Home
ಸುದ್ದಿಜಾಲ

ಫ್ಲಿಪ್‌ಕಾರ್ಟ್‌ ಎಲೆಕ್ಟ್ರಾನಿಕ್ಸ್‌ ಸೇಲ್‌: ಸ್ಮಾರ್ಟ್‌ಫೋನ್‌ ಖರೀದಿಗೆ ಇದುವೇ ಬೆಸ್ಟ್‌ ಟೈಂ!

ಆನ್‌ಲೈನ್‌ ಶಾಪಿಂಗ್‌ ಪ್ರಿಯರ ನೆಚ್ಚಿನ ತಾಣಗಳಲ್ಲಿ ಫ್ಲಿಪ್‌ಕಾರ್ಟ್‌ ಕೂಡ ಒಂದಾಗಿದೆ. ಫ್ಲಿಪ್‌ಕಾರ್ಟ್‌ ತನ್ನ ವಿಶೇಷ ಸೇಲ್‌ ಆಫರ್‌ಗಳ ಮೂಲಕ ಆನ್‌ಲೈನ್‌ ಗ್ರಾಹಕರನ್ನು ಸೆಳೆಯುತ್ತಾ ಬಂದಿದೆ. ಸದ್ಯ ಇದೀಗ ಫ್ಲಿಪ್‌ಕಾರ್ಟ್‌ ಮತ್ತೊಂದು ಸೇಲ್‌ ಈವೆಂಟ್‌ನೊಂದಿಗೆ ಮರಳಿದೆ. ತನ್ನ ಪ್ಲಾಟ್‌ಫಾರ್ಮ್‌ನಲ್ಲಿ ಫ್ಲಿಪ್‌ಕಾರ್ಟ್‌ ಎಲೆಕ್ಟ್ರಾನಿಕ್ಸ್‌ ಸೇಲ್‌ ನಡೆಸುತ್ತಿದೆ. ಈ ಸೇಲ್‌ನಲ್ಲಿ ಹಲವು ಪ್ರತಿಷ್ಟಿತ ಮೊಬೈಲ್‌ ಬ್ರ್ಯಾಂಡ್‌ಗಳ ಸ್ಮಾರ್ಟ್‌ಫೋನ್‌ಗಳು ಡಿಸ್ಕೌಂಟ್‌ನಲ್ಲಿ ಲಭ್ಯವಾಗಲಿವೆ.

ಫ್ಲಿಪ್‌ಕಾರ್ಟ್‌

ಹೌದು, ಫ್ಲಿಪ್‌ಕಾರ್ಟ್‌ ಎಲೆಕ್ಟ್ರಾನಿಕ್ಸ್‌ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್‌ ಖರೀದಿಸುವವರಿಗೆ ಬಿಗ್‌ ಡಿಸ್ಕೌಂಟ್‌ ಲಭ್ಯವಿದೆ. ಇಂಡಿಪೆಂಡೆನ್ಸ್‌ ಡೇ ಸೇಲ್‌ ನಂತರ ಬಂದಿರುವ ಈ ಸೇಲ್‌ನಲ್ಲಿ ನೀವು ಹಲವು ಆಕರ್ಷಕ ಆಫರ್‌ಗಳನ್ನು ಪಡೆದುಕೊಳ್ಳಬಹುದಾಗಿದೆ. ಇದರಲ್ಲಿ ಸ್ಯಾಮ್‌ಸಂಗ್‌, ಆಪಲ್‌, ರಿಯಲ್‌ಮಿ, ಮೊಟೊರೊಲಾ ಕಂಪೆನಿಯ ಫೋನ್‌ಗಳಿಗೆ ಭರ್ಜರಿ ಡಿಸ್ಕೌಂಟ್‌ ನೀಡಲಾಗ್ತಿದೆ. ಹಾಗಾದ್ರೆ ಫ್ಲಿಪ್‌ಕಾರ್ಟ್‌ ಎಲೆಕ್ಟ್ರಾನಿಕ್ಸ್‌ ಸೇಲ್‌ನಲ್ಲಿ ಡಿಸ್ಕೌಂಟ್‌ ಪಡೆದುಕೊಂಡಿರುವ ಪ್ರಮುಖ ಸ್ಮಾರ್ಟ್‌ಫೋನ್‌ಗಳ ವಿವರವನ್ನು ಈ ಲೇಖನದಲ್ಲಿ ತಿಳಿಯೋಣ ಬನ್ನಿರಿ.

ಆಪಲ್ ಐಫೋನ್ 12

ಆಪಲ್ ಐಫೋನ್ 12

ಆಪಲ್ ಐಫೋನ್ 12 ಫ್ಲಿಪ್‌ಕಾರ್ಟ್‌ ಎಲೆಕ್ಟ್ರಾನಿಕ್ಸ್‌ ಸೇಲ್‌ನಲ್ಲಿ 53,999ರೂ.ಗಳ ಆರಂಭಿಕ ಬೆಲೆಯೊಂದಿಗೆ ಮಾರಾಟವಾಗುತ್ತಿದೆ. ಅಂದರೆ ಒಟ್ಟು 11,901ರೂ. ವೆರೆಗಿನ ರಿಯಾಯಿತಿ ಲಭ್ಯವಾಗುತ್ತಿದೆ. ಇನ್ನು ಐಫೋನ್ 12 OLED ಡಿಸ್‌ಪ್ಲೇ ಹೊಂದಿದ್ದು, A14 ಬಯೋನಿಕ್ ಸೋಕ್ ಕ್ವಾಡ್‌ ಕೋರ್ ಪ್ರೊಸೆಸರ್‌ ಅನ್ನು ಹೊಂದಿದೆ. 5G ಅನ್ನು ಬೆಂಬಲಿಸುತ್ತದೆ. ಐಫೋನ್ 12 ಫೋನ್ ಎರಡು ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾಪಿಕ್ಸೆಲ್ ವೈಡ್ ಆಂಗಲ್ ಸೆನ್ಸಾರ್‌ಗಳನ್ನು ಹೊಂದಿವೆ. ಇದಲ್ಲದೆ ಆಪಲ್‌ ಐಫೋನ್‌ 12ನಲ್ಲಿ ನೈಟ್‌ ಮೋಡ್‌ ಆಯ್ಕೆ ಇದ್ದು ಕಡಿಮೆ ಬೆಳಕಿನಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ.

ಐಫೋನ್ 13

ಐಫೋನ್ 13

ಐಫೋನ್ 13 ಫ್ಲಿಪ್‌ಕಾರ್ಟ್‌ನಲ್ಲಿ ಕೇವಲ 73,999ರೂಗಳಿಗೆ ಲಭ್ಯವಾಗಲಿದೆ. ಜೊತೆಗೆ ಬ್ಯಾಂಕ್ ಕಾರ್ಡ್ ಮತ್ತು ಎಕ್ಸ್‌ಚೇಂಜ್‌ ಆಫರ್‌ಗಳು ಕೂಡ ಲಭ್ಯವಾಗಲಿವೆ. ಐಫೋನ್ 13 ಫೋನ್‌ 6.1 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತುಮ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. ಈ ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್‌ ಹೊಂದಿದ್ದು, 1200 ನಿಟ್ಸ್‌ ಬ್ರೈಟ್‌ನೆಸ್‌ ಅನ್ನು ಹೊಂದಿದೆ. ಹಾಗೆಯೇ ಈ ಫೋನ್ A15 ಬಯೋನಿಕ್ ಸೋಕ್ ಕ್ವಾಡ್‌ ಕೋರ್ ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಅಲ್ಟ್ರಾ ಕ್ಯಾಮೆರಾ ಸೆನ್ಸಾರ್ ಹೊಂದಿದ್ದು, ಇನ್ನೊಂದು ಕ್ಯಾಮೆರಾವು 12 ಮೆಗಾ ಪಿಕ್ಸಲ್ ವೈಲ್ಡ್‌ ಆಂಗಲ್ ಲೆನ್ಸ್‌ ಪಡೆದಿದೆ.

ಮೊಟೊರೊಲಾ G52

ಮೊಟೊರೊಲಾ G52

ಮೊಟೊರೊಲಾ ಕಂಪೆನಿಯ ಮೊಟೊರೊಲಾ G52 ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ನಲ್ಲಿ 14,499ರೂ. ಬೆಲೆಯಲ್ಲಿ ಮಾರಾಟವಾಗ್ತಿದೆ. ಈ ಸ್ಮಾರ್ಟ್‌ಫೋನ್‌ ಅನ್ನು ಎಸ್‌ಬಿಐ ಕ್ರೆಡಿಟ್‌ ಕಾರ್ಡ್‌ ಬಳಸಿ ಖರೀದಿಸಿದರೆ 10% ಕ್ಯಾಶ್‌ಬ್ಯಾಕ್‌ ಆಫರ್‌ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ ಹೆಚ್‌ಡಿ + ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಲಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯವನ್ನು ಹೊಂದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಫ್ 23

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಫ್ 23

ಫ್ಲಿಪ್‌ಕಾರ್ಟ್‌ ಸೇಲ್‌ನಲ್ಲಿ ಡಿಸ್ಕೌಂಟ್‌ ಪಡೆದ ಪ್ರಮುಖ ಸ್ಮಾರ್ಟ್‌ಫೋನ್‌ಗಳಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಫ್ 23 ಕೂಡ ಒಂದಾಗಿದೆ. ಈ ಸ್ಮಾರ್ಟ್‌ಫೋನ್‌ ಇದೀಗ ಫ್ಲಿಪ್‌ಕಾರ್ಟ್‌ನಲ್ಲಿ 14,999ರೂ. ಬೆಲೆಗೆ ಲಭ್ಯವಾಗುತ್ತಿದೆ. ಈ ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ ಹೆಚ್‌ಡಿ + ಇನ್ಫಿನಿಟಿ ಯು ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 750G SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 ನಲ್ಲಿ ಒಂದು UI 4.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ನೊಂದಿಗೆ ಬರುತ್ತದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ISOCELL JN1 ಸೆನ್ಸಾರ್‌ ಹೊಂದಿದೆ.

ರಿಯಲ್‌ಮಿ C11 (2021)

ರಿಯಲ್‌ಮಿ C11 (2021)

ರಿಯಲ್‌ಮಿ C11 (2021) ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ನಲ್ಲಿ 7,499ರೂ. ಬೆಲೆಗೆ ಮಾರಾಟವಾಗುತ್ತಿದೆ. ಆದರೆ, ಎಸ್‌ಬಿಐ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ನಲ್ಲಿ 10% ರಷ್ಟು ರಿಯಾಯಿತಿ ಪಡೆದುಕೊಳ್ಳಬಹುದಾಘಿದೆ. ಈ ಸ್ಮಾರ್ಟ್‌ಫೋನ್‌ 6.5-ಇಂಚಿನ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ SoC ಪ್ರೊಸೆಸರ್‌ ಸಾಮರ್ಥ್ಯ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾ ಹೊಂದಿದೆ. ಇದು ಎಲ್ಇಡಿ ಫ್ಲ್ಯಾಷ್ ಜೊತೆಗೆ ಬರಲಿದೆ. ಜೊತೆಗೆ 5,000mAh ಸಾಮರ್ಥ್ಯ ಬ್ಯಾಟರಿಯನ್ನು ಹೊಂದಿದೆ. ಇದು ವೈಡ್‌ ರಿವರ್ಸ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

Best Mobiles in India

English summary
Flipkart Electronics sale : Best deals on smartphones
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+