Home
ಸುದ್ದಿಜಾಲ

ಫ್ಲಿಪ್‌ಕಾರ್ಟ್‌ ಎಲೆಕ್ಟ್ರಾನಿಕ್ಸ್‌ ಸೇಲ್‌: ಸ್ಮಾರ್ಟ್‌ಫೋನ್‌ ಖರೀದಿಗೆ ಇದುವೇ ಸಕಾಲ!

ಜನಪ್ರಿಯ ಇ-ಕಾಮರ್ಸ್‌ ಸೈಟ್‌ ಫ್ಲಿಪ್‌ಕಾರ್ಟ್ ಆನ್‌ಲೈನ್‌ ಗ್ರಾಹಕರಿಗಾಗಿ ವಿಶೇಷ ರಿಯಾಯಿತಿ ಸೇಲ್‌ಗಳನ್ನ ಆಯೋಜಿಸುತ್ತಲೇ ಇರುತ್ತದೆ. ವಿಶೇಷ ಆಫರ್‌ಗಳ ಮೂಲಕ ಗ್ರಾಹಕರನ್ನು ಆಕರ್ಷಿಸುತ್ತದೆ. ಸದ್ಯ ಇದೀಗ ತನ್ನ ಗ್ರಾಹಕರಿಗಾಗಿ ಫ್ಲಿಪ್‌ಕಾರ್ಟ್‌ ಎಲೆಕ್ಟ್ರಾನಿಕ್ಸ್‌ ಸೇಲ್‌ ಅನ್ನು ಆಯೋಜಿಸಿದೆ. ಇನ್ನು ಫ್ಲಿಪ್‌ಕಾರ್ಟ್ ಎಲೆಕ್ಟ್ರಾನಿಕ್ಸ್ ಸೇಲ್‌ ಇಂದಿನಿಂದ ಲೈವ್‌ ಆಗಿದ್ದು, ಇದು ಮಾರ್ಚ್ 20 ರವರೆಗೆ ನಡೆಯಲಿದೆ. ಈ ಸೇಲ್‌ನಲ್ಲಿ ಫ್ಲಿಪ್‌ಕಾರ್ಟ್ ಹಳೆಯ ಐಫೋನ್‌ಗಳಲ್ಲಿ ಐಫೋನ್ 11, ಐಫೋನ್ SE, ಐಫೋನ್ XR ಜೊತೆಗೆ ಪೊಕೊ X3, ರಿಯಲ್‌ಮಿ ಫೋನ್‌ಗಳ ಮೇಲೆ ಭರ್ಜರಿ ಡಿಸ್ಕೌಂಟ್ ಅನ್ನು ನೀಡಲಿದೆ.

ಫ್ಲಿಪ್‌ಕಾರ್ಟ್‌ ಎಲೆಕ್ಟ್ರಾನಿಕ್ಸ್‌ ಸೇಲ್

ಹೌದು, ಫ್ಲಿಪ್‌ಕಾರ್ಟ್‌ ಎಲೆಕ್ಟ್ರಾನಿಕ್ಸ್‌ ಸೇಲ್‌ 2021 ಇಂದಿನಿಂದ ಲೈವ್‌ ಆಗಿದೆ. ಈ ಸೇಲ್‌ನಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳು ರಿಯಾಯಿತಿ ದರದಲ್ಲಿ ಲಭ್ಯವಾಗಲಿದ್ದು, ಸ್ಮಾರ್ಟ್‌ಫೋನ್‌ ಕೊಳ್ಳುವುದಕ್ಕೆ ಇದುವೇ ಸಕಾಲವಾಗಿದೆ. ಇನ್ನು ಈ ಸೇಲ್‌ನಲ್ಲಿ ಫ್ಲಿಪ್‌ಕಾರ್ಟ್ ಹೆಚ್‌ಡಿಎಫ್‌ಸಿ ಬ್ಯಾಂಕ್ ಕಾರ್ಡ್‌ಗಳಲ್ಲಿ ಶೇಕಡಾ 10 ರಷ್ಟು ತ್ವರಿತ ರಿಯಾಯಿತಿಯನ್ನು ಸಹ ಪಡೆದುಕೊಳ್ಳಬಹುದಾಗಿದೆ. ಜೊತೆಗೆ ನೋ ಕಾಸ್ಟ್‌ ಇಎಂಐ, ಎಕ್ಸ್‌ಚೇಂಜ್‌ ಆಫರ್‌ ಸೇರಿದಂತೆ ಹೆಚ್ಚಿನ ರಿಯಾಯಿತಿ ಆಫರ್‌ಗಳ ಲಭ್ಯವಾಗಲಿದೆ. ಇನ್ನು ಈ ಸೇಲ್‌ನಲ್ಲಿ ರಿಯಾಯಿತಿ ದರದಲ್ಲಿ ಲಭ್ಯವಾಗುವ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಐಫೋನ್ 11

ಐಫೋನ್ 11

ಫ್ಲಿಪ್‌ಕಾರ್ಟ್ ಎಲೆಕ್ಟ್ರಾನಿಕ್ಸ್ ಸೇಲ್‌ ನಲ್ಲಿ 64GB ರೂಪಾಂತರದ ಆಯ್ಕೆಯ ಐಫೋನ್ 11 ಕೇವಲ 46,999 ರೂ.ಗಳಿಗೆ ಲಭ್ಯವಾಗಲಿದೆ. ಇನ್ನು ಈ ಐಫೋನ್ ಆಪಲ್ ಸ್ಟೋರ್‌ನಲ್ಲಿ 54,900 ರೂಗಳಿಗೆ ಲಭ್ಯವಿದೆ ಆದರೆ ಫ್ಲಿಪ್‌ಕಾರ್ಟ್ ನೇರವಾಗಿ 8000 ರೂ.ಗಳ ರಿಯಾಯಿತಿಯನ್ನು ನೀಡುತ್ತಿದೆ. ಹೆಚ್ಚುವರಿಯಾಗಿ, ನೀವು ಹೆಚ್‌ಡಿಎಫ್‌ಸಿ ಕಾರ್ಡ್ ಬಳಸಿ ಪಾವತಿ ಮಾಡಿದರೆ ಶೇಕಡಾ 10 ರಷ್ಟು ತ್ವರಿತ ರಿಯಾಯಿತಿ ಪಡೆಯಬಹುದು. ನಿಮ್ಮ ಹಳೆಯ ಫೋನ್ ಅನ್ನು 16,500 ರೂ.ವರೆಗೆ ಎಕ್ಸ್‌ಚೇಂಜ್‌ ಕೂಡ ಮಾಡಿಕೊಳ್ಳಬಹುದು. ಐಫೋನ್ 11 ಫೋನ್ 6.1 ಇಂಚಿನ ಡಿಸ್‌ಪ್ಲೇ ಮತ್ತು ಡ್ಯುಯಲ್ ಕ್ಯಾಮೆರಾ ಆಯ್ಕೆಯನ್ನು ಒಳಗೊಂಡಿದೆ. ವೇಗದ ಚಿಪ್‌ಸೆಟ್‌ ಬೆಂಬಲದೊಂದಿಗೆ A13 ಬಯೋನಿಕ್ ಪ್ರೊಸೆಸರ್‌ ಪಡೆದುಕೊಂಡಿದೆ. ಆಪಲ್‌ ಎಕ್ಸ್‌ಆರ್‌ಗಿಂತ ಇದರ ಬ್ಯಾಟರಿ ಲೈಫ್ ಅಧಿಕವಾಗಿದೆ. ಹಿಂಬದಿಯ ಎರಡು ಕ್ಯಾಮೆರಾಗಳು 12ಎಂಪಿ ಸೆನ್ಸಾರ್‌ ಬೆಂಬಲವನ್ನು ಪಡೆದಿದ್ದು, ಇದರೊಂದಿಗೆ ನೈಟ್‌ಮೋಡ್‌, 4K ವಿಡಿಯೊ, ಸ್ಲೋ ಮೋಶನ್ ಫೀಚರ್ಸ್‌ಗಳನ್ನು ಪಡೆದಿದೆ.

ಐಫೋನ್ SE

ಐಫೋನ್ SE

ಇನ್ನು ಫ್ಲಿಪ್‌ಕಾರ್ಟ್ ಎಲೆಕ್ಟ್ರಾನಿಕ್ಸ್‌ ಸೇಲ್‌ನಲ್ಲಿ ಐಫೋನ್ SE 6GB ಆಯ್ಕೆಗೆ 29,999 ರೂ.ಬೆಲೆ ಹೊಂದಿದೆ. ಆಪಲ್ ಸ್ಟೋರ್‌ನಲ್ಲಿ ಈ ಸ್ಮಾರ್ಟ್‌ಫೋನ್ ಬೆಲೆ 39,999 ರೂ. ಆಗಿದ್ದು, ಫ್ಲಿಪ್‌ಕಾರ್ಟ್ 10,000 ರೂ. ರಿಯಾಯಿತಿಯನ್ನು ನೀಡಿದೆ. ಅಲ್ಲದೆ ಹೆಚ್ಚುವರಿಯಾಗಿ, ನೀವು ಹೆಚ್‌ಡಿಎಫ್‌ಸಿ ಕಾರ್ಡ್ ಬಳಸಿ ಪಾವತಿ ಮಾಡಿದರೆ ಶೇಕಡಾ 10 ರವರೆಗೆ ತ್ವರಿತ ರಿಯಾಯಿತಿ ಪಡೆಯಬಹುದು. ನಿಮ್ಮ ಹಳೆಯ ಫೋನ್ ಅನ್ನು ನೀವು 16,500 ರೂ.ಗಳಿಗೆ ವಿನಿಮಯ ಮಾಡಿಕೊಳ್ಳಬಹುದು. ಆಪಲ್ ಐಫೋನ್ SE 4.7-ಇಂಚಿನ ರೆಟಿನಾ ಎಚ್‌ಡಿ ಮಾದರಿಯ ಐಪಿಎಸ್ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 750x1334 ಪಿಕ್ಸೆಲ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ.

ಪೊಕೊ X3

ಪೊಕೊ X3

ಫ್ಲಿಪ್‌ಕಾರ್ಟ್ ಎಲೆಕ್ಟ್ರಾನಿಕ್ಸ್ ಸೇಲ್‌ನಲ್ಲಿ ಪೊಕೊ X3 ಸ್ಮಾರ್ಟ್‌ಫೋನ್‌ ಕೇವಲ 14,499 ರೂ.ಗಳಿಗೆ ಲಭ್ಯವಾಗಲಿದೆ. ಇದರ ಮೂಲ ಬೆಲೆ 19,999 ರೂ.ಆಗಿದೆ. ಇನ್ನು ಹೆಚ್ಚುವರಿಯಾಗಿ, ಖರೀದಿದಾರರು ಹೆಚ್‌ಡಿಎಫ್‌ಸಿ ಕಾರ್ಡ್‌ಗಳನ್ನು ಬಳಸಿಕೊಂಡು ಶೇಕಡಾ 10 ರಷ್ಟು ತ್ವರಿತ ರಿಯಾಯಿತಿ ಪಡೆಯಬಹುದು. ಪೊಕೊ X3 ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಜೊತೆಗೆ 120Hz ರಿಪ್ರೆಶ್ ರೇಟ್‌ ಹೊಂದಿರುವ ಡಿಸ್‌ಪ್ಲೇಯನ್ನು ಒಳಗೊಂಡಿದೆ. ಅಲ್ಲದೆ ಆಕ್ಟಾ-ಕೋರ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 732G SoC ಪ್ರೊಸೆಸರ್‌ ಅನ್ನು ಹೊಂದಿದೆ.

ಪೊಕೊ m2 ಪ್ರೊ

ಪೊಕೊ m2 ಪ್ರೊ

ಫ್ಲಿಪ್‌ಕಾರ್ಟ್‌ ಎಲೆಕ್ಟ್ರಾನಿಕ್ಸ್ ಸೇಲ್‌ನಲ್ಲಿ ಪೊಕೊ m2 ಸ್ಮಾರ್ಟ್‌ಫೋನ್‌ 11,999 ರೂ.ಗಳಿಗೆ ಖರೀದಿಸಬಹುದಾಗಿದೆ. ಇದರ ಮೂಲ ಬೆಲೆ 16,999 ರೂ.ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 720G ಪ್ರೊಸೆಸರ್ ಹೊಂದಿದ್ದು,4GB RAM ಆಯ್ಕೆಯನ್ನು ಹೊಂದಿದೆ. ಇದು ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 48MP, ಎರಡನೇ ಕ್ಯಾಮೆರಾ 8MP, ಮೂರನೇ ಕ್ಯಾಮೆರಾ5MP, ನಾಲ್ಕನೇ ಕ್ಯಾಮೆರಾ2MP ಕ್ಯಾಮೆರಾ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

Best Mobiles in India

English summary
Flipkart Electronics Sale Goes Live: Offers On iPhones And Other Smartphones.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+