸೇಲ್‌ ಮೂಲಕ ಡಿಸ್ಕೌಂಟ್‌ ನೀಡುವ ಮೂಲಕ ಆಕರ್ಷಿಸಿವೆ. ಸದ್ಯ ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್‌ ಇದೀಗ ಎಲೆಕ್ಟ್ರಾನಿಕ್ಸ್‌ ಸೇಲ್‌ ಅನ್ನು ಆಯೋಜಿಸಿ ಗಮನ ಸೆಳೆದಿದೆ.

ಮೂಲಕ

ಹೌದು, ಫ್ಲಿಪ್‌ಕಾರ್ಟ್‌ ಇದೀಗ ಮತ್ತೊಂದು ಸೇಲ್‌ ಮೂಲಕ ಮರಳಿದೆ. ಫ್ಲಿಪ್‌ಕಾರ್ಟ್‌ ತನ್ನ ಪ್ಲಾಟ್‌ಫಾರ್ಮ್‌ನಲ್ಲಿ ಎಲೆಕ್ಟ್ರಾನಿಕ್ಸ್‌ ಸೇಲ್‌ ಅನ್ನು ಆಯೋಜಿಸಿದೆ. ಈ ಸೇಲ್‌ ಈಗಾಗಲೇ ಲೈವ್‌ ಆಗಿದ್ದು, ಇದೇ ಆಗಷ್ಟ್‌ 25 ರವರೆಗೆ ನಡೆಯಲಿದೆ. ಇನ್ನು ಈ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್‌ಗಳ ಮೇಲೆ ಭರ್ಜರಿ ಡಿಸ್ಕೌಂಟ್‌ ನೀಡುತ್ತಿದೆ. ಆ ಪೈಕಿ ಪೊಕೊ C31 ಸ್ಮಾರ್ಟ್‌ಫೋನ್‌ ಹೆಚ್ಚು ರಿಯಾಯಿತಿಯಲ್ಲಿ ಗಮನ ಸೆಳೆದಿದೆ.

ಒಳಗೊಂಡಿದೆ

ಫ್ಲಿಪ್‌ಕಾರ್ಟ್‌ ಎಲೆಕ್ಟ್ರಾನಿಕ್ಸ್‌ ಸೇಲ್‌ ಪೇಜ್‌ನಲ್ಲಿ ಪೊಕೊ C31 ಸ್ಮಾರ್ಟ್‌ಫೋನ್‌ ಜಸ್ಟ್‌ 6,999 ರೂ. ಗಳ ಪ್ರೈಸ್‌ ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಇನ್ನು ಈ ಫೋನ್ ಟ್ರಿಪಲ್‌ ಕ್ಯಾಮೆರಾ ರಚನೆಯನ್ನು ಒಳಗೊಂಡಿದೆ. ಹಾಗಾದರೇ ಪೊಕೊ C31 ಸ್ಮಾರ್ಟ್‌ಫೋನಿನ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಹೇಗಿದೆ?

ಡಿಸ್‌ಪ್ಲೇ ರಚನೆ ಹೇಗಿದೆ?

ಪೊಕೊ C31 ಸ್ಮಾರ್ಟ್‌ಫೋನ್ 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.53-ಇಂಚಿನ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಇದು ಎಲ್‌ಸಿಡಿ ಡಿಸ್‌ಪ್ಲೇ ಆಗಿದ್ದು, ವಾಟರ್‌ಡ್ರಾಪ್-ನಾಚ್‌ ಶೈಲಿಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಅಲ್ಲದೆ ಟಿಯುವಿ ರೈನ್‌ಲ್ಯಾಂಡ್ ಕಡಿಮೆ ನೀಲಿ ಬೆಳಕಿನ ಪ್ರಮಾಣೀಕರಣವನ್ನು ಹೊಂದಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಇದು ಮೀಡಿಯಾ ಟೆಕ್‌ ಹಿಲಿಯೋ G35 SoC ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ವೇರಿಯೆಂಟ್‌ ಆಯ್ಕೆಯನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್ಡಿ ಕಾರ್ಡ್ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಪೊಕೊ C31 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡು ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಕ್ಯಾಮೆರಾಗಳನ್ನು ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಕ್ಯಾಮೆರಾ ಫಿಚರ್ಸ್‌ಗಳಲ್ಲಿ ಆಟೋಫೋಕಸ್, HDR, AI ಭಾವಚಿತ್ರ ಮೋಡ್, ಮುಖ ಗುರುತಿಸುವಿಕೆ, ai ದೃಶ್ಯ ಪತ್ತೆ ಮತ್ತು ನೈಟ್‌ ಮೋಡ್ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಪೊಕೊ C31 ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 540 ಗಂಟೆಗಳ ಸ್ಟ್ಯಾಂಡ್‌ಬೈ, 30 ಗಂಟೆಗಳ ಇ-ಲರ್ನಿಂಗ್, 34 ಗಂಟೆಗಳ VoLTE ಕರೆ, 10 ಗಂಟೆಗಳ ಗೇಮಿಂಗ್ ಮತ್ತು 91 ಗಂಟೆಗಳ ಮ್ಯೂಸಿಕ್ ಪ್ಲೇಬ್ಯಾಕ್ ನೀಡಲಿದೆ. ಇದು ಫಿಂಗರ್‌ಪ್ರಿಂಟ್ ಸೆನ್ಸರ್ ಮತ್ತು ಫೇಸ್ ಅನ್‌ಲಾಕ್ ಬೆಂಬಲವನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ VoLTE ಮತ್ತು VoWiFi, 3.5mm ಆಡಿಯೋ ಜಾಕ್, ಬ್ಲೂಟೂತ್ v5, ಮತ್ತು ಮೈಕ್ರೋ USB ಪೋರ್ಟ್ ಅನ್ನು ಬೆಂಬಲಿಸಲಿದೆ. ಇದು ಪಾಲಿಕಾರ್ಬೊನೇಟ್ ಬ್ಯಾಕ್ ಕೇಸಿಂಗ್ ಅನ್ನು ಹೊಂದಿದ್ದು, ಎರಡು-ಟೋನ್ ಪ್ಯಾನಲ್ ವಿನ್ಯಾಸವನ್ನು ಹೊಂದಿದೆ. ಜೊತೆಗೆ ಇದು P2i ನ್ಯಾನೋ ಲೇಪನವನ್ನು ಒಳಗೊಂಡಿದೆ.

ಮೆಮೊರಿ ಮತ್ತು ಕಲರ್‌ ಆಯ್ಕೆ

ಮೆಮೊರಿ ಮತ್ತು ಕಲರ್‌ ಆಯ್ಕೆ

ಪೊಕೊ C31 ಸ್ಮಾರ್ಟ್‌ಫೋನ್‌ 3GB RAM + 32GB ಸ್ಟೋರೇಜ್ ಮತ್ತು 4GB RAM + 64GB ಸ್ಟೋರೇಜ್ ಆಯ್ಕೆಗಳನ್ನು ಹೊಂದಿದೆ. ಇನ್ನು ಈ ಫೋನ್ ಶಾಡೋ ಗ್ರೇ ಮತ್ತು ರಾಯಲ್ ಬ್ಲೂ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಾಗಲಿದೆ.

Best Mobiles in India

English summary
Flipkart Electronics Sale 2022: Big Discount On Poco C3 Smartphone. Details.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X