ಫ್ಲಿಪ್‌ಕಾರ್ಟ್‌ ಎಲೆಕ್ಟ್ರಾನಿಕ್ಸ್‌ ಸೇಲ್‌! ಜನಪ್ರಿಯ ಸ್ಮಾರ್ಟ್‌ಫೋನ್‌ಗಳಿಗೆ ಬಿಗ್‌ ಆಫರ್‌!

|

ಪ್ರಸ್ತುತ ದಿನಗಳಲ್ಲಿ ಹೆಚ್ಚಿನ ಜನರು ಆನ್‌ಲೈನ್‌ ಶಾಪಿಂಗ್‌ ಮೊರೆ ಹೋಗಿದ್ದಾರೆ. ಆನ್‌ಲೈನ್‌ನಲ್ಲಿ ತಮಗೆ ಬೇಕಾದ ವಸ್ತುಗಳನ್ನ ಇ-ಕಾಮರ್ಸ್‌ ಸೈಟ್‌ಗಳ ಮೂಲಕ ಖರೀದಿಸುವುದು ರೂಡಿಯಾಗಿದೆ. ಇದೇ ಕಾರಣಕ್ಕೆ ಆನ್‌ಲೈನ್‌ ಶಾಪಿಂಗ್‌ ಸೈಟ್‌ಗಳು ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಸದ್ಯ ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್‌ ಕೂಡ ಆನ್‌ಲೈನ್‌ ಶಾಪಿಂಗ್‌ ಪ್ರಿಯರ ನೆಚ್ಚಿನ ತಾಣಗಳಲ್ಲಿ ಒಂದೆನಿಸಿಕೊಂಡಿದೆ. ಪ್ರತಿನಿತ್ಯವೂ ಒಂದಿಲ್ಲೊಂದು ಡಿಸ್ಕೌಂಟ್‌ ಸೇಲ್‌ ಆಯೋಜಿಸುವ ಫ್ಲಿಪ್‌ಕಾರ್ಟ್‌ ಇದೀಗ ಮತ್ತೊಂದು ಸೇಲ್‌ ನಡೆಸುತ್ತಿದೆ.

ಫ್ಲಿಪ್‌ಕಾರ್ಟ್‌

ಹೌದು, ಫ್ಲಿಪ್‌ಕಾರ್ಟ್‌ ಇದೀಗ ಮತ್ತೊಂದು ಸೇಲ್‌ ಮೂಲಕ ಮರಳಿದೆ. ಫ್ಲಿಪ್‌ಕಾರ್ಟ್‌ ತನ್ನ ಪ್ಲಾಟ್‌ಫಾರ್ಮ್‌ನಲ್ಲಿ ಎಲೆಕ್ಟ್ರಾನಿಕ್ಸ್‌ ಸೇಲ್‌ ಅನ್ನು ಆಯೋಜಿಸಿದೆ. ಈ ಸೇಲ್‌ ಈಗಾಗಲೇ ಲೈವ್‌ ಆಗಿದ್ದು, ಇದೇ ಜೂನ್ 26 ರವರೆಗೆ ನಡೆಯಲಿದೆ. ಇನ್ನು ಈ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್‌ಗಳ ಮೇಲೆ ಭರ್ಜರಿ ಡಿಸ್ಕೌಂಟ್‌ ನೀಡುತ್ತಿದೆ. ಜನಪ್ರಿಯ ಸ್ಮಾರ್ಟ್‌ಫೋನ್‌ ಬ್ರ್ಯಾಂಡ್‌ಗಳಾದ ಶೀಯೋಮಿ, ರಿಯಲ್‌ಮಿ, ಆಪಲ್‌, ಸ್ಯಾಮ್‌ಸಂಗ್‌ ಕಂಪೆನಿಗಳ ಫೋನ್‌ಗಳು ವಿಶೇಷ ಡಿಸ್ಕೌಂಟ್‌ ಪಡೆದುಕೊಂಡಿವೆ.

ಫ್ಲಿಪ್‌ಕಾರ್ಟ್‌

ಫ್ಲಿಪ್‌ಕಾರ್ಟ್‌ ಎಲೆಕ್ಟ್ರಾನಿಕ್ಸ್‌ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್‌ಗಳ ಮೇಲೆ ಹೆಚ್ಚುವರಿ ಡಿಸ್ಕೌಂಟ್‌ ನೀಡಲಾಗ್ತಿದೆ. ಇದರಿಂದ ಸ್ಮಾರ್ಟ್‌ಫೋನ್‌ಗಳ ಬೆಲೆಯಲ್ಲಿ ಸಾಕಷ್ಟು ಬದಲಾವಣೆಯನ್ನು ಕಾಣಬಹುದಾಗಿದೆ. ಸ್ಮಾರ್ಟ್‌ಫೋನ್‌ ಖರೀದಿಸುವ ಗ್ರಾಹಕರು ಎಸ್‌ಬಿಐ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ ಮತ್ತು ನೋ-ಕಾಸ್ಟ್ ಇಎಂಐ ಆಯ್ಕೆಗಳಲ್ಲಿ 10% ಡಿಸ್ಕೌಂಟ್‌ ಪಡೆಯಬಹುದು. ಹಾಗಾದ್ರೆ ಫ್ಲಿಪ್‌ಕಾರ್ಟ್‌ ಎಲೆಕ್ಟ್ರಾನಿಕ್ಸ್‌ ಸೇಲ್‌ನಲ್ಲಿ ರಿಯಾಯಿತಿ ದರದಲ್ಲಿ ನೀವು ಖರೀದಿಸಬಹುದಾದ ಟಾಪ್‌ 5 ಸ್ಮಾರ್ಟ್‌ಫೋನ್‌ಗಳ ವಿವರ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಶಿಯೋಮಿ 11i 5G

ಶಿಯೋಮಿ 11i 5G

ಫ್ಲಿಪ್‌ಕಾರ್ಟ್‌ ಎಲೆಕ್ಟ್ರಾನಿಕ್ಸ್‌ ಸೇಲ್‌ನಲ್ಲಿ ಶಿಯೋಮಿ 11i 5G ಫೋನ್‌ ಬಿಗ್‌ ಡಿಸ್ಕೌಂಟ್‌ ಪಡೆದುಕೊಂಡಿದೆ. ಹಾಗಂತ ಈ ಸ್ಮಾರ್ಟ್‌ಫೋನ್‌ ಡೈರೆಕ್ಟ್‌ ಡಿಸ್ಕೌಂಟ್‌ ಆಫರ್‌ ಪಡೆದುಕೊಂಡಿಲ್ಲ. ಬದಲಿಗೆ ಈ ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ನಲ್ಲಿ ಅದರ ಮೂಲ ಬೆಲೆ 24,999ರೂ.ಬೆಲೆ ಹೊಂದಿದೆ. ಆದರೆ, ಪ್ರಿಪೇಯ್ಡ್ ವಹಿವಾಟುಗಳ ಮೇಲೆ 4,000ರೂ. ರಿಯಾಯಿತಿ ದೊರೆಯಲಿದೆ. ಅಂದರೆ ಈ ಸ್ಮಾರ್ಟ್‌ಫೋನ್‌ ನಿಮಗೆ ಕೇವಲ 20,999ರೂ. ಬೆಲೆಯಲ್ಲಿ ದೊರೆಯಲಿದೆ. ಜೊತೆಗೆ ಎಸ್‌ಬಿಐ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ನಲ್ಲಿ 10% ಡಿಸ್ಕೌಂಟ್‌ ಹೊಂದಿದೆ. ಆದ್ದರಿಂದ, ಈ ಸ್ಮಾರ್ಟ್‌ಫೋನ್‌ ಅನ್ನು ನೀವು 19,999ರೂ.ಗಳಿಗೆ ಖರೀದಿಸಲು ಸಾಧ್ಯವಾಗಲಿದೆ.

ಇನ್ನು ಈ ಸ್ಮಾರ್ಟ್‌ಫೋನ್‌ 6.67-ಇಂಚಿನ ಫುಲ್‌ ಹೆಚ್‌ಡಿ + ಸೂಪರ್ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 920 SoC ಪ್ರೊಸೆಸರ್‌ ಬಲವನ್ನು ಒಳಗೊಂಡಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 5,160mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 67W ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ರಿಯಲ್‌ಮಿ ನಾರ್ಜೊ 50

ರಿಯಲ್‌ಮಿ ನಾರ್ಜೊ 50

ಫ್ಲಿಪ್‌ಕಾರ್ಟ್‌ ಎಲೆಕ್ಟ್ರಾನಿಕ್ಸ್ ಸೇಲ್‌ ಸಮಯದಲ್ಲಿ ಡಿಸ್ಕೌಂಟ್‌ನಲ್ಲಿ ದೊರೆಯುವ ಅತ್ಯುತ್ತಮ ಆಯ್ಕೆಗಳಲ್ಲಿ ರಿಯಲ್‌ಮಿ ನಾರ್ಜೊ 50ಫೋನ್‌ ಒಂದಾಗಿದೆ. 15,999ರೂ. ಮೂಲ ಬೆಲೆ ಹೊಂದಿರುವ ಈ ಸ್ಮಾರ್ಟ್‌ಫೋನ್‌ ನಿಮಗೆ ರಿಯಾಯಿತಿ ದರದಲ್ಲಿ 12,999ರೂ.ಗಳಿಗೆ ಸಿಗಲಿದೆ. ಅಂದರೆ ಈ ಸ್ಮಾರ್ಟ್‌ಫೋನ್‌ ಮೇಲೆ 3000ರೂ.ಗಳ ರಿಯಾಯಿತಿ ದೊರೆಯಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ HD+ IPS LCD ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾಟೆಕ್‌ ಹಿಲಿಯೋ G96 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಈ ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ.

ಐಫೋನ್‌ 13

ಐಫೋನ್‌ 13

ಫ್ಲಿಪ್‌ಕಾರ್ಟ್‌ನಲ್ಲಿ ಆಪಲ್‌ ಕಂಪೆನಿಯ ಐಫೋನ್‌ 13 ಮೂಲ ಬೆಲೆ 79,900ರೂ.ಗಳಿಗೆ ಬದಲಾಗಿ 73,999 ರೂ.ಗಳಿಗೆ ದೊರೆಯಲಿದೆ. ಅಂದರೆ ಐಫೋನ್‌ 13 ಮೇಲೆ 5,901ರೂ.ವರೆಗೆ ರಿಯಾಯಿತಿ ದೊರೆಯಲಿದೆ. ಇದಲ್ಲದೆ HDFC ಬ್ಯಾಂಕ್ ಕ್ರೆಡಿಟ್ ಕಾರ್ಡ್, ಕ್ರೆಡಿಟ್ ಮತ್ತು ಡೆಬಿಟ್ EMI ವಹಿವಾಟುಗಳ ಮೇಲೆ 4,000ರೂ.ಗಳ ಹೆಚ್ಚುವರಿ ರಿಯಾಯಿತಿ ಸಿಗಲಿದೆ. ಇದರಿಂದ ಐಫೋನ್‌ 13 ನಿಮಗೆ ಕೇವಲ 69,999ರೂ.ಗಳಿಗೆ ದೊರೆಯಲಿದೆ. ಇನ್ನು ಐಫೋನ್ 13 ಫೋನ್‌ 6.1 ಇಂಚಿನ ಡಿಸ್‌ಪ್ಲೇ ಹೊಂದಿದ್ದು, 1200 ನಿಟ್ಸ್‌ ಬ್ರೈಟ್‌ನೆಸ್‌ ಅನ್ನು ಹೊಂದಿದೆ. ಹಾಗೆಯೇ ಈ ಫೋನ್ A15 ಬಯೋನಿಕ್ ಸೋಕ್ ಕ್ವಾಡ್‌ ಕೋರ್ ಪ್ರೊಸೆಸರ್‌ ಅನ್ನು ಹೊಂದಿದೆ.

ರೆಡ್ಮಿ ನೋಟ್‌ 10S

ರೆಡ್ಮಿ ನೋಟ್‌ 10S

14,999ರೂ. ಮೂಲ ಬೆಲೆ ಹೊಂದಿರುವ ರೆಡ್ಮಿ ನೋಟ್‌ 10S ಫ್ಲಿಪ್‌ಕಾರ್ಟ್‌ನಲ್ಲಿ ಕೇವಲ 12,999ರೂ.ಬೆಲೆಯಲ್ಲಿ ದೊರೆಯಲಿದೆ. ಈ ಸ್ಮಾರ್ಟ್‌ಫೋನ್‌ನಲ್ಲಿ ನಿಮಗೆ 2,000ರೂ.ಗಳ ರಿಯಾಯಿತಿ ಸಿಗಲಿದೆ. ಹಾಗೆಯೇ ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ನಲ್ಲಿ 1,250ರೂ. ರಿಯಾಯಿತಿ ಮತ್ತು ಡೆಬಿಟ್ ಕಾರ್ಡ್‌ನಲ್ಲಿ 1,000ರೂ.ವರೆಗಿನ ರಿಯಾಯಿತಿ ಕೂಡ ಲಭ್ಯವಾಗಲಿದೆ. ಇನ್ನು ರೆಡ್‌ಮಿ ನೋಟ್ 10s ಸ್ಮಾರ್ಟ್‌ಫೋನ್‌ 6.43 ಇಚಿನ ಅಮೋಲೆಡ್‌ ಫುಲ್‌ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹಿಲಿಯೊ G95 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ಫಾಸ್ಟ್ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F22

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F22

ಫ್ಲಿಪ್‌ಕಾರ್ಟ್‌ ಎಲೆಕ್ಟ್ರಾನಿಕ್ಸ್ ಸೇಲ್‌ನಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ F22 ನಿಮಗೆ 11,499ರೂ.ಬೆಲೆಗೆ ದೊರೆಯಲಿದೆ. ಈ ಸ್ಮಾರ್ಟ್‌ಫೋನ್‌ನಲ್ಲಿ ನೀವು 1,000 ರೂ.ವರೆಗಿನ ರಿಯಾಯಿತಿ ಪಡೆದುಕೊಳ್ಳಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.4 ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಸ್ಯಾಮೋಲ್ಡ್ ಇನ್ಫಿನಿಟಿ-ಯು ಡಿಸ್‌ಪ್ಲೇ ಆಗಿದ್ದು, 90Hz ರಿಫ್ರೆಶ್ ರೇಟ್‌ ಅನ್ನು ಪಡೆದುಕೊಂಡಿದೆ. ಈ ಫೋನ್‌ ಮೀಡಿಯಾ ಟೆಕ್ ಹಿಲಿಯೊ G80 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 25W ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ.

Best Mobiles in India

English summary
There is also up to a 10 percent discount on SBI bank credit cards and no-cost EMI options.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X