Home
ಸುದ್ದಿಜಾಲ

ಸ್ಯಾಮ್‌ಸಂಗ್‌ನ ಈ ವೇಗದ ಪ್ರೊಸೆಸರ್‌ ಫೋನಿನ ಬೆಲೆಯಲ್ಲಿ ಭರ್ಜರಿ ಇಳಿಕೆ!

ಫ್ಲಿಪ್‌ಕಾರ್ಟ್‌ (Flipkart) ಇ ಕಾಮರ್ಸ್‌ ವೆಬ್‌ಸೈಟ್‌ ಇದೀಗ ಗೋಟ್‌ ಸೇಲ್‌ (Goat Sale) ಅನ್ನು ಆಯೋಜಿಸಿದ್ದು, ಸದ್ಯ ಈ ಸೇಲ್‌ ಲೈವ್‌ ಆಗಿದೆ. ಈ ಮಾರಾಟದಲ್ಲಿ ಮೊಬೈಲ್‌ಗಳಿಗೆ ಭಾರೀ ರಿಯಾಯಿತಿ ಕೊಡುಗೆ ಲಭ್ಯ ಇವೆ. ಆ ಪೈಕಿ ಸ್ಯಾಮ್‌ಸಂಗ್‌ ಸಂಸ್ಥೆಯ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S21 FE 5G (Samsung Galaxy S21 FE 5G) ಫೋನ್‌ ಭಾರೀ ಬೆಲೆ ಇಳಿಕೆ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಅಂದಹಾಗೆ ಈ ಫೋನ್ ಸ್ನಾಪ್‌ಡ್ರಾಗನ್‌ 888 SoC ಪ್ರೊಸೆಸರ್‌ ಪವರ್‌ನ ಸೌಲಭ್ಯ ಪಡೆದುಕೊಂಡಿದೆ.

ಹೌದು, ಫ್ಲಿಪ್‌ಕಾರ್ಟ್‌ ತಾಣದಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S21 FE 5G (Samsung Galaxy S21 FE 5G) ಫೋನ್‌ ಶೇ 60% ರಷ್ಟು ನೇರ ಡಿಸ್ಕೌಂಟ್‌ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಫೋನಿನ 8GB RAM + 256GB ಸ್ಟೋರೇಜ್‌ ವೇರಿಯಂಟ್‌ 27,999ರೂ. ಗಳ ಆಫರ್‌ ಪ್ರೈಸ್‌ಟ್ಯಾಗ್‌ನಲ್ಲಿ ಖರೀದಿಗೆ ಲಭ್ಯ. ಇದರೊಂದಿಗೆ ಆಯ್ದ ಬ್ಯಾಂಕ್‌ ಆಫರ್‌ಗಳು ಸಹ ಲಭ್ಯ ಆಗಲಿವೆ.

ಸ್ಯಾಮ್‌ಸಂಗ್‌ನ ಈ ವೇಗದ ಪ್ರೊಸೆಸರ್‌ ಫೋನಿನ ಬೆಲೆಯಲ್ಲಿ ಭರ್ಜರಿ ಇಳಿಕೆ!

ಹಾಗೆಯೇ ಈ ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 888 SoC ಪ್ರೊಸೆಸರ್‌ ಪಡೆದುಕೊಂಡಿದೆ. ಇದರ ಜೊತೆಗೆ ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆ ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾವು 12 ಮೆಗಾ ಪಿಕ್ಸಲ್‌ ಸೆನ್ಸಾರ್‌ ಬಲದಲ್ಲಿ ಇದೆ. ಹಾಗಾದರೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S21 FE ಫೋನಿನ ಇತರ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S21 FE ಮೊಬೈಲ್‌ 2340 × 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.4 ಇಂಚಿನ AMOLED ಡಿಸ್‌ಪ್ಲೇ ಅನ್ನು ಪಡೆದಿದೆ. ಹಾಗೆಯೇ ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಮತ್ತು 240Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಸಪೋರ್ಟ್‌ ಪಡೆದಿವೆ. ಇದಲ್ಲದೆ ಅಂಡರ್ ಡಿಸ್‌ಪ್ಲೇ ಆಪ್ಟಿಕಲ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಪಡೆದುಕೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S21 FE ಮೊಬೈಲ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 888 SoC ಪ್ರೊಸೆಸರ್‌ ಸಾಮರ್ಥ್ಯದ ಆವೃತ್ತಿ ಪಡೆದುಕೊಂಡಿದೆ. ಇತ್ತೀಚಿನ ಆಂಡ್ರಾಯ್ಡ್‌ ಓಎಸ್‌ ಸಪೋರ್ಟ್‌ ಸಹ ಹೊಂದಿದೆ. ಇದರ ಜೊತೆಗೆ ಈ ಆವೃತ್ತಿಯು 8GB ಮತ್ತು 256 GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆ ಪಡೆದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S21 FE ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಮುಖ್ಯ ಕ್ಯಾಮೆರಾ 12ಎಂಪಿ ಸೆನ್ಸಾರ್‌ ಸಾಮರ್ಥ್ಯ ಅನ್ನು ಹೊಂದಿದೆ. ಹಾಗೆಯೇ ದ್ವಿತೀಯ ಮತ್ತು ತೃತೀಯ ಕ್ಯಾಮೆರಾಗಳು ಸಹ 12ಎಂಪಿ ಸೆನ್ಸಾರ್‌ ಅನ್ನು ಪಡೆದಿದೆ. ಹಾಗೆಯೇ ಇದು 32ಎಂಪಿ ಸೆನ್ಸಾರ್‌ ಸಾಮರ್ಥ್ಯದಲ್ಲಿ ಸೆಲ್ಫಿ ಕ್ಯಾಮೆರಾ ಇದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S21 FE ಫೋನ್‌ 4,500 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಸಹ ಪಡೆದಿದ್ದು, ಇದಕ್ಕೆ ಪೂರಕವಾಗಿ 25W ವೈರ್ಡ್ ಫಾಸ್ಟ್ ಚಾರ್ಜಿಂಗ್ ಹಾಗೂ 15W ವೈರ್‌ಲೆಸ್ ಚಾರ್ಜಿಂಗ್ ಸಪೋರ್ಟ್‌ ಆಯ್ಕೆ ಒಳಗೊಂಡಿದೆ. ಇದರೊಂದಿಗೆ ಇದು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌ಗಳನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S21 FE ಮೊಬೈಲ್‌ 8 GB + 128 GB ವೇರಿಯಂಟ್ ಆಯ್ಕೆ ಹೊಂದಿದ್ದು, ಇನ್ನು ಈ ಫೋನ್‌ ಆಲಿವ್, ಗ್ರ್ಯಾಫೈಟ್, ಲ್ಯಾವೆಂಡರ್ ಮತ್ತು ನ್ಯೂ ನೇವಿ ಬ್ಲೂ ಕಲರ್‌ ಆಯ್ಕೆಗಳನ್ನು ಪಡೆದಿದೆ.

Best Mobiles in India

English summary
Flipkart GOAT sale 2024: Samsung Galaxy S21 FE 5G huge recevied price drop. check details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+