Home
ಸುದ್ದಿಜಾಲ

ಡಿಸ್ಕೌಂಟ್‌ನಲ್ಲಿ ಐಫೋನ್ 13 ಮಿನಿ ಖರೀದಿಸಲು ಇವತ್ತೇ ಕೊನೆ ದಿನ!

ಡಿಸ್ಕೌಂಟ್‌ ದರದಲ್ಲಿ ಐಫೋನ್‌ ಖರೀದಿಸಬೇಕೆಂದು ಕೊಂಡವರಿಗೆ ಫ್ಲಿಪ್‌ಕಾರ್ಟ್‌ನಲ್ಲಿ ಇಂದು ಕೊನೆಯ ಅವಕಾಶ ಸಿಗಲಿದೆ. ಫ್ಲಿಪ್‌ಕಾರ್ಟ್‌ ತನ್ನ ಪ್ಲಾಟ್‌ಫಾರ್ಮ್‌ನಲ್ಲಿ ನಡೆಸುತ್ತಿರುವ ಎಲೆಕ್ಟ್ರಾನಿಕ್ಸ್‌ ಸೇಲ್‌ನಲ್ಲಿ ಐಫೋನ್‌ಗಳಿಗೆ ಬಿಗ್‌ ಡಿಸ್ಕೌಂಟ್‌ ನೀಡುತ್ತಿದೆ. ಅದರಲ್ಲೂ ಐಫೋನ್ 13 ಮಿನಿಯನ್ನು ಭಾರಿ ಡಿಸ್ಕೌಂಟ್‌ ದರದಲ್ಲಿ ಖರೀದಿಸಬಹುದಾಗಿದೆ. ಇದಲ್ಲದೆ ಹೆಚ್ಚುವರಿಯಾಗಿ ಬ್ಯಾಂಕ್ ಆಫರ್‌ ಮತ್ತು ಎಕ್ಸ್‌ಚೇಂಜ್‌ ಆಫರ್‌ ಮೂಲಕ ಇನ್ನು ಹೆಚ್ಚಿನ ರಿಯಾಯಿತಿಯನ್ನು ಪಡೆದುಕೊಳ್ಳಬಹುದಾಗಿದೆ.

ಫ್ಲಿಪ್‌ಕಾರ್ಟ್‌

ಹೌದು, ಫ್ಲಿಪ್‌ಕಾರ್ಟ್‌ ಆಯೋಜಿಸಿರುವ ಫ್ಲಿಪ್‌ಕಾರ್ಟ್‌ ಎಲೆಕ್ಟ್ರಾನಿಕ್ಸ್‌ ಸೇಲ್‌ ಚಾಲ್ತಿಯಲ್ಲಿದೆ. ಇಂದು ಕೊನೆಯಾಗಲಿರುವ ಈ ಸೇಲ್‌ನಲ್ಲಿ ಇಂದು ಐಫೋನ್‌ 13 ಮಿನಿ ಮೇಲೆ ಭಾರಿ ಆಫರ್‌ ಘೋಷಿಸಲಾಗಿದೆ. ಐಫೋನ್‌ 13 ಮಿನಿ ಪ್ರಸ್ತುತ 66,900ರೂ.ಗಳಿಗೆ ಲಭ್ಯವಾಗಲಿದ್ದು, ಎಕ್ಸ್‌ಚೇಂಜ್‌ ಆಫರ್‌ನಲ್ಲಿ 15,850 ವರೆಗೆ ರಿಯಾಯಿತಿ ಪಡೆದುಕೊಳ್ಳಬಹುದಾಗಿದೆ. ಹಾಗಾದ್ರೆ ಫ್ಲಿಪ್‌ಕಾರ್ಟ್‌ ಎಲೆಕ್ಟ್ರಾನಿಕ್ಸ್‌ ಸೇಲ್‌ನಲ್ಲಿ ಐಫೋನ್‌ 13 ಮಿನಿ ಮೇಲೆ ಏನೆಲ್ಲಾ ಆಫರ್‌ ಲಭ್ಯವಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತವಿ ಓದಿರಿ.

ಐಫೋನ್‌ 13 ಮಿನಿ

ಐಫೋನ್‌ 13 ಮಿನಿ ಭಾರತದಲ್ಲಿ 69,900ರೂ.ಬೆಲೆಗೆ ಬಿಡುಗಡೆ ಆಗಿತ್ತು. ಸದ್ಯ ಇದೀಗ ಐಫೋನ್‌ 13 ಮಿನಿ ಅನ್ನು ರಿಯಾಯಿತಿ ದರದಲ್ಲಿ 66,900ರೂ.ಗಳಿಗೆ ಖರೀದಿಸಬಹುದಾಗಿದೆ. ಅಂದರೆ ಫ್ಲಿಪ್‌ಕಾರ್ಟ್‌ನಲ್ಲಿ ಈ ಐಫೋನ್‌ ಮೇಲೆ 3,000ರೂ. ರಿಯಾಯಿತಿ ದೊರೆಯಲಿದೆ. ಜೊತೆಗೆ, ಖರೀದಿದಾರರು ಸಿಟಿ ಬ್ಯಾಂಕ್ ಕಾರ್ಡ್‌ಗಳಲ್ಲಿ 1,000ರೂ. ವರೆಗೆ ರಿಯಾಯಿತಿ ಪಡೆಯಬಹುದು. ಇದಲ್ಲದೆ ಕ್ರೆಡಿಟ್ ಕಾರ್ಡ್ ಹೊಂದಿರುವವರು ಹೆಚ್ಚುವರಿ 500 ರೂ. ಡಿಸ್ಕೌಂಟ್‌ ಪಡೆದುಕೊಳ್ಳಬಹುದಾಗಿದೆ. ಹಾಗೆಯೇ ಎಕ್ಸ್‌ಚೇಂಜ್‌ ಆಫರ್‌ನಲ್ಲಿ 15,850ರೂ. ವರೆಗೆ ರಿಯಾಯಿತಿ ಪಡೆದುಕೊಳ್ಳಬಹುದಾಗಿದೆ. ಇದರಿಂದ ಗ್ರಾಹಕರು ಐಫೋನ್‌ 13 ಮಿನಿ 50,050 ರೂಗಳಿಗೆ ಖರೀದಿಸಲು ಸಾಧ್ಯವಾಗುತ್ತದೆ. ಇನ್ನು ಐಫೋನ್‌ 13 ಮಿನಿ ಫೀಚರ್ಸ್‌ ಹೇಗಿದೆ ಅನ್ನೊದನ್ನ ಕೆಳಗಿನ ಹಂತಗಳಲ್ಲಿ ತಿಳಿಯಿರಿ.

ಐಫೋನ್‌ 13 ಮಿನಿ

ಐಫೋನ್‌ 13 ಮಿನಿ 1,080 x 2,340 ಪಿಕ್ಸೆಲ್ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 5.4-ಇಂಚಿನ ರೆಟಿನಾ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 800nits ಬ್ರೈಟ್ನೆಸ್‌ ಹೊಂದಿದೆ. ಹಾಗೆಯೇ ಈ ಫೋನ್ A15 ಬಯೋನಿಕ್ ಪ್ರೊಸೆಸರ್ ಹೊಂದಿದ್ದು, iOS 15 ನಲ್ಲಿ ಕಾರ್ಯನಿರ್ವಹಿಸುತ್ತದೆ. ಇದು 5G ಸಪೋರ್ಟ್‌ ಪಡೆದಿದ್ದು, ಈ ಪ್ರೊಸೆಸರ್ 50% ವೇಗದ ಗ್ರಾಫಿಕ್ಸ್‌ ಸೌಲಭ್ಯ ಪಡೆದಿದೆ. ಹಾಗೆಯೇ 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಐಫೋನ್‌ 13 ಮಿನಿ ಡ್ಯುಯಲ್ ಕ್ಯಾಮೆರಾ ಸೆಟಪ್ ಅನ್ನು ಪಡೆದಿದೆ. ಇವುಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಅಲ್ಟ್ರಾ ಕ್ಯಾಮೆರಾ ಸೆನ್ಸಾರ್ ಹೊಂದಿದ್ದು, ಇನ್ನೊಂದು ಕ್ಯಾಮೆರಾವು 12 ಮೆಗಾ ಪಿಕ್ಸಲ್ ವೈಲ್ಡ್‌ ಆಂಗಲ್ ಲೆನ್ಸ್‌ ಪಡೆದಿದೆ. ಇನ್ನು ಐಫೋನ್‌ 13 ಮಿನಿ ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, GPS, NFC, ಲೈಟಿಂಗ್ ಪೋರ್ಟ್, 3G ಮತ್ತು 4G ಯನ್ನು ಬೆಂಬಲಿಸಲಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಬ್ಯಾರೋಮೀಟರ್, ಗೈರೊಸ್ಕೋಪ್, ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಒಳಗೊಂಡಿದೆ. ಇನ್ನು ಐಫೋನ್‌ 13 ಮಿನಿ ಕಪ್ಪು, ನೀಲಿ, ಗುಲಾಬಿ, ನೇರಳೆ, ಕೆಂಪು ಮತ್ತು ಬಿಳಿ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದೆ.

ಐಫೋನ್ 12

ಇದಲ್ಲದೆ ಐಫೋನ್ 12 ಕೂಡ ಫ್ಲಿಪ್‌ಕಾರ್ಟ್‌ ಎಲೆಕ್ಟ್ರಾನಿಕ್ಸ್‌ ಸೇಲ್‌ನಲ್ಲಿ ಡಿಸ್ಕೌಂಟ್‌ ಪಡೆದಿದೆ. ಇದನ್ನು ನೀವು ರಿಯಾಯಿತಿ ದರದಲ್ಲಿ ಕೇವಲ 52,999 ರೂಗಳಿಗೆ ಖರೀದಿಸಬಹುದು. ಅಲ್ಲದೆ ಸಿಟಿ ಬ್ಯಾಂಕ್ ಕಾರ್ಡ್‌ ಮೂಲಕ 10% ಆಫರ್‌ ಅನ್ನು ಕೂಡ ಪಡೆದುಕೊಳ್ಳಬಹುದು. ಜೊತೆಗೆ 15,850 ರೂ.ವರೆಗಿನ ಎಕ್ಸ್‌ಚೇಂಜ್ ಆಫರ್‌ ಕೂಡ ಪಡೆಯಬಹುದು. ಇನ್ನು ಇನ್ನು ಆಪಲ್‌ ಐಫೋನ್ 12 OLED ಡಿಸ್‌ಪ್ಲೇ ಹೊಂದಿದೆ. ಇದು A14 ಬಯೋನಿಕ್ ಸೋಕ್ ಕ್ವಾಡ್‌ ಕೋರ್ ಪ್ರೊಸೆಸರ್‌ ಅನ್ನು ಹೊಂದಿದ್ದು, 5G ನೆಟ್‌ವರ್ಕ್‌ ಅನ್ನು ಬೆಂಬಲಿಸಲಿದೆ. ಇನ್ನು ಐಫೋನ್ 12 ಫೋನ್ ಎರಡು ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾಪಿಕ್ಸೆಲ್ ವೈಡ್-ಆಂಗಲ್ ಸಂವೇದಕಗಳನ್ನು ಹೊಂದಿವೆ. ಇದರಲ್ಲಿ ನೈಟ್‌ ಮೋಡ್‌ ಆಯ್ಕೆ ಕೂಡ ನೀಡಲಾಗಿದ್ದು ಕಡಿಮೆ ಬೆಳಕಿನಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ.

Best Mobiles in India

English summary
iPhone 13 mini is currently available at Rs 66,900, down from Rs 69,900.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+